ಬೆಳಗಾವಿ: ಗೌಂಡವಾಡದಲ್ಲಿ ಸತೀಶ್ ಪಾಟೀಲ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳೆಂದು ಅಮಾಯಕರನ್ನು ಬಂಧಿಸಬಾರದು ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪೊಲೀಸರಿಗೆ ತಿಳಿಸಿದ್ದಾರೆ.
ದೇವಸ್ಥಾನ ಸ್ಥಳ ಹಾಗೂ ಪಾರ್ಕಿಂಗ್ ವಿಚಾರದಲ್ಲಿ ಹತ್ಯೆ ನಂತರ ಹತ್ತು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಯಾದ ಸತೀಶ ಪಾಟೀಲ್ ನಿವಾಸಕ್ಕೆ ಸತೀಶ್ ಜಾರಕಿಹೊಳಿ ಗುರುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಪೊಲೀಸರು ಹಾಗೂ ಆರೋಪಿಗಳಿಂದ ನಮಗೆ ಭಯ ಕಾಡುತ್ತಿದೆ ಎಂದು ಕುಟುಂಬಸ್ಥರು ಸತೀಶ್ ಜಾರಕಿಹೊಳಿ ಬಳಿ ಆತಂಕ ವ್ಯಕ್ತ ಪಡಿಸಿದ್ದಾರೆ. ಪೋಲಿಸರು ಬಂದು ಮನೆಯ ಗಂಡು ಮಕ್ಕಳನ್ನು ಬಂಧನ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಪಾರ್ಕಿಂಗ್ ವಿಚಾರದಲ್ಲಿ ಗುಂಪು ಘರ್ಷಣೆ, ಒಬ್ಬರ ಹತ್ಯೆ, ವಾಹನಗಳಿಗೆ ಬೆಂಕಿ
ಈ ಕುರಿತು ಮಾತನಾಡಿದ ಸತೀಶ್ ಜಾರಕಿಹೊಳಿ, ಬೆಳಗಾವಿ ತಾಲೂಕಿನ ಕಾಕತಿ ಠಾಣೆ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ರೀತಿಯ ಘಟನೆಗೆ ಕಾಕತಿ ಠಾಣೆ ಪೊಲೀಸರ ವೈಫಲ್ಯವೇ ಕಾರಣ ಎಂದ ಜಾರಕಿಹೊಳಿ, ಪೊಲೀಸ್ ಕಮೀಷನರ್ ಕಚೇರಿಗೆ ತೆರಳಿದ್ದಾರೆ. ನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ, ಡಿಸಿಪಿ ರವೀಂದ್ರ ಗಡಾದಿ ಜತೆ ಚರ್ಚೆ ನಡೆಸಿದ್ದಾರೆ. ಅಮಾಯಕರನ್ನು ಬಂಧಿಸದಂತೆ ಹೇಳಿದ್ದಾರೆ.
ಇದನ್ನೂ ಓದಿ: ಗೌಂಡವಾಡ ಗ್ರಾಮದ ಗುಂಪು ಘರ್ಷಣೆ: ಆರೋಪಿಗಳ ಬಂಧನ!