Site icon Vistara News

Laxmi Hebbalkar: ನನಗೆ ಜಾತಿ ಅನ್ನುವುದಿಲ್ಲ, ಮನುಷ್ಯತ್ವವೇ ನನ್ನ ಜಾತಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Minister Lakshmi Hebbalkar drive the construction works of the new building of Shree Mahalakshmi Mandir in Balekundri k.h. village

ಬೆಳಗಾವಿ: ಎಲ್ಲೆ ಇದ್ದರೂ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕೈ ಮುಗಿದು ಮುಂದಿನ ಕೆಲಸ ಆರಂಭಿಸುತ್ತೇನೆ. ಈ ಕ್ಷೇತ್ರಕ್ಕೆ ಒಳ್ಳೆಯ ಕೆಲಸ ತರುವುದೇ ನನ್ನ ಉದ್ದೇಶ. ಮೊದಲ ಬಾರಿಗೆ ಈ ಕ್ಷೇತ್ರದಿಂದ ಮಂತ್ರಿಯಾಗಿದ್ದೇನೆ. ಈ ಸೌಭಾಗ್ಯಕ್ಕಾಗಿ ನಾನು ಎಲ್ಲರಿಗೂ ಕೃತಜ್ಞಳಾಗಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ತಿಳಿಸಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಕೆ.ಎಚ್. ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ಮಂದಿರದ ನೂತನ ಕಟ್ಟಡದ ನಿರ್ಮಾಣಕ್ಕಾಗಿ ಶನಿವಾರ ಕಾಲಂ ಪೂಜೆ ನೆರವೇರಿಸಿ, ಕಟ್ಟಡ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಎಲ್ಲಿಯೇ ಹೋದರೂ ಭಾಷಣದ ಪೂರ್ವದಲ್ಲಿ ನನ್ನ ಕ್ಷೇತ್ರ, ನನ್ನ ಮತದಾರರು, ಸುಳೇಭಾವಿ ಮಹಾಲಕ್ಷ್ಮೀ, ಉಚಗಾಂವ ಮಳೇಕರಣಿ ದೇವಿಯನ್ನು ಸ್ಮರಿಸಿ ಭಾಷಣ ಮಾಡುತ್ತಿದ್ದೇನೆ. ಕ್ಷೇತ್ರದ ಜನರ ಆಶೀರ್ವಾದದಿಂದ ಇಂದು ರಾಜ್ಯದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಂದು ಕರೆಯುವಂತಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: Money Guide: EPF vs PPF; ಈ ಎರಡು ಯೋಜನೆಗಳಲ್ಲಿ ಯಾವುದು ಉತ್ತಮ? ಇಲ್ಲಿದೆ ಸಂಪೂರ್ಣ ವಿವರ

ಎಲ್ಲರ ಕೈಯಿಂದ ದೇವಸ್ಥಾನಗಳನ್ನು ಕಟ್ಟಲು ಸಾಧ್ಯವಿಲ್ಲ. ಅದಕ್ಕೆ ಪುಣ್ಯ ಮಾಡಿರಬೇಕು. ನನ್ನ ಹಿಂದಿನ ಜನ್ಮದ ಪುಣ್ಯವೋ ಗೊತ್ತಿಲ್ಲ, ಕ್ಷೇತ್ರದಲ್ಲಿ 103 ಮಂದಿರಗಳನ್ನು ಕಟ್ಟುವ ಅವಕಾಶ ಸಿಕ್ಕಿದೆ. ಕ್ಷೇತ್ರದ ಅಭಿವೃದ್ಧಿಯೇ ನನ್ನ ಹವ್ಯಾಸವಾಗಿದೆ, ಯಾವುದೇ ಸಮಾಜವಿರಲಿ, ಎಲ್ಲರನ್ನೂ ಸೇರಿಸಿಕೊಂಡು ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮುನ್ನೆಡೆಸುತ್ತಿದ್ದೇನೆ. ನನಗೆ ಜಾತಿ ಅನ್ನುವುದಿಲ್ಲ, ಮನುಷ್ಯತ್ವವೇ ನನ್ನ ಜಾತಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಮ್ರತಾ ಪ್ರ ಜಾಧವ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ನಾಗೇಶ ದೇಸಾಯಿ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಂಕರಗೌಡ ಪಾಟೀಲ, ನಿಲೇಶ್ ಚಂದಗಡ್ಕರ್, ಕಲ್ಲಪ್ಪ ರಾಮಚನ್ನವರ, ಅಂಜನಾ ಬೆಳಗಾಂವ್ಕರ್, ರೇಣುಕಾ ಕರವಿನಕೊಪ್ಪ, ಪ್ರವೀಣ ಮುರಾರಿ, ಮಹಾದೇವಿ ರಾಮಚನ್ನವರ, ಸಂಜಯ ಬಿ. ಪಾಟೀಲ, ಡಾ. ಎನ್.ಎಚ್. ಅಸ್ಕಿ, ದಶರಥ ಚೌಬಾರಿ, ವಸಂತರಾವ ಜಾಧವ್, ಕಮಲವ್ವ ನಾಯಕ್ ಹಾಗೂ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಕಮಿಟಿಯ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Video Viral: ಸ್ಕೂಲ್ ಬಸ್‌ನಡಿ ಬಿದ್ದ ವಿದ್ಯಾರ್ಥಿ; ಪಾರಾಗಿದ್ದೇ ಪವಾಡ!

ಇದಾದ ಬಳಿಕ ಬಾಳೇಕುಂದ್ರಿ ಬಿ.ಕೆ. ಗ್ರಾಮದ ವೈರಲೆಸ್ ಮೈದಾನದಲ್ಲಿ ನಡೆಯುತ್ತಿರುವ ‘ಹರ್ಷ ಟ್ರೋಫಿ ಲಾಂಗ್ ಪಿಚ್ ಕ್ರಿಕೆಟ್ ‘ ಪಂದ್ಯಾವಳಿಯ ರೆಗ್ಯುಲರ್ ಪಂದ್ಯಕ್ಕೆ ಟಾಸ್ ಮಾಡುವ ಮೂಲಕ ಕ್ರಿಕೆಟ್ ಆಟಗಾರರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭ ಕೋರಿದರು.‌

ಇದನ್ನೂ ಓದಿ: Guinness World Records: ಬರೋಬ್ಬರಿ 168 ಅಕ್ಷರಗಳನ್ನೊಳಗೊಂಡ ಈ ನಗರದ ಹೆಸರಿನಲ್ಲಿದೆ ವಿಶ್ವ ದಾಖಲೆ

ನಂತರ ಸುಳೇಭಾವಿ ಗ್ರಾಮದ ಶ್ರೀ ಶಾಕಾಂಭರಿ ಹಾಗೂ ಶ್ರೀ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು, ದರ್ಶನ ಆಶೀರ್ವಾದ ಪಡೆದರು. ಈ ವೇಳೆ ಗ್ರಾಮದ ಹಿರಿಯರು, ಪಕ್ಷದ ಮುಖಂಡರು, ಆಯಾ ದೇವಸ್ಥಾನದ ಟ್ರಸ್ಟ್ ಕಮಿಟಿಯ ಸದಸ್ಯರು ಹಾಗೂ ಗ್ರಾಮದ ಜನ ಉಪಸ್ಥಿತರಿದ್ದರು. ಮಹಿಳೆಯರು ಸಚಿವರಿಗೆ ಉಡಿ ತುಂಬಿ ಹಾರೈಸಿದರು.

Exit mobile version