MES Bhagwa dhwaj | ನಿಪ್ಪಾಣಿ ನಗರಸಭೆ ಮೇಲಿನ ಎಂಇಎಸ್‌ ಭಗವಾ ಧ್ವಜ ತೆರವಿಗೆ ಒತ್ತಾಯ; ಬೆಳಗಾವಿ ಡಿಸಿಗೆ ಮನವಿ ಪತ್ರ - Vistara News

ಬೆಳಗಾವಿ

MES Bhagwa dhwaj | ನಿಪ್ಪಾಣಿ ನಗರಸಭೆ ಮೇಲಿನ ಎಂಇಎಸ್‌ ಭಗವಾ ಧ್ವಜ ತೆರವಿಗೆ ಒತ್ತಾಯ; ಬೆಳಗಾವಿ ಡಿಸಿಗೆ ಮನವಿ ಪತ್ರ

MES Bhagwa dhwaj | ನಿಪ್ಪಾಣಿ ನಗರಸಭೆ ಕಟ್ಟಡ ಮೇಲಿನ ಭಗವಾ ಧ್ವಜ ಕೂಡಲೇ ತೆರವುಗೊಳಿಸಬೇಕು. ಇಲ್ಲವಾದರೆ ಬೆಳಗಾವಿ ಅಧಿವೇಶನ ವೇಳೆ ನಾವೇ ಧ್ವಜ ಕಿತ್ತು ಕನ್ನಡ ಬಾವುಟ ಹಾರಿಸುತ್ತೇವೆ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ.

VISTARANEWS.COM


on

MES Bhagwa dhwaj
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಮಧ್ಯೆ ನಿಪ್ಪಾಣಿ ನಗರಸಭೆ ಕಟ್ಟಡ ಮೇಲಿನ ಎಂಇಎಸ್‌ ಭಗವಾ ಧ್ವಜ (MES Bhagwa dhwaj) ತೆರವಿಗೆ ಆಗ್ರಹ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ನಗರಸಭೆ ಮೇಲೆ ಕಾನೂನು ಬಾಹಿರವಾಗಿ ಹಾರಾಡುತ್ತಿರುವ ಎಂಇಎಸ್ ಭಗವಾ ಧ್ವಜ ತೆರವುಗೊಳಿಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ, ಎಸ್‌ಪಿಗೆ ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ, ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ್‌ ಮನವಿ ಸಲ್ಲಿಸಿದ್ದಾರೆ.

ನಿಪ್ಪಾಣಿ ನಗರಸಭೆ ಕಟ್ಟಡದ ಮೇಲೆ 31 ವರ್ಷಗಳಿಂದ ನಾಡದ್ರೋಹಿ ಎಂಇಎಸ್ ಧ್ವಜ ಹಾರಾಡುತ್ತಿದೆ. ಕಳೆದ ವರ್ಷ ಡಿಸೆಂಬರ್ 22ರಂದು ಸಿಎಂ, ಪೌರಾಡಳಿತ ಸಚಿವರಿಗೆ ಪತ್ರ ಬರೆದಿದ್ದೆ. ದೂರು ನೀಡಿ ಒಂದು ವರ್ಷವಾದರೂ ಯಾವುದೇ ಕ್ರಮ ಕೈಗೊಳಂಡಿಲ್ಲ. ಈ ಸರ್ಕಾರ ಕನ್ನಡಪರ ಇದೆಯೋ ಇಲ್ಲವೋ ಎಂಬ ಅನುಮಾನ ಕಾಡುತ್ತಿದೆ. ಕಚೇರಿಗಳ ಮೇಲೆ ರಾಷ್ಟ್ರೀಯ ಬಾವುಟ ಹಾಗೂ ಸರ್ಕಾರದಿಂದ ಅನುಮೋದಿತವಾಗಿರುವ ಬಾವುಟ ಮಾತ್ರ ಹಾರಿಸಬೇಕು. ಆದರೆ ಈ ನಿಯಮಗಳು ನಿಪ್ಪಾಣಿ ನಗರಸಭೆಗೆ ಅನ್ವಯಿಸುವುದಿಲ್ಲವೇ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ | Janardhan Reddy | ಕಲ್ಯಾಣ ರಾಜ್ಯ ಪ್ರಗತಿ‌ ಪಕ್ಷ ಮೂಲಕ ಜನಾರ್ದನ ರೆಡ್ಡಿ ರಾಜಕೀಯ ಮರು ಪ್ರವೇಶ?

1964ರ ಕರ್ನಾಟಕ ಪೌರಸಭೆಗಳ ಅಧಿನಿಯಮ ಸೆಕ್ಷನ್ 372ಎ ನಲ್ಲಿ ಈ ಬಗ್ಗೆ ವಿವರಿಸಲಾಗಿದೆ. ಈ ನಿಯಮ ಉಲ್ಲಂಘಿಸಿದ ವ್ಯಕ್ತಿಗೆ 3 ತಿಂಗಳ ಜೈಲು ಶಿಕ್ಷೆ ಇದೆ. ಪ್ರತಿ ದಿನಕ್ಕೆ 500 ರೂ. ದಂಡ ವಿಧಿಸುವ ಬಗ್ಗೆ ಉಲ್ಲೇಖವಿದೆ. ಈ ಬಗ್ಗೆ ನಿಪ್ಪಾಣಿ ಶಾಸಕಿ, ಸಚಿವೆ ಶಶಿಕಲಾ ಜೊಲ್ಲೆ ಸಹ ಮೌನವಹಿಸಿದ್ದಾರೆ. ನಿಪ್ಪಾಣಿ ನಗರಸಭೆ ಕಟ್ಟಡ ಮೇಲಿನ ಭಗವಾ ಧ್ವಜ ಕೂಡಲೇ ತೆರವುಗೊಳಿಸಿಸಬೇಕು. ಇಲ್ಲವಾದರೆ ಬೆಳಗಾವಿ ಅಧಿವೇಶನ ವೇಳೆ ನಾವೇ ಎಂಇಎಸ್ ಭಗವಾ ಧ್ವಜ ಕಿತ್ತು ಕನ್ನಡ ಬಾವುಟ ಹಾರಿಸುತ್ತೇವೆ. ಇದರಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಜಿಲ್ಲಾಡಳಿತ, ರಾಜ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡಿದರು.

ಕಳೆದ ವರ್ಷ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಎಂಟಿಬಿ ನಾಗರಾಜ್‌ಗೆ ಭೀಮಪ್ಪ ಗಡಾದ್ ಮ‌ನವಿ ಸಲ್ಲಿಸಿದ್ದರು. ಮನವಿ ಸಲ್ಲಿಸಿ ಒಂದು ವರ್ಷವಾದರೂ ಕ್ರಮ ಕೈಗೊಳ್ಳದಿದ್ದಕ್ಕೆ ಆಕ್ರೋಶ ಹೊರಹಾಕಿದ್ದಾರೆ.

ಭಗವಾ ಧ್ವಜ ಹಾರಿಸಲು ನಗರಸಭೆಯೇ ಹೊರಡಿಸಿತ್ತು ಠರಾವು!
ನಿಪ್ಪಾಣಿ ನಗರಸಭೆ ಮೇಲೆ ಭಗವಾ ಧ್ವಜ ಹಾರಿಸಲು 1990 ರ ಮೇ 29ರಂದು ನಗರಸಭೆಯೇ ಠರಾವು ಪಾಸ್ ಮಾಡಿತ್ತು. ಹೀಗಾಗಿ ಕಳೆದ 31 ವರ್ಷಗಳಿಂದ ನಿಪ್ಪಾಣಿ ನಗರಸಭೆ ಮೇಲೆ ಭಗವಾ ಧ್ಚಜ ಹಾರಾಡುತ್ತಿದೆ ಎಂದು ಹೇಳಲಾಗುತ್ತಿದೆ. ನಿಪ್ಪಾಣಿ ನಗರಸಭೆ ಕಟ್ಟಡ ಮೇಲೆ ಭಗವಾ ಧ್ವಜ ಹಾರಿಸಬೇಕು. ಇದು ನಿಪ್ಪಾಣಿಯ ಬಹುತೇಕ ಮರಾಠಿ ಭಾಷಿಕರ ಆಸೆಯಾಗಿದೆ. ನಿಪ್ಪಾಣಿ ಮರಾಠಿ ಭಾಷಿಕರು ಮಹಾರಾಷ್ಟ್ರ ಸೇರಲು ಕಷ್ಟಪಡುತ್ತಿದ್ದಾರೆ. ಗಡಿವಿವಾದ ಬಗೆಹರಿಸುವ ನಿಟ್ಟಿನಲ್ಲಿ ಮಾತುಕತೆ ನಡೆಯುತ್ತಿದೆ. ನಿಪ್ಪಾಣಿ ನಗರಸಭೆ ಕಟ್ಟಡ ಮೇಲೆ ಭಗವಾ ಧ್ವಜ ಹಾರಿಸಿದ ಬಳಿಕವೇ ನಾವು ಅಧಿಕಾರ ಸ್ವೀಕರಿಸುತ್ತೇವೆ. ಎಲ್ಲರ ಒಪ್ಪಿಗೆ ಮೇರೆಗೆ ನಿಪ್ಪಾಣಿ ನಗರಸಭೆ ಕಟ್ಟಡ ಮೇಲೆ ಭಗವಾ ಧ್ವಜ ಹಾರಿಸಲಾಗುವುದು. ನಗರಸಭೆ ಆಯುಕ್ತರು ಭಗವಾ ಧ್ವಜದ ರಕ್ಷಣೆ ಮಾಡಬೇಕೆಂದು ನಗರ ಸಭೆಯಲ್ಲಿ ಠರಾವು ಹೊರಡಿಸಲಾಗಿತ್ತು.

ಇದನ್ನೂ ಓದಿ | Criminal politics | ರಾಮುಲು ಗೂಂಡಾಗಿರಿ ತಪ್ಪೊಪ್ಪಿಗೆ ಹೇಳಿಕೆ ಮುಂದಿಟ್ಟುಕೊಂಡು ಬಿಜೆಪಿಯನ್ನು ಕೆಣಕಿದ ಕಾಂಗ್ರೆಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Rain News : ವಾರಾಂತ್ಯದಲ್ಲಿ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಜೂನ್‌ 1ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಮತ್ತು ಚಾಮರಾಜನಗರದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ‌ಂತೆ ಯಾವುದೇ ಮಳೆ ಮುನ್ಸೂಚನೆ ಇಲ್ಲ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಇನ್ನೂ ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ.

ಬೆಂಗಳೂರಿಗೂ ಮಳೆ ಮುನ್ಸೂಚನೆ

ಬೆಂಗಳೂರು ವ್ಯಾಪ್ತಿಯ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಹಣ್ಣು, ತರಕಾರಿಗಳ ಆರೋಗ್ಯಕರ ಸ್ಮೂದಿ ಎಂಬ ಟ್ರೆಂಡ್‌! ಒಳ್ಳೆಯದೇ, ಕೆಟ್ಟದ್ದೇ?

ಸದ್ಯದ ಯುವಜನರ ಆಹಾರದ ಟ್ರೆಂಡ್‌ ಎಂದರೆ ಅದು ಸ್ಮೂದಿ. ಬಹಳ ಸುಲಭವಾಗಿ ಮಾಡಬಲ್ಲ, ಹೊಟ್ಟೆ ತುಂಬಿಸಿಕೊಳ್ಳಬಹುದಾದ ಹಾಗೂ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಲಾದ ಟ್ರೆಂಡ್‌ ಆದ ಆಹಾರ ಕ್ರಮ. ಒಂದಿಷ್ಟು ಹಣ್ಣುಗಳನ್ನು ಸೇರಿಸಿ ಮಾಡುವ ಸ್ಮೂದಿ, ತರಕಾರಿಗಳನ್ನು ಸೇರಿಸಿ ಮಾಡುವ ಸ್ಮೂದಿ, ಬೀಜಗಳು ಒಣ ಹಣ್ಣುಗಳು, ವೇಗನ್‌ ಹಾಲು ಇತ್ಯಾದಿ ಇತ್ಯಾದಿ ಹಲವು ಬಗೆಯನ್ನು ಸೇರಿಸಿ ಮಾಡಬಹುದಾದ ಸ್ಮೂದಿಗಳು ಬಹುತೇಕರ ಜೀವನದಲ್ಲಿ ಇಂದು ಪ್ರತಿನಿತ್ಯದ ಆಹಾರ. ಹಲವು ಪೋಷಕಾಂಶಗಳನ್ನು ಒಳಗೊಂಡ, ಒಮ್ಮೆಲೇ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಸುಲಭವಾಗಿ ದೇಹಕ್ಕೆ ಸಿಗುವಂತೆ ಮಾಡಬಲ್ಲ, ಸುಲಭ ಸರಳವಾದ, ಫಟಾಫಟ್‌ ಮಾಡಬಹುದಾದ ಆಯ್ಕೆ ಇದು ಎಂಬುದರಲ್ಲಿ ಯಾವ ಸಂಶಯವೂ ಇಲ್ಲ. ಹಾಗಾದರೆ, ಈ ಸ್ಮೂದಿಗಳನ್ನು ಕುಡಿಯುವುದರಿಂದ, ದೇಹಕ್ಕೆ ಹಣ್ಣು, ತರಕಾರಿ, ಬೀಜಗಳನ್ನು ತಿಂದಷ್ಟೇ ಲಾಭಗಳು ದೊರೆಯುತ್ತವೆಯೇ ಎಂಬ ಬಗ್ಗೆ ನಿಮಗೆ ಪ್ರಶ್ನೆ ಉದ್ಭವಿಸಿದಲ್ಲಿ ಅದಕ್ಕೆ (Fruit and Veggie Smoothies) ಉತ್ತರ ಇಲ್ಲಿದೆ.

  • ನೀವು ಸ್ಮೂದಿಗಾಗಿ ಬಳಸುವ ಹಣ್ಣು ಹಂಪಲಾಗಿರಬಹುದು, ತರಕಾರಿಗಳಿರಬಹುದು, ಬೀಜ ಒಣಹಣ್ಣುಗಳಿರಬಹುದು, ಅವುಗಳನ್ನು ಹಾಗೆಯೇ ಜಗಿದು ತಿಂದರೆ ಆ ಜಗಿಯುವ ಪ್ರಕ್ರಿಯೆಯಲ್ಲಿ ಬಾಯಲ್ಲಿ ಲಾಲಾರಸವೂ ಅಂದರೆ ಜೊಲ್ಲೂ ಕೂಡಾ ಅದಕ್ಕೆ ಸೇರುತ್ತದೆ. ಈ ರಸ ಜೀರ್ಣಕ್ರಿಯೆಗೆ ಸಹಾಯ ಮಾಡುವ ರಸ. ಜೊತೆಗೆ ಇದು ಬಾಯಿಯನ್ನು ತೇವವಾಗಿ ಇಟ್ಟುಕೊಳ್ಳುವ ರಸವಾದ್ದರಿಂದ ಇದು ಬಾಯಿಯ ಮೂಲಕ ದೇಹಕ್ಕೆ ಇನ್‌ಫೆಕ್ಷನ್‌ ಹೋಗದಂತೆಯೂ ರಕ್ಷಿಸುತ್ತದೆ. ಸ್ಮೂದಿ ಮಾಡಿ ಕುಡಿಯುವುದರಿಂದ ದೇಹದ ಈ ನೈಸರ್ಗಿಕ ಕ್ರಿಯೆಯನ್ನೇ ನೀವು ದೂರ ಮಾಡಿ ಸುಲಭವಾಗಿ ಆಹಾರವನ್ನು ಹೊಟ್ಟೆಗೆ ಕಳುಹಿಸುತ್ತಿದ್ದೀರಿ ಎಂದಾಯಿತು. ಬಾಯಿಗೆ ಕೆಲಸವೇ ಇಲ್ಲ. ಜೀರ್ಣಕ್ರಿಗೆ ಸಹಾಯ ಆಡುವ ಅಂಶಗಳೂ ಅಲ್ಲಿ ಸೇರಲಿಲ್ಲ!
  • ಸ್ಮೂದಿಯನ್ನು ಕುಡಿಯುವುದರಿಂದ ಬಾಯಿಗೆ ಕೆಲಸವಿಲ್ಲದೆ ಅದು ನೇರವಾಗಿ ಹೊಟ್ಟೆಗೆ ಇಳಿಯುತ್ತದೆ. ಅಲ್ಲಿ ನಿಮ್ಮ ಜೊಲ್ಲುರಸ ಅಂದರೆ ಲಾಲಾರಸ ಈ ಆಹಾರದ ಜೊತೆಗೆ ಸರಿಯಾಗಿ ಸೇರಲಿಲ್ಲ ಅಂತಾಯಿತು. ಇದರಿಂದಾಗಿ ನಿಮ್ಮ ಜೀರ್ಣಕ್ರಿಯೆಯ ಸಾಮರ್ಥ್ಯ ನಿಧಾನವಾಗಿ ಕುಂಠಿತವಾಗುತ್ತಾ ಬರುತ್ತದೆ. ಕೇವಲ ಜೀರ್ಣಕ್ರಿಯೆಯಷ್ಟೇ ಅಲ್ಲ, ರೋಗನಿರೋಧಕ ಶಕ್ತಿಯೂ ಕುಂಠಿತವಾಗುತ್ತಾ ಬರುತ್ತದೆ. ಇಂತಹ ಬಗೆಯ ಆಹಾರಕ್ಕೇ ದೇಹ ಹೊಂದಿಕೊಂಡು, ಜೀರ್ಣ ಮಾಡುವ ಶಕ್ತಿ ಇಳಿಕೆಯಾಗುತ್ತದೆ.
  • ಸ್ಮೂದಿಯು ದ್ರವರೂಪದಲ್ಲಿರುವುದರಿಂದ ಸಹಜವಾಗಿಯೇ, ಸ್ಮೂದಿಯಲ್ಲಿರುವ ನೈಸರ್ಗಿಕ ಸಕ್ಕರೆ ಬಹುಬೇಗನೆ ರಕ್ತಕ್ಕೆ ಸೇರಿ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ ಇದ್ದಕ್ಕಿದ್ದಂತೆ ಏರಿಕೆಯಾಗುತ್ತದೆ. ಇದರಿಂದಾಗಿ ಸುಸ್ತಿನ ಅನುಭವ, ತಲೆಸುತ್ತಿನಂತ ಸಮಸ್ಯೆಗಳೂ ಮುಂದೆ ತಲೆದೋರಬಹುದು. ಹಣ್ಣುಗಳು, ಹಂಪಲುಗಳು ಹಾಗೂ ತರಕಾರಿಗಳಲ್ಲಿರುವ ನಾರಿನಂಶ ಸರಿಯಾಗಿ ಹೊಟ್ಟೆ ಸೇರದೆ, ವ್ಯರ್ಥವಾಗಬಹುದು. ಪೋಷಕಾಂಶವೂ ನಷ್ಟವಾಗಬಹುದು. ಇವೆಲ್ಲವನ್ನೂ ಜಗಿದು ತಿನ್ನುವಾಗ ಸಿಗಬಹುದಾದ ಆರೋಗ್ಯದ ಲಾಭಗಳೆಲ್ಲವೂ ಸ್ಮೂದಿಯ ಮೂಲಕ ಸಿಗದೇ ಹೋಗುವ ಸಾಧ್ಯತೆಗಳೇ ಹೆಚ್ಚು.
  • ಕೆಲವು ಮಂದಿಗೆ ದೇಹದಲ್ಲಿರುವ ಸಕ್ಕರೆಯ ಅಂಶದ ಏರಿಕೆಯಿಂದಾಗಿ ತಕ್ಷಣ ತಲೆಸುತ್ತು, ತಲೆನೋವು ಮತ್ತಿತರ ಸಮಸ್ಯೆಯೂ ಕಾಡಬಹುದು. ಆದರೆ, ಸ್ಮೂದಿಗೆ ಬಳಸಿದ ಹಣ್ಣು ಹಂಪಲು ಅಥವಾ ತರಕಾರಿ, ಒಣ ಹಣ್ಣು ಬೀಜಗಳನ್ನು ಹಾಗೆಯೇ ತಿನ್ನುವುದರಿಂದ ಈ ಪರಿಣಾಮಗಳು ಕಾಣಿಸಿಕೊಳ್ಳಲಾರದು. ಹಾಗಾಗಿ, ಸ್ಮೂದಿಗಿಂತ ಹಾಗೆಯೇ ತಿನ್ನುವುದೇ ಆರೋಗ್ಯಕ್ಕೆ ಹೆಚ್ಚು ಸೂಕ್ತ ಎಂಬುದನ್ನು ನೆನಪಿಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದಲ್ಲಿ ತಗ್ಗಿದ ಮಳೆ ಪ್ರಮಾಣ; ಸ್ವಲ್ಪ ಕಡೆ ವರುಣ ಸಾಧಾರಣ, ಗಾಳಿ ರಭಸ ಅಸಾಧಾರಣ

Rain News : ರಾಜ್ಯಾದ್ಯಂತ ಬ್ರೇಕ್‌ ಕೊಟ್ಟಿದ್ದ ವರುಣ ಜೂನ್‌ ಮೊದಲ ವಾರದಿಂದ ಮತ್ತೆ ಅಬ್ಬರಿಸಲಿದ್ದಾನೆ. ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ರಭಸವಾಗಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ (Rain news) ಪ್ರಮಾಣವು ತಗ್ಗಿದೆ. ಕಳೆದ ಎರಡ್ಮೂರು ದಿನದಿಂದ ಮಳೆಯು ಕಣ್ಮರೆಯಾಗಿದೆ. ನಿನ್ನೆ ಗುರುವಾರ ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ (Karnataka Weather Forecast) ಮಳೆಯಾಗಿದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ (Dry Weather) ಇತ್ತು.

ಶಿವಮೊಗ್ಗದ ಆಗುಂಬೆಯಲ್ಲಿ 5 ಸೆಂ.ಮೀ, ಕೊಡಗಿನ ಗೋಣಿಕೊಪ್ಪಲು 3 ಸೆಂ.ಮೀ ಮಳೆಯಾಗಿದೆ. ಹಾಗೇ ದಕ್ಷಿಣ ಕನ್ನಡದ ಧರ್ಮಸ್ಥಳ, ಉಡುಪಿಯ ಕೋಟ, ಉತ್ತರ ಕನ್ನಡದ ಮಂಕಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಇನ್ನೂ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 41.3 ಡಿ.ಸೆ ದಾಖಲಾಗಿತ್ತು.

ಇದನ್ನೂ ಓದಿ: World No Tobacco Day: ತಂಬಾಕಿನ ಚಟ ಎಷ್ಟೊಂದು ರೋಗಗಗಳಿಗೆ ಕಾರಣ ಆಗುತ್ತದೆ ನೋಡಿ!

ನಾಳೆಯಿಂದ ಮತ್ತೆ ಶುರುವಾಗುತ್ತಾ ಅಬ್ಬರ?

ದಕ್ಷಿಣ ಒಳನಾಡು ಹಾಗೂ ಮಲೆನಾಡಿನ ಭಾಗಗಳಲ್ಲಿ ಮಳೆ ಅಬ್ಬರ ಇರಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ 30-40 ಕಿ.ಮೀ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ.

ಇನ್ನೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Kukke Subramanya: ಹೊಳೆ ಉಕ್ಕಿ ಹರಿದು ಕೊಚ್ಚಿ ಹೋದ ಪಿಕ್ಅಪ್ ವಾಹನ; ಚಾಲಕನ ರಕ್ಷಣೆ

ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಕಲಬುಲಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿಗುಡುಗು ಸಹಿತ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ 40-50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಮೇಲ್ಮೈ ಮಾರುತಗಳು (30-40 kmph) ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಮೇಲೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಮುಂದಿನ 24 ಗಂಟೆಯಲ್ಲಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿಯಲಿದೆ. ಕೆಲವೊಮ್ಮೆ ಹಗುರ ಮಳೆಯಾಗಲಿದ್ದು, ಮೇಲ್ಮೈ ಗಾಳಿಯು ಪ್ರಬಲವಾಗಿರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದಲ್ಲಿಂದು ಭಾರಿ ಮಳೆಗೆ ಗುಡುಗು, ಮಿಂಚು ಸಾಥ್‌

Rain News : ರಾಜ್ಯಾದ್ಯಂತ ರಭಸವಾಗಿ ಗಾಳಿ ಬೀಸಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮಂಡ್ಯ, ಮೈಸೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಬಹುಶಃ ಒಣಹವೆ ಇರಲಿದೆ.

ಉತ್ತರಒಳನಾಡಿನ ಬೆಳಗಾವಿ, ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ನಿರೀಕ್ಷೆಯಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: BMTC Driver : ಬಿಎಂಟಿಸಿ ಎಲೆಕ್ಟ್ರಿಕಲ್‌ ಬಸ್‌ಗೆ ಪರಭಾಷಿಕರ ನೇಮಕ; ಡಿಸಿ ಕಚೇರಿಗೆ ನುಗ್ಗಿ ಕನ್ನಡಿಗರ ಆಕ್ರೋಶ

ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

ಮಳೆಗಾಲ ಮತ್ತು ಕಾಡು! ಪ್ರಕೃತಿ ಪ್ರಿಯರ ಅತ್ಯಂತ ಇಷ್ಟದ ಕಾಂಬಿನೇಷನ್‌ ಇದು. ಮಳೆಗಾಲದಲ್ಲೊಮ್ಮೆ ಕಾಡಿಗೆ ಕರೆದರೆ ಯಾವ ಪ್ರಕೃತಿಪ್ರೇಮಿ ಬೇಡ ಅನ್ನಲಾರ ಹೇಳಿ? ವನ್ಯಜೀವಿ ಪ್ರಿಯರ, ಪ್ರಕೃತಿಪ್ರಿಯರ ಈ ಆಸೆಗೆ ತಣ್ಣೀರೆರಚುವಂತೆ ಮಳೆಗಾಲ ಬಂದ ತಕ್ಷಣ ರಾಷ್ಟ್ರೀಯ ಉದ್ಯಾನ/ವನ್ಯಜೀವಿಧಾಮಗಳೆಲ್ಲ ಬಾಗಿಲು ಮುಚ್ಚುತ್ತವೆ. ಕಾಡಿನ ಮದ್ಯದಲ್ಲಿ ಸಫಾರಿ ಹೋಗಲು, ವನ್ಯಜೀವಿಗಳ ಬೆನ್ನು ಹತ್ತಲು ಯಾರಿಗೂ ಆಸ್ಪದವಿಲ್ಲ. ಆದರೂ, ಪ್ರಕೃತಿ ಪ್ರಿಯರೆಲ್ಲ ಇಂತಹ ರಾಷ್ಟ್ರೀಯ ಉದ್ಯಾನ/ ವನ್ಯಜೀವಿಧಾಮಗಳು ಮುಚ್ಚಿಕೊಳ್ಳುವ ಕೆಲವೇ ದಿನಗಳ ಮುಂಚಿತವಾಗಿ ಅಲ್ಲಿಗೆ ಭೇಟಿ ಕೊಡಬೇಕು. ಮಳೆಗಾಲ ಈಗಷ್ಟೇ ಶುರುವಾದ ವನ್ಯಜೀವಿಧಾಮದಲ್ಲಿ ತಿರುಗಾಡಿ ಬರುವುದೇ ಹಬ್ಬ. ಒಂದೆರಡು ಮಳೆ ಸುರಿದು ಕಾಡೆಲ್ಲ ಕಳೆಕಳೆಯಾಗಿ ಹಸಿರಾಗಿ ಚಿಗಿತುಕೊಂಡು ಅದ್ಭುತ ದೃಶ್ಯಗಳನ್ನು ನಿಮಗೆ ನೀಡುವ ಜೊತೆಗೆ ರೋಮಾಂಚಕ ಅನುಭವಗಳನ್ನು ನೀಡುತ್ತವೆ. ಬನ್ನಿ, ಯಾವೆಲ್ಲ ರಾಷ್ಟ್ರೀಯ ಉದ್ಯಾನಗಳನ್ನು ಮಳೆಗಾಲಕ್ಕೆ ಸ್ವಲ್ಪವೇ ಮುನ್ನ ನೀವು ನೋಡುವುದೇ ಒಂದು ಅನುಭವ (wildlife sanctuaries) ಎಂಬುದನ್ನು ತಿಳಿಯೋಣ ಬನ್ನಿ.

Jim Corbett National Park, Uttarakhand

ಜಿಮ್‌ ಕಾರ್ಬೆಟ್‌ ರಾಷ್ಟ್ರೀಯ ಉದ್ಯಾನ, ಉತ್ತರಾಖಂಡ

ಉತ್ತರಾಖಂಡದ ಬಹು ಪ್ರಸಿದ್ಧ ರಾಷ್ಟ್ರೀಯ ಉದ್ಯಾನ ಭಾರತದ ಅತ್ಯಂತ ಹಳೆಯ ವನ್ಯಜೀವಿಧಾಮಗಳಲ್ಲಿ ಒಂದು. ಹುಲಿಗಳನ್ನು ಕಾಣಲು ಇದು ಪ್ರಶಸ್ತ ಜಾಗ. ಜೂನ್‌ ಮದ್ಯದಲ್ಲಿ ಇದು ಮುಚ್ಚಿದರೆ ಮತ್ತೆ ತೆರೆಯುವುದು ಅಕ್ಟೋಬರ್‌ನಲ್ಲಿಯೇ. ಆದರೆ, ಜೂನ್‌ ಆರಂಭದಲ್ಲಿ ಈ ಕಾಡು ನೋಡುವುದು ಬಲು ಸೊಗಸು.

Ranthambore National Park, Rajasthan

ರಣಥಂಬೋರ್‌ ರಾಷ್ಟ್ರೀಯ ಉದ್ಯಾನ, ರಾಜಸ್ಥಾನ

ಭಾರತದ ದೊಡ್ಡ ರಾಷ್ಟ್ರೀಯ ಉದ್ಯಾನಗಳ ಪೈಕಿ ಇದೂ ಒಂದು. ಹುಲಿಗಳನ್ನು ನೋಡಬೇಕೆಂದು ಬಯಸುವ ಪ್ರತಿ ವನ್ಯಜೀವಿ ಪ್ರೇಮಿ ಹಾಗೂ ವನ್ಯಜೀವಿ ಛಾಯಾಗ್ರಾಹಕರು ಈ ರಾಷ್ಟ್ರೀಯ ಉದ್ಯಾನಕ್ಕೆ ಬೇಟಿ ಕೊಡಲು ಬಯಸುವುದು ಸಾಮಾನ್ಯ. ಇದು ಜೂನ್‌ 30ರ ವೇಳೆಗೆ ಮುಚ್ಚುವ ಕಾರಣ ಅದಕ್ಕೂ ಮೊದಲು ಬೇಟಿ ಕೊಟ್ಟರೆ ಅಪರೂಪದ ಅನುಭವಗಳು ನಿಮ್ಮದಾಗಬಹುದು.

Bandhavgarh National Park, Madhya Pradesh

ಬಾಂಧವಗಢ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ

ಹುಲಿಯನ್ನು ನೋಡಲು ಬಯಸುವ ಪ್ರತಿಯೊಬ್ಬ ವನ್ಯಜೀವಿ ಪ್ರಿಯರಿಗೂ ತಿಳಿದ ವನ್ಯಜೀವಿಧಾಮ ಇದು. ಇಲ್ಲಿ ಹುಲಿ ದರ್ಶನದ ಸಾಧ್ಯತೆ ಹೆಚ್ಚು. ಈಗಷ್ಟೇ ಮಳೆಬಿದ್ದ ಕಾಡು ಹಸಿರಾಗಿ ಕಂಗೊಳಿಸುವ ಸಂದರ್ಭ ಮಧ್ಯದಲ್ಲಿ ಆಕಳಿಸುತ್ತಾ ಕುಳಿತ ಹುಲಿಯನ್ನೊಮ್ಮೆ ಕಲ್ಪಿಸಿ ನೋಡಿ. ರೋಮಾಂಚಿತಗೊಳ್ಳುವುದಿಲ್ಲವೇ ಹೇಳಿ! ಜುಲೈನಿಂದ ಅಕ್ಟೋಬರ್‌ವರೆಗೆ ಈದು ಮುಚ್ಚಿರುವ ಕಾರಣ ಜೂನ್‌ನಲ್ಲಿ ಭೇಟಿಕೊಡಲು ಸುಸಮಯ.

Kanha National Park, Madhya Pradesh

ಕನ್ಹಾ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ

ಇದೂ ಕೂಡಾ ಹುಲಿಗಳಿಗೆ ಬಲುಪ್ರಸಿದ್ಧವಾದ ರಾಷ್ಟ್ರೀಯ ಉದ್ಯಾನ. ಮಳೆಗಾಲ ಆರಂಭವಾದ ತಕ್ಷಣ ಕಾಣಲು ಇದು ಬಲು ಚಂದ. ಜೂನ್‌ 30ರಿಂದ ಅಕ್ಟೋಬರ್‌ 15ರವರೆಗೆ ಇದು ಮುಚ್ಚಿರುತ್ತದೆ.

Pench National Park, Madhya Pradesh and Maharashtra

ಪೆಂಚ್‌ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ

ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದ ಗಡಿಯಲ್ಲಿರುವ ಈ ರಾಷ್ಟ್ರೀಯ ಉದ್ಯಾನ ಅತ್ಯಂತ ಸುಂದರವಾದ ಕಾಡುಗಳಲ್ಲಿ ಒಂದು. ರುಡ್ಯಾರ್ಡ್‌ ಕಿಪ್ಲಿಂಗ್‌ ಅವರ ದಿ ಜಂಗಲ್‌ ಬುಕ್‌ ಇದೇ ಕಾಡಿನಿಂದ ಸ್ಪೂರ್ತಿಗೊಂಡು ರಚಿತವಾದ ಕತೆ. ಹೆಚ್ಚು ಹುಲಿಗಳಿರುವ ಈ ಕಾಡು ಜೂನ್‌ 16ರಿಂದ ಸೆಪ್ಟೆಂಬರ್‌ವರೆಗೆ ಪ್ರವಾಸಿಗರಿಗೆ ಮುಚ್ಚಿರುತ್ತದೆ.

Nagarhole National Park, Karnataka

ನಾಗರಹೊಳೆ ರಾಷ್ಟ್ರೀಯ ಉದ್ಯಾನ, ಕರ್ನಾಟಕ

ನಮ್ಮ ಕರ್ನಾಟಕದ ನಾಗರಹೊಳೆ ರಾಷ್ಟ್ರೀಯ ಉದ್ಯಾನ ಭಾರತದ ಅತ್ಯಂತ ಸುಂದರವಾದ ವನ್ಯಜೀವಿಧಾಮಗಳಲ್ಲಿ ಒಂದು. ಹುಲಿಗಳ ಜೊತೆಗೆ ಆನೆ, ಚಿರತೆ, ಜಿಂಕೆ, ಕಾಡಮ್ಮೆಗಳೂ ಸೇರಿದಂತೆ ಅನೇಕ ಪ್ರಾಣಿಗಳ ಸಂತಿತಿ ಇಲ್ಲಿ ವಿಪುಲವಾಗಿದೆ. ಮಳೆ ಈಗಷ್ಟೇ ಬರಲು ಆರಂಭವಾಗುವ ಸಂದರ್ಭ ಇದು ರಮ್ಯವಾಗಿ ಕಾಣುತ್ತದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಇದು ಮುಚ್ಚಿರುತ್ತದೆ. ಅಕ್ಟೋಬರ್‌ ತಿಂಗಳಲ್ಲೂ ಇದು ಅದ್ಭುತವಾಗಿ ಕಾಣುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯಾದ್ಯಂತ ಜೂನ್‌ ಮೊದಲ ವಾರ ಅಬ್ಬರಿಸಲಿದ್ಯಾ ಮಳೆ; ಕುಸಿಯಲಿದೆ ತಾಪಮಾನ

Karnataka Weather Forecast : ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯು (rain News) ತಗ್ಗಿದ್ದು, ಜೂನ್‌ ಮೊದಲ ವಾರದಿಂದ ಮಳೆಯು ಅಬ್ಬರಿಸುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಇನ್ನೊಂದು ವಾರ ಕಾಲ ಮಳೆಯು (Rain News) ಆರ್ಭಟಿಸಲಿದೆ. ಮೇ 31ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಇನ್ನೂ ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಲಘು ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗಾಳಿ ವೇಗವು 30-40 kmph ಬೀಸಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಮೇಲ್ಮೈ ಮಾರುತಗಳು 40-50 ಕಿ.ಮೀ ವರೆಗೆ ಎಲ್ಲಾ ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ತಾಪಮಾನದ ಮುನ್ಸೂಚನೆ

ಮುಂದಿನ 72 ಗಂಟೆಗಳ ಕಾಲ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ. ಆದರೆ ಆ ನಂತರ ರಾಜ್ಯಾದ್ಯಂತ 2-3 ಡಿ.ಸೆ ನಷ್ಟು ಕ್ರಮೇಣ ಕುಸಿಯಲಿದೆ.

ಬೆಂಗಳೂರಲ್ಲಿ ಪ್ರಬಲ ಗಾಳಿ

ಬೆಂಗಳೂರು ನಗರ ಮತ್ತು ಸುತ್ತಮುತ್ತದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜತೆಗೆ ಮೇಲ್ಮೈ ಗಾಳಿಯು ಪ್ರಬಲವಾಗಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Love Case : ಪ್ರೇಮಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಕೇಸ್‌; ಯುವತಿ ತಂದೆ ಅರೆಸ್ಟ್‌

ಬೇಸಿಗೆಯ ತಾಪಕ್ಕೆ ಮೂಗಿನಲ್ಲಿ ರಕ್ತಸ್ರಾವವೇ? ತಡೆಯಲು ಇಲ್ಲಿವೆ ಸರಳ ಉಪಾಯ

ಚಳಿಗಾಲದಲ್ಲಿ ಮಾತ್ರವಲ್ಲ, ಬೇಸಿಗೆಯಲ್ಲೂ ಮೂಗಿನಲ್ಲಿ ರಕ್ತಸ್ರಾವ ಆಗುವುದು ಸಾಮಾನ್ಯ. ಆದರೆ ಹಾಗೇಕಾಗುತ್ತದೆ? ಹಾಗೆ ಆಗದಂತೆ ತಡೆಯುವುದಕ್ಕೆ ಸಾಧ್ಯವಿಲ್ಲವೇ- ಈ ಎಲ್ಲ ಮಾಹಿತಿಗಳ ಜೊತೆಗೆ ಅದನ್ನು ತಡೆಯುವ ಸರಳ (Nosebleeds In Summer) ಉಪಾಯಗಳು ಇಲ್ಲಿವೆ. ಬೇಸಿಗೆಯಲ್ಲಿ ಕಾಡುವ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ಪೈಕಿ ಮೂಗಿನಲ್ಲಿ ರಕ್ತ ಸೋರುವುದೂ ಒಂದು. ಅತಿ ಬಿಸಿಯಾದ ಮತ್ತು ಶುಷ್ಕ ವಾತಾವರಣವಿದ್ದಾಗ ಈ ಸಮಸ್ಯೆ ಕಾಡುವುದು ಹೆಚ್ಚು. ಅತಿಯಾದ ಚಳಿಯ ಜೊತೆಗಿನ ಒಣ ಹವೆ ಇದ್ದರೂ ಈ ತೊಂದರೆ ಕಾಡಬಹುದು. ಆದರೆ ಹೆಚ್ಚಿನ ಜನ ಬೇಸಿಗೆಯಲ್ಲಿ ಈ ಸಮಸ್ಯೆಯನ್ನು ಎದುರಿಸುತ್ತಾರೆ. ಅಲ್ಪಸ್ವಲ್ಪ ರಕ್ತ ಸೋರುತ್ತಿದ್ದರೆ ಇದನ್ನು ತಡೆಯುವುದಕ್ಕೆ ಕೆಲವು ಮನೆಮದ್ದುಗಳು ಸಹಾಯ ಮಾಡಬಹುದು. ಆದರೆ ಮೂಗಿನಲ್ಲಿ ಹೆಚ್ಚು ರಕ್ತಸ್ರಾವ ಆಗುತ್ತಿದ್ದರೆ ವೈದ್ಯರನ್ನು ಕಾಣಬೇಕಾದೀತು. ಮೂಗಿನಲ್ಲಿ ರಕ್ತ ಸೋರುವುದಕ್ಕೆ ಕಾರಣಗಳನ್ನು ಮೊದಲು ಅರ್ಥ ಮಾಡಿಕೊಳ್ಳೋಣ. ಒಣಗಿದ ಬಿಸಿ ಹವೆಯಿಂದಾಗಿ ಮೂಗಿನ ಒಳ ಭಾಗದಲ್ಲಿರುವ ಸೂಕ್ಷ್ಮ ರಕ್ತನಾಳಗಳು ಒಡೆದಾಗ ಉಂಟಾಗುವ ಸಮಸ್ಯೆಯಿದು. ಕೆಲವೊಮ್ಮೆ ಸೋಂಕಿನಿಂದಲೂ ಈ ಸಮಸ್ಯೆ ಕಾಣಬಹುದು. ಅತಿಯಾಗಿ ರಕ್ತಸ್ರಾವ ಆಗುತ್ತಿದ್ದರೆ, ಬೇರೆಯದೇ ಸಮಸ್ಯೆಯನ್ನಿದು ಸೂಚಿಸಬಹುದು. ಆದರೆ ಬೇಸಿಗೆಯ ಕಾರಣದಿಂದಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರೆ, ಕೆಲವು ಮನೆಮದ್ದುಗಳು ಇದಕ್ಕೆ ಉಪಶಮನ ನೀಡುತ್ತವೆ.

drink Water night

ನೀರು ಕುಡಿಯಿರಿ

ಇದಕ್ಕಿರುವ ಅತ್ಯಂತ ಸರಳವಾದ ಮದ್ದೆಂದರೆ ನೀರು ಕುಡಿಯುವುದು. ಹೆಚ್ಚಿನ ನೀರು ದೇಹ ಸೇರಿದಂತೆ ಕೋಶಗಳಲ್ಲಿರುವ ಶುಷ್ಕತೆ ಕಡಿಮೆಯಾಗುತ್ತದೆ. ಇದರಿಂದ ಮೂಗಿನಲ್ಲಿರುವ ಮ್ಯೂಕಸ್‌ ಕೋಶಗಳು ಸಹ ತಮ್ಮ ತೇವವನ್ನು ಕಾಪಿಟ್ಟುಕೊಳ್ಳುವುದಕ್ಕೆ ಸಹಾಯವಾಗುತ್ತದೆ. ಅಂದರೆ, ಒಣ ಹವೆಯ ಪ್ರತಿಕೂಲ ಪರಿಣಾಮ ಬೀರದಂತೆ ತಡೆಯುವುದಕ್ಕೆ ಇದು ಸುಲಭದ ಉಪಾಯ.

ಹ್ಯುಮಿಡಿಫಯರ್‌

ಬೇಸಿಗೆಯ ನೆವದಿಂದ ಎಷ್ಟೋ ಬಾರಿ ಅತಿಯಾಗಿ ಫ್ಯಾನ್‌ ಅಥವಾ ಎಸಿ ಬಳಸುತ್ತೇವೆ. ಇದರಿಂದ ಮನೆಯ ಅಥವಾ ಕಚೇರಿಯ ವಾತಾವರಣದಲ್ಲಿ ಶುಷ್ಕತೆ ಹೆಚ್ಚಾಗುತ್ತದೆ. ನೈಸರ್ಗಿಕವಾದ ಬಿಸಿ ಗಾಳಿಯ ಜೊತೆಗೆ ಇದೂ ಸಹ ಸಮಸ್ಯೆಗಳನ್ನು ಹೆಚ್ಚಿಸಬಹುದು. ಹಾಗಾಗಿ ವಾತಾವರಣದ ತೇವಾಂಶವನ್ನು ಹೆಚ್ಚಿಸುವಂಥ ಹ್ಯುಮಿಡಿಫಯರ್‌ ಬಳಸುವುದು ಇನ್ನೊಂದು ಮಾರ್ಗ. ಇದರಿಂದ ಮೂಗಿನ ಅಂಗಾಂಶಗಳು ಹಾನಿಗೊಳ್ಳುವುದನ್ನು ತಡೆಯಬಹುದು.

Moisturizer

ಮಾಯಿಶ್ಚರೈಸರ್‌ ಬಳಕೆ

ಮೂಗಿನ ಒಳ ಭಾಗ ಒಣಗಿ ಬಿರಿಯದಂತೆ ತಡೆಯಲು ಮಾಯಿಶ್ಚರೈಸರ್‌ ಬಳಕೆ ಮಾಡುವುದು ಉಪಯುಕ್ತ. ಇದಕ್ಕಾಗಿ ಇರುವ ಜೆಲ್‌ ಇಲ್ಲವೇ ಸ್ಟ್ರೇ ಬಳಸಬಹುದು. ಸಾಲೈನ್‌ ಸ್ಪ್ರೇ ಬಳಕೆಯೂ ಉಪಯುಕ್ತವಾದೀತು. ಇವನ್ನೆಲ್ಲ ಹೊಸದಾಗಿ ಖರೀದಿಸಿ ತರುವಷ್ಟು ವ್ಯವಧಾನ ಇಲ್ಲದಿದ್ದರೆ, ಸರಳವಾಗಿ ಕೊಬ್ಬರಿ ಎಣ್ಣೆಯನ್ನು ಮೂಗಿನ ಒಳಭಾಗದ ಅಂಗಾಂಶಗಳಿಗೆ ಹೆಚ್ಚಿ. ಇದು ಪರಿಣಾಮಕಾರಿಯಾಗಿ ತೇವವನ್ನು ಹಿಡಿದಿಡುತ್ತದೆ.

ಮುಚ್ಚಿಕೊಳ್ಳಿ

ತೀವ್ರ ತಾಪದ ಹೊತ್ತಿನಲ್ಲಿ ಮನೆಯಿಂದ ಹೊರಗೆ ಹೋಗುವಾಗ ಮುಖಕ್ಕೆ ಮಾಸ್ಕ್‌ ಹಾಕುವುದು ಸಹಾಯಕ. ಇದರಿಂದ ಒಣ ಹವೆಯನ್ನು ಉಸಿರಾಡುವುದು ಸ್ವಲ್ಪ ಮಟ್ಟಿಗಾದರೂ ತಪ್ಪಿಸಬಹುದು. ತಿಳಿ ಬಣ್ಣದ ದೊಡ್ಡ ಹ್ಯಾಟ್‌ ಧರಿಸುವುದರಿಂದ ಮುಖದ ಮೇಲೆ ಬಿಸಿಲು ನೇರವಾಗಿ ಬೀಳದಂತೆ ಮಾಡಬಹುದು. ಈ ಕ್ರಮಗಳೆಲ್ಲ ಸಣ್ಣವೇ ಆದರೂ, ಒಟ್ಟಾರೆಯಾಗಿ ಸಮಸ್ಯೆಯನ್ನು ದೂರ ಮಾಡುವಲ್ಲಿ ನೆರವಾಗುತ್ತವೆ.

ಇದನ್ನೂ ಓದಿ: Mango For Diabetes: ಮಧುಮೇಹಿಗಳೂ ಮಾವಿನಹಣ್ಣಿನ ರುಚಿ ಸವಿಯಬಹುದೇ? ಇಲ್ಲಿದೆ ಉತ್ತರ!

ಮಾಡಬೇಡಿ

ಮೂಗನ್ನು ಶುಚಿಗೊಳಿಸುವ ನೆವದಲ್ಲಿ ನಾಸಿಕದ ಮೇಲೆ ಯಾವುದೇ ರೀತಿಯಲ್ಲೂ ತೀರಾ ಒತ್ತಡ ಹಾಕಬೇಡಿ. ಈಗಾಗಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರಂತೂ ಈ ಬಗ್ಗೆ ಹೆಚ್ಚಿನ ಎಚ್ಚರ ವಹಿಸಿ. ಮೂಗಿನ ಮೇಲೆ ಒತ್ತಡ ಹಾಕಿದರೆ ಬಿರಿದ ಕೋಶಗಳು ದುರಸ್ತಿಯಾಗುವುದು ನಿಧಾನವಾಗುತ್ತದೆ ಅಥವಾ ಇನ್ನಷ್ಟು ಬಿರಿದು ಸಮಸ್ಯೆಯನ್ನೇ ಸೃಷ್ಟಿಸುತ್ತವೆ. ಅಲರ್ಜಿಗಳನ್ನು ಹತ್ತಿಕ್ಕಿ. ದಿನವಿಡೀ ಜೋರಾಗಿ ಸೀನುತ್ತಲೇ ಇದ್ದರೆ, ಮೂಗು ಸೋರುವಾಗ ರಕ್ತಸ್ರಾವ ಆಗುವುದು ಖಚಿತ.

Winter transitions to summer

ಆಹಾರ

ಆರೋಗ್ಯಕರವಾದ ಆಹಾರವನ್ನು ಕಡ್ಡಾಯವಾಗಿ ಪಾಲಿಸಿ. ಸೆಕೆಯ ನೆವವೊಡ್ಡಿ ಅತಿಯಾದ ತಣ್ಣಗಿನ ಪೇಯಗಳನ್ನು ಕುಡಿಯುವುದು, ಐಸ್‌ಕ್ರೀಮ್‌ ಮೆಲ್ಲುವುದು- ಇವೆಲ್ಲ ಮೂಗಿನ ಸಮಸ್ಯೆಗಳನ್ನು ಹೆಚ್ಚಿಸಬಹುದು; ಗಂಟಲಿನ ಸೋಂಕಿಗೆ, ಶೀತ-ನೆಗಡಿಗೆ ಕಾರಣವಾಗಬಹುದು. ವಿಟಮಿನ್‌ ಸಿ ಹೆಚ್ಚಿರುವ ಆಹಾರವನ್ನು ವಿಫುಲವಾಗಿ ಸೇವಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Physical Abuse
ಉಡುಪಿ4 mins ago

Physical Abuse : ವೈದ್ಯಾಧಿಕಾರಿ ಅಶ್ಲೀಲ ವರ್ತನೆ; ರಾತ್ರಿಯಾದರೆ ವಿಡಿಯೊ ಕಾಲ್‌ನಲ್ಲಿ ವೈದ್ಯೆಗೆ ಟಾರ್ಚರ್‌‌

Nandamuri Balakrishna touch actress anjali back
ಟಾಲಿವುಡ್28 mins ago

Nandamuri Balakrishna: ನಟಿ ಅಂಜಲಿಯ ಹಿಂಭಾಗ ಟಚ್ ಮಾಡಿದ್ರಾ ಬಾಲಯ್ಯ?

Shubman Gill
ಕ್ರೀಡೆ30 mins ago

Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

Narendra Modi
Lok Sabha Election 202434 mins ago

Narendra Modi: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಯುವ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ

Murder Case in tumkur
ತುಮಕೂರು37 mins ago

Murder case : ಸ್ನೇಹಿತರೇ ದುಷ್ಮನ್‌ಗಳು; ಕಂಠಪೂರ್ತಿ ಕುಡಿಸಿ ಗೆಳೆಯನ ತಲೆ ಮೇಲೆ‌ ಕಲ್ಲು ಎತ್ತಿಹಾಕಿ ಕೊಲೆ

OpenAI
Lok Sabha Election 20241 hour ago

OpenAI: ಇಸ್ರೇಲ್‌ನ ಸಂಸ್ಥೆಯಿಂದ ಬಿಜೆಪಿ ವಿರುದ್ಧ ಪ್ರಚಾರ; ಶಾಕಿಂಗ್‌ ಮಾಹಿತಿ ಹಂಚಿಕೊಂಡ ಓಪನ್ಎಐ

Murder Case in Mysuru
ಕ್ರೈಂ1 hour ago

Murder case : ಜಸ್ಟ್‌ ಗುರಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ; ಸಾವಿನ ಕೊನೆ ಕ್ಷಣ ಸೆರೆ

Ambati Rayudu
ಕ್ರೀಡೆ1 hour ago

Ambati Rayudu: ಸ್ಟಾಂಡರ್ಡ್​ ಕಮ್ಮಿ ಮಾಡಿದರೆ ಉತ್ತಮ ಎಂದು ಕೊಹ್ಲಿಯ ಕಾಲೆಳೆದ ರಾಯುಡು

cm Siddaramaiah And DK Shivakumar
ಪ್ರಮುಖ ಸುದ್ದಿ1 hour ago

CM Siddaramaiah: ಸಿಎಂ, ಡಿಸಿಎಂ ಕೂಡ ಇಂದು ಕೋರ್ಟ್‌ ಕಟಕಟೆಯಲ್ಲಿ! ಏನಿದು ಕೇಸ್?‌

Cannes Film Festival Ukrainian model Sawa Pontyjska assault by security guard
ಸಿನಿಮಾ1 hour ago

Cannes Film Festival:  ಮಾಡೆಲ್‌ನನ್ನು ಒರಟಾಗಿ ಹೊರ ದಬ್ಬಿದ ಕಾನ್‌ ಚಲನಚಿತ್ರೋತ್ಸವ ಸಂಘಟಕರು; ವಿಡಿಯೊ ವೈರಲ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌