Site icon Vistara News

Road Accident | ಪುಣೆ- ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿಯಾಗಿ ಸರಣಿ ಅಪಘಾತ; 7 ಮಂದಿಗೆ ಗಂಭೀರ ಗಾಯ

Lorry Accident

ಬೆಳಗಾವಿ: ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದು 7 ಮಂದಿಗೆ ಗಂಭೀರ ಗಾಯಗಳಾಗಿವೆ. ಪುಣೆ ಕಡೆಗೆ ತೆರಳುತ್ತಿದ್ದಾಗ ಲಾರಿ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದ್ದರಿಂದ ಅಪಘಾತ(Lorry Accident) ಸಂಭವಿಸಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.

ತಾಲೂಕಿನ ವಂಟಮೂರಿ ಘಾಟ್‌ ಬಳಿಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ತೆರಳುತ್ತಿದ್ದ ಲಾರಿ ಮೊದಲಿಗೆ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಈ ವೇಳೆ ಹಿಂದೆ ಬರುತ್ತಿದ್ದ ಮೂರ್ನಾಲ್ಕು ಕಾರು ಲಾರಿಗೆ ಗುದ್ದಿದ್ದರಿಂದ ಏಳಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿವೆ.

ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ವಾಹನ ಸವಾರರು ಪರದಾಡಿದರು ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಸ್ನೇಹಾ, ಗ್ರಾಮೀಣ ‌ವಿಭಾಗದ ಎಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು.

ಇದನ್ನೂ ಓದಿ | Accident case | ಅಪರಿಚಿತ ವಾಹನ ಡಿಕ್ಕಿ; ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಪ್ರೊ. ವಾಸುದೇವನ್ ಸಾವು

Exit mobile version