Site icon Vistara News

Lakshmi Hebbalkar : ಹೆಬ್ಬಾಳ್ಕರ್‌ ಪುತ್ರನ ತಲೆಗೆ ಕೈ ಇಟ್ಟು ಆಶೀರ್ವದಿಸಿದ ಸಿದ್ದರಾಮಯ್ಯ

Lakshmi-hebbalkar-Mrinal-Hebbalkar CM Siddaramaiah DK Shivakumar

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ (Belagavi Constituency) ಸಂಭಾವ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮೃಣಾಲ್‌ ಹೆಬ್ಬಾಳಕರ್ (Mrinal Hebbalkar) ಅವರನ್ನು ಅವರ ತಾಯಿ, ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Lakshmi Hebbalkar) ಅವರು ಬೆಂಗಳೂರಿಗೆ ಕರೆದುಕೊಂಡು ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರನ್ನು ಭೇಟಿ ಮಾಡಿಸಿದರು. ಇಬ್ಬರೂ ಹಿರಿಯ ನಾಯಕರು ಮೃಣಾಲ್‌ ಹೆಬ್ಬಾಳ್ಕರ್‌ ಅವರ ಉಜ್ವಲ ರಾಜಕೀಯ ಭವಿಷ್ಯಕ್ಕಾಗಿ ಶುಭ ಹಾರೈಸಿದರು.

Lakshmi hebbalkar Mrinal Hebbalkar DCM DK Shivakumar

ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಮೃಣಾಲ ಹೆಬ್ಬಾಳಕರ್ ಬೆಳಗಾವಿ ಕ್ಷೇತ್ರದ ಸಂಭವನೀಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿದ ಕಾಂಗ್ರೆಸ್‌ನ ಎರಡನೇ ಪಟ್ಟಿಯಲ್ಲಿ ಅವರ ಹೆಸರು ಪ್ರಕಟವಾಗಲಿದೆ ಎನ್ನಲಾಗಿದೆ. ಪಕ್ಷದ ಮುಖ್ಯಸ್ಥರು ಈಗಾಗಲೇ ಅವರಿಗೆ ಟಿಕೆಟ್‌ ಸಿಕ್ಕಿರುವುದನ್ನು ಖಚಿತಪಡಿಸಿದ್ದಾರೆ.

ತಮಗೆ ಟಿಕೆಟ್ ನೀಡಿರುವುದಕ್ಕೆ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದ ಮೃಣಾಲ್‌ ಹೆಬ್ಬಾಳಕರ್, ಇಬ್ಬರ ಆಶಿರ್ವಾದ ಪಡೆದರು.

ಸಿಎಂ ಸಿದ್ದರಾಮಯ್ಯ ಅವರು ಮೃಣಾಲ್‌ ಹೆಬ್ಬಾಳ್ಕರ್‌ ಅವರ ಬೆನ್ನು ತಟ್ಟಿ ಕೈ ಹಿಡಿದು ಮಾತನಾಡಿದ್ದಲ್ಲದೆ, ತಲೆಗೆ ಕೈ ಇಟ್ಟು ಆಶೀರ್ವಾದ ಮಾಡಿದರು. ಬೆಳಗಾವಿ ಕ್ಷೇತ್ರವನ್ನು ಗೆದ್ದುಕೊಂಡು ಬರುವಂತಾಗಲಿ ಎಂದು ಹಾರೈಸಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಕರ್ತವ್ಯ ನಿಷ್ಠೆ ಮತ್ತು ಛಲವನ್ನು ಮೈಗೂಡಿಸಿಕೊಳ್ಳುವಂತೆ ಸಲಹೆ ನೀಡಿದೆ.

Lakshmi hebbalkar Mrinal Hebbalkar DCM DK Shivakumar

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕೂಡಾ ಮೃಣಾಲ್‌ ಹೆಬ್ಬಾಳ್ಕರ್‌ ಅವರು ಕೂಡಾ ರಾಜಕೀಯದ ಕೆಲವು ಟಿಪ್ಸ್‌ಗಳನ್ನು ಕೊಟ್ಟು ಗೆದ್ದು ಬರುವಂತೆ ಆಶೀರ್ವಾದ ಮಾಡಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : Mekedatu Project : ಕಾಂಗ್ರೆಸಿಗರೇ ಡೆಲ್ಲಿಗೆ ಹೋಗಿದ್ರಲ್ಲ, ಈಗ ಚೆನ್ನೈಗೆ ಹೋಗಿ ನೋಡೋಣ ; ಅಶೋಕ್‌ ಸಲಹೆ

ಎರಡನೇ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ>

ಕಾಂಗ್ರೆಸ್‌ನ ಎರಡನೇ ಪಟ್ಟಿಯಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮ ಗೊಳಿಸಲಾಗಿದೆ. ಪಟ್ಟಿ ಇನ್ನಷ್ಟೇ ಬಿಡುಗಡೆ ಆಗಬೇಕಾಗಿದೆ.

ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಮೃಣಾಲ್‌ ಹೆಬ್ಬಾಳ್ಕರ್‌ ಅವರನ್ನು ಬೆಳಗಾವಿ ಕ್ಷೇತ್ರದಿಂದ ಕಣಕ್ಕಿಳಿಸಿದರೆ, ಸತೀಶ್‌ ಜಾರಕಿಹೊಳಿ ಅವರು ತಮ್ಮ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಚಿಕ್ಕೋಡಿ ಕ್ಷೇತ್ರದಿಂದ ಕಣಕ್ಕಿಳಿಸುತ್ತಿದ್ದಾರೆ.

ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ
ಬೆಂಗಳೂರು ಕೇಂದ್ರ- ಮನ್ಸೂರ್ ಅಲಿಖಾನ್
ಬೆಂಗಳೂರು ಉತ್ತರ – ಪ್ರೊ.ರಾಜೀವ್ ಗೌಡ
ಮೈಸೂರು – ಕೊಡಗು – ಎಂ.ಲಕ್ಷ್ಮಣ್
ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ
ದಕ್ಷಿಣ ಕನ್ನಡ – ಪದ್ಮರಾಜ್
ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
ಬಾಗಲಕೋಟೆ – ಸಂಯುಕ್ತಾ ಶಿವಾನಂದ ಪಾಟೀಲ್
ರಾಯಚೂರು – ಕುಮಾರ್ ನಾಯಕ್
ಚಿತ್ರದುರ್ಗ – ಚಂದ್ರಪ್ಪ
ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್
ಚಿಕ್ಕೋಡಿ- ಪ್ರಿಯಾಂಕಾ ಜಾರಕಿಹೊಳಿ
ಹುಬ್ಬಳ್ಳಿ-ಧಾರವಾಡ – ವಿನೋದ್ ಅಸೂಟಿ
ಬೀದರ್ – ರಾಜಶೇಖರ್ ಪಾಟೀಲ್
ಕೊಪ್ಪಳ – ರಾಜಶೇಖರ್ ಹಿಟ್ನಾಳ್
ದಾವಣಗೆರೆ – ಡಾ.ಪ್ರಭಾ ಮಲ್ಲಿಕಾರ್ಜುನ್
ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ

Exit mobile version