Fire accident | ಬೆಳಗಾವಿಯ ಬಸ್ ಸ್ಟಾಂಡ್ ಸಮೀಪದಲ್ಲಿ ಆಕಸ್ಮಿಕ ಬೆಂಕಿ - Vistara News

ಕ್ರೈಂ

Fire accident | ಬೆಳಗಾವಿಯ ಬಸ್ ಸ್ಟಾಂಡ್ ಸಮೀಪದಲ್ಲಿ ಆಕಸ್ಮಿಕ ಬೆಂಕಿ

ಬೆಳಗಾವಿಯ ಬಸ್‌ ನಿಲ್ದಾಣ ಸಮೀಪದ ಅಂಗಡಿಗಳಲ್ಲಿ ಬೆಂಕಿ ಅನಾಹುತದ ಪರಿಣಾಮ ಬ್ಯಾಟರಿ, ಟೈರ್‌ ಅಂಗಡಿಗಳ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ನಾಶವಾಗಿವೆ. ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ.

VISTARANEWS.COM


on

Two killed as two bikes collide head on
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಬೆಳಗಾವಿಯ ಬ್ಯಾಟರಿ ಅಂಗಡಿಯೊಂದರಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ (Fire accident) ಕಾಣಿಸಿಕೊಂಡಿದೆ.

ಅಕ್ಕಪಕ್ಕದ ಟೈರ್‌ ಅಂಗಡಿಗೂ ಬೆಂಕಿಯ ಜ್ವಾಲೆಗಳು ಹರಡಿತು. ಇದರ ಪರಿಣಾಮ ಬ್ಯಾಟರಿ‌ ಮತ್ತು ಟೈರ್ ಅಂಗಡಿಗಳು ಸಂಪೂರ್ಣವಾಗಿ ಭಸ್ಮವಾಯಿತು.

ಅಂಗಡಿ ಪಕ್ಕದಲ್ಲಿ ಹಳೆಮರದ ತುಂಡುಗಳಿದ್ದು ಬೆಂಕಿ ಅನಾಹುತವನ್ನು ಹೆಚ್ಚಿಸಿತು. ಸ್ಥಳಕ್ಕೆ 10 ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಧಾವಿಸಿದ್ದು, 80 ಕ್ಕೂ ಹೆಚ್ಚು ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು. ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ ಸ್ಥಳಕ್ಕೆ ಭೇಟಿ ನೀಡಿದರು. ಪೊಲೀಸರು ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ.

ಮಾರುತಿ ಟೈರ್ಸ್, ಗಣೇಶ್ ಟೈರ್ಸ್, ಟೈರ್ ಮಾರ್ಕೆಟಿಂಗ್, ಸ್ಟಾರ್ ಮಾರ್ಕೆಟಿಂಗ್, ಚೇತನಾ ಬ್ಯಾಟರೀಸ್ ಬೆಂಕಿಯಲ್ಲಿ ಉರಿದಿವೆ. ಬೆಳಗಾವಿಯ ಬಸ್ ಸ್ಟಾಂಡ್ ರಸ್ತೆಯಲ್ಲಿರುವ ಅಂಗಡಿಗಳಾಗಿವೆ. ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಅಂಗಡಿ ಸಾಮಾಗ್ರಿ, ಟೈರ್‌ಗಳು ಭಸ್ಮವಾಗಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Robbery Case: ಬೆಂಗಳೂರಿನಲ್ಲಿ ಮಿತಿ ಮೀರಿದ ಕಳ್ಳರ ಹಾವಳಿ; ಆನ್‌ಲೈನ್‌ ಡೆಲಿವರಿ ಬಾಯ್‌ಗಳೇ ಇವರ ಟಾರ್ಗೆಟ್‌: Video ಇಲ್ಲಿದೆ

Robbery Case: ಬೆಂಗಳೂರಿನಲ್ಲಿ ಕಳ್ಳರ ಹಾವಳಿ ಮಿತಿ ಮೀರಿದ್ದು, ಆನ್‌ಲೈನ್‌ ಡೆಲಿವರಿ ನೀಡುವವರೇ ಇವರ ಮುಖ್ಯ ಟಾರ್ಗೆಟ್‌. ಡೆಲಿವರಿ ನೀಡುವ ಭರದಲ್ಲಿ ಎಲ್ಲೆಂದರಲ್ಲಿ ಗಾಡಿ ನಿಲ್ಲಿಸಿದರೆ ಕ್ಷಣ ಮಾತ್ರದಲ್ಲಿ ಬ್ಯಾಗ್ ಮಾಯವಾಗುತ್ತದೆ. ವೈಟ್ ಫೀಲ್ಡ್ ಭಾಗದಲ್ಲಿ ಆ. 1ರಂದು ರಸ್ತೆ ಪಕ್ಕ ನಿಂತಿದ್ದ ಡೆಲಿವರಿ ಬಾಯ್ ಬೈಕ್‌ನಲ್ಲಿದ್ದ ಬ್ಯಾಗ್ ಅನ್ನು ಖದೀಮರು ಹಾಡಹಗಲೇ ಎಗರಿಸಿದ್ದಾರೆ.

VISTARANEWS.COM


on

Robbery Case
Koo

ಬೆಂಗಳೂರು: ಬೆಂಗಳೂರಿನಲ್ಲಿ ಕಳ್ಳರ ಹಾವಳಿ ಮಿತಿ ಮೀರಿದ್ದು, ಆನ್‌ಲೈನ್‌ ಡೆಲಿವರಿ ನೀಡುವವರೇ ಇವರ ಮುಖ್ಯ ಟಾರ್ಗೆಟ್‌. ಭಯವಿಲ್ಲದೆ ಗಾಡಿ ನಿಲ್ಲಿಸಿದರೆ ಕಳ್ಳರ ಕಾಟ ತಪ್ಪಿದ್ದಲ್ಲ. ಹೀಗಾಗಿ ಆಲ್‌ಲೈನ್‌ ಡೆಲಿವರಿ ಮಾಡುವವರು ಎಚ್ಚರಿಕೆವಹಿಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ (Robbery Case).

ಡೆಲಿವರಿ ನೀಡುವ ಭರದಲ್ಲಿ ಎಲ್ಲೆಂದರಲ್ಲಿ ಗಾಡಿ ನಿಲ್ಲಿಸಿದರೆ ಕ್ಷಣ ಮಾತ್ರದಲ್ಲಿ ಬ್ಯಾಗ್ ಮಾಯವಾಗುತ್ತದೆ. ವೈಟ್ ಫೀಲ್ಡ್ ಭಾಗದಲ್ಲಿ ಆ. 1ರಂದು ರಸ್ತೆ ಪಕ್ಕ ನಿಂತಿದ್ದ ಡೆಲಿವರಿ ಬಾಯ್ ಬೈಕ್‌ನಲ್ಲಿದ್ದ ಬ್ಯಾಗ್ ಅನ್ನು ಖದೀಮರು ಹಾಡಹಗಲೇ ಎಗರಿಸಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆಗೆ ಟ್ಯಾಗ್ ಮಾಡಿ ಸಾರ್ವಜನಿಕರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಅಮೇಜಾನ್, ಪ್ಲಿಫ್‌ಕಾರ್ಟ್ ಡೆಲಿವರಿ ಬಾಯ್‌ಗಳೇ ಇವರ ಮುಖ್ಯ ಟಾರ್ಗೆಟ್‌. ಆನ್‌ಲೈನ್‌ ಡೆಲಿವರಿ ಬಾಯ್‌ಗಳನ್ನು ಟಾರ್ಗೆಟ್‌ ಮಾಡುವ ಖತರ್ನಾಕ್ ಗ್ಯಾಂಗ್ ಅವರನ್ನು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಕ್ಷಣಮಾತ್ರದಲ್ಲಿ ಬ್ಯಾಗ್ ಅಪಹರಿಸಿ ಮಾಯವಾಗುತ್ತದೆ. ಪ್ರಾಡಕ್ಟ್‌ ಡೆಲಿವರಿ ಮಾಡಿ ಬರುವಷ್ಟರಲ್ಲಿ ಬೈಕ್‌ನಲ್ಲಿದ್ದ ಬ್ಯಾಗ್ ಜತೆ ಪರಾರಿ ಆಗುತ್ತದೆ.

ಕಳೆದ ಮೂರ್ನಾಲ್ಕು ದಿನಗಳಲ್ಲಿ ವೈಟ್ ಫೀಲ್ಡ್, ಮಹದೇವಪುರ ಸೇರಿ ಮೂರು ಕಡೆ ಇದೇ ರೀತಿ ಕೈ ಚಳಕ ತೋರಿಸಿರುವ ಕಳ್ಳರ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಈ ವಿಡಿಯೊಗಳನ್ನು ಹರಿಯಬಿಟ್ಟು ಎಚ್ಚರದಿಂದಿರುವಂತೆ ಹಲವರು ಮನವಿ ಮಾಡಿದ್ದಾರೆ.

ಮನೆ ಮುಂದೆ ನಿಂತಿದ್ದ ಕಾರಿಗೆ ಹಾನಿ ಮಾಡಿದ ಪುಂಡರು

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಪುಂಡರ ಹಾವಳಿ ಮಿತಿ ಮೀರುತ್ತಿದೆ ಎನುವುದಕ್ಕೆ ಇನ್ನೊಂದು ಉದಾಹರಣೆ ಇಲ್ಲಿದೆ. ತಮ್ಮ ತಮ್ಮ ಮನೆ ಮುಂದೆ ವಾಹನ ನಿಲ್ಲಿಸಿದ್ದರೂ ಸೇಫ್ ಅಲ್ಲ ಎನ್ನುವ ಸ್ಥಿತಿ ಬೆಂಗಳೂರಿನಲ್ಲಿ ನಿರ್ಮಾಣವಾಗಿದೆ. ಮನೆ ಮುಂದೆ ನಿಂತಿದ್ದ ಕಾರಿಗೆ ದುಷ್ಕರ್ಮಿಗಳು ಹಾನಿ ಮಾಡಿದ್ದು, ಇಂತವರ ಕೃತ್ಯಗಳಿಗೆ ಬ್ರೇಕ್ ಯಾವಾಗ? ಎನ್ನುವ ಪ್ರಶ್ನೆ ಎದ್ದಿದೆ.

ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಮೇಲೆ ಪುಂಡರು ಅಟ್ಟಹಾಸ ಮೆರೆದಿರುವ ಘಟನೆ ಫ್ರೇಜರ್ ಟೌನ್‌ನ ಮೂರೇ ರೋಡ್‌ನಲ್ಲಿ ನಡೆದಿದೆ. ಮನೆ ಮುಂದೆ ನಿಂತಿದ್ದ ಕಾರಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದು ಬಂದ ಇಬ್ಬರು ಯುವಕರು ನಿಂತಿದ್ದ ಕಾರಿಗೆ ಡ್ಯಾಮೇಜ್ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಗಳಿಗಾಗಿ ಹುಟುಕಾಟ ನಡೆಯುತ್ತಿದೆ.

ಇದನ್ನೂ ಓದಿ: Farmer Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ರೈತ ದಾರುಣ ಸಾವು

ಪಿಎಸ್ಐ ಪರಶುರಾಮ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣವನ್ನು (PSI Parashuram Case) ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಪ್ರಕರಣದ ಹೆಚ್ಚಿನ ತನಿಖೆ ಸಲುವಾಗಿ ಸಿಐಡಿ ಡಿಜಿಪಿಗೆ ಪತ್ರ ಬರೆದ ಗೃಹ ಇಲಾಖೆ, ಪ್ರಕರಣದ ಕೂಲಂಕಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಿದೆ.

Continue Reading

ಕ್ರೈಂ

Crime News: ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆ ಕಡಿದು ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿದ ಪತಿ

Crime News: ಪತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿಯ ಕುತ್ತಿಗೆ ಕಡಿದು ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿ ವಿಚಿತ್ರವಾಗಿ ವರ್ತಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಸದ್ಯ ಗಂಭೀರ ಗಾಯಗೊಂಡಿರುವ ಪತ್ನಿಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರಣಾಂತಿಕವಾಗಿ ಹಲ್ಲೆಗೊಳಗಾದವರನ್ನು ಅನಿತಾ ಎಂದು ಗುರುತಿಸಲಾಗಿದೆ. ಅವರ ಪತಿ, ಆರೋಪಿ ಲಕ್ಷ್ಮಣ ಯಾನೆ ರಮೇಶ್‌ನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Crime News
Koo

ಉಡುಪಿ: ಪತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿಯ ಕುತ್ತಿಗೆ ಕಡಿದು ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿ ವಿಚಿತ್ರವಾಗಿ ವರ್ತಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ಸದ್ಯ ಗಂಭೀರ ಗಾಯಗೊಂಡಿರುವ ಪತ್ನಿಯನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ (Crime News).

ಮಾರಣಾಂತಿಕವಾಗಿ ಹಲ್ಲೆಗೊಳಗಾದವರನ್ನು ಅನಿತಾ (38) ಎಂದು ಗುರುತಿಸಲಾಗಿದೆ. ಅವರ ಪತಿ, ಆರೋಪಿ ಲಕ್ಷ್ಮಣ ಯಾನೆ ರಮೇಶ್‌ನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ವಿವರ

ಸೊರಬ ತಾಲೂಕು ಮೂಲದ ಲಕ್ಷ್ಮಣ ಮತ್ತು ಅನಿತಾ ದಂಪತಿ ನಾಲ್ಕು ತಿಂಗಳ ಹಿಂದಯಷ್ಟೆ ಉಡುಪಿ ಜಿಲ್ಲೆಗೆ ಆಗಮಿಸಿದ್ದರು. ಕಾಶಿಮಠದ ತೋಟ ನೋಡಿಕೊಳ್ಳಲು ಇಲ್ಲಿಗೆ ಬಂದಿದ್ದ ಇವರು ಬಸ್ರೂರು ಕಾಶಿ ಮಠ ಸಂಬಂಧಿಸಿದ ರೆಸಿಡೆನ್ಶಿಯಲ್ ಬ್ಲಾಕ್‌ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಶನಿವಾರ ರಾತ್ರಿ ಕುಡಿದ ಮತ್ತಿನಲ್ಲಿದ್ದ ಲಕ್ಷ್ಮಣ ಪತ್ನಿಯ ಕುತ್ತಿಗೆ ಕಡಿದು ಮಾರಣಾಂತಿಕ ಗಾಯಗೊಳಿಸಿದ್ದ.

ಮನೆಯ ಅಡುಗೆ ಕೋಣೆಯಲ್ಲಿ ರಕ್ತದ ಮಡುವಿನಲ್ಲಿ ಅನಿತಾ ಬಿದ್ದಿದ್ದರೂ ಲಕ್ಷ್ಮಣ ಮನೆಯ ಬಾಗಿಲ ಚಿಲಕ ಹಾಕಿ ಹಾಲ್‌ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ . ಘಟನೆ ಅರಿವಿಗೆ ಬರುತ್ತಲೇ ಸ್ಥಳೀಯರು ಕಿಟಕಿ ಒಡೆದು ಅಡುಗೆ ಕೋಣೆಗೆ ತೆರಳಿ ಅನಿತಾ ಅವರನ್ನು ರಕ್ಷಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಇಷ್ಟಾದರೂ ಲಕ್ಷ್ಮಣ ಮೈಮೇಲೆ ದೈವ ಬಂದವರಂತೆ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಲೇ ಇದ್ದ. ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಡಬೇಕಾಯಿತು. ಮನೆಯೊಳಗೆ ಅಶ್ರುವಾಯು ಪ್ರಯೋಗಿಸಿ ಸುಮಾರು‌ ಒಂದೂವರೆ ಗಂಟೆಯ ಬಳಿಕ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಕಂಡ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Namma Metro: ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ; ಹಸಿರು ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ

ಕಾಡಿನಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಕೋಲಾರ: ಕೋಲಾರ ತಾಲೂಕಿನ ಕೋಟಿಗಾನಹಳ್ಳಿ ಗೇಟ್ ಬಳಿಯ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ವೇಮಗಲ್ ಗ್ರಾಮದ ನಾಗೇಶ್ (34) ಎಂದು ಗುರುತಿಸಲಾಗಿದೆ. ಸ್ಥಳದಲ್ಲೇ ಮೃತ ವ್ಯಕ್ತಿಯ ಬೈಕ್ ಪತ್ತೆಯಾಗಿದ್ದು, ಕೊಲೆಗೈದು ಸುಟ್ಟಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕೋಲಾರ ಎಸ್‌ಪಿ ಬಿ.ನಿಖಿಲ್ ಭೇಟಿ ನೀಡಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಚಿಕ್ಕಬಳ್ಳಾಪುರದ ಸ್ಕಂಧಗಿರಿ ಬೆಟ್ಟದಲ್ಲಿ ಚಿರತೆ ಕಾಟ

ಚಿಕ್ಕಬಳ್ಳಾಪುರ: ಎಕೋ ಟೂರಿಸಂಗೆ ಜನಪ್ರಿಯವಾಗಿರುವ ಕಳವಾರ ಗ್ರಾಮದ ಬಳಿ ಇರುವ ಸ್ಕಂಧಗಿರಿ ಬೆಟ್ಟದಲ್ಲಿ ಚಿರತೆ ಕಾಟ ಆರಂಭವಾಗಿದ್ದು, ಸ್ಥಳೀಯರು, ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ. ವೀಕೆಂಡ್ ಹಿನ್ನೆಲೆ ಟ್ರಕ್ಕಿಂಗ್ ಮಾಡಲು ಬಂದಿರುವ ಪ್ರವಾಸಿಗರಿಗೆ ಬೆಟ್ಟದ ತಪ್ಪಲಿನಲ್ಲಿ ಚಿರತೆಗೆ ಬಲಿಯಾಗಿರುವ ಹಸುವಿನ ಮೃತದೇಹ ಕಂಡುಬಂದಿದೆ. ಕಳವಾರ ಗ್ರಾಮದ ಮಧುಸೂದನ್‌ ಎಂಬವರಿಗೆ ಸೇರಿದ ಸೀಮೆಹಸು ಚಿರತೆಗೆ ಬಲಿಯಾಗಿದ್ದು, ಸ್ಕಂದಗಿರಿಗೆ ಬೆಳಿಗ್ಗೆ ಐದು ಗಂಟೆಗೆ ಆಗಮಿಸಿದ್ದ ಪ್ರವಾಸಿಗರು ಹಸುವಿನ ಕಳೇಬರ ಕಂಡು ಗಾಬರಿಗೊಳಗಾಗಿದ್ದಾರೆ. ಈ ಹಿಂದೆ ಇಲ್ಲಿ ಕರಡಿಗಳ ಗುಂಪು ಕಂಡು ಪ್ರವಾಸಿಗರು ಭಯಭೀತರಾಗಿದ್ದರು.

Continue Reading

ಉತ್ತರ ಕನ್ನಡ

Farmer Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ರೈತ ದಾರುಣ ಸಾವು

Farmer Death: ರೈತನೊಬ್ಬ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಅಂಕೋಲಾ ತಾಲೂಕಿನ ಮೊರಳ್ಳಿ ಮಾಣಿಗುಡ್ಡ ಬಳಿ ನಡೆದಿದೆ. ಮೊಗಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊರಳ್ಳಿ ಮಾಣಿಗುಡ್ಡ ನಿವಾಸಿ ನಾಗರಾಜ ತಿಮ್ಮಪ್ಪ ಗೌಡ (37) ಮೃತಪಟ್ಟ ರೈತ ಎಂದು ತಿಳಿದುಬಂದಿದೆ.

VISTARANEWS.COM


on

Farmer dies after falling under power tiller wheel in Moralli village
Koo

ಅಂಕೋಲಾ: ರೈತನೊಬ್ಬ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ಗಾಯಗೊಂಡು ಸಾವನ್ನಪ್ಪಿದ ಘಟನೆ (Farmer Death) ತಾಲೂಕಿನ ಮೊರಳ್ಳಿ ಮಾಣಿಗುಡ್ಡ ಬಳಿ ನಡೆದಿದೆ. ಮೊಗಟಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊರಳ್ಳಿ ಮಾಣಿಗುಡ್ಡ ನಿವಾಸಿ ನಾಗರಾಜ ತಿಮ್ಮಪ್ಪ ಗೌಡ (37) ಮೃತ ದುರ್ದೈವಿಯಾಗಿದ್ದಾನೆ.

ಇದನ್ನೂ ಓದಿ: Accident: ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ; ಮಹಿಳೆ ಬಲಿ; ಭೀಕರ ದೃಶ್ಯ ವೈರಲ್‌

ರೈತ ನಾಗರಾಜ ಶುಕ್ರವಾರ ಬೆಳಗ್ಗೆ ಮೊರಳ್ಳಿಯಲ್ಲಿರುವ ಸುರೇಶ ನಾಯಕ ಎಂಬುವವರ ಗದ್ದೆಯಲ್ಲಿ ಉಳುಮೆ ಮಾಡಲು ತೆರಳಿದ್ದ. ಈ ವೇಳೆ ವಿಪರೀತ ಮಳೆ ಬರುತ್ತಿದ್ದ ಹಿನ್ನಲೆ ವಾಪಸ್ಸಾಗಿದ್ದು, ಮದ್ಯಾಹ್ನದ ನಂತರ ಮಳೆ ಕಡಿಮೆಯಾದ ಬಳಿಕ ಮತ್ತೆ ಗದ್ದೆಗೆ ತೆರಳಿದ್ದ. ಪವರ್ ಟಿಲ್ಲರ್ ಮೂಲಕ ಉಳುಮೆ ಮಾಡುತ್ತಿದ್ದ ವೇಳೆ ಚಕ್ರಕ್ಕೆ ಕಾಲು ಸಿಲುಕಿದ್ದು, ಗಂಭೀರ ಸ್ವರೂಪದ ಗಾಯಗಳಾಗಿವೆ. ಪರಿಣಾಮ ತೀವ್ರ ರಕ್ತಸ್ರಾವ ಉಂಟಾಗಿದ್ದು, ಗದ್ದೆಯಲ್ಲೇ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Karnataka Weather : ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ; ಭಾನುವಾರವೂ ಮಳೆ ಎಚ್ಚರಿಕೆ

ಸ್ಥಳಕ್ಕೆ ಅಂಕೋಲಾ ಠಾಣೆಯ ಪಿಎಸ್‌ಐ ಉದ್ದಪ್ಪ ಧರೆಪ್ಪನವರ್ ತೆರಳಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ಅಂಕೋಲಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಪ್ರಮುಖ ಸುದ್ದಿ

Namma Metro: ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ; ಹಸಿರು ಮಾರ್ಗದಲ್ಲಿ ರೈಲು ಸಂಚಾರ ವ್ಯತ್ಯಯ

Namma Metro: ಬೆಂಗಳೂರು ನಗರದ ದೊಡ್ಡಕಲ್ಲಸಂದ್ರ ಬಳಿ ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

Namma Metro
Koo

ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ಪದೇಪದೆ ಅವಘಡಗಳು ಸಂಭವಿಸುತ್ತಿದ್ದರೂ ಅಧಿಕಾರಿಗಳು, ಸಿಬ್ಬಂದಿ ಎಚ್ಚರಗೊಂಡಂತೆ ಕಾಣುತ್ತಿಲ್ಲ. ಮೊನ್ನೆ ಮೆಟ್ರೋ ಟ್ರ್ಯಾಕ್‌ಗೆ 4 ವರ್ಷದ ಮಗು ಬಿದ್ದ ಬೆನ್ನಲ್ಲೇ ಇದೀಗ ವ್ಯಕ್ತಿಯೊಬ್ಬ ಮೆಟ್ರೋ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ದೊಡ್ಡಕಲ್ಲಸಂದ್ರ ಬಳಿ ಶನಿವಾರ ಸಂಜೆ ನಡೆದಿದೆ.

ಸಂಜೆ 5:45 ಸುಮಾರಿಗೆ ದೊಡ್ಡಕಲ್ಲಸಂದ್ರ ಬಳಿ ಘಟನೆ‌ ನಡೆದಿದೆ. ಇದರಿಂದ ಯಲಚೇನಹಳ್ಳಿ- ಸಿಲ್ಕ್ ಇನ್‌ಸ್ಟಿಟ್ಯೂಟ್ ನಡುವೆ ರೈಲು ಸಂಚಾರ ಸ್ಥಗಿತಗೊಂಡಿದೆ. ಸ್ಥಳಕ್ಕೆ ಕೊಣನಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತಪಟ್ಟ ವ್ಯಕ್ತಿ ಯಾರು?, ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ.

Self Harming

ಆ. 1ರಂದು ರಾತ್ರಿ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ 2ರಲ್ಲಿ ಆಟವಾಡುತ್ತಿದ್ದ 4 ವರ್ಷದ ಬಾಲಕ, ಆಕಸ್ಮಿಕವಾಗಿ ಹಳಿ ಮೇಲೆ ಬಿದ್ದಿದ್ದ ಘಟನೆ ನಡೆದಿತ್ತು. ತಕ್ಷಣ ಭದ್ರತಾ ಸಿಬ್ಬಂದಿ ತುರ್ತು ರೈಲು ನಿಲುಗಡೆ ವ್ಯವಸ್ಥೆಯನ್ನು ಬಳಸುವ ಮೂಲಕ ರೈಲು ಸಂಚಾರವನ್ನು ನಿಲ್ಲಿಸಿದ್ದರು. ಬಳಿಕ ಬಾಲಕನನ್ನು ರಕ್ಷಣೆ ಮಾಡಲಾಗಿತ್ತು.

ಉಕ್ಕಿ ಹರಿಯುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

Self Harming
Self Harming

ಚಿಕ್ಕೋಡಿ: ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಅಂಕಲಿ – ನಸಲಾಪೂರ ಗ್ರಾಮದ ಮಧ್ಯದ ಸೇತುವೆ ಬಳಿ ಆತ್ಮಹತ್ಯೆ (Krishna River) ಮಾಡಿಕೊಂಡಿದ್ದಾರೆ. ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದ ಬಾಬುರಾವ ಸಂಭಾಜಿ ಭಾಸ್ಕರ (40) ಆತ್ಮಹತ್ಯೆಗೆ ಶರಣಾದವರು.

ಇದನ್ನೂ ಓದಿ: Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಅಂಕಲಿ ಹಾಗೂ ನಸಲಾಪೂರ ಗ್ರಾಮಗಳ ಮಧ್ಯೆ ನಿರ್ಮಿಸಲಾಗಿರುವಂತಹ ಸೇತುವೆ ಮೇಲೆ ನಿಂತು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗಾಗಲೇ ಅಂಕಲಿ ಪೋಲಿಸರು ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಂಕಲಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Continue Reading
Advertisement
Rashid Khan
ಕ್ರಿಕೆಟ್1 min ago

Rashid Khan: ಧೋನಿಯಂತೆ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್ ಬಾರಿಸಿದ ರಶೀದ್​ ಖಾನ್; ವಿಡಿಯೊ ವೈರಲ್​

Adivi Sesh Goodachari Turns 6 unveils six stunning looks
ಟಾಲಿವುಡ್24 mins ago

Adivi Sesh: ʻಗೂಢಚಾರಿʼಗೆ ಆರು ವರ್ಷದ ಸಂಭ್ರಮ; ನಟ ಅಡಿವಿ ಶೇಷ್ ಹೇಳಿದ್ದೇನು?

Yadagiri News
ಯಾದಗಿರಿ32 mins ago

Yadagiri News: ಆದಾಯಕ್ಕಿಂತ‌ ಅಧಿಕ ಆಸ್ತಿ ಹೊಂದಿರುವ ಆರೋಪ; ಯಾದಗಿರಿ ಡಿಎಚ್ಒ ಅಮಾನತು

IND vs SL 2nd ODI:
ಕ್ರೀಡೆ38 mins ago

IND vs SL 2nd ODI: ಇಂದು ಭಾರತ-ಲಂಕಾ ದ್ವಿತೀಯ ಏಕದಿನ ಮುಖಾಮುಖಿ; ಪಂದ್ಯಕ್ಕೆ ಮಳೆ ಭೀತಿ

BSF Chief
ದೇಶ52 mins ago

BSF Chief: ಬಿಎಸ್‌ಎಫ್‌ ನೂತನ ಮುಖ್ಯಸ್ಥರಾಗಿ ದಲ್ಜಿತ್‌ ಸಿಂಗ್‌ ಚೌಧರಿ ನೇಮಕ

Amitabh Bachchan-Sridevi Movies
Latest55 mins ago

Amitabh Bachchan-Sridevi Movies: ಅಮಿತಾಭ್ ಬಚ್ಚನ್ – ಶ್ರೀದೇವಿ ಜೊತೆಯಾಗಿ ನಟಿಸಿದ 5 ಸೂಪರ್ ಹಿಟ್ ಚಿತ್ರಗಳಿವು

Health Tips
ಆರೋಗ್ಯ55 mins ago

Health Tips: ಏನ್ ನಿಂಗೆ ಕೊಬ್ಬಾ ಅನ್ನಬೇಡಿ ಕೊಬ್ಬೂ ಇರಬೇಕು!

Robbery Case
ಕ್ರೈಂ1 hour ago

Robbery Case: ಬೆಂಗಳೂರಿನಲ್ಲಿ ಮಿತಿ ಮೀರಿದ ಕಳ್ಳರ ಹಾವಳಿ; ಆನ್‌ಲೈನ್‌ ಡೆಲಿವರಿ ಬಾಯ್‌ಗಳೇ ಇವರ ಟಾರ್ಗೆಟ್‌: Video ಇಲ್ಲಿದೆ

Paris Olympics
ಕ್ರೀಡೆ1 hour ago

Paris Olympics: ಗ್ರೇಟ್​ ಬ್ರಿಟನ್ ಮಣಿಸಿ ಸೆಮಿಫೈನಲ್​ ಪ್ರವೇಶಿಸಲಿ ಭಾರತ ಹಾಕಿ ತಂಡ

Duniya Vijay Bheema Official Trailer Out
ಸ್ಯಾಂಡಲ್ ವುಡ್1 hour ago

Duniya Vijay: ವಿಜಯ್ ನಟಿಸಿ, ನಿರ್ದೇಶಿಸಿರುವ ‘ಭೀಮ ಚಿತ್ರದ  ಟ್ರೈಲರ್‌ ಔಟ್‌; ಕ್ರೇಜ್‌ ಹೆಚ್ಚಿಸಿದ ʻಸಲಗʼ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ21 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ6 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌