ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಡಬಲ್ ಮರ್ಡರ್ ಪ್ರಕರಣ ಬೆಳಕಿಗೆ ಬಂದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಬರ್ಬರ ಹತ್ಯೆ ಮಾಡಲಾಗಿದ್ದು, ಮಾವನೂರ ಗ್ರಾಮದಲ್ಲಿ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಮಾವನೂರ ಗ್ರಾಮದ ಗಜೇಂದ್ರ ವಣ್ಣೂರೆ(60), ದ್ರಾಕ್ಷಾಯಿಣಿ ವಣ್ಣೂರೆ(48) ಕೊಲೆಯಾದವರು. ಅವರ ಮನೆಯಲ್ಲಿಯೇ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಜುಲೈ 7ರ ಮಧ್ಯರಾತ್ರಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಶುಕ್ರವಾರದಿಂದ ಮನೆ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಂತೆಯೇ ಭಾನುವಾರ ಬಾಗಿಲು ಮುರಿದು ನೋಡಿದಾಗ ಜೋಡಿ ಕೊಲೆ ಬೆಳಕಿಗೆ ಬಂದಿದೆ.
ಪ್ರಕರಣ ದಾಖಲಿಸಿಕೊಂಡು ಆರೋಪಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಮೃತದೇಹಗಳು ರವಾನೆ ಮಾಡಲಾಗಿದೆ. ಯಮಕನಮರಡಿ ಪೊಲಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಕಳೆದ ವಾರ ನಡೆದಿತ್ತು ಡಬಲ್ ಮರ್ಡರ್
ಬೆಳಗಾಗಿ ಜಿಲ್ಲೆಯಲ್ಲಿ ಕಳೆದ ವಾರವಷ್ಟೇ ಭೀಕರ ಜೋಡಿ ಕೊಲೆಯೊಂದು ನಡೆದಿತ್ತು. ಅದು ಅನೈತಿಕ ಸಂಬಂಧದ ಕಾರಣಕ್ಕೆ ನಡೆದ ಕೊಲೆಯಾಗಿತ್ತು. ಜಿಲ್ಲೆಯ ಗೋಕಾಕ್ ತಾಲೂಕಿನ ಅಕ್ಕತಂಗಿಯರಹಾಳದಲ್ಲಿ ಈ ಭೀಕರ ಕೊಲೆ ನಡೆದಿತ್ತು. ಪತ್ನಿಯ ಅನೈತಿಕ ಸಂಬಂಧಕ್ಕೆ ಕೋಪಗೊಂಡು ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಆರೋಪಿ ಯಲ್ಲಪ್ಪ ಕೊಲೆ ಮಾಡಿದ್ದ.
ರೇಣುಕಾ ಮಾಳಗಿ (40) ಹಾಗೂ ಮಲ್ಲಿಕಾರ್ಜುನ ಜಗದಾರ್ (35) ಕೊಲೆಯಾದವರು ಅವರಿಬ್ಬರು ಅನೈತಿಕ ಸಂಬಂಧ ಹೊಂದಿದ್ದರು. ಇದು ಕೊಲೆಗಾರ ಯಲ್ಲಪ್ಪ ಅವರಿಗೆ ಗೊತ್ತಾಗಿತ್ತು. ಹಲವು ಬಾರಿ ಬುದ್ಧಿ ಹೇಳಿದ್ದರೂ ಕೇಳಿರಲಿಲ್ಲ. ಕೋಪಗೊಂಡ ಆತ ಕೊಲೆ ಮಾರಿ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ಎಸ್ಪಿ ಡಾ. ಸಂಜೀವ್ ಎಂ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
Road Accident : ಬೈಕ್‌ಗಳಿಗೆ ಗುದ್ದಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಟೆಂಪೋ ಬೂದಿ! ದಂಪತಿ ಸಾವು
ನೆಲಮಂಗಲ/ಚಿಕ್ಕಬಳ್ಳಾಪುರ: ರಾಜ್ಯದ ಪ್ರತ್ಯೇಕ ಕಡೆ ರಸ್ತೆ ಅಪಘಾತಗಳು (Road Accident) ಸಂಭವಿಸಿದ್ದು, ಸಾವು-ನೋವುಗಳು ಸಂಭವಿಸಿವೆ. ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 15 ಅಡಿ ವೃದ್ಧ ದಂಪತಿ ಹಾರಿಬಿದ್ದು ಗಾಯಗೊಂಡಿದ್ದಾರೆ. ಇನ್ನೊಂದು ಕಡೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಗೇಟ್ ಬಳಿ ಸರಣಿ ಅಪಘಾತ ಸಂಭವಿಸಿದೆ. ಈ ವೇಳೆ ದಂಪತಿ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ, ಟೆಂಪೋ ಮತ್ತು ಬೈಕ್‌ಗಳು ಬೆಂಕಿಗಾಹುತಿಯಾಗಿವೆ.
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ; ಇಬ್ಬರ ಸಾವು, ಮೂವರು ಗಂಭೀರ
ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಗೇಟ್ ಬಳಿ ಸರಣಿ ಅಪಘಾತ ಸಂಭವಿಸಿದೆ. ಎರಡು ಬೈಕ್ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಮತ್ತೆ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.