ಬೆಳಗಾವಿ: ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದು (murder Case) ಬಲಿಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ ದುರ್ದೈವಿ. ಜೋತಿಭಾ ತುಕಾರಾಮ ಬಾಬಾಬರ ಕೊಲೆ ಆರೋಪಿ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಈ ವೇಳೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾರೆ ಎಂದು ಮೃತ ಕುಟುಂಬಸ್ಥರು ಆರೋಪಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ: Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ
ಹೆಂಡ್ತಿ ಮೇಲೆ ಸಂಶಯ; ಕುಡಿದು ಬಂದು ಕೊಡಲಿಯಿಂದ ಕೊಚ್ಚಿ ಕೊಂದ
ಧಾರವಾಡ: ಪತ್ನಿ ಮೇಲೆ ಸಂಶಯ ಪಟ್ಟ ಪಾಪಿ ಪತಿಯೊಬ್ಬ ಕೊಂದೆ (Murder Case) ಬಿಟ್ಟಿದ್ದಾನೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಮಲ್ಲವ್ವ ಬಳ್ಳೂರ ಮೃತ ದುರ್ದೈವಿ. ಶಿವಪ್ಪ ಬಳ್ಳೂರ ಎಂಬಾತ ಪತ್ನಿ ಕೊಂದವನು.
ಶುಕ್ರವಾರ ರಾತ್ರಿ ಕುಡಿದು ಬಂದ ಶಿವಪ್ಪ ಪತ್ನಿ ಮಲ್ಲವ್ವಳ ಜತೆಗೆ ಜಗಳ ಮಾಡಿದ್ದಾನೆ. ನಂತರ ಶನಿವಾರ ಬೆಳಗಿನ ಜಾವ ಕೊಡಲಿಯಿಂದ ಪತ್ನಿಯನ್ನು ಕೊಚ್ಚಿ ಕೊಂದಿದ್ದಾನೆ. ಮದುವೆ ಆಗಿ 15 ವರ್ಷವಾದರೂ ಶಿವಪ್ಪ ನಿತ್ಯ ಪತ್ನಿ ಮೇಲೆ ಸಂಶಯ ಪಡುತ್ತಿದ್ದ. ಶುಕ್ರವಾರ ರಾತ್ರಿಯಿಡೀ ಜಗಳ ಮಾಡಿ ಬೆಳಗ್ಗೆ ಸಿಟ್ಟಿನಲ್ಲಿ ಪತ್ನಿಯನ್ನು ಕೊಂದು ಮನೆಯಲ್ಲಿಯೇ ಇದ್ದ.
ಅಕ್ಕ-ಪಕ್ಕದ ಮನೆಯವರು ಬಂದು ನೋಡಿದಾಗ ರಕ್ತಸಿಕ್ತವಾಗಿ ಬಿದ್ದಿದ್ದ ಮಲ್ಲವ್ವಳನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕೊಲೆಯಾದ ಜಾಗದಲ್ಲೇ ಕುಳಿತಿದ್ದ ಶಿವಪ್ಪನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆಯನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ: Snake Bite: ತೋಟದ ಮನೆಯಲ್ಲಿ ಆಟವಾಡುತ್ತಿದ್ದ ಬಾಲಕಿಯ ಕಚ್ಚಿದ ಹಾವು; ಕ್ಷಣಾರ್ಧದಲ್ಲೆ ಹಾರಿಹೋಯ್ತು ಪ್ರಾಣ
ತುಮಕೂರಿನಲ್ಲಿ ಮಹಿಳೆ ಶವ ಪತ್ತೆ
ತಲೆ ಜಜ್ಜಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕಮಲಮ್ಮ (35) ಕೊಲೆಯಾದವರು. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಕರೆಮಾದೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಕರೆಮಾದೇನಹಳ್ಳಿ ಗ್ರಾಮದ ಚಂದ್ರಣ್ಣನ ಪತ್ನಿ ಕಮಲಮ್ಮ ತಡರಾತ್ರಿ ಹೊರಗೆ ಹೋಗಿದ್ದರು. ಈ ವೇಳೆ ಯಾರೋ ಹಂತಕರು ಕಲ್ಲಿನಿಂದಲ್ಲೋ ಅಥವಾ ಮಾರಾಕಸ್ತ್ರದಿಂದಲ್ಲೋ ತಲೆ ಜಜ್ಜಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈ ಕೊಂಡಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ