Site icon Vistara News

ಇಂದು ಸತೀಶ್‌ ಜಾರಕಿಹೊಳಿ ಬೆಂಬಲಿಗರ ಶಕ್ತಿ ಪ್ರದರ್ಶನ

jarakiholi

ಬೆಳಗಾವಿ: ಇಂದು ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರ ಶಕ್ತಿ ಪ್ರದರ್ಶನ ನಡೆಯಲಿದೆ. ಸತೀಶ್ ಜಾರಕಿಹೊಳಿ ಅಭಿಮಾನಿಗಳ ಬಳಗ, ವಿವಿಧ ದಲಿತಪರ ಸಂಘಟನೆಗಳು ಬೃಹತ್ ಪ್ರತಿಭಟನೆ ಆಯೋಜಿಸಿವೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ʼಹಿಂದೂʼ ಪದದ ಬಗ್ಗೆ ವಿವಾದಿತ ಹೇಳಿಕೆ ವಿಚಾರದಲ್ಲಿ ಬೆಂಬಲಿಗರಿಂದ ಇಂದು ‘ಬೆಳಗಾವಿ ಚಲೋ’ಗೆ ಕರೆ ನೀಡಲಾಗಿದೆ. ಸತೀಶ್ ಜಾರಕಿಹೊಳಿ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಸಲಾಗಿದೆ ಎಂದು ಆರೋಪ ಮಾಡಲಾಗಿದ್ದು, ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಿಂದ ಬೆಂಬಲಿಗರು ಆಗಮಿಸಲಿದ್ದಾರೆ.

ಸುಮಾರು 25 ಸಾವಿರ ಜನರನ್ನು ಸೇರಿಸಿ ಬೃಹತ್ ಪ್ರತಿಭಟನೆಗೆ ಸತೀಶ್ ಜಾರಕಿಹೊಳಿ ಬೆಂಬಲಿಗರು ನಿರ್ಧರಿಸಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಜಮಾಯಿಸಲಿದ್ದಾರೆ. ಬೆಳಗಾವಿಯ ಸಿಪಿಎಡ್ ಮೈದಾನದಿಂದ ಪ್ರತಿಭಟನಾ ರ್ಯಾಲಿ ಆರಂಭವಾಗಲಿದ್ದು, ರಾಣಿ ಚೆನ್ನಮ್ಮ ವೃತ್ತ ಮಾರ್ಗವಾಗಿ ಡಿಸಿ ಕಚೇರಿವರೆಗೆ ನಡೆಯಲಿದೆ.

ಇದನ್ನೂ ಓದಿ | Panchamasali Reservation | ಸಾಹುಕಾರ್‌ ಹೆಸರು ತೆಗೆದರೆ ವೇದಿಕೆಗೆ ನುಗ್ಗಿ ಹೊಡೀತೀವಿ: ಯತ್ನಾಳ್‌ಗೆ ಜಾರಕಿಹೊಳಿ ಬೆಂಬಲಿಗರ ಎಚ್ಚರಿಕೆ

Exit mobile version