Site icon Vistara News

Cylinder Blast : ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ವೃದ್ಧ ದಂಪತಿ ವಾರದ ನಂತರ ಸಾವು

Cylinder Blast at Belgavi

ಬೆಳಗಾವಿ: ಕಳೆದ ಮೇ 18ರ ಬೆಳಗಿನ ಜಾವ ಗ್ಯಾಸ್‌ ಸಿಲಿಂಡರ್ ಸ್ಫೋಟ (Cylinder Blast) ಸಂಭವಿಸಿದ್ದರಿಂದ ಇಬ್ಬರು ಗಂಭೀರ ಗಾಯಗೊಂಡಿದ್ದ ಘಟನೆ ಬೆಳಗಾವಿಯ ಸುಳಗಾದಲ್ಲಿ (Gas Cylinder Blast) ನಡೆದಿತ್ತು. ತೀವ್ರ ಸುಟ್ಟಗಾಯಗಳಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇದೀಗ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಲಪ್ಪ ಪಾಟೀಲ್ (62), ಸುಮನ್ ಪಾಟೀಲ್(60) ಮೃತ ದುರ್ದೈವಿಗಳು.

ಲೈಟ್ ಆನ್ ಮಾಡುತ್ತಿದ್ದಂತೆ ಸ್ಫೋಟಗೊಂಡಿತ್ತು ಸಿಲಿಂಡರ್‌

ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಲಿಂಡರ್‌ ಸ್ಫೋಟ ಸಂಭವಿಸಿತ್ತು. ಬೆಳಗ್ಗೆ 4 ಗಂಟೆ ಸುಮಾರಿಗೆ ಸುಮನ್‌ ಪಾಟೀಲ್‌ ಅವರು ಎದ್ದು, ಅಡುಗೆ ಮನೆಗೆ ಹೋಗಲು ಲೈಟ್ ಸ್ವಿಚ್ ಆನ್ ಮಾಡಿದ್ದಾರೆ. ಈ ವೇಳೆ ಏಕಾಏಕಿ ಸಿಲಿಂಡರ್‌ ಬ್ಲಾಸ್ಟ್ ಆಗಿದೆ. ಗ್ಯಾಸ್‌ ಸಿಲಿಂಡರ್ ಸಮೀಪ ಹೋಗದಿದ್ದರೂ ಸ್ಫೋಟಗೊಂಡಿದೆ. ಗ್ಯಾಸ್‌ ಲಿಂಕ್‌ ಆಗಿದ್ದರಿಂದ ಏಕಾಏಕಿ ಲೈಟ್‌ ಆನ್‌ ಮಾಡಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿತ್ತು.

ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್ ಸಿಡಿದ ತೀವ್ರತೆಗೆ ಮನೆಯು ಡ್ಯಾಮೇಜ್ ಆಗಿತ್ತು. ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ವಸ್ತುಗಳೆಲ್ಲ ಚಲ್ಲಾಪಿಲ್ಲಿಯಾಗಿತ್ತು. ಸ್ಫೋಟದ ತೀವ್ರತೆಗೆ ಅಕ್ಕ-ಪಕ್ಕದವರು ಬೆಚ್ಚಿಬಿದ್ದಿದ್ದರು. ಮನೆಯ ಇಂಟೀರಿಯರ್ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಟ್ರಜರಿ,ವಸ್ತ್ರ ದವಸ ಧಾನ್ಯಗಳು ಮನೆಯ ತುಂಬ ಚಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ಇದನ್ನೂ ಓದಿ: Cholera: ಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ಕಾಲರಾ; ಪಿಡಿಒ, ಎಂಜಿನಿಯರ್‌ ಅಮಾನತು

ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು, ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ

ದಾವಣಗೆರೆ: ಪೊಲೀಸ್ ಕಸ್ಟಡಿಯಲ್ಲಿದ್ದ (police custody) ಆರೋಪಿಯೊಬ್ಬ ಸಾವಿಗೀಡಾಗಿದ್ದು (Lockup death), ಇದರಿಂದ ರೊಚ್ಚಿಗೆದ್ದ ಆರೋಪಿ (culprit) ಕಡೆಯವರು ಠಾಣೆಗೆ ನುಗ್ಗಿ ಅಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ದಾವಣಗೆರೆ (Davanagere news) ಜಿಲ್ಲೆಯ ಚನ್ನಗಿರಿ (Channagiri news) ತಾಲೂಕಿನಲ್ಲಿ ಘಟನೆ ನಡೆದಿದೆ.

ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಎನ್ನುವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈತ ಒಸಿ ಆಡಿಸುತ್ತಿದ್ದ ಪ್ರಕರಣದಲ್ಲಿ ಪೊಲೀಸರಿಂದ ತನಿಖೆಗೆ ಒಳಗಾಗಿದ್ದ. ಸಂಜೆ ಪೊಲೀಸರು ಈತನನ್ನು ಠಾಣೆಗೆ ಕರೆತಂದಿದ್ದ‌ರು.

ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಬಿದ್ದ ಅದಿಲ್‌ನನ್ನು ಪೊಲೀಸರು ಅಸ್ಪತ್ರೆಗೆ ಸಾಗಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅದಿಲ್‌ ಸಾವನ್ನಪ್ಪಿದ್ದ. ಅಕ್ರೋಶಗೊಂಡ ಆರೋಪಿ ಸಂಬಂಧಿಕರು, ಆರೋಪಿಯ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿ ಪ್ರತಿಭಟನೆ ನಡೆಸಿ ದೊಂಬಿ ಎಬ್ಬಿಸಿದ್ದಾರೆ. ಪೊಲೀಸರು ನೀಡಿದ ಹಿಂಸೆಯ ಪರಿಣಾಮ ಲಾಕಪ್‌ ಡೆತ್‌ ಆಗಿದೆ, ಅದನ್ನು ಮುಚ್ಚಿಡಲು ಲೋ ಬಿಪಿ ನಾಟಕವಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ ಅದಿಲ್‌ ಸಂಬಂಧಿಕರು ಹಾಗೂ ಸ್ನೇಹಿತರು, ಪೊಲೀಸ್ ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯ ಆವರಣದಲ್ಲಿ ನೂರಾರು ಜನ ಜಮಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version