ಬೆಳಗಾವಿ: ಯಾವುದೇ ಸೂಚನೆಯನ್ನು ನೀಡದೆ ಬರುವ ಜವರಾಯನ ಅಟ್ಟಹಾಸಕ್ಕೆ ಮಧ್ಯಮ ವಯಸ್ಸಿನವರ ಪ್ರಾಣಪಕ್ಷಿ ಹಾರಿಹೋಗುತ್ತಿದೆ. ಬದುಕು ಹೇಗೆಲ್ಲ ಅಂತ್ಯವಾಗುತ್ತೆ ಎಂಬುದನ್ನು ಅಂದಾಜಿಸಲೂ ಸಾಧ್ಯವಿಲ್ಲ. ಹೃದಯವು ಯಾವ ಕ್ಷಣದಲ್ಲಿ ಕೈಕೊಡುತ್ತೆ ಎಂಬುದು ಊಹಿಸಲು ಆಗುತ್ತಿಲ್ಲ. ನಿಂತ ನಿಲುವಿನಲ್ಲೇ ಬದುಕನ್ನು ಸ್ತಬ್ಧಗೊಳಿಸುವ ನಿರ್ನಾಮ ಶಕ್ತಿಯನ್ನು ಅದು ಹೊಂದಿದೆ. ಕುಳಿತಲ್ಲೇ ಕುಸಿಯುವುದು, ನಿಂತಲ್ಲೇ ಉರುಳಿ ಬೀಳುವುದು, ಮಲಗಿದಲ್ಲೇ ಮರಣಿಸುವುದು, ನೃತ್ಯ ಮಾಡುತ್ತಲೇ ಹೃದಯ (Heart Attack) ಸ್ತಬ್ಧವಾಗುವುದು. ಹೀಗೆ ಸಾವಿನ ಹತ್ತಾರು ಭಯಾನಕ ಸನ್ನಿವೇಶಗಳನ್ನು ನಾವು ನೋಡಿದ್ದೇವೆ. ಇದೀಗ ಬೆಳಗಾವಿಯಲ್ಲಿ ಯೋಧರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಯೋಧ ಬೈಕ್‌ನಲ್ಲಿ ಹೋಗುತ್ತಿದ್ದಾಗ ಸಹಿಸಲು ಆಗದ ಎದೆನೋವು ಕಾಣಿಸಿಕೊಂಡಿದೆ. ಬೈಕ್ ನಿಧಾನಿಸಿ ಎದೆ ಸವಾರಿಕೊಂಡು ನಿಲ್ಲಲ್ಲು ಯತ್ನಿಸಿದ್ದಾರೆ. ಆದರೆ ಕರುಣೆಯೇ ಇಲ್ಲದ ಹೃದಯ ತನ್ನ ಬಡಿತವನ್ನು ನಿಲ್ಲಿಸಿತ್ತು. ನೋಡನೋಡುತ್ತಲೇ ಆ ಯೋಧ ರಸ್ತೆ ಬದಿಗೆ ಕುಸಿದು ಬಿದ್ದಿದ್ದರು. ಸಾವಿನ ಕ್ಷಣವು ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಬೆಳಗಾವಿಯ ಎಂಎಲ್ಐಆರ್‌ಸಿ ಕ್ಯಾಂಪ್‌ನಲ್ಲಿ ಈ ಘಟನೆ ನಡೆದಿದೆ. ಹೃದಯಾಘಾತದಿಂದ ಸುನೀಲ್ ಸಲಾಂ (37) ಎಂಬುವವರು ಮೃತಪಟ್ಟಿದ್ದಾರೆ. ಸುನೀಲ್ ಮರಾಠ ಲಘು ಪದಾತಿದಳಲ್ಲಿ ಹವಾಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್‌ನಲ್ಲಿ ತೆರಳುತ್ತಿದ್ದಾಗ ದಿಢೀರ್ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ: Physical Abuse : ಕೋರಮಂಗಲದ ಪಬ್‌ನಿಂದ ಮನೆಗೆ ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ಬೈಕ್ ಚಲಿಸುತ್ತಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿದೆ. ಎದೆಯನ್ನು ಸವರಿಸಿಕೊಳ್ಳುತ್ತಲೇ ಬ್ರೇಕ್ ಹಿಡಿದು ಬೈಕ್ ನಿಧಾನ ಮಾಡಿದ್ದಾರೆ. ಆದರೆ ನಡುರಸ್ತೆಯಲ್ಲೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಸುನೀಲ್ ಅವರು ಬೈಕ್‌ನಿಂದ ರಸ್ತೆ ಬದಿಗೆ ಬೀಳುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸದ್ಯ ಸುನೀಲ್ ಮೃತದೇಹವನ್ನು ಮಹಾರಾಷ್ಟ್ರದ ಚಂದಗಡ ತಾಲೂಕಿನ ಘುಳೇವಾಡಿಗೆ ರವಾನಿಸಿದ್ದು, ಸಕಲ ಸರ್ಕಾರಿ ಗೌರವಗೊಂದಿಗೆ ಯೋಧನ ಅಂತ್ಯಕ್ರಿಯೆ ನಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ