Development Programme | ಗಡಿ ಜಿಲ್ಲೆಗಳ ಗ್ರಾಮ ಪಂಚಾಯಿತಿಗಳು, ಶಾಲೆಗಳ ಅಭಿವೃದ್ಧಿಗೆ ಕ್ರಮ: ಸಿಎಂ ಬೊಮ್ಮಾಯಿ - Vistara News

ಬೆಳಗಾವಿ

Development Programme | ಗಡಿ ಜಿಲ್ಲೆಗಳ ಗ್ರಾಮ ಪಂಚಾಯಿತಿಗಳು, ಶಾಲೆಗಳ ಅಭಿವೃದ್ಧಿಗೆ ಕ್ರಮ: ಸಿಎಂ ಬೊಮ್ಮಾಯಿ

Development Programme | ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ 671.28 ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೆರವೇರಿಸಿದ್ದಾರೆ.

VISTARANEWS.COM


on

Development Programme
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಕನ್ನಡಿಗರ ಅಭಿವೃದ್ಧಿ ಹಾಗೂ ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದೆ. ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿರಲಿ ಅಥವಾ ದೇಶದ ಯಾವುದೇ ರಾಜ್ಯದಲ್ಲಿರಲಿ ಅವರ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ. ಅಂತೆಯೇ ಈ ರಾಜ್ಯದ ನಾಡು-ನುಡಿ ಅಭಿವೃದ್ಧಿಪಡಿಸುವುದು ಸರ್ಕಾರದ ಸಂಕಲ್ಪವಾಗಿದೆ. ಗಡಿಭಾಗದ ಗ್ರಾಮ ಪಂಚಾಯಿತಿಗಳು ಹಾಗೂ ಶಾಲೆಗಳ ಅಭಿವೃದ್ಧಿಗೆ(Development Programme) ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಮದುರ್ಗ ತಾಲೂಕಿನ ಸಾಲಹಳ್ಳಿಯಲ್ಲಿ ಶುಕ್ರವಾರ ರಾಮದುರ್ಗ ತಾಲೂಕಿನ ಅಂದಾಜು 671.28 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಸಂಪನ್ಮೂಲ ಇಲಾಖೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು,

ಇದನ್ನೂ ಓದಿ | ವಿಸ್ತಾರ ವಿಶೇಷ | ಡಿಸೆಂಬರ್‌ ಅಂತ್ಯಕ್ಕೆ ಶ್ರೀರಾಮ ಸೇನೆ 25 ಅಭ್ಯರ್ಥಿಗಳ ಘೋಷಣೆ: BJP ನಿದ್ದೆಗೆಡಿಸಿದ ಮುತಾಲಿಕ್‌ ನಡೆ

ನವಭಾರತ ನಿರ್ಮಾಣಕ್ಕೆ ಹಾಗೂ ನವ ಕರ್ನಾಟಕ ನಿರ್ಮಿಸಲು ಜನರು ಕೈಜೋಡಿಸಬೇಕು. ಸುಮಾರು 2739 ಕೋಟಿ ರೂ.ಗಳ ಅನುದಾನವನ್ನು ಕಳೆದ ಮೂರೂವರೆ ವರ್ಷಗಳಲ್ಲಿ ತಂದು ವಿವಿಧ ಇಲಾಖೆಗಳ ಮೂಲಕ ರಾಮದುರ್ಗವನ್ನು ಅಭಿವೃದ್ಧಿಶೀಲ ಕ್ಷೇತ್ರವನ್ನಾಗಿ ಮಾಡಲಾಗಿದೆ. ವಿವಿಧ ಯೋಜನೆಗಳನ್ನು ಈ ಕ್ಷೇತ್ರಕ್ಕೆ ತಂದು ಜಲಜೀವನ್ ಮಿಷನ್ ಅಡಿ ಪ್ರತಿ ಮನೆಗೆ ಗಂಗೆಯನ್ನು ಹರಿಸುವ ಸಾಹಸವನ್ನು ಶಾಸಕ ಮಹಾದೇವಪ್ಪ ಯಾದವಾಡ ಅವರು ಮಾಡಿದ್ದಾರೆ. ಸರ್ಕಾರ ಜನಪ್ರಿಯವಾದರೆ ಸಾಲದು, ಜನಪರ ಇದ್ದಾಗ ಮಾತ್ರ ಕಟ್ಟ ಕಡೆಯ ಗ್ರಾಮಕ್ಕೂ ಅಭಿವೃದ್ಧಿ ಯೋಜನೆಗಳು ತಲುಪುತ್ತವೆ ಎಂದರು.

ಗಡಿಭಾಗದ ಜಿಲ್ಲೆಗಳ 1800 ಗ್ರಾಮ ಪಂಚಾಯತಿಗಳ ಸಂಪೂರ್ಣ ಅಭಿವೃದ್ಧಿ
ನಮ್ಮ ಸರ್ಕಾರ ಸಮಗ್ರ ಕರ್ನಾಟಕದ ಚಿಂತನೆ ಮಾಡಿ ಹತ್ತು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕರ್ನಾಟಕದ ನಡುಭಾಗದಿಂದ ಹಿಡಿದು ಗಡಿಭಾಗದವರೆಗೂ ಅಭಿವೃದ್ಧಿ ಕಾರ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿದೆ. ಕಲ್ಯಾಣ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ಬೆಳಗಾವಿ ಹಾಗೂ ಬಿಜಾಪುರ ಜಿಲ್ಲೆಗಳ ಗಡಿ ಭಾಗದ ಗ್ರಾಮಗಳ ಅಭಿವೃದ್ಧಿಗೆ 2 ನೂತನ ಕಾರ್ಯಕ್ರಮ ರೂಪಿಸಿದೆ ಎಂದರು.

ಗಡಿಭಾಗದಲ್ಲಿರುವ ರಾಜ್ಯದ ಜಿಲ್ಲೆಗಳಲ್ಲಿ 1800 ಗ್ರಾಮ ಪಂಚಾಯಿತಿಗಳನ್ನು ಸಂಪೂರ್ಣವಾಗಿ ಅಭಿವೃದ್ಧಿ ಮಾಡುವ ಕಾರ್ಯಕ್ರಮಗಳನ್ನು ಈ ವರ್ಷದಲ್ಲಿ ಅನುಷ್ಠಾನ ಮಾಡಲಾಗುತ್ತದೆ. ಗಡಿ ಭಾಗದ ರಸ್ತೆಗಳ ಸುಧಾರಣೆಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೂಪಿಸಿರುವ ಜಲ್ ಜೀವನ್ ಮಿಷನ್ ಯೋಜನೆಯಡಿ ಗಡಿ ಭಾಗದ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಗಡಿಭಾಗದ ಶಾಲೆಗಳ ಅಭಿವೃದ್ಧಿಗೆ 100 ಕೋಟಿ
ಗಡಿಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಇದೇ ವರ್ಷ 100 ಕೋಟಿ ರೂ.ಗಳನ್ನು ವೆಚ್ಚ ಮಾಡಿ ಕನ್ನಡ ಶಾಲೆಗಳ ಅಭಿವೃದ್ಧಿ ಕೈಗೊಳ್ಳಲಾಗುವುದು. ಗೋವಾದಲ್ಲಿ 10 ಕೋಟಿ ರೂ.ಗಳ ವೆಚ್ಚದಲ್ಲಿ ಕನ್ನಡ ಭವನ ನಿರ್ಮಿಸಲಾಗುವುದು. ಹಾಗೆಯೇ ಸೋಲಾಪುರ ಹಾಗೂ ಕಾಸರಗೋಡಿನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ತಲಾ 10 ಕೋಟಿ ರೂಪಾಯಿಗಳನ್ನು ಸರ್ಕಾರ ನೀಡಲಿದೆ. ಜತೆಗೆ ರಾಜ್ಯದ ಭಕ್ತರಿಗಾಗಿ ಪುಣ್ಯಕ್ಷೇತ್ರಗಳಾದ ಪಂಡರಾಪುರ, ತುಳಜಾಪುರ, ಶ್ರೀಶೈಲ, ಶಬರಿಮಲೆ ಅಯ್ಯಪ್ಪ ದೇವಾಲಯಗಳಲ್ಲಿ ಯಾತ್ರಿ ನಿವಾಸ ನಿರ್ಮಿಸಲು ಮಂಜೂರಾತಿ ನೀಡಲಾಗಿದೆ ಎಂದರು.

ತಡೆಗೋಡೆ ನಿರ್ಮಾಣಕ್ಕೆ 120 ಕೋಟಿ ರೂ.ಗಳ ಅನುಮೋದನೆ
ರಾಮದುರ್ಗ ತಾಲೂಕಿನ ಕೆಲ ಗ್ರಾಮಗಳು ಪದೇ ಪದೇ ಪ್ರವಾಹದಿಂದ ಬಾಧಿತಗೊಳ್ಳುವುದನ್ನು ತಪ್ಪಿಸಲು ಮಲಪ್ರಭಾ ನದಿ ತೀರದಲ್ಲಿ ತಡೆಗೋಡೆ ನಿರ್ಮಿಸಲು ಸರ್ಕಾರ ಮುಂದಾಗಿದೆ. 120 ಕೋಟಿ ರೂ.ಗಳಿಗಿಂತ ಹೆಚ್ವು ಅನುದಾನವನ್ನು ಅನುಮೋದಿಸಿ ಕಾಮಗಾರಿಗೆ ಅಡಿಗಲ್ಲು ಹಾಕಲಾಗಿದೆ. ಶಾಶ್ವತವಾಗಿ ಊರುಗಳನ್ನು ಉಳಿಸುವ ಕೆಲಸವನ್ನು ಶಾಸಕರು ಮಾಡುತ್ತಿದ್ದಾರೆ. ಅದೇ ರೀತಿ ಈ ಭಾಗದ 19 ಕೆರೆಗಳನ್ನು ತುಂಬಿಸುವ ಯೋಜನೆಗೆ ಬಜೆಟ್‌ನಲ್ಲಿ ಅನುದಾನ ತೆಗೆದಿರಿಸಲಾಗುವುದು. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.

ಎಲ್ಲ ಸಮುದಾಯಗಳಿಗೆ ಸರ್ಕಾರಿ ಸೌಲಭ್ಯ
ಹತ್ತು ಲಕ್ಷಕ್ಕೂ ಅಧಿಕ ಮಕ್ಕಳಿಗೆ 600 ಕೋಟಿ ರೂಪಾಯಿ ಶಿಷ್ಯವೇತನವನ್ನು ರೈತ ವಿದ್ಯಾನಿಧಿ ಯೋಜನೆ ಮೂಲಕ ಒದಗಿಸಲಾಗಿದೆ. ಇದೇ ರೀತಿ ಕೃಷಿ ಕೂಲಿಕಾರರು, ಮೀನುಗಾರರು, ಚಾಲಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದೆ. 6 ಲಕ್ಷ ಕೃಷಿ ಕೂಲಿಕಾರರ ಮಕ್ಕಳಿಗೆ ವಿದ್ಯಾ ನಿಧಿ ನೀಡಲಾಗುವುದು. ಎಲ್ಲ ಸಮುದಾಯಗಳಿಗೆ ಸರಕಾರಿ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಾಮಾಜಿಕ ನ್ಯಾಯವನ್ನು ಒದಗಿಸಲಾಗಿದೆ. 20 ಕುರಿ ಮತ್ತು 1 ಮೇಕೆಯಂತೆ 20 ಸಾವಿರ ಕುರಿಗಾಹಿಗಳ ಸಂಘಗಳಿಗೆ ನೀಡುವ ಯೋಜನೆಗೆ 354 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದರು.

ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ:
ಕಾಯಕ, ಸ್ತ್ರೀ ಸಾಮರ್ಥ್ಯ, ವಿವೇಕಾನಂದ ಯುವಶಕ್ತಿ ಯೋಜನೆ ಮೂಲಕ ಎಲ್ಲ ವರ್ಗದ ಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರ ನೆರವು ನೀಡುತ್ತಿದೆ. ವಿವೇಕ ಯೋಜನೆಯಡಿ 8000 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡಲಾಗಿದೆ. ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಲಾಗಿದೆ. 30 ಜಿಲ್ಲೆಗಳಲ್ಲಿ ಗೋಶಾಲೆ ಪ್ರಾರಂಭಿಸಲಾಗಿದ್ದು, ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದರು.

ಸಚಿವರಾದ ಶಶಿಕಲಾ ಜೊಲ್ಲೆ, ಸಿ.ಸಿ.ಪಾಟೀಲ, ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ಕೆಎಂಎಫ್ ಅಧ್ಯಕ್ಷ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಮಂಗಳ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ.ರಾಜೀವ, ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾರುತಿ ಅಷ್ಟಗಿ, ವಿಧಾನ ಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ಹನುಮಂತ ನಿರಾಣಿ, ಶಾಸಕರಾದ ಅನಿಲ್ ಬೆನಕೆ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ | ಡಿ.ಕೆ.ಶಿವಕುಮಾರ್ ಯಾರ ಶಿಷ್ಯ, ಎಲ್ಲಿಂದ ಬಂದದ್ದು ಗೊತ್ತಿದೆ: ನಳಿನ್‍ಕುಮಾರ್ ಕಟೀಲ್ ವಾಗ್ದಾಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lok Sabha Election 2024: ಸಿದ್ದರಾಮಯ್ಯ ಸರ್ಕಾರ ಕೆಡವಲು ನಿಮಗೇನು ನೈತಿಕತೆ ಇದೆ? ರಮೇಶ್‌ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ

Lok Sabha Election 2024: ಗೋಕಾಕ ಶಾಸಕರೇ, ಸಿದ್ದರಾಮಯ್ಯ ಸರ್ಕಾರ ಕೆಡವಲು ನಿಮಗೇನು ನೈತಿಕತೆ ಇದೆ ಎಂದು ಪ್ರಶ್ನಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸರ್ಕಾರವನ್ನು ಕೆಡವಲು ಮುಂದಾದರೆ ಇಡೀ‌ ಹಿಂದುಳಿದ ವರ್ಗಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

VISTARANEWS.COM


on

Minister Lakshmi hebbalkar spoke in Prajadhwani 02 Lok Sabha election campaign programme at Gokak
Koo

ಗೋಕಾಕ್: ಹಿಂದುಳಿದ ಸಮುದಾಯದ ಸಿದ್ದರಾಮಯ್ಯ (CM Siddaramaiah) ಅವರನ್ನು ಕಾಂಗ್ರೆಸ್ ಪಕ್ಷ (Congress Party) 2ನೇ ಬಾರಿಗೆ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಪೂರ್ಣ ಬಹುಮತದ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕೆಡವಲು ಅಷ್ಟು ಸುಲಭ ಅಲ್ಲ. ಗೋಕಾಕ್ ಶಾಸಕರೇ, ಪದೇ ಪದೇ ಲೋಕಸಭಾ ಚುನಾವಣೆ ನಂತರ ಸರ್ಕಾರ ಬೀಳಿಸುವುದಾಗಿ ಹೇಳುತ್ತಿದ್ದೀರಿ, ಸರ್ಕಾರ ಕೆಡವಲು ನಿಮಗೇನು ನೈತಿಕತೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lok Sabha Election 2024) ಪ್ರಶ್ನಿಸಿದರು.

ಗೋಕಾಕ್‌ನ ವಾಲ್ಮೀಕಿ ಮೈದಾನದಲ್ಲಿ ಮಂಗಳವಾರ ನಡೆದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸರ್ಕಾರವನ್ನು ಕೆಡವಲು ಮುಂದಾದರೆ ಇಡೀ‌ ಹಿಂದುಳಿದ ವರ್ಗಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಪಕ್ಷ ಎಂದರೆ ಬದ್ದತೆ, ಎಲ್ಲಾ ಧರ್ಮ, ಜಾತಿ ಸಮುದಾಯದವರಿಗೆ ಮಣೆ ಹಾಕಿದೆ. ಭಾರತದ ಸಂಸ್ಕೃತಿಯನ್ನು ಉಳಿಸುತ್ತಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ. ಎಲ್ಲಾ ವರ್ಗದವರಿಗೂ ಅಧಿಕಾರ ನೀಡುವ ಪಕ್ಷ ಎಂದು ಹೇಳಿದರು.

ಇದನ್ನೂ ಓದಿ: Multivitamin Pill: ಮಲ್ಟಿವಿಟಮಿನ್‌ ಮಾತ್ರೆಗಳ ಮೊರೆ ಹೋಗದೆ, ನೈಸರ್ಗಿಕವಾಗಿ ಪೋಷಣೆ ಪಡೆಯುವುದು ಹೇಗೆ?

ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಐದು ಗ್ಯಾರಂಟಿಗಳನ್ನು ಬಡವರ ಮನೆಗೆ ತಲುಪಿಸುತ್ತಿದ್ದೇವೆ. ಹಿಂದುಳಿದ ವರ್ಗಕ್ಕೆ ಸಿಎಂ ಸಿದ್ದರಾಮಯ್ಯ ಅವರ ಕೊಡುಗೆ ಅಪಾರ. ದೇವರಾಜ ಅರಸು ಬಳಿಕ ಅತಿಹೆಚ್ಚು ಬಡವರ ಪರ ಕೆಲಸ ಮಾಡಿದವರು ನಮ್ಮ ಸಿಎಂ ಸಿದ್ದರಾಮಯ್ಯನವರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇಡೀ‌ ದೇಶದ ಇತಿಹಾಸದಲ್ಲಿ ಕುರುಬ ಸಮುದಾಯದ‌ ವ್ಯಕ್ತಿಯನ್ನು ಎರಡನೇ ಬಾರಿಗೆ ಸಿಎಂ ಮಾಡಿದ್ದು ಕಾಂಗ್ರೆಸ್ ಪಕ್ಷ. ಅದರೆ, ಇದ್ದ ಒಬ್ಬ ಕುರುಬ ಸಮಾಜದ ನಾಯಕನನ್ನು ಬಿಜೆಪಿಯಿಂದ ಹೊರಹಾಕಲಾಗಿದೆ ಎಂದು ಟೀಕಿಸಿದರು.

ಬಿಜೆಪಿ‌ ಅಭ್ಯರ್ಥಿ ಜಗದೀಶ್ ಶೆಟ್ಟರ್, ಬೆಳಗಾವಿ ಬಗ್ಗೆ ತಾತ್ಸರ ಮನೋಭಾವ ಹೊಂದಿರುವ ವ್ಯಕ್ತಿ. ಜಿಲ್ಲೆಯ ಜನರ ಕಷ್ಟ ಕಾಲದಲ್ಲಿ ಬರದ ಮೋದಿ ಚುನಾವಣೆ ವೇಳೆ ಮತ ಕೇಳಲು ಬರುತ್ತಾರೆ. ಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡುವ ನೈತಿಕ ಹಕ್ಕಿದೆಯೇ ಎಂದು ಸಚಿವೆ‌ ಪ್ರಶ್ನಿಸಿದರು.‌

ಇದನ್ನೂ ಓದಿ: Toyota Kirloskar Motor: ಟೊಯೊಟಾ ರುಮಿಯಾನ್‌ G-AT ಬುಕ್ಕಿಂಗ್‌ ಶುರು! ಏನಿದರ ವಿಶೇಷ?

ಕಾಂಗ್ರೆಸ್ ಅಭ್ಯರ್ಥಿ ಎಂಜಿನಿಯರಿಂಗ್ ಪದವೀಧರ, ಸುಸಂಸ್ಕೃತ ವ್ಯಕ್ತಿ. ನಾನು ನನ್ನ ಕ್ಷೇತ್ರ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಗಲಿರುಳು ದುಡಿಯುತ್ತಿರುವೆ. ನನಗೆ ನನ್ನ ಮಗ ಮೃಣಾಲ್‌ ಹೆಬ್ಬಾಳಕರ್ ಬೆಂಬಲವಾಗಿ ನಿಂತಿದ್ದಾನೆ. ನನ್ನ ಮಗ ಗೆದ್ದರೆ ಬೆಳಗಾವಿ ಕ್ಷೇತ್ರದ ಅಭಿವೃದ್ಧಿಗೆ ಧಾರೆ ಎರೆದುಕೊಡುವೆ. ತಾಯಿಯಾಗಿ ಮಗನ ಪರ ಸೆರಗೊಡ್ಡಿ ಮತಕೇಳುವೆ ಎಂದರು.

ಬಿಜೆಪಿಯವರು ಅಧಿಕಾರಕ್ಕೆ ಬಂದರೆ ಮೀಸಲಾತಿಗೆ ಕಂಟಕ. ಒಂದು ಅವಕಾಶವನ್ನು ಕಾಂಗ್ರೆಸ್ ಪಕ್ಷಕ್ಕೆ ಕೊಡಿ. ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಿಂದ ಬಂದಿದ್ದಾರೆ. ಹುಬ್ಬಳ್ಳಿ ಜನ ಅವರನ್ನು ತಿರಸ್ಕಾರ ಮಾಡಿದ್ದಾರೆ, ನಾವೇಗೆ ಅವರನ್ನು ಪುರಸ್ಕರಿಸೋದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇದನ್ನೂ ಓದಿ: Sharavathi Project: ಶರಾವತಿ ಜಲವಿದ್ಯುತ್ ಯೋಜನೆ; ಟೆಂಡರ್‌ ಪ್ರಶ್ನಿಸಿ ಎಲ್ & ಟಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವ ಡಾ. ಎಂ.ಸಿ.ಸುಧಾಕರ್, ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ್ ಸವದಿ, ಶಾಸಕರಾದ ಬಿ.ಕೆ.ಸಂಗಮೇಶ್, ಪುಟ್ಟ ರಂಗಶೆಟ್ಟಿ, ರಾಜು ಸೇಠ್, ನಯನಾ ಮೋಟಮ್ಮ, ಕೇರಳ ಶಾಸಕ ರೋಜಿ ಜಾನ್, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ, ಭೋವಿ ನಿಗಮದ ಅಧ್ಯಕ್ಷ ಪ್ರವೀಣ್ ಕುಮಾರ್, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ, ಮುಖಂಡರಾದ ಡಾ.ಮಹಾಂತೇಶ್ ಕಡಾಡಿ, ಮೋಹನ್ ಲಿಂಬಿಕಾಯಿ, ಅಶೋಕ್ ಪೂಜಾರಿ, ಸಿದ್ದಲಿಂಗ ದಳವಾಯಿ, ಅರವಿಂದ ದಳವಾಯಿ, ಚಂದ್ರಶೇಖರ್ ಕೊಣ್ಣೂರ, ಲಕ್ಕಣ್ಣ ಸವಸುದ್ದಿ, ಪ್ರೇಮಾ ಚಿಕ್ಕೋಡಿ, ಬಸವನಗೌಡ ಹೊಳಿಯಾಚೆ, ಪ್ರಕಾಶ್ ಢಾಗೆ, ಜಾರಿಕ್ ನದಾಫ್, ಗಂಗಾಧರ ಬಡಕುಂದ್ರಿ, ಭೀಮಪ್ಪ ಹಂದಿಗುಂದ್, ರಮೇಶ್ ಉಟಗಿ, ಸುರೇಶ್ ಅರಳಿ, ಲಗಮಣ್ಣ ಕಳಸನ್ನವರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಬೆಳಗಾವಿ

Lakshmi Hebbalkar: ಪ್ರಜ್ವಲ್ ಹಗರಣದ ಬಗ್ಗೆ ಬಿಜೆಪಿ ನಾಯಕರ ಮೌನವೇಕೆ? ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆ

Lakshmi hebbalkar: ಇಡೀ ದೇಶವೇ ತಲೆ ತಗ್ಗಿಸುವಂತ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ನಾಯಕರು ಮೌನ ವಹಿಸಿರುವುದು ಏಕೆ? ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದ್ದಾರೆ.

VISTARANEWS.COM


on

Minister Lakshmi hebbalkar Latest statement in Belagavi
Koo

ಬೆಳಗಾವಿ: ಇಡೀ ದೇಶವೇ ತಲೆ ತಗ್ಗಿಸುವಂತ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ನಾಯಕರು (BJP Leaders) ಮೌನ ವಹಿಸಿರುವುದು ಏಕೆ? ಹುಬ್ಬಳ್ಳಿಯ ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಭಾರೀ ಆಸಕ್ತಿ ತೋರಿಸಿದ್ದ ಮಾಜಿ ಮುಖ್ಯಮಂತ್ರಿ, ಬಿಜೆಪಿ ಬೆಳಗಾವಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರೇ ಈಗಲೂ ಸಂತ್ರಸ್ತ ಮಹಿಳೆಯರ ಪರ ಧ್ವನಿ ಎತ್ತಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.

ಗೃಹ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಎಲ್ಲೇ ಅನ್ಯಾಯವಾದರೂ ನಾವು ಖಂಡಿಸುತ್ತೇವೆ. ಅವರ ಪರವಾಗಿ ನಿಲ್ಲುತ್ತೇವೆ. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಅದರಲ್ಲಿ ರಾಜಕೀಯ ಬೆರೆಸಲು ನಾವು ಹೋಗುವುದಿಲ್ಲ. ಆದರೆ ಹುಬ್ಬಳ್ಳಿ ಪ್ರಕರಣದಲ್ಲಿ ಅತೀವ ಆಸಕ್ತಿ ತೋರಿಸಿದ್ದ ಬಿಜೆಪಿ ನಾಯಕರು ಈಗೇಕೆ ಮೌನವಾಗಿದ್ದಾರೆ. ಇಲ್ಲೂ ನೂರಾರು ಮಹಿಳೆಯರಿಗೆ ಅನ್ಯಾಯವಾಗಿದೆಯಲ್ಲವೇ? ಈಗಲೂ ಸಂಸದೆ ಮಂಗಲಾ ಅಂಗಡಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡಲಿ. ಜಗದೀಶ ಶೆಟ್ಟರ್ ಅಷ್ಟೇ ಆಸಕ್ತಿಯಿಂದ ಹೇಳಿಕೆಗಳನ್ನು ನೀಡಲಿ ಎಂದು ಆಗ್ರಹಿಸಿದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ₹330 ಇಳಿಕೆ; ಇಂದಿನ ಬಂಗಾರ- ಬೆಳ್ಳಿ ದರಗಳು ಇಲ್ಲಿವೆ

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಏನು‌ ಹೇಳ್ತೀರಾ? ನಾರಿ ಶಕ್ತಿ, ನಾರಿ‌ ಸಮ್ಮಾನ್, ಬೇಟಿ ಬಚ್ಚಾವ್, ಬೇಟಿ ಪಡಾವ್ ಅಂತ ಹೇಳುವ ಬಿಜೆಪಿಗರು, ಈಗ ಯಾಕೆ ಮೌನವಾಗಿದ್ದಾರೆ. ಮಾತು ಆಡಿದರೆ ಕರ್ನಾಟಕ ಸರ್ಕಾರವನ್ನು ಟೀಕಿಸುವ ಮೋದಿಜೀ ಅವರ ಈಗಿನ ನಿಲುವೇನು? ಇಲ್ಲಿನ ಸಂತ್ರಸ್ತ ಮಹಿಳೆಯರ ಮಾಂಗಲ್ಯದ ಕಥೆಯೇನು? ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾಗಿ ಪ್ರಶ್ನೆ ಕೇಳ್ತಾ ಇದ್ದೀನಿ ಎಂದು ಹೇಳಿದರು.

ಕಾನೂನು ಚೌಕಟ್ಟಿನಡಿ ಕ್ರಮ

ವಿದೇಶದಿಂದ, ಹೊರ ರಾಜ್ಯಗಳಿಂದ ಫೋನ್ ಕಾಲ್‌ಗಳು ಬರುತ್ತಿವೆ. ಇಂತಹ ಪ್ರಕರಣ ನಡೆದಿದ್ದು ನಿಜವೇ ಎಂದು ಪ್ರಶ್ನಿಸುತ್ತಿದ್ದಾರೆ. ಸರ್ಕಾರ ಏನು ಕ್ರಮ ಕೈಗೊಳ್ಳಲಿದೆ ಎಂದು ಪ್ರಶ್ನಿಸುತ್ತಿದ್ದಾರೆ. ಪ್ರಕರಣವನ್ನು ರಾಜ್ಯ ಸರ್ಕಾರ ಈಗಾಗಲೇ ಎಸ್‌ಐಟಿ ತನಿಖೆಗೆ ವಹಿಸಿದ್ದು, ಕಾನೂನಿನ ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬಿಜೆಪಿಯ ಮಹಿಳಾಮಣಿಗಳು ಎಲ್ಲಿದ್ದಾರೆ?

ಸಂಸದೆ ಮಂಗಲಾ ಅಂಗಡಿ ಅವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಆಗಬೇಕು, ನೇಹಾ ಹಿರೇಮಠ ವಿಷಯದಲ್ಲಿ ಮಾತಾಡಿದಂತೆ ಜಗದೀಶ್ ಶೆಟ್ಟರ್ ಅವರು ಮಾತಾಡಬೇಕು. 16 ವರ್ಷದಿಂದ 50, 60 ವರ್ಷದ ಮಹಿಳೆಯರು ಪ್ರಜ್ವಲ್ ರೇವಣ್ಣ ಅವರಿಂದ ನೊಂದಿದ್ದಾರೆ‌ ಎಂದು ಆರೋಪಿಸಿದ ಅವರು, ಮಹಿಳೆಯರ ಪರ ಮೈತ್ರಿ ನಾಯಕರು ನಿಲ್ಲಲಿ ಎಂದು ಈ ವೇಳೆ ಒತ್ತಾಯಿಸಿದರು.

ಇದನ್ನೂ ಓದಿ: Dheeren Rajkumar: ಹೆಸರು ಬದಲಿಸಿಕೊಂಡು ಅದೃಷ್ಟ ಪರೀಕ್ಷೆಗಿಳಿದ ರಾಜ್‌ಕುಮಾರ್ ಮೊಮ್ಮಗ!

ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ, ಹಿರಿಯ ಮುಖಂಡ ಎ.ಟಿ. ರಾಮಸ್ವಾಮಿ, ದೇವರಾಜ್ ಗೌಡ ಎಂಬುವರು, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಮೈಸೂರು ಪ್ರವಾಸದಲ್ಲಿದ್ದ ಅಮಿತ್ ಷಾ ಅವರ ಗಮನಕ್ಕೆ ಆಗಲೇ ತಂದಿದ್ದರು. ಇಂಥ ವಿಷಯ ಗೊತ್ತಿದ್ದರೂ ಮೈತ್ರಿ ನಾಯಕರು ಪ್ರಜ್ವಲ್ ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಿದ್ದು ಎಷ್ಟು ಸರಿ. ಇದಕ್ಕೆ ಬಿಜೆಪಿ ನಾಯಕರು ಉತ್ತರಿಸುವರೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಪ್ರಜ್ವಲ್ ರೇವಣ್ಣ ಪ್ರಕರಣದ ಕುರಿತು ಬಿಜೆಪಿ ನಾಯಕರಿಗೆ ಮೊದಲೇ ಅರಿವಿತ್ತು ಎಂದೂ ಸಚಿವರು ತಿಳಿಸಿದರು.

ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿರುವ ಬಿಜೆಪಿ ನಾಯಕರು, ಈಗ ಯಾಕೆ ಜಾಣ ಮೌನವಾಗಿದ್ದಾರೆ. ಮೊನ್ನೆ ಮಾಜಿ ಶಾಸಕರೊಬ್ಬರೂ ನನ್ನ ಬಗ್ಗೆ ತುಚ್ಛವಾಗಿ ಮಾತನಾಡುವಾಗ ವೇದಿಕೆಯಲ್ಲಿದ್ದ ಸಂಸದೆ ಮಂಗಲಾ ಅಂಗಡಿ, ಜಗದೀಶ್ ಶೆಟ್ಟರ್ ನಕ್ಕರು ಹೊರತು ಏನು ಮಾತಾಡಲಿಲ್ಲ. ಸಂಜಯ್ ಪಾಟೀ;ಗೆ ಕನಿಷ್ಠ ಬುದ್ದಿವಾದ ಹೇಳಲಿಲ್ಲ ಎಂದು ಸಚಿವರು ಆರೋಪಿಸಿದರು.

ಉಡುಪಿ ಹಾಸ್ಟೆಲ್‌ನಲ್ಲಿ ಕ್ಯಾಮೆರಾ ಇಟ್ಟ ವಿಷಯವನ್ನು ಬಿಜೆಪಿಯವರು ರಾಜಕರಣ‌ಗೊಳಿಸಿದ್ರು, ರಾಷ್ಟ್ರೀಯ ಮಹಿಳಾ ಆಯೋಗದವರು ಓಡೋಡಿ ಬಂದರು. ಈಗ ಸಾವಿರಾರು ಮಹಿಳೆಯರ ಮಾನ ಹರಾಜಾದ್ರು ಯಾರು ಏನೂ ಮಾತಾಡುತ್ತಿಲ್ಲ. ಅಶೋಕ್, ವಿಜಯೇಂದ್ರ ಅವರೇ ಈಗ ಏನು ಹೇಳ್ತೀರಾ, ಶೋಭಾ ಕರಂದ್ಲಾಜೆ, ಸ್ಮೃತಿ ಇರಾನಿ ಅವರು ಯಾಕೆ ಏನು ಹೇಳ್ತಿಲ್ಲ. ಮಂಡ್ಯ ಸೊಸೆ ಸುಮಲತಾ ಏನ್ ಮಾಡ್ತಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದರು.

ಸರ್ಕಾರ ನೊಂದ ಮಹಿಳೆಯರ ಪರವಾಗಿ ನಿಲ್ಲಲಿದೆ. ಅವರ ರಕ್ಷಣೆ ಮಾಡಲಿದೆ. ಪ್ರಕರಣದ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ಪ್ರಜ್ವಲ್ ಪ್ರಕರಣದ ವಿಡಿಯೋಗಳನ್ನು ಯಾರೂ ಫಾರ್ವರ್ಡ್ ಮಾಡಬಾರದು ಎಂದು ಸಚಿವರು ಮನವಿ ಮಾಡಿದರು.

ಇದನ್ನೂ ಓದಿ: Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

ಸುದ್ದಿಗೋಷ್ಠಿಯಲ್ಲಿ ಸಚಿವ ಡಾ.ಎಂ.ಸಿ. ಸುಧಾಕರ್, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ವಿನಯ್ ನಾವಲಗಟ್ಟಿ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Karnataka Weather: ಇಂದು ಬೀದರ್, ಕಲಬುರಗಿ ಸೇರಿ ಹಲವೆಡೆ ಶಾಖದ ಅಲೆ ಎಚ್ಚರಿಕೆ; ಇನ್ನೂ ಎಲ್ಲಿಯವರೆಗೆ ಈ ರಣ ಬಿಸಿಲು?

Karnataka Weather: ರಾಜ್ಯದ ಬಹುತೇಕ ಕಡೆ ಮೇ 5ರವರೆಗೆ ರಣ ಬಿಸಿಲು ಕಾಡಲಿದೆ. ಇನ್ನು ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಏಪ್ರಿಲ್ 29ರಂದು ಸೋಮವಾರ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಅಲ್ಲಲ್ಲಿ ಸುರಿಯುತ್ತಿದ್ದ ಮಳೆಯು, ಕಳೆದ ನಾಲ್ಕೈದು ದಿನಗಳಿಂದ ಕಣ್ಮರೆಯಾಗಿದ್ದರಿಂದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಭಾನುವಾರ ಸಹ 38.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ (Karnataka Weather) ವರದಿಯಾಗಿದೆ. ಇನ್ನು ಕಲಬುರಗಿಯಲ್ಲಿ 42.9 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ದಾಖಲಾಗಿದ್ದು, 8 ವರ್ಷಗಳ ಬಳಿಕ ಗರಿಷ್ಠ ತಾಪಮಾನಕ್ಕೆ ನಗರ ಸಾಕ್ಷಿಯಾಗುತ್ತಿದೆ.

ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಮೇ 2 ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದಲ್ಲಿ ಭಾನುವಾರ ಉಷ್ಣಾಂಶದಲ್ಲಿ ಸಾಮಾನ್ಯಕ್ಕಿಂತ ಏರಿಕೆ ಕಂಡುಬಂದಿದ್ದು, ದಕ್ಷಿಣ ಒಳನಾಡಿನ ಹಲವು ಕಡೆ ಮತ್ತು ಉತ್ತರ ಒಳನಾಡಿನ ಕೆಲವು ಕಡೆ 3.5ರಿಂದ 5 ಡಿ. ಸೆಲ್ಸಿಯಸ್‌ವರೆಗೆ ಉಷ್ಣಾಂಶ ಏರಿಕೆಯಾಗಿದೆ. ಇನ್ನು ಮೇ 2 ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಏಪ್ರಿಲ್ 29ರಂದು ಬೀದರ್, ಕಲಬುರಗಿ, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ರಾಜ್ಯದ ಬಹುತೇಕ ಕಡೆ ಇದೇ ರೀತಿಯ ಪರಿಸ್ಥಿತಿ ಮೇ 5ರವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ | Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

Lok Sabha Election 2024

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಸ್ತಿ ಎಕ್ಸ್‌ರೇ ಮಾಡುತ್ತಾರಂತೆ, ಮಹಿಳೆಯರ ಬಳಿ ಸ್ತ್ರೀಧನ ಎಷ್ಟಿದೆ, ಚಿನ್ನ ಎಷ್ಟಿದೆ ಅಂತಲೂ ಎಕ್ಸ್‌ರೇ ಮಾಡಲಾಗುತ್ತದೆ. ಈ ರೀತಿಯ ಕಾಂಗ್ರೆಸ್‌ ನಿಮಗೆ ಬೇಕಾ? ನಿಮ್ಮ ಸಂಪತ್ತಿನ ಮೇಲೆ ಕಣ್ಣಿಟ್ಟಿರುವ ಕಾಂಗೆಸ್ ಅಧಿಕಾರ ಬೇಕಾ? ಎಲ್ಲರ ಆಸ್ತಿಯನ್ನು ಮರು ಹಂಚಿಕೆ ಮಾಡುತ್ತಾರಂತೆ, ನಿಮ್ಮ ಮಂಗಳ ಸೂತ್ರಕ್ಕೆ ಯಾರೋ ಕೈ ಹಾಕಲು ಅವಕಾಶ ಕೊಡುತ್ತೀರಾ? ನಿಮ್ಮ ಆಸ್ತಿಪಾಸ್ತಿಗೆ, ನಿಮ್ಮ ಚಿನ್ನಾಭರಣ ಲೂಟಿಗೆ ಅವಕಾಶ ಕೊಡುತ್ತೀರಾ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

If Congress comes to power all your assets will belong to Government says PM Narendra Modi
Koo

ಬೆಳಗಾವಿ: ಎಲ್ಲಿಯವರೆಗೆ ನಿಮ್ಮ ನರೇಂದ್ರ ಮೋದಿ (PM Narendra Modi) ಬದುಕಿರುತ್ತಾರೋ ಅಲ್ಲಿಯವರೆಗೂ ಕಾಂಗ್ರೆಸ್‌ ಕುಕೃತ್ಯಕ್ಕೆ ಅವಕಾಶ ಕೊಡಲ್ಲ. ನಿಮ್ಮ ಮಂಗಳಸೂತ್ರ, ನಿಮ್ಮ ಸಂಪತ್ತನ್ನು ಲೂಟಿ ಮಾಡಲು ಅವಕಾಶ ಕೊಡಲ್ಲ. ಪೂರ್ವಜರ ಆಸ್ತಿಗಳಿಗೆ ತೆರಿಗೆ (Tax on ancestral properties) ಹಾಕುತ್ತೇವೆ, ಕಾನೂನು ತರುತ್ತೇವೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ ಹೇಳುವ ಮಾತು ಕೇಳಿದರೆ ನಿಮ್ಮ ನಿದ್ದೆ ಕೆಡುತ್ತದೆ. ನಿಮ್ಮ ವಂಶಸ್ಥರು ಮಾಡಿರುವ ಆಸ್ತಿಯನ್ನು ಈ ಕಾಂಗ್ರೆಸಿಗರು ವಾಪಸ್ ಪಡೆಯುತ್ತಾರಂತೆ. ನೀವು ಕೂಡಿಟ್ಟಿರೋ ಆಸ್ತಿಯನ್ನು ನಿಮ್ಮ ಮಕ್ಕಳಿಗೆ ಕೊಡಲು ಆಗುವುದಿಲ್ಲ. ನಿಮ್ಮ ಆಸ್ತಿಗೆ ಶೇಕಡಾ 55ರಷ್ಟು ತೆರಿಗೆ ವಿಧಿಸಿ ಆಸ್ತಿಯನ್ನು ಹೊಡೆಯುವುದಕ್ಕೆ ಸಂಚು ರೂಪಿಸಲಾಗುತ್ತಿದೆ ಎಂದು ಎಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಬೆಳಗಾವಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ವೋಟ್ ಬ್ಯಾಂಕ್‌ ಭದ್ರ ಮಾಡಿಕೊಳ್ಳಲು ಕಾಂಗ್ರೆಸ್‌ನಿಂದ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಆ ರೀತಿ ಆಗಲು ನೀವು ಬಿಡುತ್ತೀರಾ ಎಂದು ಕರ್ನಾಟಕದ ಎಲ್ಲ ಜನರಿಗೆ ನಾನು ಕೇಳುತ್ತಿದ್ದೇನೆ. ಆ ರೀತಿಯ ಕಾನೂನು ತರಲು ಹೊರಟಿರುವ ಕಾಂಗ್ರೆಸ್‌ಗೆ ಅಧಿಕಾರ ಕೊಡುತ್ತೀರಾ? ಇಂಥ ಕಾಂಗ್ರೆಸಿಗರನ್ನು ಹುಡುಕಿ ಹುಡುಕಿ ದೂರ ಇಡಿ ಎಂದು ಮನವಿ ಮಾಡಿದರು.

ಇಷ್ಟೆಲ್ಲ ಅನ್ಯಾಯ ಮಾಡುವ ಕಾಂಗ್ರೆಸ್‌ಗೆ ಜನ ಪಾಠ ಕಲಿಸಬೇಕಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಸ್ತಿ ಎಕ್ಸ್‌ರೇ ಮಾಡುತ್ತಾರಂತೆ, ಮಹಿಳೆಯರ ಬಳಿ ಸ್ತ್ರೀಧನ ಎಷ್ಟಿದೆ, ಚಿನ್ನ ಎಷ್ಟಿದೆ ಅಂತಲೂ ಎಕ್ಸ್‌ರೇ ಮಾಡಲಾಗುತ್ತದೆ. ಈ ರೀತಿಯ ಕಾಂಗ್ರೆಸ್‌ ನಿಮಗೆ ಬೇಕಾ? ನಿಮ್ಮ ಸಂಪತ್ತಿನ ಮೇಲೆ ಕಣ್ಣಿಟ್ಟಿರುವ ಕಾಂಗೆಸ್ ಅಧಿಕಾರ ಬೇಕಾ? ಎಲ್ಲರ ಆಸ್ತಿಯನ್ನು ಮರು ಹಂಚಿಕೆ ಮಾಡುತ್ತಾರಂತೆ, ನಿಮ್ಮ ಮಂಗಳ ಸೂತ್ರಕ್ಕೆ ಯಾರೋ ಕೈ ಹಾಕಲು ಅವಕಾಶ ಕೊಡುತ್ತೀರಾ? ನಿಮ್ಮ ಆಸ್ತಿಪಾಸ್ತಿಗೆ, ನಿಮ್ಮ ಚಿನ್ನಾಭರಣ ಲೂಟಿಗೆ ಅವಕಾಶ ಕೊಡುತ್ತೀರಾ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಹೆಣ್ಣು ಮಕ್ಕಳ ಹತ್ಯೆ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ (Karnataka Congress Government) ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಔರಂಗಜೇಬ್‌ ಬೆಂಬಲಿಗರ ಜತೆ ಕಾಂಗ್ರೆಸ್‌ ದೋಸ್ತಿ ಮಾಡಿದೆ. ಅಲ್ಲದೆ, ಕರ್ನಾಟಕದಲ್ಲಿ ಹೆಣ್ಣು ಮಗಳ ಕೊಲೆಯಾಗುತ್ತದೆ, ಜೈನ ಮುನಿಯ ಹತ್ಯೆಯಾಗುತ್ತದೆ, ಬಾಂಬ್‌ ಸ್ಫೋಟವಾಗುತ್ತದೆ. ಆದರೆ, ಈ ಸರ್ಕಾರ ತುಷ್ಟೀಕರಣದಲ್ಲಿ ತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣ ನಡೆದರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಪ್ರಕರಣಗಳು ನಡೆದಿವೆ. ಇನ್ನು ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹೆಣ್ಣು ಮಗಳ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಮಾಡಲು ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ಬೆಳಗಾವಿ ದಲಿತ ಮಹಿಳೆ ಬೆತ್ತಲೆ ಪ್ರಕರಣ ಪ್ರಸ್ತಾಪ

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆಯನ್ನು ಬೆತ್ತಲೆ ಮಾಡಿ ದೌರ್ಜನ್ಯ ಎಸೆಗಲಾಗಿದೆ, ಜೈನ ಮುನಿ ಕೊಲೆ ಕೃತ್ಯ ಎಂಥದ್ದು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹುಡುಗಿಯ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಕಾರಣದಿಂದ ಸೂಕ್ತ ಕ್ರಮ ವಹಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ನಿಮ್ಮ ನರೇಂದ್ರ ಮೋದಿ ಬದುಕಿರುವವರೆಗೂ ಕಾಂಗ್ರೆಸ್‌ ದುಷ್ಟ ನೀತಿಯನ್ನು ಕೈಗೊಳ್ಳಲು ಬಿಡುವುದಿಲ್ಲ. ನಿಮ್ಮ ಮಂಗಳ ಸೂತ್ರವನ್ನು ರಕ್ಷಣೆ ಮಾಡುವ ಹೊಣೆಯೂ ನಮ್ಮದು ಎಂದು ನರೇಂದ್ರ ಮೋದಿ ಭರವಸೆ ನೀಡಿದರು.

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ

ಸುಲ್ತಾನರು, ನವಾಬರು ಹಲವಾರು ಜನರನ್ನು ಅತ್ಯಾಚಾರ ಮಾಡಿದರು. ಆದರೆ, ಅದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಇದರ ಬಗ್ಗೆ ಮಾತನಾಡಲು ಧೈರ್ಯವೂ ಅವರಿಗೆ ಇಲ್ಲ. ರಾಜ ಮಹಾರಾಜರ ಸಾಧನೆ ಬಗ್ಗೆ ಕಾಂಗ್ರೆಸ್‌ ಮಾತನಾಡಲ್ಲ. ಸುಲ್ತಾನರ ದುರಾಡಳಿತದ ಬಗ್ಗೆ ಬಾಯಿ ಬಿಡುವುದಿಲ್ಲ. ಗಾಯಕ್‌ವಾಡ್‌ ಮಹಾರಾಜರು ಇಲ್ಲದಿದ್ದರೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ವಿದೇಶ ವ್ಯಾಸಂಗ ಆಗುತ್ತಿತ್ತಾ? ಮಹಾರಾಣಿ ಅಹಲ್ಯಾ ಬಾಯಿ ಇಲ್ಲದಿದ್ದರೆ ದೇಶಗಳಲ್ಲಿ ದೇವಸ್ಥಾನ, ಮಂದಿರಗಳ ನಿರ್ಮಾಣ ಆಗುತ್ತಿತ್ತಾ? ಅಲ್ಲದೆ, ಶಿವಾಜಿ ಮಹಾರಾಜರು, ಕಿತ್ತೂರು ರಾಣಿ ಚೆನ್ನಮ್ಮ ಅವರನ್ನು ಅವಮಾನ ಮಾಡುತ್ತಾ ಬರಲಾಗಿದೆ. ಇಂಡಿ ಅಲೆಯನ್ಸ್‌ ಅನ್ನು ಮೆಚ್ಚಿಸಲು ಕಾಂಗ್ರೆಸ್‌ ಏನೆಲ್ಲ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಕೊರೊನಾ ಕಾಲದಲ್ಲಿ ಕಾಂಗ್ರೆಸ್‌ ನಡೆದುಕೊಂಡ ರೀತಿ ಎಲ್ಲರಿಗೂ ಗೊತ್ತಿದೆ. ಕೊರೊನಾ ವ್ಯಾಕ್ಸಿನ್‌ ಕಂಡು ಹಿಡಿದರೆ ಅದನ್ನೂ ವಿರೋಧ ಮಾಡಿದರು. ಇದು ಬಿಜೆಪಿ ವ್ಯಾಕ್ಸಿನ್‌ ಎಂದು ದೂರಿತು. ಇನ್ನು ಇವಿಎಂ ವಿಚಾರದಲ್ಲಿ ಕಳೆದ 2 ದಿನಗಳ ಹಿಂದೆ ಕಾಂಗ್ರೆಸ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ತರಾಟೆಗೆ ತೆಗೆದುಕೊಳ್ಳಲಾಗಿದೆ. ಇನ್ನು ಕಾಂಗ್ರೆಸ್‌ ಉದ್ದೇಶ ಏನೆಂದರೆ ದೇಶಕ್ಕೆ ನಷ್ಟವಾಗುವ ರೀತಿ ಜನರನ್ನು ಎತ್ತಿಕಟ್ಟುವ ಕೆಲಸವಾಗಿದೆ. ಆದರೆ, ಬಿಜೆಪಿಯು ದೇಶದ ನಾಗರಿಕರಿಗೋಸ್ಕರ ಸರಳ ಜೀವನಕ್ಕಾಗಿ ಸಾಕಷ್ಟು ಕೆಲಸವನ್ನು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸಮಾಜಘಾತುಕ ಸಂಘಟನೆಗಳನ್ನು ಬಿಜೆಪಿ ಬ್ಯಾನ್‌ ಮಾಡಿದೆ. ಆದರೆ, ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ರಾಜಕಾರಣ ಮಾಡಲು ಅವರ ಜತೆಯೇ ಕೈಜೋಡಿಸುತ್ತದೆ. ಕೇರಳದ ವಯನಾಡಿನಲ್ಲಿ ಒಂದು ಕ್ಷೇತ್ರವನ್ನು ಗೆಲ್ಲಲು ಏನೆಲ್ಲ ಮಾಡಲಾಗಿದೆ? ಇಂಥ ಮತಾಂಧ ಸಂಘಟನೆಗಳ ಜತೆ ಕಾಂಗ್ರೆಸ್‌ ಕೈಜೋಡಿಸಿದೆ. ಅವರಿಗೆ ಶರಣಾಗತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ಇದು ರೈತರ ವಿರೋಧಿ ಸರ್ಕಾರ

ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದಾಗ ರೈತರನ್ನು ಕಡೆಗಣಿಸಿದೆ. ನಮ್ಮ ಸರ್ಕಾರ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿ ರೈತರಿಗೆ ವರ್ಷಕ್ಕೆ ನೀಡುತ್ತಿರುವ 10 ಸಾವಿರ ರೂಪಾಯಿ ಜತೆಗೆ ಈ ಹಿಂದೆ ಬಿಜೆಪಿ ಸರ್ಕಾರವು 4 ಸಾವಿರ ರೂಪಾಯಿ ಸೇರಿಸಿ ಕೊಡುತ್ತಿತ್ತು. ಕಾಂಗ್ರೆಸ್‌ ಮತ ಕೇಳುವಾಗ ಇದರ ಬಗ್ಗೆ ಏನೂ ಹೇಳಲಿಲ್ಲ. ಯಾವಾಗ ಮತ ಬಂದು ಗೆದ್ದರೂ ಆ ನಾಲ್ಕು ಸಾವಿರ ರೂಪಾಯಿಯನ್ನು ನಿಲ್ಲಿಸಿಬಿಟ್ಟರು. ಇದು ರೈತ ವಿರೋಧಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಕಿತ್ತೂರು ರಾಣಿ ಚೆನ್ನಮ್ಮ ಆದರ್ಶಗಳ ಪ್ರೇರಣೆಯೊಂದಿಗೆ ಬಿಜೆಪಿ ಆಡಳಿತವು ನಡೆಯುತ್ತಿದೆ. ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಇದೆ, ಮಕ್ಕಳು ಅಲ್ಲಿ ಓದುತ್ತಿದ್ದಾರೆ. ನಿಮ್ಮ ಕನಸುಗಳೇ ಮೋದಿ ಸಂಕಲ್ಪ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading
Advertisement
Jain Diksha
ಕರ್ನಾಟಕ4 mins ago

Jain Diksha: ಕೋಟ್ಯಂತರ ರೂ. ಆಸ್ತಿ ತ್ಯಜಿಸಿ ಜೈನ ಸನ್ಯಾಸ ದೀಕ್ಷೆ ಪಡೆದ ಬೆಂಗಳೂರಿನ ಉದ್ಯಮಿಯ ಪತ್ನಿ, 11 ವರ್ಷದ ಮಗ!

Goldy Brar
ದೇಶ8 mins ago

Goldy Brar: ಸಿಧು ಮೂಸೆವಾಲಾ ಹತ್ಯೆ ರೂವಾರಿ ಗೋಲ್ಡಿ ಬ್ರಾರ್‌ ಅಮೆರಿಕದಲ್ಲಿ ಕೊಲೆ; ಕೊಂದಿದ್ದು ಯಾರು?

Hassan Pen Drive case Siddaramaiah writes to PM Modi seeking cancellation of Prajwal Revanna diplomatic passport
ಹಾಸನ18 mins ago

Hassan Pen Drive Case: ಪ್ರಜ್ವಲ್‌ ರೇವಣ್ಣರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ!

Prajwal Revanna related post By Rashmi Goutham
ಕ್ರೈಂ19 mins ago

Prajwal Revanna: ಮಹಿಳೆ ಹಸಿದಾಗ ಬಾಯಿಗೆ ಆಹಾರ ಹಾಕಿ…ʻಅದಲ್ಲʼ! ನಟಿಯ ಪೋಸ್ಟ್‌ ವೈರಲ್‌!

Diabetic Chutney
ಲೈಫ್‌ಸ್ಟೈಲ್22 mins ago

Diabetic Chutney: ಡಯಬಿಟಿಕ್‌ ಚಟ್ನಿ ನಿಮಗೆ ಗೊತ್ತೆ? ಇದು ಮಧುಮೇಹಿಗಳಿಗೆ ಉಪಯುಕ್ತ

Bathroom Cleaning Tips
ಲೈಫ್‌ಸ್ಟೈಲ್27 mins ago

Bathroom Cleaning Tips: ಬಾತ್‌ರೂಮ್‌ ಕನ್ನಡಿ ಕೊಳಕಾಗಿದೆಯೇ? ಚಿಂತೆ ಬಿಡಿ, ಈ ಟಿಪ್ಸ್ ಬಳಸಿ

Kalamma Devi Pooja Mahotsava in Kampli
ಧಾರ್ಮಿಕ31 mins ago

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Union Minister Pralhad Joshi election campaign in Sattur
ಕರ್ನಾಟಕ42 mins ago

Lok Sabha Election: 60 ವರ್ಷ ದೇಶವಾಳಿದ ನಕಲಿ ಗಾಂಧಿ ಕಂಪನಿಯಲ್ಲಿ ಪ್ರಧಾನಿ ಅಭ್ಯರ್ಥಿಗೆ ಬರ: ಜೋಶಿ ಲೇವಡಿ

IPL 2024
ಕ್ರೀಡೆ45 mins ago

IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

Salman Khan
ಸಿನಿಮಾ53 mins ago

Salman Khan: ಸಲ್ಮಾನ್‌ ಖಾನ್‌ ಮನೆ ಮೇಲೆ ಫೈರಿಂಗ್‌ ಕೇಸ್‌; ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌