ನಮ್ಮ ಡಿಕ್ಷ್‌ನರಿಯಲ್ಲೂ ಪದಗಳಿವೆ, ಅವರಿಗೆ ಕಾಮನ್‌ ಸೆನ್ಸ್‌ ಇರಬೇಕು: ರಮೇಶ್‌ ಜಾರಿಹೊಳಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರ ವಾಗ್ದಾಳಿ Vistara News
Connect with us

ಕರ್ನಾಟಕ ಎಲೆಕ್ಷನ್

ನಮ್ಮ ಡಿಕ್ಷ್‌ನರಿಯಲ್ಲೂ ಪದಗಳಿವೆ, ಅವರಿಗೆ ಕಾಮನ್‌ ಸೆನ್ಸ್‌ ಇರಬೇಕು: ರಮೇಶ್‌ ಜಾರಿಹೊಳಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರ ವಾಗ್ದಾಳಿ

ರಮೇಶ್‌ ಜಾರಕಿಹೊಳಿ ಮಾಡಿದ ಆರೋಪಗಳ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್‌ ಸಹೋದರ ಚನ್ನರಾಜ್‌ ಹಟ್ಟಿಹೊಳಿ ಸುದ್ದಿಗೋಷ್ಠಿ ನಡೆಸಿದ್ದಾರೆ.

VISTARANEWS.COM


on

Lakshmi Hebbalkar and channaraj hattiholi
Koo

ಬೆಳಗಾವಿ: ರಮೇಶ್‌ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಅವರ ಕುಟುಂಬದವರ ಕುರಿತು ಮಾತನಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರ ಚನ್ನರಾಜ್‌ ಹಟ್ಟಿಹೊಳಿ, ಮಾತನಾಡಬೇಕು ಎಂದರೆ ನಮ್ಮ ಡಿಕ್ಷ್‌ನರಿಯಲ್ಲೂ ಪದಗಳಿವೆ ಎಂದಿದ್ದಾರೆ.

ರಮೇಶ್‌ ಜಾರಕಿಹೊಳಿ ಸುದ್ದಿಗೋಷ್ಠಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ ಕುರಿತು ಆರೋಪ ಹೊರಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಸುದ್ದಿಗೋಷ್ಠಿ ನಡೆಸಿದರು. ನಾನು ಇಂಜಿನಿಯರಿಂಗ್‌ ಓದಿದ್ದೇನೆ. ನಮ್ಮ ಅಕ್ಕ ಎಂಎ ಓದಿದ್ದಾಳೆ. ಅಸಾಂವಿಧಾನಿಕ ಪದಗಳನ್ನು ಅವರ ರೀತಿಯಲ್ಲೇ ಬಳಸಿದರೆ ಜನರು ನಮ್ಮನ್ನು ಅಳೆಯುತ್ತಾರೆ. ಆಗ ಅವರಿಗೂ ನಮಗೂ ವ್ಯತ್ಯಾಸ ಇರುವುದಿಲ್ಲ. ಹೀಗೆ ಮಾತನಾಡಲು ಹೊರಟರೆ ನಮ್ಮ ಡಿಕ್ಷ್ನರಿಯಲ್ಲೂ ಪದಗಳಿವೆ.

ಡಿ.ಕೆ. ಶಿವಕುಮಾರ್‌ ಅವರಿಗೆ ಹೇಳಿ ಟಿಕೆಟ್‌ ಕೊಡಿಸಲು ಹೇಗೆ ಸಾಧ್ಯ? ಆಗ ಡಾ. ಜಿ. ಪರಮೇಶ್ವರ್‌ ಅವರು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದರು. ಇವರು ಹೇಗೆ ಪ್ರಭಾವ ಬೀರಿದರು? ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಸಿಡಿ ಪ್ರಕರಣ ಹೊರಬಂದು ಒಂದೂವರೆ ವರ್ಷ ಕಳೆದಿದೆ. ಈಗ ಏಕೆ ಸಿಬಿಐಗೆ ವಹಿಸಲು ಕೇಳುತ್ತಿದ್ದೀರ? ಸಿಬಿಐ ಸೇರಿ ಅನೇಕ ಸಂಸ್ಥೆಗಳನ್ನು ಚುನಾವಣೆ ಸಮಯದಲ್ಲಿ ಬಿಜೆಪಿಯವರು ದುರುಒಯೋಗಪಡಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ನಾವು ಅನೇಕ ಬಾರಿ ಹೇಳುತ್ತಿದ್ದೇವೆ. ಈಗ ಇದು ಆ ಮಾತನ್ನು ಪುಷ್ಠೀಕರಿಸುತ್ತದೆ.

ಇದನ್ನೂ ಓದಿ : Karnataka Election | ಲಕ್ಷ್ಮಿ ಹೆಬ್ಬಾಳ್ಕರ್‌ ಕ್ಷೇತ್ರದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌ ಬಳಿಕ ಈಗ ಆಣೆ ಪ್ರಮಾಣ ರಾಜಕೀಯ!

ರಮೇಶ್‌ ಜಾರಕಿಹೊಳಿ ಅವರು ನಮ್ಮನ್ನೂ ಬಿಜೆಪಿಗೆ ಕರೆದಿದ್ದರು. ಸಮ್ಮಿಶ್ರ ಸರ್ಕಾರವನ್ನು ಬೀಳಿಸುವುದು ಬೇಡ ಎಂದು ನಾವು ಅಲ್ಲಿಗೆ ಹೋಗಲಿಲ್ಲ. ಆ ಸಿಟ್ಟಿಗಾಗಿ ರಮೇಶ್‌ ಜಾರಕಿಹೊಳಿ ಈ ರೀತಿ ಮಾತನಾಡಿದ್ದಾರೆ. ನಾವು ಯಾವುದಕ್ಕೂ ಹೆದರುವುದಿಲ್ಲ. ನಮ್ಮ ಜತೆ ಜನರಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್‌ ಗೆದ್ದು ಬರುತ್ತಾರೆ, ಮುಂದೆ ಕಾಂಗ್ರೆಸ್‌ ಸರ್ಕಾರ ರಚನೆ ಆಗುತ್ತದೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Shadow CM: ಕಾಂಗ್ರೆಸ್‌ನ ಪೇಸಿಎಂ ಅಭಿಯಾನಕ್ಕೆ ಬಿಜೆಪಿಯಿಂದ ಶ್ಯಾಡೊ ಸಿಎಂ ಪೋಸ್ಟರ್ ವಾರ್

ಅಧಿಕಾರಿಗಳ ವರ್ಗಾವಣೆಯಿಂದ ಮೊದಲುಗೊಂಡು ಅನೇಕ ಕಾರ್ಯಗಳನ್ನು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಡೆಸುತ್ತಿದ್ದಾರೆ (Shadow CM) ಎಂದು ಬಿಜೆಪಿ ಆರೋಪಿಸಿದೆ.

VISTARANEWS.COM


on

Edited by

Shadow CM Posters
Koo

ಬೆಂಗಳೂರು: ವಿಧಾನಸಭೆ ಎಲೆಕ್ಷನ್‌ಗೂ ಮುನ್ನ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಅಭಿಯಾನವನ್ನು ಕಾಂಗ್ರೆಸ್‌ ರೂಪಿಸಿತ್ತು. ಕರ್ನಾಟಕ ರಾಜ್ಯ ಕಾಂಟ್ರಾಕ್ಟರ್ಸ್‌ ಅಸೋಸಿಯೇಷನ್‌ ಮಾಡಿದ್ದ 40% ಕಮಿಷನ್‌ ಆರೋಪವನ್ನೇ ಆಧಾರವಾಗಿಸಿಕೊಂಡು ಪೆಸಿಎಂ ಪೋಸ್ಟರ್‌ಗಳನ್ನು ಬಹಿರಂಗವಾಗಿ ಅಂಟಿಸಿತ್ತು. (Shadow CM)

ಈ ಪೋಸ್ಟರ್‌ಗಳು ಸರ್ಕಾರಕ್ಕೆ ಸಾಕಷ್ಟ ಮುಜುಗರ ಉಂಟುಮಾಡಿದ್ದವು. ರಾಜ್ಯ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಜನರಿಗೆ ಮನವರಿಕೆ ಮಾಡುವಲ್ಲಿ ಸಾಕಷ್ಟು ಪರಿಣಾಮಕಾರಿಯಾಗಿದ್ದವು. ಇದೀಗ ಕಾಂಗ್ರೆಸ್‌ ಸರ್ಕಾರ ರಚನೆಯಾಗಿದ್ದು, ಶ್ಯಾಡೊ ಸಿಎಂ ಅಭಿಯಾನವನ್ನು ಬಿಜೆಪಿ ಕೈಗೆತ್ತಿಕೊಂಡಿದೆ.

ಅಧಿಕಾರಿಗಳ ವರ್ಗಾವಣೆಯಿಂದ ಮೊದಲುಗೊಂಡು ಅನೇಕ ಕಾರ್ಯಗಳನ್ನು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಡೆಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇದೇ ಆರೋಪಕ್ಕೆ ಅನಗುಣವಾಗಿ ಶ್ಯಾಡೊ ಸಿಎಂ ಪೋಸ್ಟರ್‌ಗಳನ್ನು ರೂಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದೆ.

1. ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ಕೈಗೊಂಬೆಯಾಗಿರುವ ಸಿದ್ದರಾಮಯ್ಯ, ಪುತ್ರನನ್ನು ಶ್ಯಾಡೋ ಸಿಎಂ ಮಾಡಿ ತಾಳಕ್ಕೆ ಕುಣಿಯುತ್ತಿದ್ದಾರೆ. ಸೋನಿಯಾ ಗಾಂಧಿಯವರ ತಾಳಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಕುಣಿಯುತ್ತಿದ್ದಾರೆ. 2024ರ ಕಾಂಗ್ರೆಸ್ ಚುನಾವಣಾ ಖರ್ಚಿಗೆ ರಾಜ್ಯ ಬಲಿಯಾಗುತ್ತಿದೆ.

2. ಸರಕಾರದ ಎಲ್ಲಾ ಬಗೆಯ ಡೀಲ್‌ಗಳಿಗೆ ನೇರವಾಗಿ ಸಂಪರ್ಕಿಸಿ…

3. ಹುದ್ದೆಗಳು ಮಾರಾಟಕ್ಕಿವೆ… #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.

4. ಹುದ್ದೆಗಳು ಮಾರಾಟಕ್ಕಿವೆ.. #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.

5. CM ನೆರಳಿನಲ್ಲಿ #ShadowCM ಅವ್ಯವಹಾರ. ಅಂಕೆ ಮೀರಿದೆ ಇವರಿಬ್ಬರ ಭ್ರಷ್ಟಾಚಾರ.

6. Commission Master in the shadows of Chief Minister!

Continue Reading

ಕರ್ನಾಟಕ

Evm Machine : ಡೆಮಾಲಿಷನ್‌ ವೇಳೆ ಎಂಜಿನಿಯರ್ ಮನೆಯಲ್ಲಿ ಇವಿಎಂ ಯೂನಿಟ್‌ಗಳು ಪತ್ತೆ!

Evm Control Units : ಮನೆ ಡೆಮಾಲಿಷನ್‌ ಸಮಯದಲ್ಲಿ ಎಂಜಿನಿಯರ್‌ವೊಬ್ಬರ ಮನೆಯಲ್ಲಿ ಇವಿಎಂ ಕಂಟ್ರೋಲ್‌ ಯೂನಿಟ್‌ಗಳು ಪತ್ತೆಯಾಗಿವೆ. ಇವಿಎಂ ಕಂಟ್ರೋಲ್‌ ಯೂನಿಟ್‌ಗಳನ್ನು ತಹಸೀಲ್ದಾರ್‌ ವಶಕ್ಕೆ ಪಡೆದುಕೊಂಡಿದ್ದಾರೆ.

VISTARANEWS.COM


on

Edited by

EVM units
Koo

ಬೆಂಗಳೂರು ಗ್ರಾಮಾಂತರ: ಇಲ್ಲಿನ ದೊಡ್ಡಬಳ್ಳಾಪುರ ತಾಲೂಕಿನ ಮೋಪರಹಳ್ಳಿ ಗ್ರಾಮದಲ್ಲಿ ಮನೆ ಡೆಮಾಲಿಷನ್ ವೇಳೆ ಇವಿಎಂ ಕಂಟ್ರೋಲ್‌ ಯೂನಿಟ್‌ಗಳು (Evm Control Units ) ಪತ್ತೆ ಆಗಿವೆ. ದೊಡ್ಡಬಳ್ಳಾಪುರ ನಿರ್ಮಿತಿ ಕೇಂದ್ರದ ಎಂಜಿನಿಯರ್ ಶಿವಕುಮಾರ್ ಎಂಬುವವರ ಮನೆಯಲ್ಲಿ (Evm Machine) ಪತ್ತೆ ಆಗಿದೆ.

2018ರ ಚುನಾವಣೆಯಲ್ಲಿ ಬಳಸಿ ರಿಜೆಕ್ಟ್‌ ಆಗಿದ್ದ ಇವಿಎಂ ಕಂಟ್ರೋಲ್ ಯೂನಿಟ್ ಮಿಷನ್‌ಗಳು ಎನ್ನಲಾಗಿದೆ. ಅಂದಹಾಗೇ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಮನೆಯನ್ನು ಡೆಮಾಲಿಷನ್ ಮಾಡಲಾಗುತ್ತಿತ್ತು. ಈ ವೇಳೆ ಮನೆಯ ಅವಶೇಷಗಳಲ್ಲಿ ಇವಿಎಂ ಕಂಟ್ರೋಲ್‌ ಯೂನಿಟ್‌ ಪತ್ತೆ ಆಗಿವೆ. ಯೂನಿಟ್‌ಗಳು ಪತ್ತೆಯಾದ ಹಿನ್ನೆಲೆ ಸ್ಥಳಕ್ಕೆ ತಹಸೀಲ್ದಾರ್‌ ಮೋಹನ ಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

EVM units found in demolition
ಎಂಜಿನಿಯರ್‌ ಮನೆ ಡೆಮಾಲಿಷನ್‌ ವೇಳೆ ಇವಿಎಂ ಯೂನಿಟ್‌ಗಳು ಪತ್ತೆ

ಮನೆಯ ಅವಶೇಷದಡಿ 7 ಯೂನಿಟ್‌ಗಳು ಪತ್ತೆ ಆಗಿದ್ದು, ತಹಸೀಲ್ದಾರ್‌ ಎಲ್ಲವನ್ನೂ ವಶಕ್ಕೆ ಪಡೆದು ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ. ತಹಸೀಲ್ದಾರ್‌ ಮೋಹನ ಕುಮಾರಿ ಮುಂದಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಶಿವಶಂಕರ್ ಅವರಿಗೆ ವರದಿಯನ್ನು ನೀಡಿದ್ದಾರೆ. ಸದ್ಯ, ರಿಜೆಕ್ಟ್‌ ಆಗಿರುವ ಇವಿಎಂ ಕಂಟ್ರೋಲ್‌ ಯೂನಿಟ್‌ ಮಿಷನ್‌ಗಳನ್ನು ಯಾಕಾಗಿ ಮನೆಯಲ್ಲಿ ಇರಿಸಿಕೊಂಡಿದ್ದರು ಎಂಬ ಪ್ರಶ್ನೆ ಕಾಡುತ್ತಿದೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

MLC Election: ವಿಧಾನ ಪರಿಷತ್‌ಗೆ ಕಾಂಗ್ರೆಸ್‌ನ ಮೂವರು ಅವಿರೋಧ ಆಯ್ಕೆ; ಶೆಟ್ಟರ್‌ ಕಮ್‌ ಬ್ಯಾಕ್‌

MLC Election: ಕಾಂಗ್ರೆಸ್‌ನ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರು ಎಂಎಲ್‌ಸಿಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

VISTARANEWS.COM


on

Edited by

New MLC Jagadish Shettar NS Boseraju and Tippanna Kamakanoor
ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಎನ್.ಎಸ್. ಬೋಸರಾಜು
Koo

ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ (MLC Election) ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಅಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರ ಅವಿರೋಧ ಆಯ್ಕೆ ಘೋಷಿಸಲಾಗಿದೆ.

ನಾಮಪತ್ರ ವಾಪಸ್ ಪಡೆಯಲು ಶುಕ್ರವಾರ ಕೊನೆಯ ದಿನವಾಗಿತ್ತು. ಪಕ್ಷೇತರ ಅಭ್ಯರ್ಥಿ ಡಾ.ಕೆ ಪದ್ಮರಾಜನ್‌ ಅವರ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಹೀಗಾಗಿ ಉಳಿದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭಾ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಮಾಹಿತಿ ನೀಡಿದ್ದಾರೆ.

ಶೆಟ್ಟರ್‌ 5 ವರ್ಷ, ಬೋಸರಾಜು 1 ವರ್ಷ, ಕಮಕನೂರು 3 ವರ್ಷ ಎಂಎಲ್‌ಸಿ

ರಾಜ್ಯದಲ್ಲಿ ಖಾಲಿಯಾಗಿರುವ ವಿಧಾನ ಪರಿಷತ್‌ನ (MLC Election) ಮೂರು ಸ್ಥಾನಗಳಿಗೆ ಜೂನ್‌ 30ರಂದು ಚುನಾವಣೆ ನಡೆಯಬೇಕಿತ್ತು. ಆದರೆ, ಕಾಂಗ್ರೆಸ್‌ ಮೂವರು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಇನ್ನು ಇವರ ಅಧಿಕಾರಾವಧಿ ನೋಡುವುದಾದರೆ, ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ 5 ವರ್ಷ, ಹಾಲಿ ಸಚಿವ ಎನ್.ಎನ್‌. ಬೋಸ್‌ ರಾಜು 1 ವರ್ಷ ಮತ್ತು ತಿಪ್ಪಣ್ಣ ಕಮಕನೂರು 3 ವರ್ಷ ಎಂಎಲ್‌ಸಿಯಾಗಿ ಇರಲಿದ್ದಾರೆ.

ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್‌ ನಡೆಯುವ ಚುನಾವಣೆ ಇದಾಗಿದೆ. 135 ಶಾಸಕರನ್ನು ಹೊಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಎಲ್ಲ ಮೂರು ಸ್ಥಾನಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ | ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ? ಸುಳಿವು ಬಿಚ್ಚಿಟ್ಟ ಸಿ.ಪಿ.ಯೋಗೇಶ್ವರ್

ಶೆಟ್ಟರ್‌ಗೆ ದೊಡ್ಡ ಗೌರವ

ಕಳೆದ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಯಲ್ಲಿ ಟಿಕೆಟ್‌ ನಿರಾಕರಿಸಲ್ಪಟ್ಟು ಕಾಂಗ್ರೆಸ್‌ ಸೇರಿದ್ದ ಜಗದೀಶ್‌ ಶೆಟ್ಟರ್‌ ಅವರು ಚುನಾವಣೆಯಲ್ಲಿ ಸೋಲು ಕಂಡರೂ ಅವರಿಗೆ ಪಕ್ಷ ದೊಡ್ಡ ಗೌರವವನ್ನೇ ನೀಡಿದೆ. ಬಾಬುರಾವ್‌ ಚಿಂಚನಸೂರು ಅವರಿಂದ ತೆರವಾಗಿರುವ ಸ್ಥಾನಕ್ಕೆ ಜಗದೀಶ್‌ ಶೆಟ್ಟರ್‌ ಅವರು ಆಯ್ಕೆಯಾಗಿದ್ದು, ಐದು ವರ್ಷ ಸದಸ್ಯರಾಗಿರಲಿದ್ದಾರೆ.

ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಆಗಿದ್ದರಿಂದ ಈ ಬಾರಿ ಕಾಂಗ್ರೆಸ್ ಗೆ ಲಾಭವಾಗಿತ್ತು. 39 ಲಿಂಗಾಯತ ಸಮುದಾಯದ ಶಾಸಕರು ಗೆಲ್ಲುವುದರಲ್ಲಿ ಶೆಟ್ಟರ್‌ ಅವರ ವರ್ಚಸ್ಸಿನ ಪ್ರಭಾವವೂ ಇದೆ ಎಂದು ಕಾಂಗ್ರೆಸ್‌ ಕಂಡುಕೊಂಡಿದೆ. ಇದರ ಲಾಭವನ್ನು ಲೋಕಸಭಾ ಚುನಾವಣೆಯಲ್ಲಿಯೂ ಪಡೆಯಲು ಶೆಟ್ಟರ್‌ಗೆ ಮಣೆ ಹಾಕಲಾಗಿದೆ ಎಂದು ಹೇಳಲಾಗಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಶೆಟ್ಟರ್ ಗೆ ಐದು ವರ್ಷಗಳ ಅವಧಿ ಇರೋ ಎಂಎಲ್ಸಿ ಸ್ಥಾನವನ್ನು ಕಾಂಗ್ರೆಸ್‌ ಕೊಟ್ಟಿದೆ ಎನ್ನಲಾಗಿದೆ.

ಇದನ್ನೂ ಓದಿ | Congress Guarantee: ರಾಜ್ಯ ಬಿಜೆಪಿ ಅಧ್ಯಕ್ಷ ಮನೆಗೆ ಮಾರಿ ಪರರಿಗೆ ಉಪಕಾರಿ: ಸಚಿವ ದಿನೇಶ್‌ ಗುಂಡೂರಾವ್‌ ವಾಗ್ದಾಳಿ

ಎನ್.ಎಸ್‌. ಬೋಸರಾಜು ಅವರಿಗೆ 1 ವರ್ಷ ಅವಕಾಶವಿರುವ ಪರಿಷತ್‌ ಸದಸ್ಯತ್ವವನ್ನು ನೀಡಲಾಗಿದೆ. ಬೋಸರಾಜು ಅವರನ್ನು ಈಗಾಗಲೇ ಸಣ್ಣ ನೀರಾವರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಇವರು ಆರ್‌.ಶಂಕರ್‌ ಅವರಿಂದ ತೆರವಾಗಿರುವ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಇತ್ತ ತಿಪ್ಪಣ್ಣ ಕಮಕನೂರು ಅವರಿಗೆ ಲಕ್ಷ್ಮಣ ಸವದಿ ಅವರಿಂದ ತೆರವಾದ ಮೂರು ವರ್ಷಗಳ ಅವಧಿಯ ಮೇಲ್ಮನೆ ಸ್ಥಾನವನ್ನು ನೀಡಲಾಗಿದೆ.

Continue Reading

ಕರ್ನಾಟಕ

‌Brand Bengaluru: ವಿದ್ಯುತ್‌ ಜತೆಗೆ ಕಸದ ಶುಲ್ಕವೂ ಸೇರ್ಪಡೆಗೆ ಸಲಹೆ: ಖಚಿತಪಡಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್‌

ಬೆಂಗಳೂರನ್ನು ಉತ್ತಮಪಡಿಸಲು ಪೋರ್ಟಲ್‌ ಲಾಂಚ್ ಮಾಡ್ತಿದ್ದೇನೆ. ಪ್ರಮುಖ ನಗರಗಳಲ್ಲಿ ಪುಟ್ ಪಾತ್ ಸಮಸ್ಯೆ ಇದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

VISTARANEWS.COM


on

Edited by

DK Shivakumar Thushar girinath
Koo

ಬೆಂಗಳೂರು: ಅನೇಕ ನಗರಗಳಲ್ಲಿ ಕಸ ಸಂಗ್ರಹಣೆಗೆ ಶುಲ್ಕ ವಿಧಿಸಲಾಗುತ್ತಿದೆ. ಬೆಂಗಳೂರಿನಲ್ಲೂ ಶುಲ್ಕ ವಿಧಿಸಿ ವಿದ್ಯುತ್‌ ಬಿಲ್‌ ಜತೆಗೆ ಸೇರಿಸಬೇಕು ಎಂಬ ಸಲಹೆ ಬಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರು ಹಾಗೂ ತಜ್ಞರಿಂದ ಸಲಹೆ ಕೇಳುವ BrandBengaluru.karnataka.gov.in ಪೋರ್ಟಲ್‌ಗೆ ಚಾಲನೆ ನೀಡಿದ ನಂತರ ಮಾತನಾಡಿದರು.

1 ಕೋಟಿ 60 ಲಕ್ಷ ಜನಸಂಖ್ಯೆ ಬೆಂಗಳೂರಿನಲ್ಲಿ ಇದೆ. 1 ಕೋಟಿ 30 ಲಕ್ಷ ಅಧಿಕೃತ ಜನಸಂಖ್ಯೆ. ಆದರೆ ಪ್ರತಿದಿನ ಬಂದು ಹೋಗವರ ಸಂಖ್ಯೆ ಹೆಚ್ಚಿದೆ. ಬೆಂಗಳೂರಿನ ಪ್ರಕೃತಿ ಗಮನದಲ್ಲಿಟ್ಟುಕೊಂಡು ಇಲ್ಲಿ ಬಂದು ನೆಲೆಸಲು ಇಚ್ಚೆ ಪಡುತ್ತಾರೆ. ಬೆಂಗಳೂರಿಗೆ ಬಂದವರು ಯಾರು ವಾಪಸು ಹೋಗಲ್ಲ.

ನಾನು ಸಹ ಬೆಂಗಳೂರಿನ ನಿವಾಸಿ. ಜನ ಸಮಾನ್ಯರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇನೆ. ಬಿಲ್ಡರ್ಸ್, ಉದ್ಯಮಿಗಳು ಸಹ ಕರೆಸಿದ್ದೆ ಅವರ ಅಭಿಪ್ರಾಯ ಪಡೆದಿದ್ದೇನೆ. ಹಿರಿಯ ನಾಯಕರ ಅಭಿಪ್ರಾಯ ಸಹ ಸಂಗ್ರಹ ಮಾಡಿದ್ದೇನೆ. ಮಾಜಿ ಸಿಎಂಗಳನ್ನ ಭೇಟಿ ಮಾಡ್ತೀನಿ. ಬೊಮ್ಮಾಯಿ ಸಮಯ ಕೇಳಿದ್ದೆ. ಕಸಕ್ಕೆ ಕೆಲ ನಗರಗಳಲ್ಲಿ ತೆರಿಗೆ ಹಾಕುತ್ತಿದ್ದಾರೆ. ಇಲ್ಲೂ ಹಾಕಿ ಅಂತ ಸಲಹೆ ನೀಡಿದ್ದಾರೆ. ವಿದ್ಯುತ್ ಬಿಲ್ ಜತೆಗಿನ ಇದನ್ನ ಹಾಕಲು ಸಲಹೆ ಬಂದಿದೆ. ಆದರೆ ಈಗ ವಿದ್ಯುತ್ ಬಿಲ್ ಜತೆ ಹಾಕಲು ಸಾಧ್ಯವಿಲ್ಲ ಎಂದರು.

ಬೆಂಗಳೂರನ್ನು ಉತ್ತಮಪಡಿಸಲು ಪೋರ್ಟಲ್‌ ಲಾಂಚ್ ಮಾಡ್ತಿದ್ದೇನೆ. ಪ್ರಮುಖ ನಗರಗಳಲ್ಲಿ ಪುಟ್ ಪಾತ್ ಸಮಸ್ಯೆ ಇದೆ. ಮಲ್ಲೇಶ್ವರ, ಬಸವನಗುಡಿಯಲ್ಲಿ ಪುಟ್ ಪಾತ್ ಸಮಸ್ಯೆ ಇದೆ. ಬೆಂಗಳೂರು ಟ್ರಾಫಿಕ್‌ನಲ್ಲಿ ಕೆಲಸ ಮಾಡಿದ ನಿವೃತ್ತ ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡ್ತೀನಿ. ಟ್ರೈನ್ ಮತ್ತು ಬಸ್ಸು ಹೋಗುವ ರೀತಿ ಟನಲ್‌ ಮಾಡಬೇಕು ಅನ್ನೋ ಅಭಿಪ್ರಾಯ ಇದೆ. ಜಯದೇವ ಬಳಿ ಪೈಲಟ್ ಯೋಜನೆ ಅಂತ ಪರಿಗಣಿಸುತ್ತಿದ್ದೇವೆ. ಬೆಂಗಳೂರು ಪ್ಲಾನ್ಡ್‌ ಸಿಟಿ ಅಲ್ಲ. ಮುಂಬಯಿ, ದೆಹಲಿ ರೀತಿಯಲ್ಲಿ ಪ್ಲಾನ್ ಸಿಟಿ ಅಲ್ಲ. ಆದರೆ ಮುಂಬಯಿ ಮತ್ತು ದೆಹಲಿಯಲ್ಲಿ ಟ್ರಾಫಿಕ್ ಜಾಸ್ತಿ ಇದೆ. ನಮಗಿಂತಲೂ ಹೆಚ್ಚಿಜ ಟ್ರಾಫಿಕ್ ಇದೆ. ಇಲ್ಲಿ ನೀರು ನುಗ್ಗಿದರೂ ಸಮಸ್ಯೆ ಆಗುತ್ತೆ, ಅದನ್ನೇ ದೊಡ್ಡದಾಗಿ ಬರೆಯುತ್ತೀರಿ ಎಂದರು.

ಹಿಂದಿನ ಕಾಮಗಾರಿಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ ಎಂಭ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ, ಇನ್ನಷ್ಟು ದೊಡ್ಡಮಟ್ಟದಲ್ಲಿ ಮಾತನಾಡಲಿ. ಎಲ್ಲ ಬಿಚ್ಚಿಸ್ತೀನಿ. ಟೆಂಡರ್ ಡಬಲ್ ಆಗ್ತಿದೆ, ನಾವು ಅಧಿಕಾರಕ್ಕೆ ಬಂದ್ರೆ ಇದಕ್ಕೆ ಅವಕಾಶ ಕೊಡಲ್ಲ ಎಂದು ನಾವು ಚುನಾವಣೆ ಸಂದರ್ಭದಲ್ಲಿ ಹೇಳಿದ್ದೆವು. ನಾವು ಅದಕ್ಕೆ ಬದ್ಧರಾಗಿದ್ದೇವೆ. ಯಾವ ಗುತ್ತಿಗೆದಾರ ಏನು ಬೇಕಾದರೂ ಮಾಡಿಕೊಳ್ಳಲಿ. ಕಾನೂನಾತ್ಮಕವಾಗಿ ಪರಿಶೀಲನೆ ಮಾಡುವವರೆಗೂ ನಾವು ವರ್ಕ್ ಆರ್ಡರ್ ಕೊಡಲ್ಲ. ತನಿಖೆ ಬಳಿಕವೇ ಕಾಮಗಾರಿ ಬಿಲ್ ಬಿಡುಗಡೆ ಮಾಡ್ತೀವಿ ಎಂದರು.

ನಗರದಲ್ಲಿ ಇರೋ ಸ್ಲಮ್ ಶಿಫ್ಟ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಂತಹ ಸಲಹೆಗಳು ಬಂದಿವೆ. ಕೆಲವರು ಸರ್ಕಾರಿ ಜಾಗದಲ್ಲಿ ಇದ್ದಾರೆ. ಕೆಲ ಸ್ಲಮ್ ನಗರದ ಒಳಗೆ ಇವೆ. ಅದನ್ನ ಶಿಫ್ಟ್ ಮಾಡಲು ಸಮಯ ಬೇಕಾಗುತ್ತದೆ ಎಂದರು.

ಇದನ್ನೂ ಓದಿ: Rice Politics: ನಾಳೆ ಅಮಿತ್‌ ಶಾ ಭೇಟಿಗೆ ಸಿದ್ದರಾಮಯ್ಯ ದೆಹಲಿ ಪ್ರವಾಸ; ನಾನೂ ಹೋಗುವೆ ಎಂದ ಡಿಕೆಶಿ

Continue Reading
Advertisement
MLA BY Vijayendra
ಕರ್ನಾಟಕ3 hours ago

Cauvery Water Dispute: ಜನರ ಸಂಕಷ್ಟದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟ: ಬಿ.ವೈ.ವಿಜಯೇಂದ್ರ

jai shankar
ದೇಶ3 hours ago

UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!

Raja Three yakshagana
ಕಲೆ/ಸಾಹಿತ್ಯ3 hours ago

Yakshagana Show: ಅ.7ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ

What did they wrong, Why they are murdered asked Parents Of Manipur Teens
ದೇಶ4 hours ago

Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ

Vaidyanath Co-operative sugar factory
ದೇಶ4 hours ago

GST Evasion: ಜಿಎಸ್‌ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!

Dale stain
ಕ್ರಿಕೆಟ್5 hours ago

Rohit Sharma : ರೋಹಿತ್ ಶರ್ಮಾ ಪಾಲಿನ ಭಯಾನಕ ಬೌಲರ್ ಯಾರು ಗೊತ್ತೇ? ಅವರೇ ಹೇಳಿದ್ದಾರೆ ಕೇಳಿ

MLA Dr N T Srinivas drives the foot and mouth disease vaccination campaign at Kudligi
ವಿಜಯನಗರ5 hours ago

Vijayanagara News: ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ

Death News Prajna Basavanyappa passed away
ಶಿವಮೊಗ್ಗ5 hours ago

Death News: ಹಿರಿಯ ಸಾಹಿತಿ ಪ್ರಾಜ್ಞ ಬಸವಣ್ಯಪ್ಪ ನಿಧನ

ಕ್ರೈಂ5 hours ago

Vijayanagara News: ಗೋಡೆ ಕಲ್ಲು ಬಿದ್ದು ಮಗು ಸಾವು; ಎಮ್ಮೆ ಗುದ್ದಿದ್ದರಿಂದ ನಡೆಯಿತು ಅನಾಹುತ!

Top 10 news kannada
ಕ್ರೀಡೆ5 hours ago

VISTARA TOP 10 NEWS : ಕಾವೇರಿ ಹೋರಾಟಕ್ಕೆ ಸ್ವಯಂಪ್ರೇರಿತ ಬೆಂಬಲ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ ಮತ್ತಿತರ ದಿನದ ಪ್ರಮುಖ ಸುದ್ದಿಗಳು

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ22 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ1 day ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ1 day ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ2 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌