ಬೆಳಗಾವಿ: ಭಾರಿ ಮಳೆಗೆ (Karnataka Rain) ಮರ ಬಿದ್ದು (Tree fall) ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಯುವಕ ಮೃತಪಟ್ಟಿದ್ದಾನೆ. ಬೆಳಗಾವಿ (Belgavi News) ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ವಿಠ್ಠಲ ತಳವಾರ ಮೃತ ದುರ್ದೈವಿ.
ಸೋಮನಾಥ್ ಮುಚ್ಚಂಡಿಕರ್, ವಿಠ್ಠಲ್ ತಳವಾರ್, ಸ್ವಪ್ನಿಲ್ ದೇಸಾಯಿ ಈ ಮೂವರು ಯುವಕರು ಬೈಕ್‌ನಲ್ಲಿ ಬೆಳಗಾವಿಗೆ ಬರುತ್ತಿದ್ದರು. ಇದೇ ವೇಳೆ ಭಾರಿ ಮಳೆ ಬರುತ್ತಿತ್ತು. ಮಳೆಯಲ್ಲೇ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಏಕಾಏಕಿ ಬೃಹತ್ ಗಾತ್ರದ ಮರವೊಂದು ಬುಡ ಸಮೇತ ಧರೆಗುರುಳಿ ಬೈಕ್ ಮೇಲೆ ಬಿದ್ದಿತ್ತು.
ಮರ ಬಿದ್ದ ರಭಸಕ್ಕೆ ಸೋಮನಾಥ್ ಮುಚ್ಚಂಡಿಕರ್‌ನ ಕರುಳು ಹೊರಗೆ ಬಂದಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದ. ಗಂಭೀರ ಗಾಯಗೊಂಡಿದ್ದ ವಿಠ್ಠಲ್ ತಳವಾರ್, ಸ್ವಪ್ನಿಲ್ ದೇಸಾಯಿ ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವಿಠ್ಠಲ್ ತಳವಾರ್ ತಲೆಗೂ ಗಂಭೀರ ಗಾಯಗೊಂಡಿದ್ದರಿಂದ ತೀವ್ರ ರಕ್ತಸ್ರಾವವಾಗಿತ್ತು. ಸಾವು ಬದುಕಿನ ನಡುವೆ ಹೋರಾಡಿದ ವಿಠ್ಠಲ್ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾನೆ.
ಸದ್ಯ ಘಟನೆಯಲ್ಲಿ ಗಂಭೀರ ಗಾಯಗೊಂಡು ಸ್ವಪ್ನಿಲ್ ದೇಸಾಯಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ
ಈ ಜಿಲ್ಲೆಗಳಲ್ಲಿ ವೇಗವಾಗಿ ಬೀಸುತ್ತೆ ಗಾಳಿ
ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 55-65 ಕಿ.ಮೀ ಇರಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬಾಗಲಕೋಟೆ, ಹಾವೇರಿ, ಕೊಪ್ಪಳ, ವಿಜಯಪುರ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಈ ಭಾಗದಲ್ಲಿ ಮಳೆ ಜತೆಗೆ ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ
ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್ 10 ರಿಂದ 12 ರವರೆಗೆ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ