Inhuman Behaviour : ಅಪ್ಪನ ಹೆಣ ಬಿಸಾಕಿ ಎಂದ ಮಗಳು, ಅಂತ್ಯ ಸಂಸ್ಕಾರ ನಡೆಸಿದ ಪೊಲೀಸರು; ಬ್ಯಾಂಕ್‌ ಮ್ಯಾನೇಜರ್‌ ಕಥೆ ಇದು - Vistara News

ಕರ್ನಾಟಕ

Inhuman Behaviour : ಅಪ್ಪನ ಹೆಣ ಬಿಸಾಕಿ ಎಂದ ಮಗಳು, ಅಂತ್ಯ ಸಂಸ್ಕಾರ ನಡೆಸಿದ ಪೊಲೀಸರು; ಬ್ಯಾಂಕ್‌ ಮ್ಯಾನೇಜರ್‌ ಕಥೆ ಇದು

Inhuman Behaviour: ಅವರ ಮಕ್ಕಳು ವಿದೇಶದಲ್ಲಿ ದೊಡ್ಡ ಹುದ್ದೆಯಲ್ಲಿದ್ದಾರೆ. ಆದರೆ ಅವರು ಮಾತ್ರ ಅನಾಥರಾಗಿ ಹೆಣವಾಗಿದ್ದಾರೆ. ಮಕ್ಕಳು ಹೆಣವನ್ನು ನೋಡಲು ಬಂದಿಲ್ಲ. ಬೇಕಿದ್ದರೆ ಅಂತ್ಯಕ್ರಿಯೆ ಮಾಡಿ, ಇಲ್ಲವಾದರೆ ಎಲ್ಲಾದರೂ ಎಸೆಯಿರಿ ಎಂದು ಮಗಳು ಧಮ್ಕಿ ಹಾಕಿದ್ದಾರಂತೆ. ಇದು ಒಬ್ಬ ನಿವೃತ್ತ ಬ್ಯಾಂಕ್‌ ಮ್ಯಾನೇಜರ್‌ ಕಥೆ.

VISTARANEWS.COM


on

Inhuman Behaviour
ಮೃತ ಬ್ಯಾಂಕ್‌ ಮ್ಯಾನೇಜರ್‌ ಮೂಲಚಂದ್‌ ಶರ್ಮ ಮತ್ತು ಅವರ ಮೃತದೇಹದ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದ ಪೊಲೀಸ್‌ ಅಧಿಕಾರಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕೋಡಿ: ಹಣವೇ ಇಂದು ದೇವರಂತೆ/
ಜಗವೇ ಹಣದ ಮುಷ್ಟಿಯಲ್ಲಂತೆ/
ಹಣದ ಮುಂದೆ ತಂದೆ ತಾಯಿ ಲೆಕ್ಕಕ್ಕಿಲ್ಲವೋ/
ನೀತಿಗೆಟ್ಟ ಮಕ್ಕಳಿಗೆ ಪ್ರೀತಿ ಕೊಟ್ಟು ಸಲಹಿದೆನೂ/
ಕೊಳ್ಳಿ ಇಡುವ ಬದಲು ಅವರು ಕೊಳ್ಳೆ ಹೊಡೆದರೋ/
ನನ್ನ ಶವವ ಅನಾಥ ಮಾಡಿ ಓಡಿ ಹೋದರು: ವಿಷ್ಣುವರ್ಧನ್‌ ಅಭಿನಯದ ಸಿರಿವಂತ ಸಿನಿಮಾದ ಹಾಡನ್ನು ಹೋಗುವ ಘಟನೆಯೊಂದು ಚಿಕ್ಕೋಡಿಯಲ್ಲಿ ನಡೆದಿದೆ. ಮಕ್ಕಳು, ಮನೆ, ಸಂಸಾರ, ಬಂಧುಗಳು ಎಂಬ ಸಂಬಂಧದ ಮೇಲೆ (Inhuman Behaviour) ಸಂಶಯ ಬರುವ ಹಾಗೆ ಮಾಡಿದೆ.

ನನ್ನ ಮಗಳು ಕೆನಡಾದಲ್ಲಿದ್ದಾಳೆ ಮಗ ಆಫ್ರಿಕಾದಲ್ಲಿದ್ದಾನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದ ಜೀವವೊಂದು ಬಾಳಿನ ಅಂತ್ಯದಲ್ಲಿ ಅನಾಥ ಹೆಣವಾಗಿ ಕೊನೆಗೆ ಪೊಲೀಸರ ಕೈಯಲ್ಲಿ ಅಂತ್ಯಕ್ರಿಯೆ ಮಾಡಿಸಿಕೊಳ್ಳಬೇಕಾದ ಪರಿಸ್ಥಿತಿಯನ್ನು ಎದುರಿಸಿದೆ. ಬ್ಯಾಂಕ್‌ ಮ್ಯಾನೇಜರ್‌ (Retired Bank Manager) ಆಗಿದ್ದ ಮೂಲಚಂದ್‌ ಶರ್ಮಾ (72) ಅವರೇ ಹೀಗೆ ಅನಾಥ ಶವವಾದವರು (Dead body). ಇಲ್ಲಿ ಮಕ್ಕಳ ಕ್ರೌರ್ಯದ ನುಡಿಗಳು ಯಾವ ಮಟ್ಟದಲ್ಲಿತ್ತು ಎಂದರೆ ನಿಮಗೆ ಸಾಧ್ಯವಾದರೆ ಅಂತ್ಯಸಂಸ್ಕಾರ (Final rites) ಮಾಡಿ, ಇಲ್ಲವಾದರೆ ಎಲ್ಲಾದರೂ ಎಸೆದು ಬಿಡಿ ಎಂದು ಮಕ್ಕಳು ಪೊಲೀಸರಿಗೇ ಹೇಳಿದ್ದಾರಂತೆ!

ಮೂಲಚಂದ್‌ ಶರ್ಮ ಅವರು ಮೂಲತಃ ಪೂನಾದವರು. ಅವರು ಪಾರ್ಶ್ವವಾಯುವಿಂದ ಬಳಲುತ್ತಿದ್ದರು. ಅವರನ್ನು ಕರೆದುಕೊಂಡು ಒಬ್ಬ ವ್ಯಕ್ತಿ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದಲ್ಲಿರುವ ನಾಗರಮುನ್ನೋಳಿ ಕುಂಬಾರ ಆಸ್ಪತ್ರೆಗೆ ಕರೆ ತಂದು, ಚಿಕಿತ್ಸೆ ಕೊಡಿಸುತ್ತಿದ್ದರು. ಚಿಕಿತ್ಸೆ ನಂತರ ಆಸ್ಪತ್ರೆಗೆ ಹತ್ತಿರದಲ್ಲಿದ್ದ ಶಿವನೇರಿ ಲಾಡ್ಜ್‌ನಲ್ಲಿ ಇಟ್ಟು ಸಹಲುತ್ತಿದ್ದರು.

ಕೆಲವು ದಿನದ ಹಿಂದೆ ಮೂಲಚಂದ್‌ ಶರ್ಮ ಅವರನ್ನು ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸುತ್ತಿದ್ದ ವ್ಯಕ್ತಿ ನಾಪತ್ತೆಯಾಗಿದ್ದ. ಲಾಡ್ಜ್‌ ಮಾಲೀಕರು ಹೋಗಿ ಮೂಲಚಂದ್‌ ಅವರನ್ನು ವಿಚಾರಿಸಿದಾಗ ಭಯಾನಕ ಕಥೆಯೊಂದು ಹೊರಬಿತ್ತು.! ಅದೇನೆಂದರೆ, ಅವರನ್ನು ಆಸ್ಪತ್ರೆಗೆ ಕರೆತಂದು ಲಾಡ್ಜ್‌ನಲ್ಲಿಟ್ಟು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದ ವ್ಯಕ್ತಿ ಇವರ ಸಂಬಂಧಿಕನೇನೂ ಆಗಿರಲಿಲ್ಲ. ಆತ ಒಬ್ಬ ಸಂಬಳಕ್ಕೆ ನೇಮಕ ಮಾಡಿಕೊಂಡಿದ್ದ ಹೋಮ್‌ ನರ್ಸ್‌.

ಅವನಿಗೆ ಕೊಟ್ಟ ದುಡ್ಡಿನ ಅವಧಿ ಮುಗಿದಿತ್ತು. ಕಾಂಟ್ರಾಕ್ಟ್‌ ಮುಗಿದ ಕೂಡಲೇ ಅವನು ಮೂಲಚಂದ್‌ ಅವರನ್ನು ಲಾಡ್ಜ್‌ನಲ್ಲೇ ಬಿಟ್ಟು ಹೋಗಿದ್ದ. ಲಾಡ್ಜ್‌ ಮ್ಯಾನೇಜರ್‌ ಬೆಳಗಾವಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಂದು ವಿಚಾರಿಸಿದಾಗ ಮೂಲಚಂದ್‌ ಶರ್ಮಾ ತಮ್ಮ ಬದುಕಿನ ಕಥೆ ಹೇಳಿದ್ದರು.

ʻʻನಾನು ಬಡವ ಅಲ್ಲ,‌ ನನ್ನ ಮಕ್ಕಳು ವಿದೇಶದಲ್ಲಿ ಒಳ್ಳೆಯ ಹುದ್ದೆಯಲ್ಲಿದ್ದಾರೆ. ಮಗಳು ಕೆನಡಾದಲ್ಲಿದ್ದಾಳೆ, ಮಗ ಆಫ್ರಿಕಾದಲ್ಲಿದ್ದಾಳೆʼʼ ಎಂದು ಹೇಳಿದರು. ಇವರನ್ನು ಚಿಕ್ಕೋಡಿಯ ಆಸ್ಪತ್ರೆಗೆ ಸೇರಿಸೋಣ ಎಂದು ಪೊಲೀಸರು ಪ್ರಯತ್ನಪಟ್ಟರು. ಆಗ ಮೂಲಚಂದ್‌ ಅವರು ಯಾವ ಕಾರಣಕ್ಕೂ ಸರ್ಕಾರಿ ಆಸ್ಪತ್ರೆಗೆ ಬರಲ್ಲ ಎಂದರಂತೆ.

ಮೂಲಚಂದ್‌ ಅವರ ಕೈಯಿಂದ ಮಕ್ಕಳ ಫೋನ್ ನಂಬರ್ ಪಡೆದು ಹಲವು ಬಾರಿ ಕರೆ ಮಾಡಿದರೂ ಮಗನಾಗಲೀ, ಮಗಳಾಗಲೀ ಪ್ರತಿಕ್ರಿಯೆಯನ್ನೇ ನೀಡಿಲ್ಲ. ಬಳಿಕ ಪೊಲೀಸರು ಮೂಲಚಂದ್ರ ಶರ್ಮಾರನ್ನು ಚಿಕ್ಕೋಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು.

ಎರಡು ದಿನಗಳ ಹಿಂದೆ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೂಲಚಂದ್ರ ಶರ್ಮಾ ಮೃತಪಟ್ಟಿದ್ದಾರೆ. ಕೊನೆಗೆ ಮತ್ತೊಮ್ಮೆ ಮಕ್ಕಳನ್ನು ಸಂಪರ್ಕಿಸಲು ಪ್ರಯತ್ನ ಮಾಡಿದ್ದಾರೆ. ಆಗ ಒಮ್ಮೆ ಸಂಪರ್ಕಕ್ಕೆ ಸಿಕ್ಕಿದ ಮಗಳು ಆಡಿದ ಮಾತು ಕೇಳಿ ಪೊಲೀಸರೇ ದಂಗಾಗಿ ಹೋದರು.

ʻʻಅವರು ನಮ್ಮ ತಂದೆ ಆವಾಗ ಆಗಿದ್ದರು. ಈಗ ಇಲ್ಲ. ನಾವೇನಾದ್ರೂ ಚಿಕಿತ್ಸೆ ಕೊಡಿಸಿ ಅಂತ ಹೇಳಿದ್ದೇವಾ? ” ಅಂತ್ಯಕ್ರಿಯೆ ಮಾಡೋಕೆ ಆದರೆ ಮಾಡಿ‌ ಇಲ್ಲ ಹೆಣ ಬಿಸಾಕಿ” ಎಂದು ಮಗಳು ಪೊಲೀಸರಿಗೇ ಆವಾಜ್‌ ಹಾಕಿದ್ದಾಳೆ. ಪೊಲೀಸರು ಬೇರೆ ದಾರಿ ಇಲ್ಲದೆ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ನಾಗರಮುನ್ನೊಳ್ಳಿ ಗ್ರಾಮದಲ್ಲಿ ಪಂಚಾಯಿತಿ ಅಧಿಕಾರಿಗಳ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಸಿದರು.

police and officials

ಒಬ್ಬ ಹಿರಿಯ ವ್ಯಕ್ತಿಯ ಮೃತದೇಹವನ್ನು ಜತನದಿಂದ ಅಂತ್ಯಕ್ರಿಯೆ ಮಾಡಿದ ಪೊಲೀಸರ ನಡೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಅದೇ ಹೊತ್ತಿಗೆ ಮಕ್ಕಳ ವರ್ತನೆಯನ್ನು ಜನರು ಖಂಡಿಸುತ್ತಿದ್ದಾರೆ.

ಇದನ್ನೂ ಓದಿ: Murder Case: ಸುಪಾರಿ ಕೊಟ್ಟು ಹೆತ್ತ ಮಗನನ್ನೇ ಕೊಲೆಗೈದ ತಂದೆ; ಸುಣ್ಣದ ಡಬ್ಬಿಯಲ್ಲಿತ್ತು ಹಂತಕನ ನಂಬರ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Stabbing Case: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ; ಐವರು ಆರೋಪಿಗಳ ಬಂಧನ

Stabbing Case: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರಿನಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿದಿದ್ದ ಆರೋಪಿಗಳ ಪೈಕಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Stabbing Case
Koo

ಮಂಗಳೂರು: ಬಿಜೆಪಿ ವಿಜಯೋತ್ಸವ ಮೆರವಣಿಗೆ ವೇಳೆ ಇಬ್ಬರು ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಐವರನ್ನು ಪೊಲೀಸರು ಸೆರೆಹಿಡಿದ್ದಾರೆ. ಇದೇ ಪ್ರಕರಣದಲ್ಲಿ ಮಸೀದಿ ಎದುರು ಪ್ರಚೋದನಕಾರಿ ಘೋಷಣೆ ಕೂಗಿದ ಆರೋಪದಡಿ ಬಿಜೆಪಿ ಕಾರ್ಯಕರ್ತರ ಮೇಲೂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಶಾಕೀರ್(28), ಅಬ್ದುಲ್ ರಜಾಕ್(40), ಅಬೂಬಕ್ಕರ್ ಸಿದ್ದಿಕ್(35), ಸವಾದ್(18) ಹಾಗೂ ಹಫೀಝ್(24) ಬಂಧಿತ ಅರೋಪಿಗಳು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ಭಾನುವಾರ ರಾತ್ರಿ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ವಿಜಯೋತ್ಸವ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಬೋಳಿಯಾರಿನ ಬಿಜೆಪಿ ಕಾರ್ಯಕರ್ತರಾದ ಹರೀಶ್ ‌ಹಾಗೂ ನಂದ ಕುಮಾರ್‌ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದಿದ್ದರು.

ಮೂವರು ಬಿಜೆಪಿ ಕಾರ್ಯಕರ್ತರು ಬೋಳಿಯಾರ್ ಮಸೀದಿಯ ಮುಂದೆ ಹೋಗುವಾಗ ಘೋಷಣೆಗಳನ್ನು ಕೂಗಿದ್ದಾರೆ ಎಂದು ಕೆಲ ಬೈಕ್‌ಗಳಲ್ಲಿ 20-25 ಮುಸ್ಲಿಂ ಯುವಕರ ತಂಡ ಅವರನ್ನು ಹಿಂಬಾಲಿಸಿ, ಹಲ್ಲೆ ನಡೆಸಿತ್ತು. ಇದೇ ವೇಳೆ ಕೃಷ್ಣ ಕುಮಾರ್ ಎಂಬಾತನಿಗೆ ಹಿಗ್ಗಾಮುಗ್ಗಾ ಹಲ್ಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಇದೀಗ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನುಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಪ್ರಚೋದನಕಾರಿ ಘೋಷಣೆ; ಬಿಜೆಪಿ ಕಾರ್ಯಕರ್ತರ ವಿರುದ್ಧವೂ ಪ್ರಕರಣ

ಮಂಗಳೂರು: ಚೂರಿ ಇರಿತ ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಮಸೀದಿ ಎದುರು ಪ್ರಚೋದನಕಾರಿ ಘೋಷಣೆ ಕೂಗಿದ ಆರೋಪದಡಿ ಕೊಣಾಜೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೋಳಿಯಾರ್ ಜುಮ್ಮಾ ಮಸೀದಿ ಅಧ್ಯಕ್ಷ ಪಿ.ಕೆ.ಅಬ್ದುಲ್ಲ ನೀಡಿದ ದೂರಿನಡಿ ಸುರೇಶ್, ವಿನಯ್, ಸುಭಾಷ್, ರಂಜಿತ್ ಹಾಗೂ ಧನಂಜಯ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ | Hebbe Waterfalls : ಪ್ರಾಣ ಕಸಿದ ಸೆಲ್ಫಿ ಕ್ರೇಜ್; ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದ ಪ್ರವಾಸಿಗ ಸಾವು

ನೆನ್ನೆ ರಾತ್ರಿ 8.50 ರ ಸುಮಾರಿಗೆ ಕೆಲ ಯುವಕರು ಮಸೀದಿ ಎದುರು ಪ್ರಚೋದನಕಾರಿ ಘೋಷಣೆ ಕೂಗಿದ್ದಾರೆಂದು ದೂರು ನೀಡಲಾಹಿದೆ. ಮಸೀದಿ ಬಳಿ ನಿಂತಿದ್ದವರಿಗೂ ಕೆಟ್ಟ ಶಬ್ದಗಳಲ್ಲಿ ನಿಂದಿಸಿದ ಆರೋಪದಲ್ಲಿ ಐಪಿಸಿ 143, 147, 148, 153A, 504, 506, 149ರಡಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Yuva Rajkumar: ಯುವ ಮದುವೆಯಾಗಿ ನಾಲ್ಕು ವರ್ಷಗಳ ಬಳಿಕ ಡಿವೋರ್ಸ್‌ ಪಡೆದುಕೊಳ್ಳಲು ಮುಂದಾಗಿದ್ದಾರೆ. ಶ್ರೀದೇವಿ ಅವರು ರಾಜ್ ಅಕಾಡೆಮಿ ನಡೆಸಿಕೊಂಡು ಹೋಗುತ್ತಿದ್ದರು. ಮೈಸೂರು ಮೂಲದ ಹುಡುಗಿ ಶ್ರೀದೇವಿಯನ್ನ ವರಿಸಿದ್ದ ಯುವ ಈಗ ಪತ್ನಿ ಮಾನಸಿಕವಾಗಿ ಟಾರ್ಚರ್ ಕೊಡುತ್ತಿದ್ದಾರೆ ಎಂದು ಆರೋಪ ಮಾಡಿ ಕೇಸ್ ಕೂಡ ದಾಖಲಿಸಿದ್ದಾರೆ. ಶ್ರೀದೇವಿಗೆ ಈಗಾಗಲೇ ಯುವ ನೋಟಿಸ್‌ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ, ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿದ್ದು, ಹಲವು ಆರೋಪ ಮಾಡಿದ್ದಾರೆ.

VISTARANEWS.COM


on

Yuva Rajkumar
Koo

ಬೆಂಗಳೂರು: ಡಾ.ರಾಜ್‌ಕುಮಾರ್‌ ಕುಟುಂಬದ ಕುಡಿ, ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ‌ ಅವರಿಗೆ ಡಿವೋರ್ಸ್‌ ನೋಟಿಸ್‌ ನೀಡಿರುವುದು ಭಾರಿ ಸುದ್ದಿಯಾಗಿದೆ. ಇದರ ಮಧ್ಯೆಯೇ, ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಅವರು ಸುದ್ದಿಗೋಷ್ಠಿ ನಡೆಸಿದ್ದು, ಶ್ರೀದೇವಿ ಭೈರಪ್ಪ (Sridevi Byrappa) ಅವರ ಬಗ್ಗೆ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. “ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬುವರ ಜತೆ ಅಕ್ರಮ ಸಂಬಂಧ ಇದೆ” ಎಂಬುದಾಗಿ ಅವರು ಆರೋಪಿಸಿದ್ದಾರೆ.

“ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಅರ್ಜಿ ಹಾಕಿದ್ದೇವೆ. ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಳಸಿತ್ತು” ಎಂಬುದಾಗಿ ಅವರು ಹೇಳಿದ್ದಾರೆ.

ಯುವ ಕುಟುಂಬವನ್ನು ಕಂಟ್ರೋಲ್‌ ಮಾಡಲು ಯತ್ನ

“ಯುವ ಪತ್ನಿಯು ಇಡೀ ಕುಟುಂಬದ ವ್ಯವಹಾರ ಹಾಗೂ ಎಲ್ಲದರ ಮೇಲೂ ಕಂಟ್ರೋಲ್ ಮಾಡಲು ಪ್ರಯತ್ನಿಸಿದ್ದಳು. ಯುವ ಫ್ಯಾಮಿಲಿಯಿಂದ ಬಹಳ ಹಣ ಖರ್ಚು ಮಾಡಿಸಿಕೊಂಡಿದ್ದಾರೆ. ಐಎಎಸ್ ಕಲಿಯಲು ದೆಹಲಿಗೆ ಹೋಗಿದ್ದರು. ಅವಳ ಬಾಯ್ ಫ್ರೆಂಡ್ ರಾಧಯ್ಯ ಎಂಬವರ ಜತೆ ಸಂಬಂಧ ಇಟ್ಟುಕೊಂಡಿದ್ದಾರೆ. ರಾತ್ರಿ ಅವನ ಮನೆಯಲ್ಲಿ ಉಳದುಕೊಳ್ತಿದ್ದರು. ಇಂಥ ಹಲವು ಕಾರಣಗಳನ್ನು ಅರ್ಜಿಯಲ್ಲಿ ನಮೂದಿಸಿ ಫೈಲ್ ಮಾಡಿದ್ದೇವೆ. ಆದರೆ ಯುವ ಪತ್ನಿಯು ಯುವನಿಗೆ ಬೇರೆ ಸಂಬಂಧ ಇದೆ ಎಂದು ಆರೋಪಿಸಿದ್ದಾರೆ. ಸ್ಯಾಂಡಲ್ ವುಡ್ ನಟಿಯೊಬ್ಬರ ಜತೆ ಯುವನಿಗೆ ಸಂಬಂಧ ಇತ್ತು ಎಂದು ಅವರು ರಿಪ್ಲೈ ಮಾಡಿದ್ದಾರೆ” ಎಂದು ತಿಳಿಸಿದರು.

3 ಕೋಟಿ ರೂ. ಅಕ್ರಮ ವರ್ಗಾವಣೆ

“3 ಕೋಟಿ ರೂ.ಗಿಂತ ಅಧಿಕ ಹಣವನ್ನು ರಾಜ್ ಕುಮಾರ್ ಫಿಲ್ಮ್ ಅಕಾಡೆಮಿಯಿಂದ ಆಕೆಯ ಅಕೌಂಟ್‌ಗೆ ವರ್ಗಾವಣೆ ಮಾಡಿಕೊಳ್ಳಲಾಗಿದೆ. ಇದು ಯಾರಿಗೂ ಗೊತ್ತಿರಲಿಲ್ಲ. ರಾಜ್ ಕುಮಾರ್ ಕುಟುಂಬದ ಹೆಸರು ಕೆಡಿಸ್ತೀನಿ ಅಂತ ಬೆದರಿಕೆ ಹಾಕುತ್ತಿದ್ದರು. ಮೈಸೂರಲ್ಲಿ ಜಮೀನು ಖರೀದಿ ಮಾಡಿದ್ದಾರೆ. ಸುಳ್ಳು ಹೇಳಿ, ಅಮೆರಿಕಕ್ಕೆ ಹೋಗಿ ಅಲ್ಲಿ ಮಾಸ್ಟರ್ಸ್ ಮಾಡ್ತಿದ್ದಾರೆ. ಯುವ ಕುಟುಂಬದ ಹಣದಿಂದ ಬೆಂಗಳೂರಲ್ಲಿ ಸುಮಾರು 20ಕ್ಕೂ ಅಧಿಕ ಸೈಟ್ ಖರೀದಿ ಮಾಡಿದ್ದಾರೆ” ಎಂದು ಮಾಹಿತಿ ನೀಡಿದರು.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

ಇದನ್ನೂ ಓದಿ: Yuva Rajkumar: ವಿಚ್ಛೇದನ ಅರ್ಜಿ ಸಿಕ್ಕಾಗ ಉತ್ತರಿಸುವೆ; ಯುವ ನೋಟಿಸ್‌ಗೆ ಪತ್ನಿ ಶ್ರೀದೇವಿ ಫಸ್ಟ್‌ ರಿಯಾಕ್ಷನ್!

Continue Reading

ಕರ್ನಾಟಕ

Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

Modi 3.0 Cabinet: ಮೋದಿ 3.0 ಸಚಿವ ಸಂಪುಟದಲ್ಲಿ ರಾಜ್ಯದ ಐವರಿಗೆ ಸಚಿವ ಸ್ಥಾನ ಸಿಕ್ಕಿದ್ದು, ಯಾರಿಗೆ ಯಾವ ಖಾತೆ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Koo

ಬೆಂಗಳೂರು: ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ (Modi 3.0 Cabinet) ರಾಜ್ಯದ ಐವರಿಗೆ ಸಚಿವ ಸ್ಥಾನ ಸಿಕ್ಕಿದೆ. ಪ್ರಲ್ಹಾದ್‌ ಜೋಶಿ, ಎಚ್‌.ಡಿ.ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್‌ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ಸಿಕ್ಕಿದ್ದರೆ, ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಖಾತೆ ನೀಡಲಾಗಿದೆ.

ಕರ್ನಾಟಕದ ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮತ್ತೆ ಹಣಕಾಸು ಖಾತೆ ನೀಡಲಾಗಿದ್ದು, ಕಳೆದ ಬಾರಿ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಪ್ರಲ್ಹಾದ್‌ ಜೋಶಿ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ರಕ್ಷಣೆ, ಮರು ಬಳಕೆ ಇಂಧನ ಖಾತೆ ನೀಡಲಾಗಿದೆ. ಇನ್ನು ಮಂಡ್ಯ ಸಂಸದ, ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಿಕ್ಕಿದೆ. ಕಳೆದ ಬಾರಿ ಕೃಷಿ ಖಾತೆ ರಾಜ್ಯ ಸಚಿವರಾಗಿದ್ದ ಬೆಂ.ಉತ್ತರ ಕ್ಷೇತ್ರ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ರಾಜ್ಯ ಖಾತೆ, ತುಮಕೂರು ಸಂಸದ ವಿ.ಸೋಮಣ್ಣ ಅವರಿಗೆ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ನೀಡಲಾಗಿದೆ.

ಯಾರಿಗೆ ಯಾವ ಖಾತೆ?

1.ನಿರ್ಮಲಾ ಸೀತಾರಾಮನ್‌– ಹಣಕಾಸು ಖಾತೆ (ಸಂಪುಟ ದರ್ಜೆ)
2.ಪ್ರಲ್ಹಾದ್‌ ಜೋಶಿ– ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ರಕ್ಷಣೆ, ಮರು ಬಳಕೆ ಇಂಧನ (ಸಂಪುಟ ದರ್ಜೆ)
3.ಎಚ್‌.ಡಿ.ಕುಮಾರಸ್ವಾಮಿ– ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ (ಸಂಪುಟ ದರ್ಜೆ)
4.ಶೋಭಾ ಕರಂದ್ಲಾಜೆ– ಸಣ್ಣ ಮತ್ತು ಮಧ್ಯಮ ಕೈಗಾರಿಕೆ (ರಾಜ್ಯ ಖಾತೆ)
5. ವಿ.ಸೋಮಣ್ಣ- ಜಲಶಕ್ತಿ ಹಾಗೂ ರೈಲ್ವೆ ಖಾತೆ (ರಾಜ್ಯ ಖಾತೆ)

ಪ್ರಧಾನಿ ಮೋದಿಗೆ ಎಚ್‌ಡಿಕೆ ಧನ್ಯವಾದ

ಕೇಂದ್ರ ಸಚಿವ ಸಂಪುಟದಲ್ಲಿ ಬೃಹತ್ ಕೈಗಾರಿಕೆ ಖಾತೆ ಸಚಿವ ಸ್ಥಾನ ನೀಡಿದ್ದಕ್ಕೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರ್ಕಾರದ ಸಂಪುಟದಲ್ಲಿ ನರೇಂದ್ರ ಮೋದಿ ಅವರು ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

ಅಮಿತ್‌ ಶಾಗೆ ಮತ್ತೆ ಗೃಹ ಖಾತೆ; ಇಲ್ಲಿದೆ ಮೋದಿ ಸಂಪುಟ ಸಚಿವರು ಮತ್ತು ಖಾತೆ ಪಟ್ಟಿ

Modi 3.0 Cabinet
Modi 3.0 Cabinet: Here Are The Modi Cabinet Ministers And Their PortFolios

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ (Portfolios) ಮಾಡಿದ್ದಾರೆ. ನರೇಂದ್ರ ಮೋದಿ ಅವರು ಮಹತ್ವದ ಖಾತೆಗಳನ್ನು ಬಿಜೆಪಿ ಸಚಿವರಿಗೇ ನೀಡಿದ್ದಾರೆ. ಕೇಂದ್ರ ಗೃಹ ಖಾತೆಯನ್ನು ಅಮಿತ್‌ ಶಾ ಅವರೇ ಹಾಗೂ ರಾಷ್ಟ್ರೀಯ ಹೆದ್ದಾರಿ ಹಾಗೂ ಭೂಸಾರಿಗೆ ಖಾತೆಗಳನ್ನು ನಿತಿನ್‌ ಗಡ್ಕರಿ ಅವರೇ ಮುಂದುರಿಸಿಕೊಂಡು ಹೋಗಲಿದ್ದಾರೆ. ನರೇಂದ್ರ ಮೋದಿ ಅವರು ಯಾರಿಗೆ ಯಾವ ಖಾತೆ ನೀಡಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ.

ಹೀಗಿದೆ ಸಂಪುಟ ದರ್ಜೆ ಸಚಿವರ ಪಟ್ಟಿ ಹಾಗೂ ಅವರ ಖಾತೆಗಳು

  • ಅಮಿತ್ ಶಾ (ಬಿಜೆಪಿ- ಗುಜರಾತ್)- ಗೃಹ ಖಾತೆ
  • ರಾಜನಾಥ್ ಸಿಂಗ್ (ಬಿಜೆಪಿ- ಉತ್ತರ ಪ್ರದೇಶ)- ರಕ್ಷಣಾ ಖಾತೆ
  • ನಿತಿನ್ ಗಡ್ಕರಿ (ಬಿಜೆಪಿ- ಮಹಾರಾಷ್ಟ್ರ)- ರಾಷ್ಟ್ರೀಯ ಹೆದ್ದಾರಿ ಮತ್ತು ಭೂ ಸಾರಿಗೆ
  • ಜೆ.ಪಿ.ನಡ್ಡಾ (ಬಿಜೆಪಿ- ಹಿಮಾಚಲ ಪ್ರದೇಶ)- ಆರೋಗ್ಯ ಮತ್ತು ಕುಟುಂಬ ಕಲ್ಯಾಣ
  • ಶಿವರಾಜ್ ಸಿಂಗ್ ಚೌಹಾಣ್ (ಬಿಜೆಪಿ- ಮಧ್ಯಪ್ರದೇಶ )-‌ ಕೃಷಿ‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್
  • ನಿರ್ಮಲಾ ಸೀತಾರಾಮನ್ (ರಾಜ್ಯಸಭೆ ಬಿಜೆಪಿ ಸದಸ್ಯೆ)- ಹಣಕಾಸು
  • ಎಸ್.ಜೈ ಶಂಕರ್ (ರಾಜ್ಯಸಭೆ ಬಿಜೆಪಿ ಸದಸ್ಯ)- ವಿದೇಶಾಂಗ ವ್ಯವಹಾರಗಳ ಖಾತೆ
  • ಮನೋಹರ ಲಾಲ್‌ ಖಟ್ಟರ್‌ (ಬಿಜೆಪಿ- ಹರಿಯಾಣ)- ಇಂಧನ‌ ಮತ್ತು ವಸತಿ
  • ಎಚ್‌.ಡಿ.ಕುಮಾರಸ್ವಾಮಿ (ಜೆಡಿಎಸ್‌- ಕರ್ನಾಟಕ)- ಉಕ್ಕು ಮತ್ತು ಬೃಹತ್‌ ಕೈಗಾರಿಕೆ
  • ಪಿಯೂಷ್‌ ಗೋಯಲ್‌ (ಬಿಜೆಪಿ- ಮಹಾರಾಷ್ಟ್ರ )- ವಾಣಿಜ್ಯ
  • ಧರ್ಮೇಂದ್ರ ಪ್ರಧಾನ್ (ಬಿಜೆಪಿ- ಒಡಿಶಾ): ಶಿಕ್ಷಣ‌, ಮಾನವ ಸಂಪನ್ಮೂಲ
  • ಜಿತನ್ ರಾಮ್ ಮಾಂಝಿ (ಎಚ್‌ಎಎಂ- ಬಿಹಾರ)- ಸಣ್ಣ ಮತ್ತು ಮಧ್ಯಮ ಕೈಗಾರಿಕೆ
  • ರಾಜೀವ್‌ ರಂಜನ್‌ ಸಿಂಗ್‌ (ಲಲನ್‌ ಸಿಂಗ್-ಜೆಡಿಯು-ಬಿಹಾರ)
  • ಸರ್ಬಾನಂದ ಸೋನೊವಾಲ್‌‌ (ಬಿಜೆಪಿ- ಅಸ್ಸಾಂ): ಬಂದರು, ಜಲಸಾರಿಗೆ
  • ರಾಮ್‌ ಮೋಹನ್‌ ನಾಯ್ಡು (ಟಿಡಿಪಿ-ಆಂಧ್ರಪ್ರದೇಶ)- ನಾಗರಿಕ ವಿಮಾನಯಾನ
  • ಪ್ರಲ್ಹಾದ್‌ ಜೋಶಿ (ಬಿಜೆಪಿ- ಕರ್ನಾಟಕ): ಆಹಾರ ಮತ್ತು ಗ್ರಾಹಕ ವ್ಯವಹಾರಗಳು, ನವೀಕರಿಸಬಹುದಾದ ಇಂಧನ, ಆಹಾರ ಮತ್ತು ನಾಗರಿಕ ಪೂರೈಕೆ
  • ಡಾ.ವೀರೇಂದ್ರ ಕುಮಾರ್ (ಬಿಜೆಪಿ-ಮಧ್ಯಪ್ರದೇಶ)- ಸಾಮಾಜಿಕ ನ್ಯಾಯ
  • ಜುವೆಲ್‌ ಒರಾಮ್‌ (ಬಿಜೆಪಿ- ಒಡಿಶಾ)- ಬುಡಕಟ್ಟು
  • ಗಿರಿರಾಜ್‌ ಸಿಂಗ್‌ (ಬಿಜೆಪಿ-ಬಿಹಾರ) -‌ ಜವಳಿ
  • ಅಶ್ವಿನಿ ವೈಷ್ಣವ್‌ (ಬಿಜೆಪಿ-ರಾಜಸ್ಥಾನ-ರಾಜ್ಯಸಭೆ ಸದಸ್ಯ) – ರೈಲ್ವೆ ಮತ್ತು ಮಾಹಿತಿ ಪ್ರಸಾರ
  • ಜ್ಯೋತಿರಾದಿತ್ಯ ಸಿಂಧಿಯಾ (ಬಿಜೆಪಿ-ಮಧ್ಯಪ್ರದೇಶ)- ಟೆಲಿಕಾಮ್
  • ಭೂಪೇಂದ್ರ ಯಾದವ್‌ (ಬಿಜೆಪಿ-ರಾಜಸ್ಥಾನ)- ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ
  • ಗಜೇಂದ್ರ ಸಿಂಗ್ ಶೇಖಾವತ್ (ಬಿಜೆಪಿ- ರಾಜಸ್ಥಾನ): ಪ್ರವಾಸೋದ್ಯಮ ಮತ್ತು ಸಂಸ್ಕೃತಿ
  • ಅನ್ನಪೂರ್ಣ ದೇವಿ (ಬಿಜೆಪಿ-ಜಾರ್ಖಂಡ್)-ಮಹಿಳಾ ಮತ್ತು ಮಕ್ಕಳ ಕಲ್ಯಾಣ
  • ಕಿರಣ್‌ ರಿಜಿಜು (ಬಿಜೆಪಿ- ಅರುಣಾಚಲ ಪ್ರದೇಶ)-‌ ಸಂಸದೀಯ ವ್ಯವಹಾರ
  • ಹರ್ದೀಪ್ ಸಿಂಗ್ ಪುರಿ (ರಾಜ್ಯಸಭೆ ಬಿಜೆಪಿ ಸದಸ್ಯ-ಪಂಜಾಬ್)- ಪೆಟ್ರೋಲಿಯಂ
  • ಡಾ.ಮನ್ಸುಖ್‌ ಮಂಡಾವೀಯ (ಬಿಜೆಪಿ-ಗುಜರಾತ್)‌: ಕಾರ್ಮಿಕ ಮತ್ತು ಉದ್ಯೋಗ
  • ಜಿ.ಕಿಶನ್‌ ರೆಡ್ಡಿ (ಬಿಜೆಪಿ-ತೆಲಂಗಾಣ)- ಕಲ್ಲಿದ್ದಿಲು ಮತ್ತು ಗಣಿಗಾರಿಕೆ
  • ಚಿರಾಗ್‌ ಪಾಸ್ವಾನ್‌ (ಎಲ್‌ಜೆಪಿ-ಬಿಹಾರ)-‌ ಆಹಾರ ಸಂಸ್ಕರಣೆ
  • ಸಿ.ಆರ್‌.ಪಾಟೀಲ್‌ (ಬಿಜೆಪಿ-ಗುಜರಾತ್)-ಜಲಶಕ್ತಿ (ಜಲಸಂಪನ್ಮೂಲ)

ರಾಜ್ಯ ಖಾತೆ ಸಚಿವರು

  • ವಿ. ಸೋಮಣ್ಣ: ಜಲಶಕ್ತಿ ಮತ್ತು ರೈಲ್ವೆ
  • ಶೋಭಾ ಕರಂದ್ಲಾಜೆ: ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಖಾತೆ
  • ತೋಖನ್‌ ಸಾಹು (ಬಿಜೆಪಿ-ಛತ್ತೀಸ್‌ಗಢ)- ವಸತಿ ಮತ್ತು ನಗರಾಭಿವೃದ್ಧಿ
  • ಸುರೇಶ್‌ ಗೋಪಿ (ಬಿಜೆಪಿ-ಕೇರಳ)- ಸಂಸ್ಕೃತಿ ಮತ್ತು ಪ್ರವಾಸೋದ್ಯಮ
  • ಹರ್ಷ ಮಲ್ಹೋತ್ರಾ (ಬಿಜೆಪಿ-ದೆಹಲಿ)- ರಾಷ್ಟ್ರೀಯ ಹೆದ್ದಾರಿ ಮತ್ತು ಭೂ ಸಾರಿಗೆ
Continue Reading

ತುಮಕೂರು

Shira News: ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ಟಿ.ಬಿ.ಜಯಚಂದ್ರ

Shira News: ಶಿರಾ ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆ ಕೇಂದ್ರದಲ್ಲಿ ಸೋಮವಾರ ಶಾಸಕ ಟಿ.ಬಿ. ಜಯಚಂದ್ರ, ರೈತರಿಗೆ ಬಿತ್ತನೆ ಬೀಜ ವಿತರಿಸಿದರು.

VISTARANEWS.COM


on

Sowing seed distribution in Shira by MLA TB Jayachandra
Koo

ಶಿರಾ: ಮುಂಗಾರು ಹಂಗಾಮಿಗೆ ರೈತರಿಗೆ ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳುವಂತೆ ಶಾಸಕ ಟಿ.ಬಿ.ಜಯಚಂದ್ರ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ (Shira News) ನೀಡಿದರು.

ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿ, ಮುಂಗಾರು ಹಂಗಾಮಿಗೆ ರೈತರಿಗೆ ರಿಯಾಯಿತಿ ದರದಲ್ಲಿ ನೀಡಲಾಗುವ ಬಿತ್ತನೆ ಬೀಜ ವಿತರಿಸಿ, ಬಳಿಕ ಅವರು ಮಾತನಾಡಿದರು.

ಇದನ್ನೂ ಓದಿ: Samsung: ಕ್ಯೂಎಲ್ಇಡಿ 4ಕೆ ಪ್ರೀಮಿಯಂ ಟಿವಿ ಸರಣಿ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್

ರೈತರಿಗೆ ಬಿತ್ತನೆ ಬೀಜ ಹಾಗೂ ಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಅವರು, ಸರ್ಕಾರದ ರಿಯಾಯಿತಿ ದರದ ಬೀಜ, ಗೊಬ್ಬರ ಹಾಗೂ ಕೃಷಿ ಸಲಕರಣೆಗಳನ್ನು ರೈತರು ಪಡೆದುಕೊಂಡು ಉತ್ತಮ ಕೃಷಿ ಕೈಗೊಳ್ಳಬೇಕು. ಮುಂಗಾರು ಹಂಗಾಮಿಗೆ ಬೀಜಗಳನ್ನು ರೈತರ ಬೇಡಿಕೆಗೆ ಅನುಗುಣವಾಗಿ ವಿತರಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕ ನಾಗರಾಜು, ತಹಸೀಲ್ದಾರ್ ದತ್ತಾತ್ರೇಯ ಗಾದ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ಕಾಂಗ್ರೆಸ್ ಯುವ ಮುಖಂಡ ಅಜಯ್ ಗಾಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಸಕ ಟಿ.ಬಿ.ಜಯಚಂದ್ರ

ಶಿರಾ: ಪರಿಸರ ಸಂರಕ್ಷಣೆಗೆ ಇಂದು ತುರ್ತು ಆದ್ಯತೆ ನೀಡಬೇಕಾಗಿದೆ. ಪರಿಸರ ದಿನಾಚರಣೆಯು ಕೇವಲ ಒಂದು ದಿನ ಮತ್ತು ಪ್ರಚಾರಕ್ಕೆ ಸೀಮಿತವಾಗದೇ ಇದು ನಿತ್ಯೋತ್ಸವ ಆಗಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಕರೆ ನೀಡಿದರು.

ನಗರದ ತುಮಕೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆವರಣದಲ್ಲಿ ಸೋಮವಾರ ಅರಣ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಮತ್ತು ವನಮಹೋತ್ಸವ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.

ನಮ್ಮ ಸುತ್ತಮುತ್ತಲಿನ ಪರಿಸರ ಕಲುಷಿತಗೊಂಡಿದೆ. ನಾವು ಸೇವಿಸುವ ಗಾಳಿ, ನೀರು ಎಲ್ಲವೂ ಕಲುಷಿತಗೊಂಡಿವೆ. ನಗರದಲ್ಲಿ ಕೈಗಾರಿಕೆಗಳು ಹೆಚ್ಚಾಗುತ್ತಿದ್ದು, ಇದರಿಂದಾಗಿ ನಿತ್ಯವೂ ಪರಿಸರ ಹಾನಿಯಾಗುತ್ತಿದೆ ಎಂದ ಅವರು, ಪ್ರಕೃತಿ ನಮಗೆ ಎಲ್ಲವೂ ನೀಡಿದೆ. ಆದರೆ ನಾವು ಪ್ರಕೃತಿಯ ಮೇಲೆ ದಾಳಿ ನಡೆಸುತ್ತಿದ್ದೇವೆ. ಪ್ರಕೃತಿಯನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಪರಿಸರ ಸಂರಕ್ಷಣೆಯ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕಾಗಿದೆ. ನಗರಗಳು ವೇಗವಾಗಿ ಬೆಳೆಯುತ್ತಿವೆ. ಕೈಗಾರಿಕೆಗಳು ಬೆಳೆಯುತ್ತಿವೆ. ಈ ಎಲ್ಲಾ ಬೆಳೆವಣಿಗೆಗಳು ಪರಿಸರದ ಮೇಲೆ ಮಾರಕ ಪರಿಣಾಮ ಬೀರುತ್ತಿವೆ. ಎಲ್ಲಿ ಮಳೆ ಬರಬೇಕು ಅಲ್ಲಿ ಮಳೆ ಆಗುತ್ತಿಲ್ಲ. ಜಾಗತಿಕ ತಾಪಮಾನ, ಹವಾಮಾನ ಬದಲಾವಣೆಯಿಂದ ಇಂತಹ ಪ್ರಕೃತಿಕ ವಿಕೋಪಗಳು ನಡೆಯುತ್ತಿವೆ. ಈ ಎಲ್ಲಾ ವಿಕೋಪಗಳಿಗೆ ಮನುಷ್ಯನೇ ಕಾರಣ. ಈ ಹಿನ್ನೆಲೆಯಲ್ಲಿ ಪರಿಸರವನ್ನು ಉಳಿಸಿ, ಬೆಳೆಸಬೇಕಾಗಿರುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು!

ಈ ಸಂದರ್ಭದಲ್ಲಿ ತುಮಕೂರು ವಿಶ್ವವಿದ್ಯಾಲಯದ ಕುಲಪತಿ ವೆಂಕಟೇಶಯ್ಯ, ಆರ್‌ಎಫ್‌ಒ ನವನೀತ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ನಗರಸಭೆ ಪೌರಾಯುಕ್ತ ರುದ್ರೇಶ್, ಭುವನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಬಾಯಿ, ಕಾಂಗ್ರೆಸ್ ಮುಖಂಡ ಅಜೇಯ ಗಾಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading
Advertisement
Stabbing Case
ಕರ್ನಾಟಕ25 mins ago

Stabbing Case: ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ; ಐವರು ಆರೋಪಿಗಳ ಬಂಧನ

Yuva Rajkumar
ಕರ್ನಾಟಕ41 mins ago

Yuva Rajkumar: ಶ್ರೀದೇವಿ ಭೈರಪ್ಪಗೆ ಅಕ್ರಮ ಸಂಬಂಧ; ಯುವ ರಾಜ್‌ಕುಮಾರ್ ಪರ ವಕೀಲ ಸ್ಫೋಟಕ ಹೇಳಿಕೆ

Modi 3.0 Cabinet
ದೇಶ2 hours ago

Modi 3.0 Cabinet: ಮೋದಿಗೆ ಬಾಹ್ಯಾಕಾಶ, ಅಮಿತ್‌ ಶಾಗೆ ಗೃಹ ಖಾತೆ; ಇಲ್ಲಿದೆ 72 ಸಚಿವರು ಹಾಗೂ ಖಾತೆಗಳ ಪಟ್ಟಿ

ಕರ್ನಾಟಕ2 hours ago

Modi 3.0 Cabinet: ಜೋಶಿಗೆ ಆಹಾರ, ಎಚ್‌ಡಿಕೆಗೆ ಬೃಹತ್ ಕೈಗಾರಿಕೆ‌, ನಿರ್ಮಲಾಗೆ ವಿತ್ತ, ಸೋಮಣ್ಣಗೆ ಡಬಲ್‌ ಖುಷಿ, ಶೋಭಾಗೆ MSME

Sowing seed distribution in Shira by MLA TB Jayachandra
ತುಮಕೂರು2 hours ago

Shira News: ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಶಾಸಕ ಟಿ.ಬಿ.ಜಯಚಂದ್ರ

World Environment Day celebration in Banavasi
ಉತ್ತರ ಕನ್ನಡ2 hours ago

Banavasi News: ಬನವಾಸಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Vinay Kulkarni
ಕರ್ನಾಟಕ3 hours ago

Vinay Kulkarni: ವಿನಯ್ ಕುಲಕರ್ಣಿಗೆ ತೀವ್ರ ಹಿನ್ನಡೆ; ಸಿಬಿಐ ವಿಶೇಷ ಕೋರ್ಟ್‌ನ ತೀರ್ಪು ಎತ್ತಿ ಹಿಡಿದ ಸುಪ್ರೀಂ

Modi 3.0 Cabinet
ಪ್ರಮುಖ ಸುದ್ದಿ3 hours ago

Modi 3.0 Cabinet: ಮೊದಲ ಸಂಪುಟ ಸಭೆಯಲ್ಲೇ ಮೋದಿ ಸಿಕ್ಸರ್;‌ ಬಡವರಿಗೆ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಸ್ತು

Students Fashion
ಫ್ಯಾಷನ್3 hours ago

Students Fashion: ಕಾಲೇಜು ಹುಡುಗಿಯರ ಫ್ಯಾಷನ್‌ ಲಿಸ್ಟ್‌ಗೆ ಸೇರಿದ ಮಾರ್ಬಲ್‌ ಪ್ರಿಂಟೆಡ್‌ ಕ್ರಾಪ್‌ ಟಾಪ್ಸ್!

Suresh Gopi
ದೇಶ4 hours ago

Suresh Gopi: ಸಚಿವ ಸ್ಥಾನಕ್ಕೆ ಬಿಜೆಪಿಯ ಸುರೇಶ್‌ ಗೋಪಿ ರಾಜೀನಾಮೆ; ಮಹತ್ವದ ಸ್ಪಷ್ಟನೆ ಕೊಟ್ಟ ಸಂಸದ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ5 hours ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ7 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌