ಬೆಳಗಾವಿ: ಬೆಳಗಾವಿಯ ಗ್ರಾಮೀಣ ಪೊಲೀಸ್ ಠಾಣೆಯ ಕಸ್ಟಡಿಯಲ್ಲಿದ್ದ ಆರೋಪಿಯೊಬ್ಬ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾನೆ. ಪೊಲೀಸರ ನಿರ್ಲಕ್ಷ್ಯಕ್ಕೆ ಈತ ಬಲಿಯಾದನೇ ಎಂಬ ಅನುಮಾನ ಮೂಡಿದೆ.
ಬಸನಗೌಡ ಪಾಟೀಲ್(45) ಎಂಬ ಆರೋಪಿಯನ್ನು ಗಾಂಜಾ ಹಂಚುವಿಕೆ ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿತ್ತು. ಈತ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ನಿವಾಸಿ. ಗಾಂಜಾ ಪ್ರಕರಣದಲ್ಲಿ ಬಸನಗೌಡನನ್ನು ವಶಕ್ಕೆ ಪಡೆದು ಬೆಳಗಾವಿ ಗ್ರಾಮೀಣ ಠಾಣೆಗೆ ಪೊಲೀಸರು ಕರೆತರಲಾಗಿತ್ತು. ಕರೆತರುತ್ತಿದ್ದಾಗ ಕಾಕತಿ ಬಳಿ ಬಸನಗೌಡ ಪಾಟೀಲ್ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಕಾಕತಿಯ ಖಾಸಗಿ ಕ್ಲಿನಿಕ್‌ನಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಬೆಳಗಾವಿ ಗ್ರಾಮೀಣ ಠಾಣೆಗೆ ಕರೆತರಲಾಗಿತ್ತು.
ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಬಸನಗೌಡ ಪಾಟೀಲ್ ಮತ್ತೆ ಅಸ್ವಸ್ಥನಾಗಿದ್ದ. ಬಳಿಕ ಬಿಮ್ಸ್ ಆಸ್ಪತ್ರೆಗೆ ಬಸನಗೌಡನನ್ನು ಕರೆದೊಯ್ಯಲಾಗಿತ್ತು. ಅಲ್ಲಿ ಇಸಿಜಿ ಮಾಡಿಸಿದಾಗ ಹೃದಯಾಘಾತವಾದದ್ದು ಗೊತ್ತಾಗಿದೆ. ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಆರೋಗ್ಯದಲ್ಲಿ ಏರುಪೇರಾದ ತಕ್ಷಣ ಚಿಕಿತ್ಸೆ ಕೊಡಿಸಿದ್ದರೆ ಬದುಕುತ್ತಿದ್ದ ಎನ್ನಲಾಗಿದೆ. ಇದೀಗ ಕಸ್ಟೋಡಿಯಲ್ ಡೆತ್ ಪ್ರಕರಣ ದಾಖಲಿಸಿಕೊಂಡು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
ಇದನ್ನೂ ಓದಿ | Student death | ಮಂಗಳೂರಿನಲ್ಲಿ ವೈದ್ಯ ವಿದ್ಯಾರ್ಥಿ ಸಾವು: ತನಿಖೆಯನ್ನು ಸಿಬಿಐಗೆ ವಹಿಸಲು ಸುಪ್ರೀಂ ಆರ್ಡರ್