Site icon Vistara News

Lakshmi Hebbalkar: ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ; ಪಾಲಕರಿಗೆ ಹೆಬ್ಬಾಳ್ಕರ್ ಮನವಿ

LKG UKG In Govt Schools

ಬೆಳಗಾವಿ: ಹಾಸನ ಜಿಲ್ಲೆ ಆಲೂರು ಬಳಿ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar), ರಜಾ ದಿನಗಳಲ್ಲಿ ಮಕ್ಕಳ ಸುರಕ್ಷತೆಗೆ (childrens safety) ಹೆಚ್ಚಿನ ಗಮನ ನೀಡುವಂತೆ ಪಾಲಕರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ರಜೆಯ ದಿನಗಳಲ್ಲಿ ವಿವಿಧ ರೀತಿಯ ದುರಂತಗಳಲ್ಲಿ ಮಕ್ಕಳ ಸಾವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವರು ಈ ಹೇಳಿಕೆ ನೀಡಿದ್ದಾರೆ. ಪ್ರತಿಯೊಬ್ಬರ ಜೀವ ಅತ್ಯಂತ ಅಮೂಲ್ಯವಾದದ್ದು. ಹಾಗಾಗಿ ಯಾವುದೇ ಸಂದರ್ಭದಲ್ಲಿ ನಿರ್ಲಕ್ಷ್ಯ ಮಾಡಬಾರದು. ಪಾಲಕರು ಸದಾ ಮಕ್ಕಳ ಚಟುವಟಿಕೆಗಳನ್ನು ಗಮನಿಸುತ್ತಿರಬೇಕು ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ: UPI in Healthcare: ಆರೋಗ್ಯ ಕ್ಷೇತ್ರದಲ್ಲೂ ಡಿಜಿಟಲ್ ಕ್ರಾಂತಿ!

ಮಕ್ಕಳು ರಜಾ ಸಂದರ್ಭದಲ್ಲಿ ನೀರಿನಲ್ಲಿ ಆಟವಾಡಲು ತೆರಳುತ್ತಾರೆ. ಈ ವೇಳೆ ಸುರಕ್ಷಿತ ಜಾಗವನ್ನು ಆಯ್ಕೆ ಮಾಡಿಕೊಳ್ಳಬೇಕು. ಜತೆಗೆ ಪಾಲಕರೊಬ್ಬರು ಜತೆಯಲ್ಲಿರಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಾಲನೆಯಿಂದ ದೂರವಿರಬೇಕು. ಇತರರು ಕೂಡ ಎಚ್ಚರಿಕೆಯಿಂದ ವಾಹನ ಓಡಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ಪಾಲಕರು ತಿಳಿ ಹೇಳಬೇಕು. ಯಾವುದೇ ರೀತಿಯ ಚಟುವಟಿಕೆ ಸಂದರ್ಭದಲ್ಲಿ ಸುರಕ್ಷತೆಯ ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ಸಚಿವರು ವಿನಂತಿಸಿದ್ದಾರೆ.

Exit mobile version