ಬೆಳಗಾವಿ: ಕುಡಿದ ನಶೆಯಲ್ಲಿ ಪತಿಯೊಬ್ಬ ಪತ್ನಿಯನ್ನೇ (Murder case) ಕೊಂದಿದ್ದಾನೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣಬರಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಫಕ್ಕೀರವ್ವ ಕಾಕಿ (35) ಹತ್ಯೆಯಾದವರು.
ಕಂಠ ಪೂರ್ತಿ ಕುಡಿದು ಮನೆಗೆ ಬಂದ ಯಲ್ಲಪ್ಪ ಕಾಕಿ, ಪತ್ನಿ ಜತೆಗೆ ಜಗಳ ತೆಗೆದಿದ್ದ. ಮಾತಿನ ಚಕಮಕಿ ನಡುವೆಯೇ ಫಕ್ಕೀರವ್ವ ನಿದ್ದೆ ಮಾಡಲು ಹೋದಾಗ ಜಗಳ ವಿಕೋಪಕ್ಕೆ ತಿರುಗಿದೆ. ಸಿಟ್ಟಾದ ಯಲ್ಲಪ್ಪ ಮನೆಯಲ್ಲಿದ್ದ ಸಲಾಕೆಯಿಂದ ಹೊಡೆದಿದ್ದಾನೆ. ಇಬ್ಬರು ಮಕ್ಕಳ ಎದುರೇ ಫಕ್ಕೀರವ್ವ ತೀವ್ರ ರಕ್ತಸ್ರಾವವಾಗಿ ಮಲಗಿದ್ದಲ್ಲೇ ಮೃತಪಟ್ಟಿದ್ದಾಳೆ. ಇನ್ನೂ ಪತ್ನಿಯನ್ನು ಹತ್ಯೆ ಮಾಡಿದ ಯಲ್ಲಪ್ಪ ಸ್ಥಳದಿಂದ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನೇಸರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಪರಾರಿ ಆಗಿರುವ ಆರೋಪಿ ಯಲ್ಲಪ್ಪನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ನಿಗೂಢವಾಗಿ ಕಣ್ಮರೆ ಆಗಿದ್ದ ಬಾಂಗ್ಲಾದೇಶ ಸಂಸದನ ಬರ್ಬರ ಕೊಲೆ
ಕೋಲ್ಕತ್ತಾ: ಚಿಕಿತ್ಸೆಗೆಂದು ಪಶ್ಚಿಮ ಬಂಗಾಳದ ಕೋಲ್ಕತ್ತಾ(Kolkata)ಕ್ಕೆ ಬಂದು ನಿಗೂಢವಾಗಿ ಕಣ್ಮರೆಯಾಗಿದ್ದ ಬಾಂಗ್ಲಾದೇಶ(Bangladesh MP Missing Case) ಸಂಸದ ಅನ್ವರುಲ್ ಅಜೀಂ(Anwarul Azim) ಶವವಾಗಿ ಪತ್ತೆಯಾಗಿದ್ದಾರೆ. ಕೋಲ್ಕತ್ತಾದ ನ್ಯೂ ಟೌನ್‌ನಲ್ಲಿರುವ ಮನೆಯೊಂದರಲ್ಲಿ ಅಜೀಂ ಮೃತದೇಹ ಸಿಕ್ಕಿದ್ದು, ಇದೊಂದು ಪೂರ್ವ ನಿಯೋಜಿತ ಕೊಲೆ ಎಂದು ಪೊಲೀಸರು ತಿಳಿಸಿದ್ದಾರೆ.
ದೀರ್ಘಾಕಾಲಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಜೀಂ ದರ್ಶನಾ ಗಡಿ ಮೂಲಕ ಮೇ 12ರಂದು ಕೋಲ್ಕತ್ತಾಗೆ ಬಂದಿದ್ದರು. ಅದೇ ದಿನ ಬಾರಾನಗರ್‌ನಲ್ಲಿರುವ ಅವರ ಸ್ನೇಹಿತಿ ಗೋಪಾಲ್ ಬಿಸ್ವಾಸ್ ಮನೆಗೆ ತೆರಳಿದ್ದರು. ಎರಡು ದಿನಗಳ ನಂತರ ಮೇ 14ರಂದು ಅವರು ಸ್ನೇಹಿತನ ಮನೆಯಿಂದ ಇಲ್ಲೇ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟಿದ್ದರು. ಅಂದೇ ಅಥವಾ ಮರುದಿನ ವಾಪಾಸ್ ಬರುವುದಾಗಿ ಗೋಪಾಲ್ ಬಿಸ್ವಾಸ್‌ಗೆ ಅಜೀಂ ಹೇಳಿ ಹೋಗಿದ್ದರು. ಇದಾದ ಬಳಿಕ ಅವರು ವಾಪಾಸ್ ಮರಳಿ ಬರಲೇ ಇಲ್ಲ. ಇದರಿಂದ ಗಾಬರಿಗೊಂಡ ಗೋಪಾಲ್ ಪೊಲೀಸರಿಗೆ ದೂರು ನೀಡಿ ಘಟನೆ ಬಗ್ಗೆ ವಿವರಿಸಿದ್ದಾರೆ.
ಇದನ್ನೂ ಓದಿ: Bangladesh MP Missing: ಕೋಲ್ಕತ್ತಾಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಮಿಸ್ಸಿಂಗ್
ಅಜೀಂ ಬಾಂಗ್ಲಾದೇಶ ಮಾತ್ರವಲ್ಲದೇ ಭಾರತದ ಸಿಮ್ ಕೂಡ ಹೊಂದಿದ್ದಾರೆ. ಅವರ ಎರಡೂ ನಂಬರ್ ಸ್ವಿಚ್ ಆಫ್ ಬರ್ತಿದೆ. ಅವರು ತಮ್ಮ ಜೊತೆಗೆ ತಂದಿದ್ದ ಎಲ್ಲಾ ವಸ್ತುಗಳನ್ನು ತಮ್ಮ ಮನೆಯಲ್ಲೇ ಬಿಟ್ಟು ಹೋಗಿದ್ದಾರೆ ಎಂದು ಗೋಪಾಲ್ ಹೇಳಿದ್ದಾರೆ. ಮತೊಂದೆಎ ಅಜೀಂ ಪುತ್ರಿ ಮುಮ್ತರಿನ್ ಫಿರ್ದೋದ್ ತಮ್ಮ ತಂದೆ ಕಣ್ಮರೆ ಆಗಿರುವ ಬಗ್ಗೆ ಢಾಕಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇನ್ನು ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ದಿಲ್ಲಿ ಮತ್ತು ಕೋಲ್ಕತ್ತಾದಲ್ಲಿರುವ ತಮ್ಮ ರಾಜತಾಂತ್ರಿಕ ಅಧಿಕಾರಿಗಳಿಗೆ ವಿಚಾರವನ್ನು ತಿಳಿಸಿದ್ದಾರೆ. ಅವರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಅಜೀಂಗಾಗಿ ಹುಡುಕಾಟ ಶುರುವಾಗಿತ್ತು. ಅಲ್ಲದೇ ಬಾಂಗ್ಲಾದೇಶ ರಾಯಭಾರ ಕಚೇರಿ ಕೂಡ ತನಿಖೆ ಕೈಗೆತ್ತಿಕೊಂಡಿತ್ತು.
ಮೂವರು ಅರೆಸ್ಟ್:
ಘಟನೆ ಬಗ್ಗೆ ಢಾಕಾದಲ್ಲಿ ಮಾಧ್ಯಮಗೋಷ್ಠಿ ನಡೆಸಿದ್ದ ಅಲ್ಲಿನ ಗೃಹ ಸಚಿವ ಅಸಾದುದ್ದೀನ್ ಖಾನ್, ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಸಂಸದ ಅಜೀಂ ಕೊಲೆಯಾಗಿದ್ದಾರೆ. ಪ್ರಕರಣಕ್ಕೆ ಸಂಬಂದಿಸಿದಂತೆ ಬಾಂಗ್ಲಾದೇಶ ಪೊಲೀಸರುಮೂವರನ್ನು ಅರೆಸ್ಟ್ ಮಾಡಿದ್ದಾರೆ. ಅಜೀಂ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಹಂತಕರು ಬಾಂಗ್ಲಾದೇಶಿಗರೇ. ಇನ್ನು ಈ ಕೊಲೆಗೆ ಕಾರಣ ಏನೆಂಬುದು ಮುಂದಿ ದಿನಗಳಲ್ಲಿ ತನಿಖೆಯಲ್ಲಿ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ.
ಅವಾಮಿ ಲೀಗ್ ಪಕ್ಷದಿಂದ ಮೂರು ಬಾರಿ ಸಂಸದರಾಗಿ ಗೆದ್ದಿರುವ ಅನ್ವರುಲ್ ಅಜೀಂ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರು ಆಗಾಗ ಹೆಚ್ಚಿನ ಚಿಕಿತ್ಸೆಗೆಂದು ಕೋಲ್ಕತ್ತಾಗೆ ಬಂದಿದ್ದರು. ಇದಾದ ಬಳಿಕ ಅವರು ತಮ್ಮ ಕುಟುಂಬಸ್ಥರ ಜತೆ ಸಂಪರ್ಕ ಕಳೆದುಕೊಂಡಿದ್ದಾರೆ. ಅದೂ ಅಲ್ಲದೇ ಮೇ 14 ರ ನಂತರ ಅವರ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿತ್ತು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ