ಬೆಂಗಳೂರು, ಕರ್ನಾಟಕ: ರಾಜ್ಯದ ಗಮನ ಸೆಳೆದಿದ್ದ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹಾಲಿ ಶಾಸಕಿ, ಕಾಂಗ್ರೆಸ್‌ನ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭರ್ಜರಿ ಜಯ ಸಾಧಿಸಿದ್ದಾರೆ. ಬಿಜೆಪಿಯ ಅಭ್ಯರ್ಥಿ ನಾಗೇಶ್ ಮುನ್ನೋಳಕರ್ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ಅವರು 55546 ಮತಗಳ ಅಂತರದಲ್ಲಿ ಗೆಲುವು ಕಂಡಿದ್ದಾರೆ. ಮುನ್ನೋಳಕರ್ ಅವರು 51259 ಮತಗಳನ್ನು ಪಡೆದರೆ, ಲಕ್ಷ್ಮೀ ಹೆಬ್ಬಾಳಕರ್ ಅವರು ಭರ್ಜರಿ 106805 ಮತಗಳನ್ನು ಪಡೆದುಕೊಂಡು ಗೆಲುವಿನ ನಗೆ ಬೀರಿದ್ದಾರೆ(Belgaum Rural Election Results).
2023ರ ಚುನಾವಣೆಯ ಅಭ್ಯರ್ಥಿಗಳು
ಪ್ರಸಕ್ತ ಚುನಾಣೆಯಲ್ಲಿ ಹಾಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮತ್ತೆ ಕಣದಲ್ಲಿದ್ದರು. ಬಿಜೆಪಿಯು ಈ ಬಾರಿ ಹೊಸ ಮುಖ ನಾಗೇಶ್ ಮುನ್ನೋಳಕರ್ ಅವರಿಗೆ ಟಿಕೆಟ್ ನೀಡಿತ್ತು. ಇನ್ನು ಜೆಡಿಎಸ್‌ನಿಂದ ಶಂಕರ್ ಗೌಡ ಪಾಟೀಲ್ ಅವರು ಸ್ಪರ್ಧಿಸಿದ್ದರು.
2018ರ ಚುನಾವಣೆಯ ಫಲಿತಾಂಶ ಏನಾಗಿತ್ತು?
2018 ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಲಕ್ಷ್ಮೀ ಹೆಬ್ಬಾಳ್ಕರ್ ಅವರು 102040 ಮತಗಳನ್ನು ಪಡೆದುಕೊಂಡು ಭರ್ಜರಿ ಜಯ ದಾಖಲಿಸಿದ್ದರು. ಪ್ರತಿಸ್ಪರ್ಧಿ ಬಿಜೆಪಿಯ ಸಂಜಯ್ ಬಿ ಪಾಟೀಲ್ 50316 ಮತಗಳನ್ನು ಪಡೆದುಕೊಂಡಿದ್ದರು. ಪಕ್ಷೇತರ ಅಭ್ಯರ್ಥಿಯಾಗಿದ್ದ ಎಂಇಎಸ್‌ನ ಮನೋಹರ್ ಕಿಣೇಕರ್ ಅವರು 23776 ಮತಗಳನ್ನು ಪಡೆದುಕೊಂಡು ಮೂರನೇ ಸ್ಥಾನದಲ್ಲಿದ್ದರು.
1967ರಿಂದ 2004ರವರೆಗೆ ಅಸ್ತಿತ್ವದಲ್ಲಿದ್ದ ಉಚಗಾಂವ್ ಕ್ಷೇತ್ರವೇ ಮುಂದೆ ಬೆಳಗಾವಿ ಗ್ರಾಮೀಣ ಕ್ಷೇತ್ರವಾಗಿ 2008ರಲ್ಲಿ ಅಸ್ತಿತ್ವಕ್ಕೆ ಬಂತು. ಮೊದಲ ಎರಡು ಚುನಾವಣೆಗಳಲ್ಲಿ ಅಂದರೆ 2008 ಮತ್ತು 2013 ಚುನಾವಣೆಯಲ್ಲಿ ಬಿಜೆಪಿಯ ಸಂಜಯ್ ಪಾಟೀಲ್ ಅವರು ಆಯ್ಕೆಯಾಗಿದ್ದರು. 2013ರಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದ್ದ ಕಾಂಗ್ರೆಸ್ ಪಕ್ಷದ ಲಕ್ಷ್ಮೀ ಹೆಬ್ಬಾಳ್ಕರ್ ಅವರು 2018ರ ಚುನಾವಣೆಯಲ್ಲಿ 50 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದುಕೊಂಡು ಜಯ ಸಾಧಿಸಿದ್ದರು.