Site icon Vistara News

Road Accident : ಆಕ್ಸೆಲ್ ಕಟ್‌ ಆಗಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್‌; 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

Bus Overturns after axel cut near Belagavi

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಬಸ್‌ ಒಂದು ಆ‌ಕ್ಸೆಲ್‌ ಕಟ್‌ (Bus overturns after Axel cut) ಆಗಿ ಪಲ್ಟಿಯಾದ (Road accident) ಪರಿಣಾಮ 20ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

bus auto accident

ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗಕ್ಕೆ ಹೊರಟಿದ್ದ ಬಸ್ ಇದಾಗಿದ್ದು, ಇದರಲ್ಲಿ 50ಕ್ಕೂ ಅಧಿಕ ಪ್ರಯಾಣಿಕರು ಇದ್ದರು. ರಾಮದುರ್ಗಕ್ಕೆ ಹೋಗುತ್ತಿದ್ದ ಬಸ್ ಚಲಿಸುತ್ತಿದ್ದಾಗಲೇ ಬಸ್‌ನ ಆಕ್ಸೆಲ್‌ ಕಟ್ ಆಗಿದೆ. ಆಕ್ಸೆಲ್‌ ಕಟ್‌ ಆದ ಕೂಡಲೇ ನಿಯಂತ್ರಣ ಕಳೆದುಕೊಂಡ ಬಸ್‌ ಮರಕ್ಕೆ ಡಿಕ್ಕಿ ಹೊಡೆದಿದೆ. ಮರಕ್ಕೆ ಡಿಕ್ಕಿ ಹೊಡೆದ ಬಸ್‌ ಅಲ್ಲೇ ಪಲ್ಟಿಯಾಗಿದೆ.

bus auto accident

ಬೆಳಗ್ಗಿನ ಹೊತ್ತಾಗಿರುವುದರಿಂದ ಬಸ್‌ನಲ್ಲಿ ವಿದ್ಯಾರ್ಥಿಗಳೇ ಹೆಚ್ಚಾಗಿದ್ದರು. ಗ್ರಾಮಸ್ಥರು ಕೂಡಲೇ ಅಂಬ್ಯುಲೆನ್ಸ್‌ಗೆ ಕರೆ ಮಾಡಿ ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಹಲವರಿಗೆ ಗಾಯಗಳಾಗಿದ್ದರು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನುವುದು ಸಮಾಧಾನದ ವಿಷಯ. ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bangalore rain : ಮನೆ ಮುಂದೆ ವಾಕ್‌ ಮಾಡುತ್ತಿದ್ದಾಗ ಉರುಳಿದ ಮರ; ತಾಯಿ ಮೃತ್ಯು, 5 ವರ್ಷದ ಮಗು ಗಂಭೀರ

ಆಟೋಗೆ ಶಾಲಾ ಬಸ್‌ ಡಿಕ್ಕಿ, ಐವರ ದುರ್ಮರಣ

ಮಂಗಳೂರು: ಶಾಲಾ ಬಸ್ ಹಾಗೂ ಆಟೋ ನಡುವೆ (bus auto accident) ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪ್ರಯಾಣಿಕರು ದುರ್ಮರಣ ಹೊಂದಿದ ಘಟನೆ (Road Accident) ಕೇರಳ- ಕರ್ನಾಟಕ ಗಡಿಭಾಗದಲ್ಲಿ ನಡೆದಿದೆ.

bus auto accident

ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪ ಈ ದುರ್ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ. ಕಾಸರಗೋಡಿನ ಮೊಗ್ರಾಲ್ ಪುತ್ತೂರು ಎಂಬಲ್ಲಿನ ಆಟೋ ರಿಕ್ಷಾಗೆ ಪೆರ್ಲ ಸಮೀಪದ ಆಂಗ್ಲ ಮಾಧ್ಯಮ ಶಾಲೆಯ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಛಿದ್ರವಾಗಿದ್ದು, ಆಟೋದಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಸ್‌ ಪಲ್ಟಿಯಾಗಿ 10 ಜನರಿಗೆ ಗಾಯ

ವಿಜಯನಗರ: ಖಾಸಗಿ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ವಿಜಯನಗರದ MB ಅಯ್ಯನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಗಾಯಗೊಂಡ ಡ್ರೈವರ್ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನಿಂದ ಕಲ್ಬುರ್ಗಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲು ಮಾಡಲಾಗಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version