Site icon Vistara News

Road Accident : ಟೈರ್‌ ಸ್ಫೋಟಕ್ಕೆ ಕ್ರೂಸರ್ ವಾಹನ ಪಲ್ಟಿ; ಮೂವರು ಮಹಿಳೆಯರ ದುರ್ಮರಣ

Road Accident in chikodi maharashtra

ಚಿಕ್ಕೋಡಿ: ಮಹಾರಾಷ್ಟ್ರದ ಸಾಂಗೋಲಾ- ಜತ್ತ ಮಾರ್ಗದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿದ್ದು, ಮೂವರು ಮಹಿಳೆಯರು ಸ್ಥಳದಲ್ಲೇ (Road Accident ) ದುರ್ಮರಣ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಮಹಿಳೆಯರು ಮೃತರಾಗಿದ್ದಾರೆ.

ಬಳ್ಳಿಗೇರಿ ಗ್ರಾಮದ ನಿವಾಸಿಗಳಾದ ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಮೃತ ದುರ್ದೈವಿಗಳು. ಬಳ್ಳಿಗೇರಿ ಗ್ರಾಮದಿಂದ ಮಹಾರಾಷ್ಟ್ರಕ್ಕೆ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಕ್ರೂಸರ್ ವಾಹನದ ಎಡಬದಿಯ ಟೈರ್ ಸ್ಫೋಟಗೊಂಡಿದೆ.

ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್‌ ವಾಹನ ಪಲ್ಟಿಯಾಗಿದೆ. ಕ್ರೂಸರ್ ಪಲ್ಟಿಯಾದ ಪರಿಣಾಮ ಮೂವರು ಮಹಿಳೆಯರು ಗಂಭೀರ ಗಾಯಗೊಂಡು ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ.

ಸ್ಥಳೀಯರು ಸಹಾಯಕ್ಕೆ ಧಾವಿಸಿ ಚೆಲ್ಲಾಪಿಲ್ಲಿಯಾಗಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಬಳ್ಳಿಗೇರಿ ಗ್ರಾಮದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಬಳಿಕ ಹಸ್ತಾಂತರ ಮಾಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Accident Case : ಬ್ಯಾನರ್‌ ಕಟ್ಟುವಾಗ ಕರೆಂಟ್‌ ಶಾಕ್‌ಗೆ ವ್ಯಕ್ತಿ ಸಾವು; ಡಿವೈಡರ್‌ಗೆ ಗುದ್ದಿ ಪಲ್ಟಿಯಾದ ಕಾರು

ಕಾರು ಪಲ್ಟಿ ಮೂವರು ಗಂಭೀರ

ರಸ್ತೆ ಡಿವೈಡರ್‌ಗೆ ಗುದ್ದಿ ಕಾರು ಪಲ್ಟಿ ಆಗಿದೆ. ಪರಿಣಾಮ ಕಾರಲ್ಲದ್ದ ಮೂವರಿಗೆ ಗಂಭೀರ ಗಾಯವಾಗಿದೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮ ಬಳಿ ರಾ. ಹೆ 50ರಲ್ಲಿ ಘಟನೆ ನಡೆದಿದೆ. ಬೆಂಗಳೂರಿನಿಂದ ಕೊಪ್ಪಳ ‌ಕಡೆ ಚಲಿಸುತ್ತಿದ್ದ ಕಾರು ಪಲ್ಟಿಯಾಗಿದೆ.

ಘಟನೆಯಲ್ಲಿ ಇಬ್ಬರ ಸ್ಥಿತಿ ಚಿಂತಾಜನಕ‌ವಾಗಿದ್ದು, ಮತ್ತೋರ್ವ ವ್ಯಕ್ತಿಗೆ ಸಣ್ಣ ಪುಟ್ಟ ಗಾಯವಾಗಿದೆ. ಘಟನಾ ಸ್ಥಳಕ್ಕೆ ಕಾನಾ ಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾನಾ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾರು, ಬೈಕ್ ನಡುವೆ ಭೀಕರ ಅಪಘಾತ; ಸವಾರ ಸಾವು

ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಯನಗುಂಟೆ ಬಳಿ ಕಾರು ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ. ಯನಗುಂಟೆ ಗ್ರಾಮದ ಕೃಷ್ಣಪ್ಪ‌ ( 70 ) ಮೃತರು.

ಕೃಷ್ಣಪ್ಪ ಹೊಸಕೋಟೆಯಿಂದ ಗ್ರಾಮದ ಕಡೆಗೆ ಬರುತ್ತಿದ್ದಾಗ, ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಬೈಕ್‌ನಿಂದ ಕೆಳಗೆ ಬಿದ್ದ ವೃದ್ಧ ಕೃಷ್ಣಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಕಾರಿನ ಮುಂಭಾಗ ನಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version