ಕರ್ನಾಟಕ ಎಲೆಕ್ಷನ್
ಆರ್. ವಿ. ದೇಶಪಾಂಡೆ | ನಾಲ್ಕು ದಶಕದ ರಾಜಕಾರಣಿಗೆ ಉತ್ತಮ ಶಾಸಕ ಪ್ರಶಸ್ತಿ: ಕುಟುಂಬ, ಜನತೆಗೆ ಶ್ರೇಯ ನೀಡಿದ ಮಾಜಿ ಸಚಿವ
ನಾಲ್ಕು ದಶಕಗಳಿಂದ ರಾಜ್ಯ ರಾಜಕಾರಣದಲ್ಲಿರುವ ಆರ್. ವಿ. ದೇಶಪಾಂಡೆ ಅವರನ್ನು 2022ನೇ ಸಾಲಿನ ಉತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಳಗಾವಿ: ನಾಲ್ಕು ದಶಕಗಳಿಂದ ರಾಜ್ಯ ರಾಜಕಾರಣದಲ್ಲಿ ಸೇವೆ ಸಲ್ಲಿಸುತ್ತಿರುವ, ವಿವಿಧ ಇಲಾಖೆಗಳ ಸಚಿವರಾಗಿ ಕಾರ್ಯನಿರ್ವಹಿಸಿರುವ ಆರ್. ವಿ. ದೇಶಪಾಂಡೆ ಅವರಿಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರದಾನ ಮಾಡಿದೆ.
ವಿಧಾನ ಮಂಡಲ ಅಧಿವೇಶನದ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಶಸ್ತಿಯನ್ನು ಘೋಷಣೆ ಮಾಡಿದರು. ಸಿಎಂ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿ ಪ್ರಶಸ್ತಿ ಪ್ರದಾನ ಮಾಡಿದರು.
ನಂತರ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕರ್ನಾಟಕದಲ್ಲಿ ಕೈಗಾರೀಕರಣ ಹಾಗೂ ಕೈಗಾರಿಕಾ ನೀತಿ ರೂಪಿಸುವುದರಲ್ಲಿ ಮಹತ್ವದ ಪಾತ್ರವನ್ನು ಆರ್. ವಿ. ದೇಶಪಾಂಡೆ ವಹಿಸಿದ್ದಾರೆ. ಪ್ರಗತಿಪರವಾದ ಚಿಂತನೆಯುಳ್ಳವರು. ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಆರ್ಥಿಕತೆ ಬದಲಾವಣೆ, ಉದಾರೀಕರಣ ಹಾಗೂ ಜಾಗತೀಕರಣದ ಲಾಭವನ್ನು ರಾಜ್ಯಕ್ಕೆ ಲಭಿಸುವಂತೆ ಪ್ರಾಮಾಣಿಕ ಪರಿಶ್ರಮ ವಹಿಸಿದರು. ರಾಜ್ಯದಲ್ಲಿ ಟೊಯೊಟಾ ಕಾರ್ಖಾನೆಗೆ ರಿಯಾಯ್ತಿಗಳನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯದಲ್ಲಿ ದೊಡ್ಡ ಬದಲಾವಣೆಗಳನ್ನು ತರಲು ಶ್ರಮಿಸಿದ್ದಾರೆ ಎಂದರು.
ಹಿರಿಯರು ಹಾಗೂ ಮಾರ್ಗದರ್ಶಕರೂ ಆಗಿರುವಂತಹ ಆರ್.ವಿ. ದೇಶಪಾಂಡೆಯವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಸಂದಿರುವುದು ಪ್ರಶಸ್ತಿಯ ಗೌರವವನ್ನು ಹೆಚ್ಚಿಸಿದೆ. ಸರ್ವಸಮ್ಮತದ ಆಯ್ಕೆಯಲ್ಲಿ ವಿಧಾನಮಂಡಲದ ವಿಧಾನಸಭೆಯ ನಡೆವಳಿಕೆಗಳನ್ನು ಎತ್ತರದ ಮಟ್ಟದಲ್ಲಿ ನಿಭಾಯಿಸುವುದನ್ನು ತಮ್ಮ ನಡತೆಯಿಂದ ಕಳೆದ 8 ಬಾರಿ ಆಯ್ಕೆಯಲ್ಲಿ ತೋರಿಸಿಕೊಟ್ಟಿದ್ದಾರೆ. ಅತ್ಯುತ್ತಮ ಆಯ್ಕೆ ಮಾಡಿರುವುದಕ್ಕೆ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
ಆರ್.ವಿ. ದೇಶಪಾಂಡೆಯವರೊಂದಿಗೆ ಹಳೆಯ ನೆನಪುಗಳಿವೆ. ಸರಳ, ಸಜ್ಜನ ವ್ಯಕ್ತಿತ್ವ, ರಾಜ್ಯ ಹಾಗೂ ದೇಶದ ಹಿತಕ್ಕೆ ಚಿಂತನೆ ಮಾಡುವವರು. ರಾಜ್ಯದ ರಾಜಕಾರಣದಲ್ಲಿ ಗುರುತಿಸಲ್ಪಟ್ಟವರು. 1980ರಲ್ಲಿ ಎಪಿಎಂಸಿ ನಿರ್ದೇಶಕರಾಗಿದ್ದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಬಳಿಗೆ ಒಂದು ತಂಡವನ್ನು ಕರೆತಂದಿದ್ದರು. ಕೆಲವೇ ದಿನಗಳಲ್ಲಿ ಎಪಿಎಂಸಿ ಅಧ್ಯಕ್ಷರಾದರು. ಜನತಾ ಪಕ್ಷದ ಅಧ್ಯಕ್ಷರು, ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ನಂತರ 1983ರ ಚುನಾವಣೆಯಲ್ಲಿ ಹಳಿಯಾಳ ಕ್ಷೇತ್ರಕ್ಕೆ ಆಯ್ಕೆಯಾದರು. ಆ ಕ್ಷೇತ್ರ ಕಾಡಿಗೆ ಹೊಂದಿಕೊಂಡಿರುವ ಕ್ಷೇತ್ರ. ಕುಡಿಯುವ ನೀರಿಗೆ ಸಮಸ್ಯೆ ಹಾಗೂ ಅಭಿವೃದ್ಧಿಯಲ್ಲಿ ಹಿನ್ನಡೆಯಾಗಿದ್ದಂತಹ ಕ್ಷೇತ್ರವಾಗಿತ್ತು. ಆ ಕ್ಷೇತ್ರವನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಮಾಡಿ ಜನಮಾನಸವನ್ನು ಗೆದ್ದಿದ್ದಾರೆ ಎಂದರು. ಬಹಳ ಕಾಳಜಿಯಿಂದ ಜನರ ಕೆಲಸವನ್ನು ಮಾಡುತ್ತಾರೆ. ಜನರು ಅರ್ಜಿ ಕೊಟ್ಟರೆ ಅದರ ಬಗ್ಗೆ ಆಸ್ಥೆಯಿಂದ ಕ್ರಮ ಕೈಗೊಳ್ಳುವ ಪದ್ಧತಿ ರೂಢಿಸಿಕೊಂಡಿದ್ದಾರೆ ಎಂದರು.
ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ, ಸಿದ್ದರಾಮಯ್ಯ, ದೇಶಪಾಂಡೆಯವರು, ಎಂ.ಪಿ. ಪ್ರಕಾಶ್ ಅವರನ್ನೂ ಸೇರಿದಂತೆ ತಮ್ಮ ತಮ್ಮ ಕ್ಷೇತ್ರದಲ್ಲಿ ಕೆಲಸಗಳನ್ನು ಮಾಡಿದ ದೊಡ್ಡ ತಂಡ 1983 ರಲ್ಲಿ ಬೆಳಕಿಗೆ ಬಂತು. ಇಡೀ ರಾಜಕಾರಣ ಬದಲಿಸಿದ ಸಮಯವಾಗಿತ್ತು. ಆ ತಂಡದಲ್ಲಿ ಆರ್.ವಿ.ದೇಶಪಾಂಡೆಯವರೂ ಒಬ್ಬರು. ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾದ 2ನೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ದೇಶಪಾಂಡೆಯವರನ್ನು ಸಚಿವರನ್ನಾಗಿ ಮಾಡಲಾಯಿತು. ಅಂದಿನಿಂದ ವಿವಿಧ ಖಾತೆಗಳಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ದಕ್ಷತೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದಾರೆ ಎಂದರು.
ಉತ್ತಮ ರಾಜಕೀಯ ಅನುಭವ ಹೊಂದಿರುವ ಆರ್.ವಿ. ದೇಶಪಾಂಡೆಯವರು ಎಲ್ಲ ಮುಖ್ಯಮಂತ್ರಿಗಳೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದು, ಸ್ನೇಹಪರವಾಗಿದ್ದಾರೆ. ವಿರೋಧಪಕ್ಷದಲ್ಲಿ, ಕೇಂದ್ರ ಸರ್ಕಾರದಲ್ಲಿ ಹಲವು ಸಚಿವರೊಂದಿಗೆ ಆತ್ಮೀಯರಾಗಿದ್ದಾರೆ. ಅವರು ನಡೆದು ಬಂದ ದಾರಿ ನಮಗೆಲ್ಲರಿಗೂ ಮಾದರಿಯಾಗಿದ್ದು, ಅನುಕರಣೀಯವಾಗಿದೆ. ಹೊಸದಾಗಿ ಬಂದ ಶಾಸಕರು, ದೇಶಪಾಂಡೆಯವರ ಕೊಡುಗೆ, ನಡೆಸಿದ ಚರ್ಚೆಗಳ ಬಗ್ಗೆ ತಿಳಿದುಕೊಳ್ಳುವ ಅವಶ್ಯಕತೆ ಇದೆಯೆಂದು ತಿಳಿಸಿದರು.
ಕುಟುಂಬ, ಜನರಿಗೆ ಸಲ್ಲಬೇಕು: ದೇಶಪಾಂಡೆ
ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಆರ್. ವಿ. ದೇಶಪಾಂಡೆ, ನಾನು ಹಲವು ಚುನಾವಣೆಗಳನ್ನು ಎದುರಿಸಿದ್ದೇನೆ. ಇತ್ತೀಚಿನ ಚುನಾವಣಾ ಖರ್ಚಿನ ಬಗ್ಗೆ ಅಸಮಾಧಾನ ಇದೆ. ರಾಜಕಾರಣಿಗಳನ್ನು ನೋಡುವ ದೃಷ್ಟಿಕೋನ ಬದಲಾಗಿದೆ. ಚುನಾವಣಾ ವ್ಯವಸ್ಥೆ ಸಹ ಕೆಟ್ಟು ಹೋಗಿದೆ. ಆದರೂ ನಾವು ಜನರ ಕೆಲಸ ಮಾಡಲು ಬಂದಿದ್ದೇವೆ. ಶಾಸಕರಾಗಿ ನಮಗೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳಬೇಕು. ನನಗೆ ಮೂರು ಪಕ್ಷಗಳಲ್ಲೂ ಸ್ನೇಹಿತರಿದ್ದಾರೆ. ನಾನು ಈ ಮಟ್ಟಕ್ಕೆ ಬೆಳೆಯಲು ನನ್ನ ಕುಟುಂಬ ಹಾಗೂ ಕ್ಷೇತ್ರದ ಜನರೇ ಕಾರಣ ಎಂದರು.
ಇದನ್ನೂ ಓದಿ | ಶಿರಸಿ ಪ್ರತ್ಯೇಕ ಜಿಲ್ಲೆ | ಪಕ್ಷಾತೀತವಾಗಿ ಸಿಎಂ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ ನಿಯೋಗ: ಸಕಾರಾತ್ಮಕ ಸ್ಪಂದನೆ
ಕರ್ನಾಟಕ
Shadow CM: ಕಾಂಗ್ರೆಸ್‌ನ ಪೇಸಿಎಂ ಅಭಿಯಾನಕ್ಕೆ ಬಿಜೆಪಿಯಿಂದ ಶ್ಯಾಡೊ ಸಿಎಂ ಪೋಸ್ಟರ್ ವಾರ್
ಅಧಿಕಾರಿಗಳ ವರ್ಗಾವಣೆಯಿಂದ ಮೊದಲುಗೊಂಡು ಅನೇಕ ಕಾರ್ಯಗಳನ್ನು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಡೆಸುತ್ತಿದ್ದಾರೆ (Shadow CM) ಎಂದು ಬಿಜೆಪಿ ಆರೋಪಿಸಿದೆ.
ಬೆಂಗಳೂರು: ವಿಧಾನಸಭೆ ಎಲೆಕ್ಷನ್‌ಗೂ ಮುನ್ನ ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರದ ವಿರುದ್ಧ ಪೇಸಿಎಂ ಅಭಿಯಾನವನ್ನು ಕಾಂಗ್ರೆಸ್ ರೂಪಿಸಿತ್ತು. ಕರ್ನಾಟಕ ರಾಜ್ಯ ಕಾಂಟ್ರಾಕ್ಟರ್ಸ್ ಅಸೋಸಿಯೇಷನ್ ಮಾಡಿದ್ದ 40% ಕಮಿಷನ್ ಆರೋಪವನ್ನೇ ಆಧಾರವಾಗಿಸಿಕೊಂಡು ಪೆಸಿಎಂ ಪೋಸ್ಟರ್‌ಗಳನ್ನು ಬಹಿರಂಗವಾಗಿ ಅಂಟಿಸಿತ್ತು. (Shadow CM)
ಈ ಪೋಸ್ಟರ್‌ಗಳು ಸರ್ಕಾರಕ್ಕೆ ಸಾಕಷ್ಟ ಮುಜುಗರ ಉಂಟುಮಾಡಿದ್ದವು. ರಾಜ್ಯ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಜನರಿಗೆ ಮನವರಿಕೆ ಮಾಡುವಲ್ಲಿ ಸಾಕಷ್ಟು ಪರಿಣಾಮಕಾರಿಯಾಗಿದ್ದವು. ಇದೀಗ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು, ಶ್ಯಾಡೊ ಸಿಎಂ ಅಭಿಯಾನವನ್ನು ಬಿಜೆಪಿ ಕೈಗೆತ್ತಿಕೊಂಡಿದೆ.
ಅಧಿಕಾರಿಗಳ ವರ್ಗಾವಣೆಯಿಂದ ಮೊದಲುಗೊಂಡು ಅನೇಕ ಕಾರ್ಯಗಳನ್ನು ಸಿಎಂ ಸಿದ್ದರಾಮಯ್ಯ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ನಡೆಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇದೇ ಆರೋಪಕ್ಕೆ ಅನಗುಣವಾಗಿ ಶ್ಯಾಡೊ ಸಿಎಂ ಪೋಸ್ಟರ್‌ಗಳನ್ನು ರೂಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದೆ.
1. ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ಕೈಗೊಂಬೆಯಾಗಿರುವ ಸಿದ್ದರಾಮಯ್ಯ, ಪುತ್ರನನ್ನು ಶ್ಯಾಡೋ ಸಿಎಂ ಮಾಡಿ ತಾಳಕ್ಕೆ ಕುಣಿಯುತ್ತಿದ್ದಾರೆ. ಸೋನಿಯಾ ಗಾಂಧಿಯವರ ತಾಳಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಕುಣಿಯುತ್ತಿದ್ದಾರೆ. 2024ರ ಕಾಂಗ್ರೆಸ್ ಚುನಾವಣಾ ಖರ್ಚಿಗೆ ರಾಜ್ಯ ಬಲಿಯಾಗುತ್ತಿದೆ.
ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ಕೈಗೊಂಬೆಯಾಗಿರುವ @siddaramaiah, ಪುತ್ರನನ್ನು ಶ್ಯಾಡೋ ಸಿಎಂ ಮಾಡಿ ತಾಳಕ್ಕೆ ಕುಣಿಯುತ್ತಿದ್ದಾರೆ.
— BJP Karnataka (@BJP4Karnataka) July 15, 2023
ಸೋನಿಯಾ ಗಾಂಧಿಯವರ ತಾಳಕ್ಕೆ ರಾಜ್ಯದ ಕಾಂಗ್ರೆಸ್ ನಾಯಕರು ಕುಣಿಯುತ್ತಿದ್ದಾರೆ.
2024ರ ಕಾಂಗ್ರೆಸ್ ಚುನಾವಣಾ ಖರ್ಚಿಗೆ ರಾಜ್ಯ ಬಲಿಯಾಗುತ್ತಿದೆ. pic.twitter.com/Wvf09am1e6
2. ಸರಕಾರದ ಎಲ್ಲಾ ಬಗೆಯ ಡೀಲ್‌ಗಳಿಗೆ ನೇರವಾಗಿ ಸಂಪರ್ಕಿಸಿ…
ಸರಕಾರದ ಎಲ್ಲಾ ಬಗೆಯ ಡೀಲ್‌ಗಳಿಗೆ ನೇರವಾಗಿ ಸಂಪರ್ಕಿಸಿ…#ShadowCM pic.twitter.com/FXM2DcQ4LB
— BJP Karnataka (@BJP4Karnataka) July 14, 2023
3. ಹುದ್ದೆಗಳು ಮಾರಾಟಕ್ಕಿವೆ… #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.
ಹುದ್ದೆಗಳು ಮಾರಾಟಕ್ಕಿವೆ…#ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು. pic.twitter.com/tWIHlbcNAH
— BJP Karnataka (@BJP4Karnataka) July 12, 2023
4. ಹುದ್ದೆಗಳು ಮಾರಾಟಕ್ಕಿವೆ.. #ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು.
ಹುದ್ದೆಗಳು ಮಾರಾಟಕ್ಕಿವೆ..#ShadowCM ರವರನ್ನು ನೇರವಾಗಿ ಸಂಪರ್ಕಿಸಬಹುದು. pic.twitter.com/XLnSkAoW7q
— BJP Karnataka (@BJP4Karnataka) July 7, 2023
5. CM ನೆರಳಿನಲ್ಲಿ #ShadowCM ಅವ್ಯವಹಾರ. ಅಂಕೆ ಮೀರಿದೆ ಇವರಿಬ್ಬರ ಭ್ರಷ್ಟಾಚಾರ.
CM ನೆರಳಿನಲ್ಲಿ #ShadowCM ಅವ್ಯವಹಾರ.
— BJP Karnataka (@BJP4Karnataka) July 6, 2023
ಅಂಕೆ ಮೀರಿದೆ ಇವರಿಬ್ಬರ ಭ್ರಷ್ಟಾಚಾರ. #ShadowCM #ATMSarkara pic.twitter.com/E3ft1fYGFP
6. Commission Master in the shadows of Chief Minister!
ಕರ್ನಾಟಕ
Evm Machine : ಡೆಮಾಲಿಷನ್ ವೇಳೆ ಎಂಜಿನಿಯರ್ ಮನೆಯಲ್ಲಿ ಇವಿಎಂ ಯೂನಿಟ್‌ಗಳು ಪತ್ತೆ!
Evm Control Units : ಮನೆ ಡೆಮಾಲಿಷನ್ ಸಮಯದಲ್ಲಿ ಎಂಜಿನಿಯರ್‌ವೊಬ್ಬರ ಮನೆಯಲ್ಲಿ ಇವಿಎಂ ಕಂಟ್ರೋಲ್ ಯೂನಿಟ್‌ಗಳು ಪತ್ತೆಯಾಗಿವೆ. ಇವಿಎಂ ಕಂಟ್ರೋಲ್ ಯೂನಿಟ್‌ಗಳನ್ನು ತಹಸೀಲ್ದಾರ್ ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ: ಇಲ್ಲಿನ ದೊಡ್ಡಬಳ್ಳಾಪುರ ತಾಲೂಕಿನ ಮೋಪರಹಳ್ಳಿ ಗ್ರಾಮದಲ್ಲಿ ಮನೆ ಡೆಮಾಲಿಷನ್ ವೇಳೆ ಇವಿಎಂ ಕಂಟ್ರೋಲ್ ಯೂನಿಟ್‌ಗಳು (Evm Control Units ) ಪತ್ತೆ ಆಗಿವೆ. ದೊಡ್ಡಬಳ್ಳಾಪುರ ನಿರ್ಮಿತಿ ಕೇಂದ್ರದ ಎಂಜಿನಿಯರ್ ಶಿವಕುಮಾರ್ ಎಂಬುವವರ ಮನೆಯಲ್ಲಿ (Evm Machine) ಪತ್ತೆ ಆಗಿದೆ.
2018ರ ಚುನಾವಣೆಯಲ್ಲಿ ಬಳಸಿ ರಿಜೆಕ್ಟ್ ಆಗಿದ್ದ ಇವಿಎಂ ಕಂಟ್ರೋಲ್ ಯೂನಿಟ್ ಮಿಷನ್‌ಗಳು ಎನ್ನಲಾಗಿದೆ. ಅಂದಹಾಗೇ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕಾಗಿ ಮನೆಯನ್ನು ಡೆಮಾಲಿಷನ್ ಮಾಡಲಾಗುತ್ತಿತ್ತು. ಈ ವೇಳೆ ಮನೆಯ ಅವಶೇಷಗಳಲ್ಲಿ ಇವಿಎಂ ಕಂಟ್ರೋಲ್ ಯೂನಿಟ್ ಪತ್ತೆ ಆಗಿವೆ. ಯೂನಿಟ್‌ಗಳು ಪತ್ತೆಯಾದ ಹಿನ್ನೆಲೆ ಸ್ಥಳಕ್ಕೆ ತಹಸೀಲ್ದಾರ್ ಮೋಹನ ಕುಮಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮನೆಯ ಅವಶೇಷದಡಿ 7 ಯೂನಿಟ್‌ಗಳು ಪತ್ತೆ ಆಗಿದ್ದು, ತಹಸೀಲ್ದಾರ್ ಎಲ್ಲವನ್ನೂ ವಶಕ್ಕೆ ಪಡೆದು ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ. ತಹಸೀಲ್ದಾರ್ ಮೋಹನ ಕುಮಾರಿ ಮುಂದಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಶಿವಶಂಕರ್ ಅವರಿಗೆ ವರದಿಯನ್ನು ನೀಡಿದ್ದಾರೆ. ಸದ್ಯ, ರಿಜೆಕ್ಟ್ ಆಗಿರುವ ಇವಿಎಂ ಕಂಟ್ರೋಲ್ ಯೂನಿಟ್ ಮಿಷನ್‌ಗಳನ್ನು ಯಾಕಾಗಿ ಮನೆಯಲ್ಲಿ ಇರಿಸಿಕೊಂಡಿದ್ದರು ಎಂಬ ಪ್ರಶ್ನೆ ಕಾಡುತ್ತಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
MLC Election: ವಿಧಾನ ಪರಿಷತ್‌ಗೆ ಕಾಂಗ್ರೆಸ್‌ನ ಮೂವರು ಅವಿರೋಧ ಆಯ್ಕೆ; ಶೆಟ್ಟರ್ ಕಮ್ ಬ್ಯಾಕ್
MLC Election: ಕಾಂಗ್ರೆಸ್‌ನ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರು ಎಂಎಲ್‌ಸಿಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
ಬೆಂಗಳೂರು: ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ (MLC Election) ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಅಯ್ಕೆಯಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದ್ದರಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರ ಅವಿರೋಧ ಆಯ್ಕೆ ಘೋಷಿಸಲಾಗಿದೆ.
ನಾಮಪತ್ರ ವಾಪಸ್ ಪಡೆಯಲು ಶುಕ್ರವಾರ ಕೊನೆಯ ದಿನವಾಗಿತ್ತು. ಪಕ್ಷೇತರ ಅಭ್ಯರ್ಥಿ ಡಾ.ಕೆ ಪದ್ಮರಾಜನ್ ಅವರ ನಾಮಪತ್ರ ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಹೀಗಾಗಿ ಉಳಿದ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಈ ಬಗ್ಗೆ ವಿಧಾನಸಭಾ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಮಾಹಿತಿ ನೀಡಿದ್ದಾರೆ.
ಶೆಟ್ಟರ್ 5 ವರ್ಷ, ಬೋಸರಾಜು 1 ವರ್ಷ, ಕಮಕನೂರು 3 ವರ್ಷ ಎಂಎಲ್‌ಸಿ
ರಾಜ್ಯದಲ್ಲಿ ಖಾಲಿಯಾಗಿರುವ ವಿಧಾನ ಪರಿಷತ್‌ನ (MLC Election) ಮೂರು ಸ್ಥಾನಗಳಿಗೆ ಜೂನ್ 30ರಂದು ಚುನಾವಣೆ ನಡೆಯಬೇಕಿತ್ತು. ಆದರೆ, ಕಾಂಗ್ರೆಸ್ ಮೂವರು ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ. ಇನ್ನು ಇವರ ಅಧಿಕಾರಾವಧಿ ನೋಡುವುದಾದರೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್ 5 ವರ್ಷ, ಹಾಲಿ ಸಚಿವ ಎನ್.ಎನ್. ಬೋಸ್ ರಾಜು 1 ವರ್ಷ ಮತ್ತು ತಿಪ್ಪಣ್ಣ ಕಮಕನೂರು 3 ವರ್ಷ ಎಂಎಲ್‌ಸಿಯಾಗಿ ಇರಲಿದ್ದಾರೆ.
ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ ನಡೆಯುವ ಚುನಾವಣೆ ಇದಾಗಿದೆ. 135 ಶಾಸಕರನ್ನು ಹೊಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಎಲ್ಲ ಮೂರು ಸ್ಥಾನಗಳನ್ನು ಗೆದ್ದುಕೊಂಡಿದೆ.
ಇದನ್ನೂ ಓದಿ | ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ? ಸುಳಿವು ಬಿಚ್ಚಿಟ್ಟ ಸಿ.ಪಿ.ಯೋಗೇಶ್ವರ್
ಶೆಟ್ಟರ್‌ಗೆ ದೊಡ್ಡ ಗೌರವ
ಕಳೆದ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿಯಲ್ಲಿ ಟಿಕೆಟ್ ನಿರಾಕರಿಸಲ್ಪಟ್ಟು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್ ಅವರು ಚುನಾವಣೆಯಲ್ಲಿ ಸೋಲು ಕಂಡರೂ ಅವರಿಗೆ ಪಕ್ಷ ದೊಡ್ಡ ಗೌರವವನ್ನೇ ನೀಡಿದೆ. ಬಾಬುರಾವ್ ಚಿಂಚನಸೂರು ಅವರಿಂದ ತೆರವಾಗಿರುವ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ಅವರು ಆಯ್ಕೆಯಾಗಿದ್ದು, ಐದು ವರ್ಷ ಸದಸ್ಯರಾಗಿರಲಿದ್ದಾರೆ.
ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಆಗಿದ್ದರಿಂದ ಈ ಬಾರಿ ಕಾಂಗ್ರೆಸ್ ಗೆ ಲಾಭವಾಗಿತ್ತು. 39 ಲಿಂಗಾಯತ ಸಮುದಾಯದ ಶಾಸಕರು ಗೆಲ್ಲುವುದರಲ್ಲಿ ಶೆಟ್ಟರ್ ಅವರ ವರ್ಚಸ್ಸಿನ ಪ್ರಭಾವವೂ ಇದೆ ಎಂದು ಕಾಂಗ್ರೆಸ್ ಕಂಡುಕೊಂಡಿದೆ. ಇದರ ಲಾಭವನ್ನು ಲೋಕಸಭಾ ಚುನಾವಣೆಯಲ್ಲಿಯೂ ಪಡೆಯಲು ಶೆಟ್ಟರ್‌ಗೆ ಮಣೆ ಹಾಕಲಾಗಿದೆ ಎಂದು ಹೇಳಲಾಗಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಶೆಟ್ಟರ್ ಗೆ ಐದು ವರ್ಷಗಳ ಅವಧಿ ಇರೋ ಎಂಎಲ್ಸಿ ಸ್ಥಾನವನ್ನು ಕಾಂಗ್ರೆಸ್ ಕೊಟ್ಟಿದೆ ಎನ್ನಲಾಗಿದೆ.
ಇದನ್ನೂ ಓದಿ | Congress Guarantee: ರಾಜ್ಯ ಬಿಜೆಪಿ ಅಧ್ಯಕ್ಷ ಮನೆಗೆ ಮಾರಿ ಪರರಿಗೆ ಉಪಕಾರಿ: ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ
ಎನ್.ಎಸ್. ಬೋಸರಾಜು ಅವರಿಗೆ 1 ವರ್ಷ ಅವಕಾಶವಿರುವ ಪರಿಷತ್ ಸದಸ್ಯತ್ವವನ್ನು ನೀಡಲಾಗಿದೆ. ಬೋಸರಾಜು ಅವರನ್ನು ಈಗಾಗಲೇ ಸಣ್ಣ ನೀರಾವರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಇವರು ಆರ್.ಶಂಕರ್ ಅವರಿಂದ ತೆರವಾಗಿರುವ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.
ಇತ್ತ ತಿಪ್ಪಣ್ಣ ಕಮಕನೂರು ಅವರಿಗೆ ಲಕ್ಷ್ಮಣ ಸವದಿ ಅವರಿಂದ ತೆರವಾದ ಮೂರು ವರ್ಷಗಳ ಅವಧಿಯ ಮೇಲ್ಮನೆ ಸ್ಥಾನವನ್ನು ನೀಡಲಾಗಿದೆ.
ಕರ್ನಾಟಕ
Brand Bengaluru: ವಿದ್ಯುತ್ ಜತೆಗೆ ಕಸದ ಶುಲ್ಕವೂ ಸೇರ್ಪಡೆಗೆ ಸಲಹೆ: ಖಚಿತಪಡಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರನ್ನು ಉತ್ತಮಪಡಿಸಲು ಪೋರ್ಟಲ್ ಲಾಂಚ್ ಮಾಡ್ತಿದ್ದೇನೆ. ಪ್ರಮುಖ ನಗರಗಳಲ್ಲಿ ಪುಟ್ ಪಾತ್ ಸಮಸ್ಯೆ ಇದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರು: ಅನೇಕ ನಗರಗಳಲ್ಲಿ ಕಸ ಸಂಗ್ರಹಣೆಗೆ ಶುಲ್ಕ ವಿಧಿಸಲಾಗುತ್ತಿದೆ. ಬೆಂಗಳೂರಿನಲ್ಲೂ ಶುಲ್ಕ ವಿಧಿಸಿ ವಿದ್ಯುತ್ ಬಿಲ್ ಜತೆಗೆ ಸೇರಿಸಬೇಕು ಎಂಬ ಸಲಹೆ ಬಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿ ನಾಗರಿಕರು ಹಾಗೂ ತಜ್ಞರಿಂದ ಸಲಹೆ ಕೇಳುವ BrandBengaluru.karnataka.gov.in ಪೋರ್ಟಲ್‌ಗೆ ಚಾಲನೆ ನೀಡಿದ ನಂತರ ಮಾತನಾಡಿದರು.
1 ಕೋಟಿ 60 ಲಕ್ಷ ಜನಸಂಖ್ಯೆ ಬೆಂಗಳೂರಿನಲ್ಲಿ ಇದೆ. 1 ಕೋಟಿ 30 ಲಕ್ಷ ಅಧಿಕೃತ ಜನಸಂಖ್ಯೆ. ಆದರೆ ಪ್ರತಿದಿನ ಬಂದು ಹೋಗವರ ಸಂಖ್ಯೆ ಹೆಚ್ಚಿದೆ. ಬೆಂಗಳೂರಿನ ಪ್ರಕೃತಿ ಗಮನದಲ್ಲಿಟ್ಟುಕೊಂಡು ಇಲ್ಲಿ ಬಂದು ನೆಲೆಸಲು ಇಚ್ಚೆ ಪಡುತ್ತಾರೆ. ಬೆಂಗಳೂರಿಗೆ ಬಂದವರು ಯಾರು ವಾಪಸು ಹೋಗಲ್ಲ.
ನಾನು ಸಹ ಬೆಂಗಳೂರಿನ ನಿವಾಸಿ. ಜನ ಸಮಾನ್ಯರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇನೆ. ಬಿಲ್ಡರ್ಸ್, ಉದ್ಯಮಿಗಳು ಸಹ ಕರೆಸಿದ್ದೆ ಅವರ ಅಭಿಪ್ರಾಯ ಪಡೆದಿದ್ದೇನೆ. ಹಿರಿಯ ನಾಯಕರ ಅಭಿಪ್ರಾಯ ಸಹ ಸಂಗ್ರಹ ಮಾಡಿದ್ದೇನೆ. ಮಾಜಿ ಸಿಎಂಗಳನ್ನ ಭೇಟಿ ಮಾಡ್ತೀನಿ. ಬೊಮ್ಮಾಯಿ ಸಮಯ ಕೇಳಿದ್ದೆ. ಕಸಕ್ಕೆ ಕೆಲ ನಗರಗಳಲ್ಲಿ ತೆರಿಗೆ ಹಾಕುತ್ತಿದ್ದಾರೆ. ಇಲ್ಲೂ ಹಾಕಿ ಅಂತ ಸಲಹೆ ನೀಡಿದ್ದಾರೆ. ವಿದ್ಯುತ್ ಬಿಲ್ ಜತೆಗಿನ ಇದನ್ನ ಹಾಕಲು ಸಲಹೆ ಬಂದಿದೆ. ಆದರೆ ಈಗ ವಿದ್ಯುತ್ ಬಿಲ್ ಜತೆ ಹಾಕಲು ಸಾಧ್ಯವಿಲ್ಲ ಎಂದರು.
ಬೆಂಗಳೂರನ್ನು ಉತ್ತಮಪಡಿಸಲು ಪೋರ್ಟಲ್ ಲಾಂಚ್ ಮಾಡ್ತಿದ್ದೇನೆ. ಪ್ರಮುಖ ನಗರಗಳಲ್ಲಿ ಪುಟ್ ಪಾತ್ ಸಮಸ್ಯೆ ಇದೆ. ಮಲ್ಲೇಶ್ವರ, ಬಸವನಗುಡಿಯಲ್ಲಿ ಪುಟ್ ಪಾತ್ ಸಮಸ್ಯೆ ಇದೆ. ಬೆಂಗಳೂರು ಟ್ರಾಫಿಕ್‌ನಲ್ಲಿ ಕೆಲಸ ಮಾಡಿದ ನಿವೃತ್ತ ಅಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡ್ತೀನಿ. ಟ್ರೈನ್ ಮತ್ತು ಬಸ್ಸು ಹೋಗುವ ರೀತಿ ಟನಲ್ ಮಾಡಬೇಕು ಅನ್ನೋ ಅಭಿಪ್ರಾಯ ಇದೆ. ಜಯದೇವ ಬಳಿ ಪೈಲಟ್ ಯೋಜನೆ ಅಂತ ಪರಿಗಣಿಸುತ್ತಿದ್ದೇವೆ. ಬೆಂಗಳೂರು ಪ್ಲಾನ್ಡ್ ಸಿಟಿ ಅಲ್ಲ. ಮುಂಬಯಿ, ದೆಹಲಿ ರೀತಿಯಲ್ಲಿ ಪ್ಲಾನ್ ಸಿಟಿ ಅಲ್ಲ. ಆದರೆ ಮುಂಬಯಿ ಮತ್ತು ದೆಹಲಿಯಲ್ಲಿ ಟ್ರಾಫಿಕ್ ಜಾಸ್ತಿ ಇದೆ. ನಮಗಿಂತಲೂ ಹೆಚ್ಚಿಜ ಟ್ರಾಫಿಕ್ ಇದೆ. ಇಲ್ಲಿ ನೀರು ನುಗ್ಗಿದರೂ ಸಮಸ್ಯೆ ಆಗುತ್ತೆ, ಅದನ್ನೇ ದೊಡ್ಡದಾಗಿ ಬರೆಯುತ್ತೀರಿ ಎಂದರು.
ಹಿಂದಿನ ಕಾಮಗಾರಿಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ ಎಂಭ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿ, ಇನ್ನಷ್ಟು ದೊಡ್ಡಮಟ್ಟದಲ್ಲಿ ಮಾತನಾಡಲಿ. ಎಲ್ಲ ಬಿಚ್ಚಿಸ್ತೀನಿ. ಟೆಂಡರ್ ಡಬಲ್ ಆಗ್ತಿದೆ, ನಾವು ಅಧಿಕಾರಕ್ಕೆ ಬಂದ್ರೆ ಇದಕ್ಕೆ ಅವಕಾಶ ಕೊಡಲ್ಲ ಎಂದು ನಾವು ಚುನಾವಣೆ ಸಂದರ್ಭದಲ್ಲಿ ಹೇಳಿದ್ದೆವು. ನಾವು ಅದಕ್ಕೆ ಬದ್ಧರಾಗಿದ್ದೇವೆ. ಯಾವ ಗುತ್ತಿಗೆದಾರ ಏನು ಬೇಕಾದರೂ ಮಾಡಿಕೊಳ್ಳಲಿ. ಕಾನೂನಾತ್ಮಕವಾಗಿ ಪರಿಶೀಲನೆ ಮಾಡುವವರೆಗೂ ನಾವು ವರ್ಕ್ ಆರ್ಡರ್ ಕೊಡಲ್ಲ. ತನಿಖೆ ಬಳಿಕವೇ ಕಾಮಗಾರಿ ಬಿಲ್ ಬಿಡುಗಡೆ ಮಾಡ್ತೀವಿ ಎಂದರು.
ನಗರದಲ್ಲಿ ಇರೋ ಸ್ಲಮ್ ಶಿಫ್ಟ್ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅಂತಹ ಸಲಹೆಗಳು ಬಂದಿವೆ. ಕೆಲವರು ಸರ್ಕಾರಿ ಜಾಗದಲ್ಲಿ ಇದ್ದಾರೆ. ಕೆಲ ಸ್ಲಮ್ ನಗರದ ಒಳಗೆ ಇವೆ. ಅದನ್ನ ಶಿಫ್ಟ್ ಮಾಡಲು ಸಮಯ ಬೇಕಾಗುತ್ತದೆ ಎಂದರು.
ಇದನ್ನೂ ಓದಿ: Rice Politics: ನಾಳೆ ಅಮಿತ್ ಶಾ ಭೇಟಿಗೆ ಸಿದ್ದರಾಮಯ್ಯ ದೆಹಲಿ ಪ್ರವಾಸ; ನಾನೂ ಹೋಗುವೆ ಎಂದ ಡಿಕೆಶಿ
-
ದೇಶ14 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
ವಿದೇಶ22 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ಸುವಚನ9 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ14 hours ago
Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ
-
ದೇಶ15 hours ago
GST Evasion: ಜಿಎಸ್ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!
-
ಆಟೋಮೊಬೈಲ್21 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ21 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್18 hours ago
Ruturaj Gaikwad : ಚೀನಾಗೆ ಹೊರಡುವ ಮೊದಲು ಪುಣೆಯ ಗಣೇಶ ಮಂದಿರಕ್ಕೆ ಭೇಟಿ ನೀಡಿದ ಋತುರಾಜ್