Murder Case: ಮಹಿಳೆಯ ಕೊಲೆ ಮಾಡಿ ಕಾಣೆಯಾದ ಕಥೆ ಕಟ್ಟಿದವರು 3 ವರ್ಷದ ಬಳಿಕ ಅಂದರ್‌ - Vistara News

ಕ್ರೈಂ

Murder Case: ಮಹಿಳೆಯ ಕೊಲೆ ಮಾಡಿ ಕಾಣೆಯಾದ ಕಥೆ ಕಟ್ಟಿದವರು 3 ವರ್ಷದ ಬಳಿಕ ಅಂದರ್‌

ಪತ್ನಿಯ ನಡತೆ ಸರಿಯಿಲ್ಲ ಎಂದು ಆಕೆಯ ಗಂಡ ಹಾಗೂ ಆಕೆಯ ಸಹೋದರರು ಸೇರಿ ಕೊಲೆ (murder case) ಮಾಡಿದ್ದು, ಮೂರು ವರ್ಷದ ಬಳಿಕ ಸಿಕ್ಕಿಬಿದ್ದಿದ್ದಾರೆ.

VISTARANEWS.COM


on

belagavi mudalagi murder
ಕೊಲೆಯಾದ ಶಿವಲೀಲಾ, ಆರೋಪಿಗಳಾದ ಪತಿ ವಿಠ್ಠಲ್ ಲಕ್ಷಣ ಬಂಗಿ, ಅಶೋಕ್ ಮೊಕಾಶಿ, ಬಸವರಾಜ್ ಕಬ್ಬೂರೆ, ಸಿದಗೊಂಡ ಕಂಬಳಿ, ಲಕ್ಕಪ್ಪ ಕಂಬಳಿ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಮಹಿಳೆಯ ಕೊಲೆ ಮಾಡಿ (Murder Case) ಆಕೆ ಕಾಣೆಯಾಗಿದ್ದಾಳೆ (missing case) ಎಂದು ಕಥೆ ಕಟ್ಟಿ ಪೊಲೀಸರನ್ನೂ ಊರಿನವರನ್ನೂ ಯಾಮಾರಿಸಿದ ಖದೀಮರ ಅಸಲಿಯತ್ತು ಮೂರು ವರ್ಷದ ಬಳಿಕ ಬಯಲಾಗಿದ್ದು, ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ.

ಬೆಳಗಾವಿ (belagavi news) ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಲೀಲಾ ವಿಠ್ಠಲ್ ಬಂಗಿ(32) ಕೊಲೆಯಾದ ದುರ್ದೈವಿ. ಸ್ವತಃ ಆಕೆಯ ಪತಿ ವಿಠ್ಠಲ್ ಲಕ್ಷಣ ಬಂಗಿ ಎಂಬವನೇ ಗೆಳೆಯರ ಜೊತೆ ಸೇರಿ ಕೊಲೆ ಮಾಡಿದ್ದಾನೆ. ಸಿದಗೊಂಡ ಕಂಬಳಿ, ಲಕ್ಕಪ್ಪ ಕಂಬಳಿ, ಬಸವರಾಜ್ ಕಬ್ಬೂರೆ, ಅಶೋಕ್ ಮೊಕಾಶಿ ಇನ್ನಿತರ ಆರೋಪಿಗಳು.

ಇವರಲ್ಲಿ ಲಕ್ಕಪ್ಪ ಕಂಬಳಿ, ಸಿದಗೊಂಡ ಕಂಬಳಿ ಕೊಲೆಯಾದ ಶಿವಲೀಲಾಳ ಸಹೋದರರು. ರಾಯಭಾಗದ ಖಾಸಗಿ ಕಾಲೇಜಿನಲ್ಲಿ ಶಿವಲೀಲಾ ವ್ಯಾಸಂಗ ಮಾಡುತ್ತಿದ್ದರು. 2020ರ ಜನವರಿಯಲ್ಲಿ ಕೊಲೆ ನಡೆದಿತ್ತು. ಈಕೆಯ ನಡತೆ ಸರಿಯಿಲ್ಲ ಎಂದು ಆಕೆಯ ಗಂಡ ಹಾಗೂ ಸಹೋದರರು ಸೇರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ನಂತರ ಶವವನ್ನು ಕ್ರೂಸರ್‌ನಲ್ಲಿ ಸಾಗಿಸಿ ಸವದತ್ತಿ ತಾಲೂಕಿನ ಹಿರೇಬುದುನೂರು ಗ್ರಾಮದ ನಿರ್ಜನ ಅರಣ್ಯ ಪ್ರದೇಶದಲ್ಲಿ ಬಿಸಾಕಿದ್ದರು.

ನಂತರ ಏನೂ ಅರಿಯದಂತೆ ಮನೆ ಸೇರಿದ್ದರು. ಊರಿನಲ್ಲಿ ಜನರು ಶೀವಲೀಲಾಳ ಬಗ್ಗೆ ಪದೇ ಪದೆ ಕೇಳಲಾರಂಭಿಸಿದ್ದರಿಂದ ಶಿವಲೀಲಾ ಸಹೋದರ ಲಕ್ಕಪ್ಪ ಕಂಬಳಿ 2023 ಮಾರ್ಚ್ 26ರಂದು ಮೂಡಲಗಿ ಠಾಣೆಗೆ ಬಂದು ಆಕೆ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದ. ಪೊಲೀಸರು ಮೂಡಲಗಿ ತಾಲೂಕಿನ ಜೊಕ್ಕಾನಟ್ಟಿ ಗ್ರಾಮದಲ್ಲಿರುವ ಶಿವಲೀಲಾ ತವರು ಮನೆ ಬಳಿ ವಿಚಾರಣೆ ನಡೆಸಿದ್ದರು.

ಊರಿನಲ್ಲಿ ಶಿವಲೀಲಾ ಕೊಲೆಯಾಗಿರುವ ಬಗ್ಗೆ ಹುಟ್ಟಿಕೊಂಡ ಗುಸುಗುಸು ಹಿನ್ನೆಲೆಯಲ್ಲಿ ಶಿವಲೀಲಾ ಸಹೋದರ ಲಕ್ಕಪ್ಪನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಸತ್ಯ ಹೊರಬಿದ್ದಿದೆ. ಆರೋಪಿಗಳು ಶವ ಬಿಸಾಕಿದಲ್ಲಿ ಕೇವಲ ಶಿವಲೀಲಾ ತಲೆಬುರುಡೆ ಮಾತ್ರ ಪತ್ತೆಯಾಗಿದೆ. ತಲೆಬುರುಡೆಯನ್ನು ಪೊಲೀಸರು ಎಫ್‌ಎಸ್‌ಎಲ್‌ಗೆ ಕಳಿಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Murder Case: ಹಸುಳೆಯನ್ನೇ ಕೊಲೆಮಾಡಿದ ತಂದೆ, ಎಂಥಾ ಕಲ್ಲು ಹೃದಯ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕಬಳ್ಳಾಪುರ

Drowned in Water : ನೀರಿನಲ್ಲಿ ಮುಳುಗಿ ಮುಂಬೈ ಮೂಲದ ಇಬ್ಬರು ಬಾಲಕಿಯರು ಸಾವು

Drowned in Water : ಡ್ಯಾಂನಲ್ಲಿ ಈಜಲು ಹೋದ ಬಾಲಕಿಯರಿಬ್ಬರು ನೀರಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮೃತದೇಹಗಳನ್ನು ಹೊರತೆಗೆದಿದ್ದಾರೆ.

VISTARANEWS.COM


on

By

Drowned in water
Koo

ಚಿಕ್ಕಬಳ್ಳಾಪುರ: ಮುಂಬೈ ಮೂಲದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ (Drowned in Water) ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದ ದಂಡಿಗಾನಹಳ್ಳಿ ಡ್ಯಾಂನಲ್ಲಿ ಈಜಲು ತೆರಳಿದ್ದಾಗ ಈ ದುರ್ಘಟನೆ ನಡೆದಿದೆ. ಅಲಿಯಾ ಪಾಟೇಲ್(17) ಹಾಗೂ ಜೋಯಾ ಪಾಟೇಲ್(14) ಮೃತ ದುರ್ದೈವಿಗಳು.

ಮುಂಬೈ ಮೂಲದ ಅಲಿಯಾ ಹಾಗೂ ಜೋಯಾ ಪಾಟೇಲ್ ಗೌರಿಬಿದನೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಚಿಕ್ಕಬಳ್ಳಾಪುರ ತಾಲೂಕಿನ ದಂಡಿಗಾನಹಳ್ಳಿ ಜಲಾಶಯದಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಭಾನುವಾರ ಮುಂಬೈಗೆ ವಾಪಾಸ್ ತೆರಳಬೇಕಿದ್ದ ಇಬ್ಬರು ಜೀವಂತವಾಗಿ ಹೋಗುವ ಬದಲು ಶವವಾಗಿ ಕೊಂಡೊಯ್ಯುವಂತಾಗಿದೆ.

ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Foeticide Case: ಬಾಗಲಕೋಟೆಯಲ್ಲಿ ಮತ್ತೊಂದು ಭ್ರೂಣ ಹತ್ಯೆ: ಗಾಢ ನಿದ್ರೆಯಲ್ಲಿದ್ದಾರಾ ಅಧಿಕಾರಿಗಳು?

ಬಾಯ್ಲರ್‌ ಶಾಖಕ್ಕೆ ಸುಟ್ಟು ಕರಕಲಾದ ಯುವಕ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ದುರಂತ ಸಂಭವಿಸಿದ್ದು ಕಾರ್ಮಿಕರಿಬ್ಬರು ದಾರುಣವಾಗಿ (Chikkamagaluru Tragedy) ಮೃತಪಟ್ಟಿದ್ದಾರೆ. ಕಾರ್ಮಿಕನೊಬ್ಬ ಬಾಯ್ಲರ್ ರಿಪೇರಿ ಮಾಡುವಾಗ ಏಕಾಏಕಿ ಶಾಖವು ಹೊರಹೊಮ್ಮಿದೆ. ಪರಿಣಾಮ ರಿಪೇರಿ ಮಾಡುತ್ತಿದ್ದ ಕಾರ್ಮಿಕನ ದೇಹ ಸುಟ್ಟು ಕರಕಲಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ನಗರದ ಹೊರವಲಯದ ಕುರುಬರಹಳ್ಳಿ ಬಳಿ ಇರುವ ವಿದ್ಯಾ ಕಾಫಿ ಕ್ಯುರಿಂಗ್‌ನಲ್ಲಿ ಘಟನೆ ನಡೆದಿದೆ.

ಉದಯ್ (27) ಮೃತ ದುರ್ದೈವಿ. ಮಡಿಕೇರಿಯ ಕುಶಾಲನಗರ ಮೂಲದ ಉದಯ್ ಬಾಯ್ಲರ್ ಸರಿಪಡಿಸುವಾಗ ಏಕಾಏಕಿ 340 ಡಿ.ಸೆ ಶಾಖ ಹೊರ ಬಂದಿದೆ. ಶಾಖದ ತೀವ್ರತೆಗೆ ಉದಯ್‌ ದೇಹ ಸುಟ್ಟು ಕರಕಲಾಗಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಸದ್ಯ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಮೃತದೇಹವನ್ನು ರವಾನೆ ಮಾಡಲಾಗಿದೆ.

ಶವಗಾರದ ಬಳಿ ಮಗನನ್ನು ಕಳೆದುಕೊಂಡ ತಾಯಿಯ ಕಣ್ಣೀರು ಹಾಕುತ್ತಿದ್ದ ದೃಶ್ಯ ಕಂಡು ಬಂತು. ವಿಷಯ ತಿಳಿಯುತ್ತಿದ್ದಂತೆ ಶವಗಾರದ ಬಳಿ ಕಾಫಿ ಕ್ಯುರಿಂಗ್ ಕಾರ್ಮಿಕರು ಜಮಾಯಿಸಿದ್ದರು. ಸದ್ಯ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ.

ವಿದ್ಯುತ್ ಶಾಕ್‌ನಿಂದ ಮರದಲ್ಲೇ ಕಾರ್ಮಿಕ ಸಾವು

ಸಿಲ್ವರ್ ಮರಕ್ಕೆ ಮರಗಸಿ ಮಾಡುವಾಗ ಕಾರ್ಮಿಕರೊಬ್ಬರು ವಿದ್ಯುತ್‌ ಶಾಕ್‌ನಿಂದ ಮೃತಪಟ್ಟಿದ್ದಾರೆ. ಚಂದ್ರಪ್ಪ (45) ಮೃತ ದುರ್ದೈವಿ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಿಲ್ವರ್ ಮರದ ಅಡ್ಡ ಕೊಂಬೆಗಳನ್ನು ಕಡಿಯುವಾಗ ಘಟನೆ ನಡೆದಿದೆ.

ಮರ ನೇರವಾಗಿ ಬೆಳೆಯಲೆಂದು ಸಿಲ್ವರ್ ಮರಕ್ಕೆ ಮರಗಸಿ ಮಾಡುವುದು ಅನಿವಾರ್ಯವಾಗಿದೆ. ಹೀಗಾಗಿ ಚಂದ್ರಪ್ಪ ಮರವೇರಿ ಮರಗಸಿ ಮಾಡುತ್ತಿದ್ದರು. ಈ ವೇಳೆ ತೋಟದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗೆ ಸ್ಪರ್ಶವಾಗಿದೆ. ಈ ವೇಳೆ ಮರದಲ್ಲೆ ವಿದ್ಯುತ್‌ ಪ್ರವಹಿಸಿ ಚಂದ್ರಪ್ಪ ಮೃತಪಟ್ಟಿದ್ದಾರೆ. ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bhavani Revanna: ಭವಾನಿ ರೇವಣ್ಣ ಕಣ್ಣಾಮುಚ್ಚಾಲೆ ಆಟ; ಎಸ್ ಐ ಟಿಗೆ ಅರೆಸ್ಟ್ ಮಾಡಿ ಜೈಲಿಗಟ್ಟುವ ಹಠ!

ಭವಾನಿ ರೇವಣ್ಣ ಅವರನ್ನು ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಅವರ ವಿರುದ್ಧ ಅರೆಸ್ಟ್ ವಾರಂಟ್ ಕೂಡ ಜಾರಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ಕಲೆ‌ ಹಾಕುತ್ತಿರುವ ಎಸ್ ಐ ಟಿ ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಅವರನ್ನು ಬಂಧಿಸಲು ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ತಂಡ ಸಜ್ಜಾಗಿದೆ.

VISTARANEWS.COM


on

Bhavani Revanna hide Not Present For SIT Questioning At Home
Koo

ಬೆಂಗಳೂರು: ಮಗ ಪ್ರಜ್ವಲ್ ರೇವಣ್ಣ (Prajwal Revanna) ಸೆಕ್ಸ್ ಸ್ಕ್ಯಾಂಡಲ್‌ಗೆ ಸಂಬಂಧಿಸಿ ಮಹಿಳೆಯೊಬ್ಬಳ ಅಪಹರಣ ಮಾಡಿ ಒತ್ತಡ ಹಾಕಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಪೊಲೀಸರ ಕಣ್ಣಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಭವಾನಿಯನ್ನು (Bhavani Revanna) ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಅವರ ವಿರುದ್ಧ ಅರೆಸ್ಟ್ ವಾರಂಟ್ ಕೂಡ ಜಾರಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿ ನಿಯಮದ 41a ಅಡಿ ಭವಾನಿ ರೇವಣ್ಣಗೆ ಎಸ್ ಐ ಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಪ್ರಜ್ವಲ್‌ಗೂ 41a ಅಡಿ ನೊಟೀಸ್ ನೀಡಿದ್ದ ಎಸ್ಐಟಿ ಆ ಬಳಿಕ ಬಂಧಿಸಿತ್ತು. ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿತ್ತು. ಈಗ ಭವಾನಿ ರೇವಣ್ಣಗೂ ಅರೆಸ್ಟ್ ವಾರೆಂಟ್ ಜಾರಿ ಮಾಡುವ ಸಾಧ್ಯತೆ ಇದೆ. ತಾವೇ ಎಸ್ ಐ ಟಿ ಕಚೇರಿಗೆ ಬರುವುದಾಗಿ ಹೇಳಿದ್ದ ಭವಾನಿ ರೇವಣ್ಣ ಆ ಬಳಿಕ ಬರದೇ ತಲೆತಪ್ಪಿಸಿಕೊಂಡು ಓಡಾಡುತ್ತಿದ್ದಾರೆ. ಭವಾನಿ ರೇವಣ್ಣ ವಿರುದ್ಧ ಜನಾಕ್ರೋಶವೂ ಹೆಚ್ಚುತ್ತಿದೆ. ಭವಾನಿ ರೇವಣ್ಣಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

ಮೂರು ಜಿಲ್ಲೆ, ನಾಲ್ಕು ತಂಡ, ಸತತ ಹುಡುಕಾಟ

ಪೊಲೀಸರ ನಾಲ್ಕು ವಿಶೇಷ ತಂಡಗಳಿಂದ ಭವಾನಿ ರೇವಣ್ಣಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರು, ಮೈಸೂರು, ಹಾಸನ ಈ ಮೂರು ಜಿಲ್ಲೆಗಳಲ್ಲಿ ಭವಾನಿ ರೇವಣ್ಣಗಾಗಿ ಮುಖ್ಯವಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಮೂರು ಜಿಲ್ಲೆಗಳಲ್ಲಿ ಮೂರು ಪೊಲೀಸ್ ತಂಡಗಳು ಬೀಡುಬಿಟ್ಟಿವೆ. ನಾಲ್ಕನೇ ಟೆಕ್ನಿಕಲ್ ತಂಡದಿಂದಲೂ ಭವಾನಿ ರೇವಣ್ಣ ಬಗ್ಗೆ ಟ್ರ್ಯಾಕಿಂಗ್ ನಡೆಯುತ್ತಿದೆ. ಈ ತಾಂತ್ರಿಕ ತಂಡ ಭವಾನಿ ರೇವಣ್ಣ ಅವರ ಮೊಬೈಲ್ ಟ್ರ್ಯಾಕ್ ಮಾಡುತ್ತಿದೆ. ಟವರ್ ಡಂಪ್ ಲೊಕೇಷನ್, ಸಿಡಿಆರ್ ಪರಿಶೀಲನೆ ನಡೆಸುತ್ತಿದೆ.

ಇದನ್ನೂ ಓದಿ: Exit Poll 2024 : ಕರ್ನಾಟಕದಲ್ಲಿ ಬಿಜೆಪಿಗೆ ನಷ್ಟ, ಕಾಂಗ್ರೆಸ್​ಗೆ ಲಾಭ ; ಜೆಡಿಎಸ್​ಗೆ +1

ಎಲ್ಲವೂ ಗೊತ್ತಿದ್ದೂ ಕಣ್ಣಾ ಮುಚ್ಚಾಲೆ ಆಡ್ತಿದ್ದಾರಾ ಭವಾನಿ ರೇವಣ್ಣ?

ತನಿಖೆಗೆ ಸಹಕರಿಸ್ತೀವಿ, ನೊಟೀಸ್ ಕೊಟ್ರೆ ವಿಚಾರಣೆಗೆ ಹಾಜರಾಗ್ತೀವಿ ಎಂದಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಪತ್ನಿ ಭವಾನಿ ಈಗ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕಾರ ಆಗುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ. ಅವರ ಮನೆಗೆ ಹೋಗಿ ಭವಾನಿ ರೇವಣ್ಣರನ್ನ ವಿಚಾರಣೆ ‌ನಡೆಸಲು ಎಸ್ ಐ ಟಿ ಮುಂದಾಗಿತ್ತು. ಆದರೆ ಮನೆಯಿಂದ ಹೊರಬಂದು ಅಜ್ಞಾತ ಸ್ಥಳದಲ್ಲಿ ಅಡಗಿಕೊಂಡಿದ್ದಾರೆ. ಎಸ್ ಐ ಟಿ ನೊಟೀಸ್ ಗೆ ಉತ್ತರವನ್ನೂ ಕೊಟ್ಟಿಲ್ಲ‌ ಸಂಬಂಧಿಕರೊಬ್ಬರ ಮನೆಯಲ್ಲಿ ತಲೆ ಮರೆಸಿಕೊಂಡಿರುವ ಸಾಧ್ಯತೆ ಇದೆ.

ಯಾವ ಕ್ಷಣದಲ್ಲಾದ್ರೂ ಭವಾನಿ ರೇವಣ್ಣ ವಶ

ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ಕಲೆ‌ ಹಾಕುತ್ತಿರುವ ಎಸ್ ಐ ಟಿ ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಅವರನ್ನು ಬಂಧಿಸಲು ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ತಂಡ ಸಜ್ಜಾಗಿದೆ.

ಹೈ ಕೋರ್ಟ್ ಮೊರೆ ಹೋಗಲು ಭವಾನಿ ರೇವಣ್ಣ ಚಿಂತನೆ?

ಎಸ್ಐಟಿಯಿಂದ ತಪ್ಪಿಸಿಕೊಳ್ಳೋಕೆ ಭವಾನಿ ರೇವಣ್ಣಗೆ ಇರುವ ಒಂದೇ ಚಾನ್ಸ್ ಅಂದರೆ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವುದು. ಆದರೆ ಇಂದು ಭಾನುವಾರ ಆದ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ರಜೆ ಇರುತ್ತದೆ. ಇಂಥ ಸಂಗತಿಗಳಿಗೆಲ್ಲ ಹೈಕೋರ್ಟ್ ತುರ್ತು ವಿಚಾರಣೆ ನಡೆಸುವುದಿಲ್ಲ. ಹಾಗಾಗಿ ಇಂದೂ ಕೂಡ ಭವಾನಿ ರೇವಣ್ಣ ತಲೆಮರೆಸಿಕೊಂಡಿರಲು ಪ್ರಯತ್ನಿಸಲಿದ್ದಾರೆ. ಹೈ ಕೋರ್ಟ್‌ಗೆ ಸೋಮವಾರ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ವಿಚಾರಣೆ ವೇಳೆ ಮೊಂಡಾಟ

ಪ್ರಜ್ವಲ್‌ ರೇವಣ್ಣ ಎಸ್‌ಐಟಿ ವಿಚಾರಣೆ ವೇಳೆ ಭಾರೀ ಮೊಂಡಾಟ ತೋರಿದ್ದಾರೆ ಎನ್ನಲಾಗಿದೆ. ಎಷ್ಟು ವಿಚಾರಣೆ ಮಾಡಿದ್ರೂ ಪ್ರಜ್ವಲ್‌ ಸರಿಯಾಗಿ ಬಾಯಿ ಬಿಡ್ತಿಲ್ಲ. ವಿಚಾರಣೆ ವೇಳೆ ಎದ್ದೇಳೋದು.. ಆಕಡೆ ಈಕಡೆ ಓಡಾಡೋದು.. ಏನೂ ಗೊತ್ತಿಲ್ಲ ಅಂತಾನೆ ಉತ್ತರ ನೀಡುತ್ತಾ ಎಸ್ಐಟಿ ಅಧಿಕಾರಿಗಳಿಗೆ ತಲೆ ಕೆಡಿಸಿದ್ದಾರೆ. ಏನು ಕೇಳಿದ್ರೂ ನಂಗೆ ಗೊತ್ತಿಲ್ಲ.. ನಾನೇನು ಮಾಡಿಲ್ಲ ಅಂತಿರುವ ಪ್ರಜ್ವಲ್‌ರನ್ನು ಮೊಬೈಲ್ ಬಗ್ಗೆ ಮತ್ತೆ ಬಾಯಿ ಬಿಡಿಸಲು ಎಸ್ಐಟಿ ಅಧಿಕಾರಿಗಳು ಪ್ರಯತ್ನ ನಡೆಸಿದ್ದಾರೆ. ಈ ವೇಳೆ ಯಾವ ಮೊಬೈಲ್..? ಇರುವ ಮೊಬೈಲ್ ಏರ್ಪೋರ್ಟ್ ನಲ್ಲೇ ಕೊಟ್ಟೆ.. ಯಾವ ಮೊಬೈಲ್ ಬಗ್ಗೆ ಮಾತನಾಡ್ತಿದೀರಾ..? ಹಳೆ ಮೊಬೈಲ್ ಕಳೆದೋಗಿದೆ ಎಂದು ಉಡಾಫೆ ಉತ್ತರ ಕೊಟ್ಟಿದ್ದಾರೆ ಎನ್ನಲಾಗಿದೆ. ಪ್ರಜ್ವಲ್‌ರ ಈಗಿನ ಮೊಬೈಲ್‌ನಲ್ಲಿ ಯಾವುದೇ ರೀತಿ ವಿಡಿಯೋಗಳು, ಮೆಸೇಜ್ ಗಳು ಪತ್ತೆಯಾಗಿಲ್ಲ. ಸದ್ಯ ಡಿಜಿಟಲ್ ಎವಿಡೆನ್ಸ್ ಕಲೆ ಹಾಕಲು ಎಸ್ಐಟಿ, ಎಲ್ಲಾ ರೀತಿಯಲ್ಲಿ ಪ್ರಯತ್ನ ನಡೆಸುತ್ತಿದೆ.

ಈಗಾಗಲೇ ಪ್ರಜ್ವಲ್‌ ಅವರ ವಿಚಾರಣೆ ಮಾಡಿ 161 ಹೇಳಿಕೆಯನ್ನು ಎಸ್‌ಐಟಿ ದಾಖಲಿಸಿದೆ. ಅದರಲ್ಲಿ ಮೊಬೈಲ್‌ ಕುರಿತು ದಾಖಲಿಸಿದೆ. ನೀವು ಹೇಳುತ್ತಿರುವ ಮೊಬೈಲ್ ನನ್ನ ಬಳಿ ಇಲ್ಲ. ಕಳೆದ ವರ್ಷವೇ ಫೋನ್ ಕಳೆದು ಹೋಗಿದ್ದು, ಆ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ಕೂಡ ನೀಡಿದ್ದೇನೆ ಎಂದು ಪ್ರಜ್ವಲ್‌ ಹೇಳಿದ್ದಾರೆ. ಈ ಹೇಳಿಕೆ ಸತ್ಯಾಸತ್ಯತೆಯನ್ನು ಎಸ್‌ಐಟಿ ಪರಿಶೀಲಿಸಲಿದೆ.

ನೀವು ತೋರಿಸಿರುವ ವಿಡಿಯೋಗಳಲ್ಲಿ ಇರುವುದು ನಾನಲ್ಲ. ಅವರೆಲ್ಲ ನನಗೆ ಪರಿಚಯ ಅಷ್ಟೇ. ನಾನು ಯಾರನ್ನೂ ಅತ್ಯಾಚಾರ ಮಾಡಿಲ್ಲ. ಅತ್ಯಾಚಾರ ಆರೋಪಗಳಿಗೂ ನನಗೂ ಯಾವ ಸಂಬಂಧವೂ ಇಲ್ಲ. ವಿಡಿಯೋಗಳ ಬಗ್ಗೆ ನಂಗಷ್ಟು ಗೊತ್ತಿಲ್ಲ ಎಂದು ಪ್ರಜ್ವಲ್‌ ಹೇಳಿದ್ದಾರೆ. ವೈರಲ್ ಆಗಿರುವ ವಿಡಿಯೋಗಳನ್ನು ತೋರಿಸಿ ಪ್ರಶ್ನಿಸಿದಾಗ ಈ ಉತ್ತರ ದೊರೆತಿದೆ. ತನ್ನ ಮೇಲಿರುವ ಎಲ್ಲ ಆರೋಪಗಳನ್ನು ಪ್ರಜ್ವಲ್‌ ತಳ್ಳಿ ಹಾಕಿದ್ದಾರೆ.

Continue Reading

ಕರ್ನಾಟಕ

Prajwal Revanna Case: ಕಡೆಗೂ ವಿಚಾರಣೆಗೆ ಹಾಜರಾಗದ ಭವಾನಿ ರೇವಣ್ಣ; 7 ಗಂಟೆ ಕಾದು ಎಸ್‌ಐಟಿ ತಂಡ ವಾಪಸ್

Prajwal Revanna Case: ಮನೆ ಬಳಿ ಎಷ್ಟು ಕಾದರೂ ಬಾರದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗದ ಬಗ್ಗೆ ವರದಿ ಮಾಡಿಕೊಂಡು ಎಸ್‌ಐಟಿ ಅಧಿಕಾರಿಗಳು ತೆರಳಿದ್ದಾರೆ.

VISTARANEWS.COM


on

Prajwal Revanna Case
Koo

ಹಾಸನ: ಲೈಂಗಿಕ ದೌರ್ಜನ್ಯ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದಲ್ಲಿ (Prajwal Revanna Case) ತನಿಖೆಗೆ ಸಹಕರಿಸುವುದಾಗಿ ಹೇಳಿದ್ದ ಭವಾನಿ ರೇವಣ್ಣ ಅವರು ಶನಿವಾರವೂ ಪ್ರತ್ಯಕ್ಷವಾಗಿಲ್ಲ. ಭವಾನಿ ರೇವಣ್ಣ (Bhavani Revanna) ಅವರನ್ನು ವಶಕ್ಕೆ ಪಡೆಯಲು ತೆರಳಿದ್ದ ಎಸ್‌ಐಟಿ ಅಧಿಕಾರಿಗಳು ಹೊಳೆನರಸೀಪುರ ನಿವಾಸದ ಎದುರು ಸತತ 7 ಗಂಟೆ ಕಾದು ವಾಪಸ್‌ ಆಗಿದ್ದಾರೆ.

ಮನೆ ಬಳಿ ಎಷ್ಟು ಕಾದರೂ ಬಾರದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗದ ಬಗ್ಗೆ ವರದಿ ಮಾಡಿಕೊಂಡು ಎಸ್‌ಐಟಿ ಅಧಿಕಾರಿಗಳು ತೆರಳಿದ್ದಾರೆ. ಬೆಳಗ್ಗೆ 11 ಗಂಟೆಗೆ ಮನೆ ಬಳಿ ತೆರಳಿದ್ದ ಎಸ್‌ಐಟಿ ಟೀಂನಲ್ಲಿ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಇನ್ಸ್‌ಪೆಕ್ಟರ್ ತೆರಳಿದ್ದರು. ಎಷ್ಟು ಕಾದರೂ ಭವಾನಿ ರೇವಣ್ಣ ಬಾರದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ವಾಪಸ್‌ ತೆರಳಿದ್ದಾರೆ.

ಇಂದು ಬೆಳಗ್ಗೆ 10 ಗಂಟೆಯಿಂದ 5 ಗಂಟೆ ನಡುವೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್ ನೀಡಿತ್ತು. ಆದರೆ ಬಂಧನ ಭೀತಿಯಿಂದ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗಿಲ್ಲ.

ಇದನ್ನೂ ಓದಿ | Prajwal Revanna Case: ವಿಚಾರಣೆಯಲ್ಲಿ ಬಾಯಿಬಿಡದ ಪ್ರಜ್ವಲ್‌; ಸ್ಥಳ ಮಹಜರಿಗಾಗಿ ಹೊಳೆನರಸೀಪುರಕ್ಕೆ ಕರೆದೊಯ್ಯಲು ಸಿದ್ಧತೆ

ಭವಾನಿ ರೇವಣ್ಣಗೆ ನ್ಯಾಯಾಲಯದ ಬಗ್ಗೆ ಗೌರವವಿದೆ: ವಕೀಲೆ ಸುಮಾ

ಹೊಳೆನರಸೀಪುರದಲ್ಲಿ ಭವಾನಿ ರೇವಣ್ಣ ಪರ ವಕೀಲೆ ಸುಮಾ ಮಾತನಾಡಿ, ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ನಮಗೆ ಇಲ್ಲ. ಹೆಣ್ಣುಮಕ್ಕಳು ಮೇಡಂ ಪರವಾಗಿ ಕಷ್ಟದಲ್ಲೂ ಇರುತ್ತೇವೆ, ಸುಖದಲ್ಲೂ ಇರುತ್ತೇವೆ. ಆದರೆ ನಾನು ಇಂದು ಬಂದಿದ್ದು ವಕೀಲಳಾಗಿ. ಭವಾನಿ ರೇವಣ್ಣ ಅವರಿಗೆ ಆರೋಗ್ಯ ಸರಿಯಿಲ್ಲ, ಎರಡು ಮಂಡಿ ಆಪರೇಷನ್ ಆಗಿದೆ. ಅವರ ಅಣ್ಣ ಸಾವನ್ನಪ್ಪಿದ್ದು, ಆ ನೋವಿನಲ್ಲೂ ಇದ್ದಾರೆ. ಖಂಡಿತವಾಗಿಯೂ ತನಿಖೆಗೆ ಹಾಜರಾಗುತ್ತಾರೆ. ಕಾನೂನು ಬಗ್ಗೆ ಮೇಡಂಗೆ ಗೌರವವಿದೆ. ಅವರಿಗೆ ನ್ಯಾಯಾಲಯದ ಬಗ್ಗೆ ಗೌರವವಿದೆ. ಆದಷ್ಟು ಬೇಗ ಬರ್ತಾರೆ, ತನಿಖೆ ಎದುರಿಸುತ್ತಾರೆ, ನಿರ್ದೊಷಿಯಾಗಿ ಬರ್ತಾರೆ ಎಂದು ಹೇಳಿದರು.

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮದ ಇಬ್ಬರು ಅಧಿಕಾರಿಗಳಿಗೆ 6 ದಿನ ಎಸ್‌ಐಟಿ ಕಸ್ಟಡಿ

Valmiki Corporation Scam: ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಅವರನ್ನು ಎಸ್ಐಟಿ ಕಸ್ಟಡಿಗೆ ನೀಡಲಾಗಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣದಲ್ಲಿ (Valmiki Corporation Scam) ಬಂಧನವಾಗಿರುವ ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಅವರನ್ನು 6 ದಿನ ಎಸ್ಐಟಿ ಕಸ್ಟಡಿಗೆ ನೀಡಿ ನಗರದ 1ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ಪ್ರಕರಣದಲ್ಲಿ ಹಣ ದುರುಪಯೋಗ ಆರೋಪ ಕೇಳಿಬಂದಿದ್ದರಿಂದ ವಾಲ್ಮೀಕಿ ನಿಗಮದ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಹೀಗಾಗಿ ತನಿಖೆ ಆರಂಭಿಸಿದ್ದ ಎಸ್‌ಐಟಿ, ಶುಕ್ರವಾರ ಇಬ್ಬರು ಅಧಿಕಾರಿಗಳನ್ನು ಬಂಧಿಸಿತ್ತು. ಇಂದು ಆರೋಪಿಗಳನ್ನು ವಿಚಾರಣೆಗಾಗಿ 1ನೇ ಎಸಿಎಂಎಂ ಕೋರ್ಟ್ ಹಾಜರುಪಡಿಸಲಾಗಿತ್ತು. ಆದ್ದರಿಂದ ಆರೋಪಿಗಳನ್ನು ವಿಚಾರಣೆಗಾಗಿ ಎಸ್‌ಐಟಿ ಕಸ್ಟಡಿಗೆ ನೀಡಲಾಗಿದೆ.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ ಫಿಕ್ಸ್; ನಾಗೇಂದ್ರ ವಿರುದ್ಧ ಕ್ರಮಕ್ಕೆ ಖರ್ಗೆ ಸೂಚನೆ

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು.

ಇದನ್ನೂ ಓದಿ | Pralhad Joshi: ವಾಲ್ಮೀಕಿ ನಿಗಮದ ಹಗರಣ; ಸಚಿವ ನಾಗೇಂದ್ರರನ್ನು ಬಂಧಿಸಿ, ಸಿಬಿಐ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆಯುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

Continue Reading
Advertisement
PM Narendra Modi
ದೇಶ4 mins ago

PM Narendra Modi: ಎಕ್ಸಿಟ್‌ ಪೋಲ್‌ ರಿಸಲ್ಟ್‌ ಬೆನ್ನಲ್ಲೇ ಪ್ರಧಾನಿ ಮೋದಿ ಬ್ಯಾಕ್‌ ಟು ಬ್ಯಾಕ್‌ ಮೀಟಿಂಗ್‌

Muthyala Maduvu Waterfalls
ಪ್ರವಾಸ20 mins ago

Muthyala Maduvu Waterfalls: ಜಲರಾಶಿಯಿಂದ ತುಂಬಿಕೊಂಡು ಕಣ್ಮನ ಸೆಳೆಯುತ್ತಿರುವ ಮುತ್ಯಾಲಮಡುವು ಜಲಪಾತ

CAN vs USA
ಕ್ರೀಡೆ25 mins ago

CAN vs USA: ಕೆನಡಾ ಪರ ಟಿ20 ವಿಶ್ವಕಪ್​ ಪಂದ್ಯವಾಡಿದ ದಾವಣಗೆರೆಯ ಶ್ರೇಯಸ್

Raveena Tandon attacked In Mumbai After Being Accused Of Rash Driving
ಬಾಲಿವುಡ್37 mins ago

Raveena Tandon: ರವೀನಾ ಟಂಡನ್ ಕಾರು ಅಪಘಾತ; ನಟಿ ಹೊಡೆಯಬೇಡಿ ಪ್ಲೀಸ್ ಎನ್ನುತ್ತಿರುವ ವಿಡಿಯೊ ನೋಡಿ!

gold rate today
ಕರ್ನಾಟಕ46 mins ago

Gold Rate Today: ಬಂಗಾರ ಪ್ರಿಯರಿಗೆ ಶುಭ ಸುದ್ದಿ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ

Drowned in water
ಚಿಕ್ಕಬಳ್ಳಾಪುರ1 hour ago

Drowned in Water : ನೀರಿನಲ್ಲಿ ಮುಳುಗಿ ಮುಂಬೈ ಮೂಲದ ಇಬ್ಬರು ಬಾಲಕಿಯರು ಸಾವು

Virat Kohli
ಕ್ರೀಡೆ1 hour ago

Virat Kohli: ಐಸಿಸಿ ವರ್ಷದ ಏಕದಿನ ಆಟಗಾರ ಪ್ರಶಸ್ತಿ ಸ್ವೀಕರಿಸಿದ ವಿರಾಟ್ ಕೊಹ್ಲಿ

Exit Poll 2024
ದೇಶ1 hour ago

Exit poll 2024: ಮೂರು ಎಕ್ಸಿಟ್ ಪೋಲ್ ಪ್ರಕಾರ ಬಿಜೆಪಿ ಸೀಟು 400 ದಾಟಲಿದೆ!

Karnataka Rain
ಮಳೆ2 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Bhavani Revanna hide Not Present For SIT Questioning At Home
ಕರ್ನಾಟಕ2 hours ago

Bhavani Revanna: ಭವಾನಿ ರೇವಣ್ಣ ಕಣ್ಣಾಮುಚ್ಚಾಲೆ ಆಟ; ಎಸ್ ಐ ಟಿಗೆ ಅರೆಸ್ಟ್ ಮಾಡಿ ಜೈಲಿಗಟ್ಟುವ ಹಠ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು20 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌