Murder case : ಮಕ್ಕಳ ಎದುರೇ ಪತ್ನಿಗೆ ಸಲಾಕೆಯಿಂದ ಹೊಡೆದು ಕೊಂದು ಪರಾರಿಯಾದ ಪತಿ - Vistara News

ಬೆಳಗಾವಿ

Murder case : ಮಕ್ಕಳ ಎದುರೇ ಪತ್ನಿಗೆ ಸಲಾಕೆಯಿಂದ ಹೊಡೆದು ಕೊಂದು ಪರಾರಿಯಾದ ಪತಿ

Murder case : ಕುಡಿದ ನಶೆಯಲ್ಲಿ ಪಾಪಿ ಪತಿಯೊಬ್ಬ ಮಕ್ಕಳ ಎದುರಿಗೆ ಪತ್ನಿಯನ್ನು ಹತ್ಯೆ ಮಾಡಿ ಪರಾರಿ ಆಗಿದ್ದಾನೆ. ಸಲಾಕೆಯಿಂದ ಬರ್ಬರವಾಗಿ ಹೊಡೆದು ಕೊಂದಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.

VISTARANEWS.COM


on

Murder Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಕುಡಿದ ನಶೆಯಲ್ಲಿ ಪತಿಯೊಬ್ಬ ಪತ್ನಿಯನ್ನೇ (Murder case) ಕೊಂದಿದ್ದಾನೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಫಕ್ಕೀರವ್ವ ಕಾಕಿ (35) ಹತ್ಯೆಯಾದವರು.

ಕಂಠ ಪೂರ್ತಿ ಕುಡಿದು ಮನೆಗೆ ಬಂದ ಯಲ್ಲಪ್ಪ ಕಾಕಿ, ಪತ್ನಿ ಜತೆಗೆ ಜಗಳ ತೆಗೆದಿದ್ದ. ಮಾತಿನ ಚಕಮಕಿ ನಡುವೆಯೇ ಫಕ್ಕೀರವ್ವ ನಿದ್ದೆ ಮಾಡಲು ಹೋದಾಗ ಜಗಳ ವಿಕೋಪಕ್ಕೆ ತಿರುಗಿದೆ. ಸಿಟ್ಟಾದ ಯಲ್ಲಪ್ಪ ಮನೆಯಲ್ಲಿದ್ದ ಸಲಾಕೆಯಿಂದ ಹೊಡೆದಿದ್ದಾನೆ. ಇಬ್ಬರು ಮಕ್ಕಳ ಎದುರೇ ಫಕ್ಕೀರವ್ವ ತೀವ್ರ ರಕ್ತಸ್ರಾವವಾಗಿ ಮಲಗಿದ್ದಲ್ಲೇ ಮೃತಪಟ್ಟಿದ್ದಾಳೆ. ಇನ್ನೂ ಪತ್ನಿಯನ್ನು ಹತ್ಯೆ ಮಾಡಿದ ಯಲ್ಲಪ್ಪ ಸ್ಥಳದಿಂದ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನೇಸರಗಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಪರಾರಿ ಆಗಿರುವ ಆರೋಪಿ ಯಲ್ಲಪ್ಪನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ:Physical Abuse & Murder: ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ; ದೃಶ್ಯಂ ಸಿನಿಮಾ ರೀತಿಯಲ್ಲಿ ಎಸ್ಕೇಪ್‌ಗೆ ಯತ್ನ

ನಿಗೂಢವಾಗಿ ಕಣ್ಮರೆ ಆಗಿದ್ದ ಬಾಂಗ್ಲಾದೇಶ ಸಂಸದನ ಬರ್ಬರ ಕೊಲೆ

ಕೋಲ್ಕತ್ತಾ: ಚಿಕಿತ್ಸೆಗೆಂದು ಪಶ್ಚಿಮ ಬಂಗಾಳದ ಕೋಲ್ಕತ್ತಾ(Kolkata)ಕ್ಕೆ ಬಂದು ನಿಗೂಢವಾಗಿ ಕಣ್ಮರೆಯಾಗಿದ್ದ ಬಾಂಗ್ಲಾದೇಶ(Bangladesh MP Missing Case) ಸಂಸದ ಅನ್ವರುಲ್‌ ಅಜೀಂ(Anwarul Azim) ಶವವಾಗಿ ಪತ್ತೆಯಾಗಿದ್ದಾರೆ. ಕೋಲ್ಕತ್ತಾದ ನ್ಯೂ ಟೌನ್‌ನಲ್ಲಿರುವ ಮನೆಯೊಂದರಲ್ಲಿ ಅಜೀಂ ಮೃತದೇಹ ಸಿಕ್ಕಿದ್ದು, ಇದೊಂದು ಪೂರ್ವ ನಿಯೋಜಿತ ಕೊಲೆ ಎಂದು ಪೊಲೀಸರು ತಿಳಿಸಿದ್ದಾರೆ.

ದೀರ್ಘಾಕಾಲಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಜೀಂ ದರ್ಶನಾ ಗಡಿ ಮೂಲಕ ಮೇ 12ರಂದು ಕೋಲ್ಕತ್ತಾಗೆ ಬಂದಿದ್ದರು. ಅದೇ ದಿನ ಬಾರಾನಗರ್‌ನಲ್ಲಿರುವ ಅವರ ಸ್ನೇಹಿತಿ ಗೋಪಾಲ್‌ ಬಿಸ್ವಾಸ್‌ ಮನೆಗೆ ತೆರಳಿದ್ದರು. ಎರಡು ದಿನಗಳ ನಂತರ ಮೇ 14ರಂದು ಅವರು ಸ್ನೇಹಿತನ ಮನೆಯಿಂದ ಇಲ್ಲೇ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟಿದ್ದರು. ಅಂದೇ ಅಥವಾ ಮರುದಿನ ವಾಪಾಸ್‌ ಬರುವುದಾಗಿ ಗೋಪಾಲ್‌ ಬಿಸ್ವಾಸ್‌ಗೆ ಅಜೀಂ ಹೇಳಿ ಹೋಗಿದ್ದರು. ಇದಾದ ಬಳಿಕ ಅವರು ವಾಪಾಸ್‌ ಮರಳಿ ಬರಲೇ ಇಲ್ಲ. ಇದರಿಂದ ಗಾಬರಿಗೊಂಡ ಗೋಪಾಲ್‌ ಪೊಲೀಸರಿಗೆ ದೂರು ನೀಡಿ ಘಟನೆ ಬಗ್ಗೆ ವಿವರಿಸಿದ್ದಾರೆ.

ಇದನ್ನೂ ಓದಿ: Bangladesh MP Missing: ಕೋಲ್ಕತ್ತಾಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಮಿಸ್ಸಿಂಗ್‌

ಅಜೀಂ ಬಾಂಗ್ಲಾದೇಶ ಮಾತ್ರವಲ್ಲದೇ ಭಾರತದ ಸಿಮ್‌ ಕೂಡ ಹೊಂದಿದ್ದಾರೆ. ಅವರ ಎರಡೂ ನಂಬರ್‌ ಸ್ವಿಚ್‌ ಆಫ್‌ ಬರ್ತಿದೆ. ಅವರು ತಮ್ಮ ಜೊತೆಗೆ ತಂದಿದ್ದ ಎಲ್ಲಾ ವಸ್ತುಗಳನ್ನು ತಮ್ಮ ಮನೆಯಲ್ಲೇ ಬಿಟ್ಟು ಹೋಗಿದ್ದಾರೆ ಎಂದು ಗೋಪಾಲ್‌ ಹೇಳಿದ್ದಾರೆ. ಮತೊಂದೆಎ ಅಜೀಂ ಪುತ್ರಿ ಮುಮ್ತರಿನ್‌ ಫಿರ್ದೋದ್‌ ತಮ್ಮ ತಂದೆ ಕಣ್ಮರೆ ಆಗಿರುವ ಬಗ್ಗೆ ಢಾಕಾ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಇನ್ನು ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಬಾಂಗ್ಲಾದೇಶ ಪ್ರಧಾನಿ ಶೇಖ್‌ ಹಸೀನಾ, ದಿಲ್ಲಿ ಮತ್ತು ಕೋಲ್ಕತ್ತಾದಲ್ಲಿರುವ ತಮ್ಮ ರಾಜತಾಂತ್ರಿಕ ಅಧಿಕಾರಿಗಳಿಗೆ ವಿಚಾರವನ್ನು ತಿಳಿಸಿದ್ದಾರೆ. ಅವರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಜೀಂಗಾಗಿ ಹುಡುಕಾಟ ಶುರುವಾಗಿತ್ತು. ಅಲ್ಲದೇ ಬಾಂಗ್ಲಾದೇಶ ರಾಯಭಾರ ಕಚೇರಿ ಕೂಡ ತನಿಖೆ ಕೈಗೆತ್ತಿಕೊಂಡಿತ್ತು.

ಮೂವರು ಅರೆಸ್ಟ್‌:

ಘಟನೆ ಬಗ್ಗೆ ಢಾಕಾದಲ್ಲಿ ಮಾಧ್ಯಮಗೋಷ್ಠಿ ನಡೆಸಿದ್ದ ಅಲ್ಲಿನ ಗೃಹ ಸಚಿವ ಅಸಾದುದ್ದೀನ್‌ ಖಾನ್‌, ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಸಂಸದ ಅಜೀಂ ಕೊಲೆಯಾಗಿದ್ದಾರೆ. ಪ್ರಕರಣಕ್ಕೆ ಸಂಬಂದಿಸಿದಂತೆ ಬಾಂಗ್ಲಾದೇಶ ಪೊಲೀಸರುಮೂವರನ್ನು ಅರೆಸ್ಟ್‌ ಮಾಡಿದ್ದಾರೆ. ಅಜೀಂ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಹಂತಕರು ಬಾಂಗ್ಲಾದೇಶಿಗರೇ. ಇನ್ನು ಈ ಕೊಲೆಗೆ ಕಾರಣ ಏನೆಂಬುದು ಮುಂದಿ ದಿನಗಳಲ್ಲಿ ತನಿಖೆಯಲ್ಲಿ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ.

ಅವಾಮಿ ಲೀಗ್‌ ಪಕ್ಷದಿಂದ ಮೂರು ಬಾರಿ ಸಂಸದರಾಗಿ ಗೆದ್ದಿರುವ ಅನ್ವರುಲ್‌ ಅಜೀಂ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರು ಆಗಾಗ ಹೆಚ್ಚಿನ ಚಿಕಿತ್ಸೆಗೆಂದು ಕೋಲ್ಕತ್ತಾಗೆ ಬಂದಿದ್ದರು. ಇದಾದ ಬಳಿಕ ಅವರು ತಮ್ಮ ಕುಟುಂಬಸ್ಥರ ಜತೆ ಸಂಪರ್ಕ ಕಳೆದುಕೊಂಡಿದ್ದಾರೆ. ಅದೂ ಅಲ್ಲದೇ ಮೇ 14 ರ ನಂತರ ಅವರ ಮೊಬೈಲ್‌ ಕೂಡ ಸ್ವಿಚ್‌ ಆಫ್‌ ಆಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka Weather Forecast : ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿಯೊಂದಿಗೆ (Heavy Rain) ಮಳೆಯಾಗಲಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗಕ್ಕೆ ಹೈ ಅಲರ್ಟ್‌ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರ್ನಾಟಕ ಕರಾವಳಿ ಹಾಗೂ ಮಲೆನಾಡಿನಲ್ಲಿ ವ್ಯಾಪಕವಾದ ಮಧ್ಯಮದಿಂದ ಭಾರಿ ಮಳೆಯಾಗುವ (Rain News) ನಿರೀಕ್ಷೆಯಿದೆ. ಪ್ರತ್ಯೇಕದಿಂದ ಚದುರಿದ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಇನ್ನೂ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ಗಾಳಿಯೊಂದಿಗೆ (Heavy Rain) ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನ ಬೆಳಗಾವಿ ಮತ್ತು ಗದಗದಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂ ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಸಾಧಾರಣದಿಂದ ಶುರುವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಸುಮಾರು 31 ಮತ್ತು 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

9 ಜಿಲ್ಲೆಗಳಿಗೆ ಹೈ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗುವುದರ ಜತೆಗೆ ಗಾಳಿ ವೇಗವು 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಕೊಡಗು ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ ಮತ್ತು ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ . ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Health Tips: ನಮ್ಮ ದೇಹಕ್ಕೆ ಪ್ರೊಟೀನ್‌ ಪುಷ್ಟಿ ನೀಡಲು ಯಾವ ಮೊಳಕೆ ಕಾಳುಗಳು ಸೂಕ್ತ?

ಮುದ್ದು ಶ್ವಾನಗಳಿಗೂ ಬಂತು ಮಾನ್ಸೂನ್‌ ಫ್ಯಾಷನ್‌!

ಮುದ್ದು ಶ್ವಾನಗಳಿಗೂ ಬಂತು ಮಾನ್ಸೂನ್‌ ಫ್ಯಾಷನ್‌! (Dogs Monsoon Fashion) ಅರರೆ., ಇದೇನಿದು ಶ್ವಾನಗಳಿಗೂ ಮಳೆಗಾಲದ ಫ್ಯಾಷನ್‌ ಎಂದು ಹುಬ್ಬೇರಿಸಬಹುದು. ಹೌದು, ಇದೀಗ ಶ್ವಾನಗಳ ಮಾನ್ಸೂನ್‌ ಡ್ರೆಸ್‌ ಹಾಗೂ ರೈನ್‌ಕೋಟ್‌, ಮತ್ತಿತರೇ ಆಕ್ಸೆಸರೀಸ್‌ ಪೆಟ್‌ ಲೋಕದಲ್ಲಿ ಕಾಲಿಟ್ಟಿವೆ. ಆಯಾ ಜಾತಿಯ ಮುದ್ದು ಶ್ವಾನಗಳಿಗೆ ಹೊಂದುವಂತಹ, ನಾನಾ ವೆರೈಟಿ ಮಾನ್ಸೂನ್‌ ಡ್ರೆಸ್‌ಗಳು ಹಾಗೂ ವಾಟರ್‌ಪ್ರೂಫ್‌ ರೈನ್‌ಕೋಟ್‌ಗಳು ನಾಯಿಮರಿಗಳನ್ನು ಅಲಂಕರಿಸುತ್ತಿವೆ.

Dogs Monsoon Fashion

ಮುದ್ದು ಶ್ವಾನಗಳಿಗೂ ಮಾನ್ಸೂನ್‌ ಫ್ಯಾಷನ್‌

“ಇಂದು ಕಾಲ ಬದಲಾಗಿದೆ. ಮನೆಯಲ್ಲಿ ಮುದ್ದು ಶ್ವಾನಗಳಿಗೂ ಮಕ್ಕಳ ಸ್ಥಾನ ಮಾನ ದೊರಕಿದೆ. ಪ್ರತಿಯೊಬ್ಬರು ಅವರು ಸಾಕಿದ ನಾಯಿಮರಿಗಳನ್ನು ಯಾವ ಮಟ್ಟಿಗೆ ಇಷ್ಟ ಪಡುತ್ತಾರೆಂದರೇ, ಅವಕ್ಕೆ ಇತ್ತೀಚೆಗೆ ನಾನಾ ಬಗೆಯಲ್ಲಿ ಸ್ಟೈಲಿಂಗ್‌ ಕೂಡ ಮಾಡುತ್ತಾರೆ. ಇನ್ನು, ಹಿರಿಯರು ಕಿರಿಯರೆನ್ನದೇ ಎಲ್ಲರೂ ವಾಕಿಂಗ್‌ ಹಾಗೂ ಜಾಕಿಂಗ್‌ ಸಮಯದಲ್ಲೂ ಶ್ವಾನಗಳನ್ನು ಜೊತೆಯಲ್ಲಿಯೇ ಕರೆದೊಯ್ಯುತ್ತಾರೆ. ಇದಕ್ಕೆ ಪೂರಕ ಎಂಬಂತೆ, ಪೆಟ್‌ ಲೋಕದಲ್ಲೂ ನಾನಾ ಬಗೆಯ ಆಕ್ಸೆಸರೀಸ್‌ಗಳು ಹಾಗೂ ಉಡುಗೆಗಳು ಬಂದಿವೆ. ಆಯಾ ಸೀಸನ್‌ಗೆ ಮ್ಯಾಚ್‌ ಆಗುವಂತೆ ದೊರಕುತ್ತಿವೆ. ಅವುಗಳಲ್ಲಿ ಇದೀಗ ಮಾನ್ಸೂನ್‌ ಸೀಸನ್‌ಗೆ ಹೊಂದುವಂತಹ ಫ್ಯಾಷನ್‌ ಉಡುಗೆ ಹಾಗೂ ರೈನ್‌ಕೋಟ್‌ಗಳು ಬಿಡುಗಡೆಗೊಂಡಿವೆ” ಎನ್ನುತ್ತಾರೆ ಪೆಟ್‌ ಸ್ಪಾನ ಸ್ಟೈಲಿಂಗ್‌ ಎಕ್ಸ್‌ಫರ್ಟ್ ಜಾಕಿ. ಅವರ ಪ್ರಕಾರ, ಶ್ವಾನಗಳು ಇದೀಗ ಸ್ಟೈಲಿಶ್‌ ಆಗಿ ಕಾಣಿಸಲು ಈ ಆಕ್ಸೆಸರೀಸ್‌ಗಳು ಸಹಕರಿಸುತ್ತಿವೆಯಂತೆ.

Dogs Monsoon Fashion

ಮಾನ್ಸೂನ್‌ಗೆ ಮ್ಯಾಚಿಂಗ್‌

ಶ್ವಾನಗಳಿಗೆ ಬಂದಿರುವ ಕಲರ್‌ಫುಲ್‌ ಉಡುಗೆ ಹಾಗೂ ರೈನ್‌ಕೋಟ್‌ ಮತ್ತು ಅವುಗಳ ಕಾಲಿನ ಪಾದಗಳಿಗೆ ಹಾಕಬಹುದಾದ ಪೆಟ್‌ ವೆಲ್ಲೈಸ್‌, ರೈನ್‌ ಬೂಟ್ಸ್ ಹಾಗೂ ಟವೆಲ್‌ ಮತ್ತು ವೈಪ್ಸ್ ಈ ಸೀಸನ್‌ನಲ್ಲಿ ಬೇಡಿಕೆ ಹೆಚ್ಚಿಸಿಕೊಂಡಿವೆ.

Dogs Monsoon Fashion

ಕಲರ್‌ಫುಲ್‌ ಡಾಗ್ಗಿ ರೈನ್‌ ಕೋಟ್ಸ್

ಪಿರಿ ಪಿರಿ ಸಣ್ಣ ಮಳೆಯಲ್ಲೂ ಡಾಗ್ಗಿಯಿಲ್ಲದೇ ವಾಕ್‌ ಮಾಡಲಾಗುವುದಿಲ್ಲ ಎನ್ನುವ ಶ್ವಾನಗಳ ಪೋಷಕರು, ಈ ಮಾನ್ಸೂನ್‌ ಡಾಗ್‌ ರೈನ್‌ಕೋಟ್ಸ್‌ಗಳ ಖರೀದಿ ಮಾಡತೊಡಗಿದ್ದಾರೆ. ಬೇಡಿಕೆ ಹೆಚ್ಚಾದಂತೆ, ಸಿಂಥಟಿಕ್‌, ಪಾಲಿಸ್ಟರ್‌ ಸೇರಿದಂತೆ ವಾಟರ್‌ ಪ್ರೂಫ್‌ ಫ್ಯಾಬ್ರಿಕ್‌ನಲ್ಲಿ ಇವು ನಾನಾ ಡಿಸೈನ್‌ನಲ್ಲಿ ಆಗಮಿಸಿವೆ.

Dogs Monsoon Fashion

ಪೆಟ್ಸ್ ರೈನ್‌ ಬೂಟ್ಸ್

ನಾಯಿ ಮರಿಗಳಿಗೆ ರಸ್ತೆಯ ಹಾಗೂ ನೆಲದ ಕೊಚ್ಚೆ, ಕೆಸರು ಹತ್ತದಂತೆ ಕಾಪಾಡಬಹುದಾದ ಪುಟ್ಟ ಪುಟ್ಟ ರೈನ್‌ ಬೂಟ್ಸ್‌ಗಳು ಕೂಡ ನಾನಾ ವಿನ್ಯಾಸದಲ್ಲಿ ಪೆಟ್‌ ಶಾಪ್‌ಗಳಿಗೆ ಬಂದಿವೆ. ಇನ್ನು, ಡಾಗ್‌ ಟವೆಲ್ಸ್ ಹಾಗೂ ವೈಪ್ಸ್ ಸೇರಿದಂತೆ, ಬೋ ಹಾಗೂ ಬೆಲ್ಟ್‌ಗಳು ಕೂಡ ಪೆಟ್‌ ಶಾಪ್‌ಗಳಿಗೆ ಲಗ್ಗೆ ಇಟ್ಟಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ವೀಕೆಂಡ್‌ ಪ್ರಿಯರೇ ಎಚ್ಚರ; ಭಾನುವಾರ ಸುರಿಯಲಿದೆ ಮಳೆ ಧಾರಾಕಾರ

Karnataka Weather Forecast : ಜೂನ್‌ 23ಕ್ಕೆ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Rain News) ನೀಡಿದೆ. ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಜೂನ್‌ 26ರವರೆಗೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದ್ದು, ಗಾಳಿ ವೇಗವು ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ಭಾನುವಾರದಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಕೆಲವು ಸ್ಥಳದಲ್ಲಿ ಗುಡುಗು ಸಹಿತ ಭಾರಿ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿಗೆ ಲಘು ಮಳೆ

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕನಿಷ್ಟ ತಾಪಮಾನ 21 ಹಾಗೂ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ:

ಮಳೆ ಬಂದರೆ ಸವಾರರಿಗೆ ಆತಂಕ

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಮಳೆ ಬಂದರೆ ಸಾಕು ಸವಾರರು ಭಯದಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಣಗಿದ ಮರಗಳು ಬೀಳುವ ಆತಂಕದಲ್ಲಿ ಜನರು ಜೀವವನ್ನು ಕೈಯಲ್ಲಿ ಹಿಡಿದು ಓಡಾಡುತ್ತಿದ್ದಾರೆ.

ಗಾಳಿ ಮಳೆಯಿಂದಾಗಿ ಆನೇಕ ಕಡೆ ಮರಗಳು ಧರೆಗುರುಳಿದ್ದವು. ಸಾಕಷ್ಟು ಕಡೆ ಅನಾಹುತಗಳು ಸಂಭವಿಸಿದ್ದರೂ ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿಲ್ಲ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ಒಣಗಿದ ಮರಗಳು ಅನಾಹುತಕ್ಕೆ ದಾರಿ ಮಾಡಿಕೊಡುತ್ತಿವೆ. ಹೆಬ್ಬಗೋಡಿ ನಗರಸಭೆ ಮತ್ತು ಬೊಮ್ಮಸಂದ್ರ ಕೈಗಾರಿಕಾ ಸಂಘಕ್ಕೆ ಒಳಪಡುವ ಈ ರಸ್ತೆಯಲ್ಲಿ ಎಂಟಿಆರ್‌, ಸಾಯಿ ವಿಶ್ರಾಂ ಹೋಟೆಲ್ ಮತ್ತು ಡೆಲ್ಟಾ ಕಂಪನಿ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳಿವೆ.

ನಿತ್ಯ ಸಾವಿರಾರು ಸಂಖ್ಯೆಯ ಕಾರ್ಮಿಕರು ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ. ರಸ್ತೆಯುದ್ದಕ್ಕೂ ಒಣಗಿದ ಮರಗಳು ಮತ್ತು ಕೊಂಬೆಗಳು ಬೀಳುವ ಆತಂಕದಿಂದಾಗಿ ವಾಹನ ಸವಾರರು, ಪಾದಚಾರಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಕಳದೆರಡು ವರ್ಷಗಳ ಹಿಂದೆ ರಸ್ತೆಯಲ್ಲಿ ಮರ ಬಿದ್ದು ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡಿದ್ದರು. ಇಷ್ಟಾದರೂ ತಲೆಕೇಡಿಸಿಕೊಳ್ಳದ ಅಧಿಕಾರಿಗಳು, ಒಣಗಿದ ಮರಗಳನ್ನು ತೆರವು ಮಾಡದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಳಗಾವಿ

Child Death : ಮಕ್ಕಳ ಮಾರಾಟ ಜಾಲದಲ್ಲಿ ರಕ್ಷಣೆಯಾಗಿದ್ದ ಮಗು ಮೃತ್ಯು; ಅಂತ್ಯ ಸಂಸ್ಕಾರ ನೆರವೇರಿಸಿದ ಪೊಲೀಸರು

Child Trafficking : ಯುವತಿಯೊಬ್ಬಳು ಮದುವೆಗೂ ಮುನ್ನವೇ ಗರ್ಭ ಧರಿಸಿದ್ದಳು. ನಕಲಿ ವೈದ್ಯನೊಬ್ಬ ಹಣದಾಸೆಗೆ ಆಪರೇಷನ್ ಮಾಡಿ, ಕೆಲ ದಿನಗಳ ಕಾಲ ಶಿಶುವನ್ನು ತನ್ನಲ್ಲಿರಿಸಿಕೊಂಡು ಪೋಷಿಸಿ ಮಾರಾಟ (Child Death) ಮಾಡಿದ್ದ. ಆದರೆ ಮಕ್ಕಳ ಮಾರಾಟ ಪ್ರಕರಣದಲ್ಲಿ ರಕ್ಷಣೆಯಾಗಿದ್ದ ಆ ಮಗು ಮೃತಪಟ್ಟಿದೆ.

VISTARANEWS.COM


on

By

Child Death
Koo

ಬೆಳಗಾವಿ: ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಪ್ರಕರಣದಲ್ಲಿ ರಕ್ಷಣೆಯಾಗಿದ್ದ ಮಗುವೊಂದು (Child Death) ಮೃತಪಟ್ಟಿದೆ. ತಡರಾತ್ರಿ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಹಸುಳೆ ಜೀವ ಬಿಟ್ಟಿದೆ. 30 ದಿನದ ಹೆಣ್ಣು ಮಗುವನ್ನು ಕೇವಲ 60 ಸಾವಿರ ರೂ.ಗೆ ನಕಲಿ ವೈದ್ಯನೊಬ್ಬ ಮಾರಾಟ (Child Trafficking) ಮಾಡಿದ್ದ.

ಅಬ್ದುಲ್ ಗಫಾರ್ ಲಾಡಖಾಕ್‌ ಎಂಬಾತ ನರ್ಸ್ ಮಹಾದೇವಿ ಎಂಬಾಕೆಗೆ ಮಗುವನ್ನು ಮಾರಾಟ ಮಾಡಿದ್ದ. ಮಗು ಪಡೆದು ಬೆಳಗಾವಿಯಲ್ಲಿ ಮಾರಾಟ ಮಾಡುವಾಗ ಮಹಾದೇವಿ ಸಿಕ್ಕಿ ಬಿದ್ದಿದ್ದಳು. ಈ ವೇಳೆ ಮಗುವನ್ನು ರಕ್ಷಿಸಿ ಜಿಲ್ಲಾಸ್ಪತ್ರೆಯಲ್ಲಿ ಆರೈಕೆಗೆಂದು ಇರಿಸಲಾಗಿತ್ತು. ಆದರೆ ಬೆಳವಣಿಗೆ ಕುಂಠಿತ ಹಾಗೂ ತೂಕ ಹೆಚ್ಚಳವಾಗದೆ ಅನಾರೋಗ್ಯದಿಂದ ತಿಂಗಳ ಕೂಸು ಮೃತಪಟ್ಟಿದೆ.

ಇನ್ನೂ ಪೊಲೀಸರು ಹಾಗೂ ಮಗುವಿನ ತಂದೆ- ತಾಯಿ ಸಮ್ಮುಖದಲ್ಲಿ ಸಂಪ್ರದಾಯದಂತೆ ಸದಾಶಿವ ನಗರದ ರುಧ್ರಭೂಮಿಯಲ್ಲಿ ಸಂಸ್ಕಾರ ಮಾಡಿದ್ದರು. ತಾವೇ ತಮ್ಮ ಕೈಯಿಂದ ಹಣ ಹಾಕಿ ಮಗುವಿನ ಅಂತ್ಯ ಸಂಸ್ಕಾರವನ್ನು ಮಾಳಮಾರುತಿ ಪೊಲೀಸರು ನೆರವೇರಿಸಿದ್ದಾರೆ.

ಯುವತಿಯೊಬ್ಬಳು ಮದುವೆಗೂ ಮುನ್ನವೇ ಗರ್ಭ ಧರಿಸಿದ್ದಳು. ಆದಾಗಲೇ ಶಿಶುವಿಗೆ 7 ತಿಂಗಳಾಗಿತ್ತು. ಆಕೆಯಿದ್ದ 20 ಸಾವಿರ ರೂ. ಹಣ ಪಡೆದ ನಕಲಿ ವೈದ್ಯ ಆಪರೇಷನ್ ಮಾಡಿದ್ದ. ಕೆಲ ದಿನಗಳ ಕಾಲ ಶಿಶುವನ್ನು ತನ್ನಲ್ಲಿರಿಸಿಕೊಂಡು ಪೋಷಿಸಿ ನಂತರ ಮಗುವನ್ನು ಮಾರಾಟ ಮಾಡಿದ್ದ. ಆದರೆ ನಕಲಿ ವೈದ್ಯ ಹಾಗೂ ಮಾರಾಟ ಜಾಲದ ಹಣದಾಸೆಗೆ ಕಂದಮ್ಮವೊಂದು ಬಲಿಯಾಗಿದ್ದು ದುರಂತ.

ಇದನ್ನೂ ಓದಿ: Viral Video: ಮತ್ತೊಂದು ರೀಲ್‌ ಕ್ರೇಜ್‌; ಚಲಿಸುವ ರೈಲಿನಲ್ಲಿ ಯುವತಿಯ ಡೇಂಜರಸ್‌ ಡ್ಯಾನ್ಸ್‌!

ಭ್ರೂಣಹತ್ಯೆ ಮಾಡಿದ್ದ ನಕಲಿ ವೈದ್ಯ

ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ ಎಂಬಾತನು ಭ್ರೂಣಹತ್ಯೆ ಮಾಡಿದ್ದು, ಜಿಲ್ಲೆಯ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಭ್ರೂಣದ ಶವವೊಂದು ಪತ್ತೆಯಾಗಿತ್ತು. ಇನ್ನಷ್ಟು ಭ್ರೂಣಗಳಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.

ನಕಲಿ ವೈದ್ಯ ಅಬ್ದುಲ್‌ ಗಫಾರ್‌ ಲಾಡಖಾನ್‌ನ ಜಮೀನಿನಲ್ಲಿ ಭ್ರೂಣದ ಶವ ಪತ್ತೆಯಾಗಿತ್ತು. ಡಿಎಚ್ಒ ಡಾ.ಮಹೇಶ ಕೋಣಿ, ಎಸಿ ಪ್ರಭಾವತಿ ಫಕೀರಪುರ, ಡಿಎಎಸ್‌ಪಿ ರವಿ ನಾಯ್ಕ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ಇನ್ನೂ ಭ್ರೂಣಗಳನ್ನು ಹೂಳುತ್ತಿದ್ದ ಸಹಾಯಕ ರೋಹಿತ್‌ ಕುಪ್ಪಸಗೌಡರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿಕ್ಷಣ

2nd PUC Exam 3: ಸೋಮವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಶುರು; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಉಚಿತ

2nd PUC Exam 3: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಾಲ್‌ ಟಿಕೆಟ್‌ ತೋರಿಸಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಉಚಿತವಾಗಿ (Free Bus) ಪರೀಕ್ಷಾ ಕೇಂದ್ರಕ್ಕೆ ತೆರಳಬಹುದಾಗಿದೆ. ಈ ಸಂಬಂಧ ನಿಗಮವು ಆದೇಶ ಹೊರಡಿಸಿದೆ.

VISTARANEWS.COM


on

By

2nd Puc Exam 3
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಜೂನ್‌ 24ರಿಂದ ಜುಲೈ 5ರವರೆಗೆ ದ್ವಿತೀಯ ಪಿಯುಸಿ (2nd PUC Exam 3) 3ನೇ ಪೂರಕ ಪರೀಕ್ಷೆಯು (Education News) ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಂದು ಸರಕಾರಿ ಬಸ್‌ನಲ್ಲಿ ಉಚಿತವಾಗಿ (Free Bus) ಪ್ರಯಾಣಿಸಲು ಕೆಎಸ್‌ಆರ್‌ಟಿಸಿ (KSRTC) ನಿಗಮ ಅನುಮತಿಸಿದೆ.

ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿಯೂ ಬೇರೆ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿದೆ. ಹೀಗಾಗಿ ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿನಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಓಡಾಡಲು ಕೆಎಸ್‌ಆರ್‌ಟಿಸಿಯಲ್ಲಿ ಉಚಿತ ಪ್ರಯಾಣಕ್ಕೆ (2nd PUC Exam 2023) ಅನುವು ಮಾಡಿಕೊಡಲಾಗಿದೆ.

ಪರೀಕ್ಷೆ ನಡೆಯುವ ದಿನದಂದು ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್‌ ತೋರಿಸಿ ಪ್ರಯಾಣಿಸಬಹುದಾಗಿದೆ. ನಿಗಮದ ನಗರ ಹಾಗೂ ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಜತೆಗೆ ಬಸ್‌ಗಳು ತಾವು ಹೋಗುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರ ಇದ್ದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಕೋರಿಕೆ ನಿಲುಗಡೆ ನೀಡಲು ಸೂಚಿಸಿದೆ.

ಈ ಸಂಬಂಧ ನಿಗಮದ ಎಲ್ಲ ಚಾಲಕ/ನಿರ್ವಾಹಕರಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ.

ಇದನ್ನೂ ಓದಿ: Accident News : ಕಂಟಕವಾದ ಕಾರ ಹುಣ್ಣಿಮೆ ಕರಿ ದಿನ; ಎತ್ತು ಬೆದರಿಸಲು ಹೋಗಿ ಮುಗ್ಗರಿಸಿ ಬಿದ್ದ ಜನ್ರು

ದ್ವಿತೀಯ ಪಿಯುಸಿ ಪರೀಕ್ಷೆ -3ರ ವೇಳಾಪಟ್ಟಿ ಹೀಗಿದೆ

ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಒಟ್ಟು 75, 995 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಕಲಾ ವಿಭಾಗದಿಂದ 30, 811 ಹಾಗೂ ವಿಜ್ಞಾನ ವಿಭಾಗದಲ್ಲಿ 19,783, ವಾಣಿಜ್ಯ ವಿಭಾಗದಿಂದ 25,401 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ರಾಜ್ಯಾದ್ಯಂತ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇನ್ನೂ ಸಿಸಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದ್ದು, ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ವಿಚಕ್ಷಣದಳಗಳನ್ನು ರಚಿಸಲಾಗಿದೆ. ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30 ಹಾಗೂ ಮಧ್ಯಾಹ್ನ 2:15ರಿಂದ 4:30 ಪರೀಕ್ಷೆಯ ಸಮಯವಾಗಿದೆ. ಯಾವ್ಯಾವ ದಿನ ಯಾವ ವಿಷಯಕ್ಕೆ ಪರೀಕ್ಷೆ ನಡೆಯಲಿದೆ ಎಂಬುದರ ಮಾಹಿತಿ ಇಲ್ಲಿದೆ.

ದಿನಾಂಕ- ವಿಷಯ
ಜೂನ್‌ 24- ಕನ್ನಡ, ಅರೇಬಿಕ್
ಜೂನ್‌ 25- ಇಂಗ್ಲೀಷ್‌
ಜೂನ್‌ 26- ಸಮಾಜಶಾಸ್ತ್ರ , ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಜೂನ್‌ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಜೂನ್‌ 28- ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್‌ 29 – ಇತಿಹಾಸ, ಭೌತಶಾಸ್ತ್ರ
ಜುಲೈ 1 – ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಜುಲೈ 2 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಜುಲೈ 3 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
ಜುಲೈ 4- ಹಿಂದಿ
ಜುಲೈ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ,ರೀಟೈಲ್‌, ಆಟೋ ಮೊಬೈಲ್‌, ಬ್ಯೂಟಿ ಮತ್ತು ವೆಲ್‌ನೆಸ್‌

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Share Market Scam
ಕ್ರೈಂ10 mins ago

Share Market Scam: ಮುಖೇಶ್ ಅಂಬಾನಿ ಡೀಪ್ ಫೇಕ್‌! 7 ಲಕ್ಷ ರೂ. ಕಳೆದುಕೊಂಡ ವೈದ್ಯೆ

Tharun Sudhir sonal monteiro will get marriage
ಸಿನಿಮಾ11 mins ago

Tharun Sudhir: ಸೋನಲ್ ಜತೆ `ತರುಣ್ ಸುಧೀರ್‌’ಗೆ ಕೂಡಿಬಂತು ಕಂಕಣಭಾಗ್ಯ?

Rushikonda Palace Issue
ದೇಶ25 mins ago

Rushikonda Palace: 500 ಕೋಟಿಯ ಋಷಿಕೊಂಡ ಅರಮನೆ; 12 ಬೆಡ್‌ರೂಮ್‌, ವಾಶ್‌ರೂಮ್‌ ಒಂದು ಮನೆಯಷ್ಟು!

Sumit Nagal
ಕ್ರೀಡೆ31 mins ago

Paris Olympics 2024: ಅಧಿಕೃತವಾಗಿ ಪ್ಯಾರಿಸ್​ ಒಲಿಂಪಿಕ್ಸ್ ಟಿಕೆಟ್​ ಪಡೆದ ಸುಮಿತ್‌ ನಗಾಲ್‌

Suraj Revanna Case
ಕರ್ನಾಟಕ47 mins ago

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಎಂಎಲ್‌ಸಿ ಸೂರಜ್‌ ರೇವಣ್ಣ ಅರೆಸ್ಟ್‌

Doodle V3 E-Cycle
ಆಟೋಮೊಬೈಲ್55 mins ago

Doodle V3 E-Cycle: ‘ಕಲ್ಕಿ 2898 ಎಡಿ’ನಿಂದ ಪ್ರೇರಿತವಾದ ಇ-ಸೈಕಲ್ ಮಾರುಕಟ್ಟೆಗೆ

Suraj Revanna Case
ಕರ್ನಾಟಕ1 hour ago

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Empty Stomach Foods
ಆರೋಗ್ಯ2 hours ago

Empty Stomach Foods: ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ತಿನ್ನಬೇಡಿ!

karnataka weather Forecast
ಮಳೆ2 hours ago

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Menopausal Weight Gain
ಆರೋಗ್ಯ3 hours ago

Menopausal Weight Gain: ಋತುಚಕ್ರ ನಿಂತ ಬಳಿಕ ತೂಕ ಹೆಚ್ಚುವುದನ್ನು ತಡೆಯಬಹುದೇ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ7 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ7 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ7 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌