ಬೆಳಗಾವಿ: ವಾಯುವ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಬೆಳಗಾವಿ, ವಿಜಯಪುರ, ಬಾಗಲಕೋಟ ಜಿಲ್ಲೆಯಲ್ಲಿ ಇಂದು ಮತದಾನ ನಡೆಯುತ್ತಿದೆ.
ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5ರವರೆಗೆ ನಡೆಯಲಿದೆ. ಒಂದೇ ಮತಗಟ್ಟೆಯಲ್ಲಿ ಪದವೀಧರ ಹಾಗೂ ಶಿಕ್ಷಕರ ಮತಕ್ಷೇತ್ರದ ಮತಗಳ ಚಲಾವಣೆಗೆ ಅವಕಾಶ ಇದೆ. ಎರಡು ಕ್ಷೇತ್ರಗಳಿಗೆ ಪ್ರತ್ಯೇಕ ಮತಪೆಟ್ಟಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಒಟ್ಟು 25,388 ಮತದಾರರು ಇದ್ದಾರೆ. ಈ ಪೈಕಿ 17,238 ಪುರುಷ ಹಾಗೂ 8,150 ಮಹಿಳಾ ಮತದಾರರು ಇದ್ದಾರೆ. ವಿವರ ಇಂತಿದೆ.
- ಬೆಳಗಾವಿ – 13,287, ಬಾಗಲಕೋಟೆ – 5173, ವಿಜಯಪುರ – 6928 ಮತಗಳು
- ವಾಯವ್ಯ ಪದವೀಧರ ಮತಕ್ಷೇತ್ರದಲ್ಲಿ ಒಟ್ಟು 99,598 ಮತದಾರರು
- ಈ ಪೈಕಿ 71,040 ಪುರುಷ ಹಾಗೂ 28,554 ಮಹಿಳಾ ಮತದಾರರು
- ಬೆಳಗಾವಿ – 45,124, ಬಾಗಲಕೋಟೆ – 33,651, ವಿಜಯಪುರ – 20,823 ಮತದಾರರು
ವಾಯವ್ಯ ಪದವೀಧರ ಮತಕ್ಷೇತ್ರದಲ್ಲಿ ಒಟ್ಟು 11 ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ. ಬಿಜೆಪಿ ಅಭ್ಯರ್ಥಿ ಹನುಮಂತ ನಿರಾಣಿ, ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಸಂಕ್ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ.
ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಒಟ್ಟು 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ್, ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ, ಜೆಡಿಎಸ್ ಅಭ್ಯರ್ಥಿ ಚಂದ್ರಶೇಖರ ಲೋಣಿ ಕಣದಲ್ಲಿದ್ದಾರೆ.