ಬೆಳಗಾವಿ : ಜೂನ್ 13ರಂದು ವಾಯವ್ಯ ಶಿಕ್ಷಕ ಹಾಗೂ ವಾಯವ್ಯ ಪದವೀಧರ ಕ್ಷೇತ್ರದ ಚುನಾವಣೆ ನಡೆಯಲಿದ್ದು ಚುನಾವಣಾ ಅಖಾಡ ರಂಗೇರಿದೆ. ಕಾಂಗ್ರೆಸ್ ಶಕ್ತಿ ಪ್ರದರ್ಶನ ತೋರಿಸಿದ ಬೆನ್ನಲ್ಲೇ ಇದೀಗ ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ತೋರಿಸಲಿದೆ. ಗುರುವಾರ ಬೆಳಗ್ಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಬೆಳಗಾವಿಗೆ ಆಗಮಿಸಲಿದ್ದಾರೆ.
ವಾಯವ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಆಗಲಿದ್ದು, ವಾಯವ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ್ ಮತ್ತು ವಾಯವ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹನುಮಂತ ನಿರಾಣಿಯಿಂದ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಇದನ್ನೂ ಓದಿ | MLC Election | ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಗೆಲುವು ಹುಕ್ಕೇರಿಗೋ, ಶಹಾಪುರಗೋ?
ಮಧ್ಯಾಹ್ನ 12 ಗಂಟೆಗೆ ಕನ್ನಡ ಸಾಹಿತ್ಯ ಭವನದಲ್ಲಿ ಕಾರ್ಯಕರ್ತರು ಸೇರಲಿದ್ದಾರೆ. ನಂತರ ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ರ‍್ಯಾಲಿ ಮೂಲಕ ತೆರಳಿ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಸಚಿವರಾದ ಗೋವಿಂದ ಕಾರಜೋಳ, ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆ , ಬೆಳಗಾವಿ ಜಿಲ್ಲೆಯ ಹಾಲಿ, ಮಾಜಿ ಬಿಜೆಪಿ ಶಾಸಕರು, ಸಂಸದರು, ಎಂಎಲ್‌ಸಿಗಳು ಭಾಗಿಯಾಗಲಿದ್ದಾರೆ.
ಬೆಳಗಾವಿಯ ಸದಾಶಿವನಗರದ ಮೈದಾನದಲ್ಲಿ ಮಾಜಿ ಸಿಎಂ ಬಿಎಸ್‌ವೈ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಸಮಾವೇಶ ಹಮ್ಮಿಕೊಂಡಿದ್ದಾರೆ. ಜಾರಕಿಹೊಳಿ ಬ್ರದರ್ಸ್ ಸಮಾವೇಶಕ್ಕೆ ಹಾಜಾರಾಗುತ್ತಾರಾ ಎನ್ನುವ ಪ್ರಶ್ನೆಗಳು ಮೂಡಿದೆ.
ಇದನ್ನೂ ಒದಿ | ಹೆಲಿಕಾಪ್ಟರ್‌ನಲ್ಲಿ ಬಂದು ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ