Bellary News | ಅನಧಿಕೃತ ಹೋರ್ಡಿಂಗ್ಸ್ ತೆರವು,‌ ಬೀದಿಗೆ ಇಳಿದ ಪಾಲಿಕೆ ಸದಸ್ಯರು, ಅಧಿಕಾರಿಗಳ ಸಾಥ್ - Vistara News

ಕರ್ನಾಟಕ

Bellary News | ಅನಧಿಕೃತ ಹೋರ್ಡಿಂಗ್ಸ್ ತೆರವು,‌ ಬೀದಿಗೆ ಇಳಿದ ಪಾಲಿಕೆ ಸದಸ್ಯರು, ಅಧಿಕಾರಿಗಳ ಸಾಥ್

Bellary News | ಬಳ್ಳಾರಿಯಲ್ಲಿ ಹಲವು ವರ್ಷಗಳಿಂದ ಅನಧಿಕೃತವಾಗಿ ಹೋರ್ಡಿಂಗ್ಸ್ ಅಳವಡಿಸಿದ್ದರೂ, ಈವರೆಗೆ ಯಾರೂ ತೆರವಿಗೆ ಮುಂದಾಗಿರಲಿಲ್ಲ. ಜತೆಗೆ ಮಹಾನಗರ ಪಾಲಿಕೆಗೆ ಲಕ್ಷಾಂತರ ರೂ. ಆದಾಯ ಕತ್ತರಿಗೆ ಕಾರಣವಾಗಿತ್ತು. ಹೀಗಾಗಿ ಸ್ವತಃ ಪಾಲಿಕೆಯ ಸದಸ್ಯರೇ ಬೀದಿಗೆ ಇಳಿದು ತೆರವು ಕಾರ್ಯಾಚರಣೆ ನಡೆಸಿದರು.

VISTARANEWS.COM


on

Unauthorized hoardings mahanagara palike
ಅನಧಿಕೃತವಾಗಿ ಹೋರ್ಡಿಂಗ್ಸ್‌ ಅಳವಡಿಸಿರುವುದನ್ನು ತೆರವುಗೊಳಿಸುತ್ತಿರುವ ಬಳ್ಳಾರಿಯ ಮಹಾನಗರ ಪಾಲಿಕೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಗೆ ಲಕ್ಷಾಂತರ ರೂ. ಆದಾಯ ಕತ್ತರಿಗೆ ಕಾರಣವಾಗುತ್ತಿದ್ದ ಅನಧಿಕೃತ ಹೋರ್ಡಿಂಗ್ಸ್ (ಜಾಹೀರಾತು ಫಲಕ) ತೆರವಿಗೆ ಸ್ವತಃ ಪಾಲಿಕೆಯ ಸದಸ್ಯರೇ ಇಂದು ಬುಧವಾರ (ಡಿ.೧೪) ಬೀದಿಗೆ ಇಳಿದು ಯಾವುದೇ ಪ್ರಭಾವಕ್ಕೆ ಒಳಗಾಗದೆ ತೆರವು ಕಾರ್ಯಾಚರಣೆ ನಡೆಸಿದರು. ಇದಕ್ಕೆ ಪಾಲಿಕೆಯ ಅಧಿಕಾರಿಗಳು ಸಾಥ್ ನೀಡಿದರು.

ಕಳೆದ ಹಲವು ವರ್ಷಗಳಿಂದ ಪಾಲಿಕೆಯಿಂದ ಯಾವುದೇ ಪರವಾನಗಿ ಇಲ್ಲದೆ ಹೋರ್ಡಿಂಗ್ಸ್ ಅಳವಡಿಸಿದ್ದರು. ಇದು ಪಾಲಿಕೆಗೆ ತಲೆನೋವಾಗಿ ಪರಿಣಮಿಸಿತ್ತು. ಕಳೆದ ೧೫ ದಿನಗಳಿಂದ ಪಾಲಿಕೆಯ ಸದಸ್ಯರು ಮತ್ತು ಅಧಿಕಾರಿಗಳು ಹೋರ್ಡಿಂಗ್‌ಗಳ ಪರಿಶೀಲನಾ ಕಾರ್ಯವನ್ನು ನಡೆಸಿದ್ದರು. ಯಾವುದು ಅಧಿಕೃತ ಮತ್ತು ಅನಧಿಕೃತ ಎಂಬುದರ ಪರಿಶೀಲನೆ ನಡೆಸಿ, ಇಂದು ಕಾರ್ಯಾಚರಣೆಯ ಆರಂಭಿಸಿದರು.

೯೦ ಅನಧಿಕೃತ ಹೋರ್ಡಿಂಗ್ಸ್
ಪಾಲಿಕೆಯ ಅಧಿಕಾರಿಗಳು ಮತ್ತು ಸದಸ್ಯರು ಪರಿಶೀಲನೆಗೆ ಮುಂದಾದಾಗ ಮೇಲ್ನೋಟಕ್ಕೆ ಸುಮಾರು ೯೦ ಅನಧಿಕೃತ ಹೋರ್ಡಿಂಗ್ಸ್‌ ಅನ್ನು ಪತ್ತೆ ಹಚ್ಚಿದ್ದಾರೆ. ಇಂದು ಪಾಲಿಕೆಯ ಸದಸ್ಯರಾದ ರಾಮಾಂಜಿನೇಯಲು, ಪ್ರಭಂಜನ್‌ ಕುಮಾರ್ ಮತ್ತು ನಂದೀಶ್, ಅಧಿಕಾರಿಗಳಾದ ಹರ್ಷವರ್ಧನ್, ಕಿರಣ್ ಮತ್ತು ಶ್ರೀನಿವಾಸ್ ಅವರು ಸಂಗಮ್ ಸರ್ಕಲ್‌ ನಲ್ಲಿ ಜೆಸಿಬಿಯಿಂದ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ಇಲ್ಲಿರುವ ೧೫ ಹೋರ್ಡಿಂಗ್ಸ್ ಪೈಕಿ, ೭ ಹೋರ್ಡಿಂಗ್ಸ್ ಅನಧಿಕೃತವಾಗಿ ಅಳವಡಿಸಲಾಗಿತ್ತು.

ನಾಲ್ಕೈದು ದಿನಗಳಲ್ಲಿ ತೆರವು
ಬಳ್ಳಾರಿ ಮಹಾನಗರದಲ್ಲಿ ಸುಮಾರು ೬೮೭ ಪರವಾನಗಿ ಪಡೆದ ಹೋರ್ಡಿಂಗ್ಸ್‌ ಇವೆ. ೨೦೦ಕ್ಕೂ ಹೆಚ್ಚು ಅನಧಿಕೃತ ಹೋರ್ಡಿಂಗ್ಸ್ ಇರಬಹುದೆಂದು ಅಂದಾಜಿಸಲಾಗಿದೆ. ಅನಧಿಕೃತವಾಗಿ ಹೋರ್ಡಿಂಗ್ಸ್ ಹಾಕಿರುವವರಿಗೆ ಎಚ್ಚರಿಕೆ ನೀಡಿದರೂ, ತೆರವುಗೊಳಿಸದ ಹಿನ್ನೆಲೆಯಲ್ಲಿ ಬುಧವಾರ (ಡಿ.೧೪) ಸದಸ್ಯರು ಮತ್ತು ಪಾಲಿಕೆಯ ಅಧಿಕಾರಿಗಳು ತೆರವಿಗೆ ಮುಂದಾದರು. ಮುಂದಿನ ನಾಲ್ಕೈದು ದಿನಗಳ ಒಳಗಾಗಿ ನಗರದಲ್ಲಿರುವ ಅನಧಿಕೃತ ಹೋರ್ಡಿಂಗ್ಸ್ ತೆರವು ಪೂರ್ಣಗೊಳ್ಳಲಿದೆ ಎನ್ನುತ್ತಾರೆ ಪಾಲಿಕೆಯ ಸದಸ್ಯರು ಮತ್ತು ಅಧಿಕಾರಿಗಳು.

ಇದನ್ನೂ ಓದಿ | Arjun Tendulkar | ಅಪ್ಪನಂತೆ ಚೊಚ್ಚಲ ರಣಜಿ ಪಂದ್ಯದಲ್ಲಿ ಶತಕ ಸಿಡಿಸಿದ ಅರ್ಜುನ್​ ತೆಂಡುಲ್ಕರ್

ದಿಟ್ಟವಾದ ಕ್ರಮ
ಹಲವು ವರ್ಷಗಳಿಂದ ಅನಧಿಕೃತವಾಗಿ ಹೋರ್ಡಿಂಗ್ಸ್ ಅಳವಡಿಸಿದ್ದರೂ, ಈವರೆಗೆ ಯಾರೂ ತೆರವಿಗೆ ಮುಂದಾಗಿರಲಿಲ್ಲ. ಇದರಿಂದಾಗಿ ಪಾಲಿಕೆಯ ಲಕ್ಷಾಂತರ ರೂ. ಆದಾಯಕ್ಕೆ ಕತ್ತರಿ ಬೀಳುವಂತಾಗಿತ್ತು. ಪಾಲಿಕೆಯ ಸದಸ್ಯರು ಮತ್ತು ಅಧಿಕಾರಿಗಳ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಅನಧಿಕೃತ ಹೋರ್ಡಿಂಗ್ಸ್ ಬುಧವಾರ (ಡಿ.೧೪) ತೆರವು ಕಾರ್ಯಾಚರಣೆ ಆರಂಭಿಸಿದ್ದೇವೆ, ಅನಧಿಕೃತ ಹೋರ್ಡಿಂಗ್ಸ್‌ನಿಂದ ಪಾಲಿಕೆಗೆ ಲಕ್ಷಾಂತರ ರೂ. ಆದಾಯ ತಪ್ಪಿ ಹೋಗುತ್ತಿತ್ತು. ನಗರದಲ್ಲಿ ಅಧಿಕೃತವಾಗಿ ಸುಮಾರು ೬೮೭ ಹೋರ್ಡಿಂಗ್ಸ್ ಇವೆ. ಮೇಲ್ನೋಟಕ್ಕೆ ಸುಮಾರು ೯೦ ಅನಧಿಕೃತ ಹೋರ್ಡಿಂಗ್ಸ್ ಅಳವಡಿಸಿರುವುದು ಗುರುತಿಸಿದ್ದು, ತೆರವಿಗೆ ಮುಂದಾಗಿದ್ದೇವೆ. ಇಂದು ಸಂಗಮ್ ಸರ್ಕಲ್‌ನಲ್ಲಿ ೧೫ ಹೋರ್ಡಿಂಗ್ಸ್ ಪೈಕಿ ೭ ಅನಧಿಕೃತವಾಗಿ ಅಳವಡಿಸಿದ್ದ ಹೋರ್ಡಿಂಗ್ಸ್ ತೆರವುಗೊಳಿಸಲಾಯಿತು.
| ರಾಮಾಂಜಿನೇಯಲು, ಸದಸ್ಯರು, ಮಹಾನಗರ ಪಾಲಿಕೆ, ಬಳ್ಳಾರಿ

ಇದನ್ನೂ ಓದಿ | ಪೆನ್ನಾರ್‌ ನದಿ ನೀರು ವಿವಾದ: ನ್ಯಾಯಾಧಿಕರಣ ರಚಿಸಲು ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ, ಕರ್ನಾಟಕಕ್ಕೆ ಹಿನ್ನಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : 7 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ತಜ್ಞರು

Karnataka Weather Forecast : ಕರಾವಳಿ, ಮಲೆನಾಡಿನಲ್ಲಿ ಮಳೆಯಾಗುತ್ತಿದ್ದು, ಏಳು ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ. ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

By

karnataka Rain
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು, ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು ಸುತ್ತಮುತ್ತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಧ್ಯಮ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಮಧ್ಯಮ ಮಳೆಯಾಗಲಿದ್ದು ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ವ್ಯಾಪಕ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಕೃಷ್ಣಾ ನದಿ ಪ್ರವಾಹದಲ್ಲಿ ಪಲ್ಟಿ ಹೊಡೆದ ಬೋಟ್‌; ಎತ್ತುಗಳ ಮೇಲೆ ಕುಸಿದು ಬಿದ್ದ ಗೋಡೆ

ಬೆಂಗಳೂರಿನಲ್ಲೂ ಸಾಧಾರಣ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಇದು ಕ್ರಮವಾಗಿ 28 ಮತ್ತು 20 ಡಿ.ಸೆ ಇರಲಿದೆ. ರಾತ್ರಿ ಸಮಯ ಚಳಿ ಹೆಚ್ಚಾಗಲಿದೆ.

7 ಜಿಲ್ಲೆಗಳಿಗೆ ಮುನ್ನೆಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ & ಶಿವಮೊಗ್ಗ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಅಸಲಿ; ಎಫ್‌ಎಸ್‌ಎಲ್‌ ವರದಿ ಬಹಿರಂಗ, ಎಸ್‌ಐಟಿ ತನಿಖೆಗೆ ಬಲ!

Prajwal Revanna: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊಗಳು ಅಸಲಿ ಎಂಬುದು ಎಫ್‌ಎಸ್‌ಎಲ್‌ ವರದಿಯಿಂದ ಸಾಬೀತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದ ವಿಡಿಯೊಗಳನ್ನು ಎಡಿಟ್‌ ಅಥವಾ ಮಾರ್ಫ್‌ ಮಾಡಿಲ್ಲ. ಯಾವುದೇ ರೀತಿಯಲ್ಲಿ ಎನಿಮೇಷನ್‌, ಗ್ರಾಫಿಕ್ಸ್‌ಗಳನ್ನು ಬಳಸಿಲ್ಲ ಎಂಬುದಾಗಿ ಎಫ್‌ಎಸ್‌ಎಲ್‌ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದು ಎಸ್‌ಐಟಿ ತನಿಖೆಗೆ ಬಲ ಬಂದಂತಾಗಿದೆ.

VISTARANEWS.COM


on

Prajwal Revanna
Koo

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧಿತರಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ, ಪ್ರಜ್ವಲ್‌ ರೇವಣ್ಣ ಅವರದ್ದೇ ಎನ್ನಲಾದ ಅಶ್ಲೀಲ ವಿಡಿಯೊಗಳು ಅಸಲಿಯಾಗಿವೆ. ವಿಡಿಯೊಗಳನ್ನು ತಿರುಚಿಲ್ಲ ಎಂಬುದಾಗಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿಯು (FSL Report) ತಿಳಿಸಿದೆ. ಇದರಿಂದಾಗಿ ಪ್ರಕರಣದ ಕುರಿತು ಇನ್ನಷ್ಟು ತನಿಖೆ ನಡೆಸಲು ಎಸ್‌ಐಟಿಗೆ ಆನೆ ಬಲ ಬಂದಂತಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊಗಳು ಅಸಲಿ ಎಂಬುದು ಎಫ್‌ಎಸ್‌ಎಲ್‌ ವರದಿಯಿಂದ ಸಾಬೀತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದ ವಿಡಿಯೊಗಳನ್ನು ಎಡಿಟ್‌ ಅಥವಾ ಮಾರ್ಫ್‌ ಮಾಡಿಲ್ಲ. ಯಾವುದೇ ರೀತಿಯಲ್ಲಿ ಎನಿಮೇಷನ್‌, ಗ್ರಾಫಿಕ್ಸ್‌ಗಳನ್ನು ಬಳಸಿಲ್ಲ. ಎಲ್ಲ ವಿಡಿಯೊಗಳು ಅಸಲಿಯಾಗಿವೆ ಎಂಬುದಾಗಿ ಎಸ್‌ಎಫ್‌ಎಲ್‌ ವರದಿ ಸಲ್ಲಿಸಿದ್ದು, ವರದಿ ಈಗ ಎಸ್‌ಐಟಿ ತಂಡದ ಕೈಸೇರಿದೆ. ಇದರಿಂದಾಗಿ ಎಸ್‌ಐಟಿ ಇನ್ನು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಿದೆ ಎಂದು ತಿಳಿದುಬಂದಿದೆ.

Prajwal Revanna Case
Prajwal Revanna Case

ವಿಡಿಯೊದಲ್ಲಿರುವುದು ಪ್ರಜ್ವಲ್‌ ರೇವಣ್ಣ?

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೊಗಳಲ್ಲಿ ಪುರುಷನ ಮುಖವನ್ನು ತೋರಿಸಿಲ್ಲ. ಹಾಗಾಗಿ, ಅಶ್ಲೀಲ ವಿಡಿಯೊದಲ್ಲಿರುವುದು ಪ್ರಜ್ವಲ್‌ ರೇವಣ್ಣ ಹೌದೋ, ಅಲ್ಲವೋ ಎಂಬುದು ಇದುವರೆಗೆ ದೃಢವಾಗಿಲ್ಲ. ಈಗ ವಿಡಿಯೊಗಳು ಅಸಲಿಯಾಗಿವೆ ಎಂಬುದು ಮಾತ್ರ ವರದಿಯಿಂದ ತಿಳಿದುಬಂದಿದೆ. ಮುಂದಿನ ದಿನಗಳಲ್ಲಿ ಪ್ರಜ್ವಲ್‌ ರೇವಣ್ಣ ಹೌದೋ, ಅಲ್ಲವೋ ಎಂಬುದು ಕೂಡ ಬಯಲಾಗಿದೆ. ಎಫ್‌ಎಸ್‌ಎಲ್‌ ವರದಿ ಬಳಿಕ ಎಸ್‌ಐಟಿ ಅಧಿಕಾರಿಗಳ ತನಿಖೆಯು ಚುರುಕುಗೊಂಡಿದ್ದು, ಶೀಘ್ರದಲ್ಲೇ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸುತ್ತಾರೆ. ಅದರಲ್ಲಿ, ಎಫ್‌ಎಸ್‌ಎಲ್‌ ವರದಿಯ ಕುರಿತು ಕೂಡ ಉಲ್ಲೇಖಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಸಿಲುಕಿರುವ ಪ್ರಜ್ವಲ್‌ ರೇವಣ್ಣ, ವಿಡಿಯೊ ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿದ್ದರು. ಇದಾದ ಕೆಲ ದಿನಗಳ ಬಳಿಕ ಅವರು ಭಾರತಕ್ಕೆ ವಾಪಸ್‌ ಬಂದಿದ್ದರು. ಭಾರತಕ್ಕೆ ವಾಪಸಾಗುತ್ತಲೇ ಅವರನ್ನು ಬಂಧಿಸಲಾಗಿದ್ದು, ಸದ್ಯ ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯ ಅಪಹರಣ ಮಾಡಿದ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ತಂದೆ ಎಚ್‌.ಡಿ.ರೇವಣ್ಣ ಅವರು ಕೂಡ ಜೈಲು ಸೇರಿದ್ದರು. ಅವರು ಈಗ ಜಾಮೀನು ಪಡೆದು ಹೊರಬಂದಿದ್ದಾರೆ. ಇದೇ ಪ್ರಕರಣವು ಎಚ್‌.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೂ ಮುಳುವಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಮೇಲೆ ಮತ್ತೊಂದು ಎಫ್‌ಐಆರ್‌; ಪ್ರೀತಂ ಗೌಡ ಮೇಲೂ ದೂರು

Continue Reading

ಕರ್ನಾಟಕ

Kabini Dam: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ಆತಂಕ ಬೇಡ; ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Kabini Dam: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸುದ್ದಿಯಿಂದ ನದಿ ಪಾತ್ರದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕಬಿನಿ ಅಣೆಕಟ್ಟು ಸುರಕ್ಷಿತವಾಗಿದೆ. ನದಿ ಪಾತ್ರದ ಜನರು ಯಾವುದೇ ಆತಂಕಕ್ಕೆ ಒಳಗಾಗಬೇಕಿಲ್ಲ. ಅಣೆಕಟ್ಟು ಸುರಕ್ಷತೆಯ ಬಗ್ಗೆ ಸರ್ಕಾರಕ್ಕೆ ಕಾಳಜಿಯಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

Kabini dam not cracked no need to worry says DCM DK Shivakumar
Koo

ಬೆಂಗಳೂರು: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ನೀರು (Kabini Dam) ಸೋರಿಕೆಯಾಗುತ್ತಿಲ್ಲ. ಅಣೆಕಟ್ಟಿಗೆ ಯಾವುದೇ ತರಹದ ಅಪಾಯವಾಗಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಗುರುವಾರ ಮಾತನಾಡಿದ ಅವರು, ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸುದ್ದಿಯಿಂದ ನದಿ ಪಾತ್ರದ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಕಬಿನಿ ಅಣೆಕಟ್ಟು ಸುರಕ್ಷಿತವಾಗಿದೆ. ನದಿ ಪಾತ್ರದ ಜನರು ಯಾವುದೇ ಆತಂಕಕ್ಕೆ ಒಳಗಾಗಬೇಕಿಲ್ಲ. ಅಣೆಕಟ್ಟು ಸುರಕ್ಷತೆಯ ಬಗ್ಗೆ ಸರ್ಕಾರಕ್ಕೆ ಕಾಳಜಿಯಿದೆ ಎಂದು ಹೇಳಿದರು.

ಇದನ್ನೂ ಓದಿ: kotak bank smart watch: ಮೊಬೈಲ್‌ ಬೇಕಿಲ್ಲ, ವಾಚ್‌ನಲ್ಲೇ ಆನ್‌ಲೈನ್‌ ಪೇಮೆಂಟ್‌! ಬಂದಿದೆ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವಾಚ್!

ನೀರಿನ ಹರಿವು ಹೆಚ್ಚಿದ್ದು, ನದಿ ಪಾತ್ರಗಳಲ್ಲಿ ಜನರು ಅನಗತ್ಯವಾಗಿ ಓಡಾಡದೆ ಸುರಕ್ಷಿತವಾಗಿ ಇರಬೇಕು. ಗುರುವಾರ ಸಂಜೆ ವೇಳೆಗೆ ತಮಿಳುನಾಡಿಗೆ 100 ಟಿಎಂಸಿಗೂ ಹೆಚ್ಚು ನೀರು ಹರಿದು ಹೋಗಿದೆ ಎಂದು ಹೇಳಿದರು.

ಇದನ್ನೂ ಓದಿ: Utthana Katha Spardhe 2024: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ; ಕಥೆ ತಲುಪಿಸಲು ಅ.10 ಕೊನೆಯ ದಿನ

ಕೇರಳ ರಾಜ್ಯ ಸಂಕಷ್ಟದಲ್ಲಿದ್ದು, ನಮ್ಮ ರಾಜ್ಯದ ಸಂಪೂರ್ಣ ಸಹಕಾರ ಅವರಿಗಿದೆ. ನಾವು ಕೇರಳ ಹಾಗೂ ಕೇರಳಿಗರ ಜತೆಗಿದ್ದೇವೆ. ಯಾವುದೇ ರೀತಿಯ ಸಹಾಯ ಮಾಡಲೂ ತಯಾರಿದ್ದೇವೆ. ಮೃತರ ಆತ್ಮಗಳಿಗೆ ಶಾಂತಿ ದೊರಕಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ತಿಳಿಸಿದರು.

Continue Reading

ಕರ್ನಾಟಕ

DK Shivakumar: ಬಿಜೆಪಿ ಪಾದಯಾತ್ರೆಗೆ ಕಾಂಗ್ರೆಸ್‌ ಪ್ರಶ್ನೆಗಳ ಸವಾಲು, ಹೆಜ್ಜೆಗೆ ಒಂದು ಪ್ರಶ್ನೆ ಎಂದ ಡಿಕೆಶಿ

DK Shivakumar: ಬಿಜೆಪಿ ಹಾಗೂ ಜೆಡಿಎಸ್‌ ವಿರುದ್ಧ ಪ್ರಶ್ನೆ ಕೇಳುವ ಅಭಿಯಾನವನ್ನು ಶುಕ್ರವಾರದಿಂದಲೇ (ಆಗಸ್ಟ್‌ 2) ಆರಂಭಿಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ಬಿಡದಿಯಲ್ಲಿ ಸಭೆ ಮಾಡುವ ಮೂಲಕ ಪ್ರಶ್ನೆಗಳನ್ನು ಕೇಳುತ್ತೇವೆ. ಎಲ್ಲ ಪ್ರಮುಖ ಪಟ್ಟಣಗಳಲ್ಲೂ ಸಭೆ ನಡೆಸಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಪ್ರಶ್ನೆ ಕೇಳುತ್ತೇವೆ ಎಂಬುದಾಗಿ ಡಿ.ಕೆ.ಶಿವಕುಮಾರ್‌ ಹೇಳಿದರು.

VISTARANEWS.COM


on

DK Shivakumar
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮೂಡಾ ನಿವೇಶನ ಹಂಚಿಕೆ ಹಗರಣ ಸೇರಿ ರಾಜ್ಯ ಸರ್ಕಾರದ ಹಲವು ಭ್ರಷ್ಟಾಚಾರಗಳ ವಿರುದ್ಧ ಆಗಸ್ಟ್‌ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ (BJP Padayatra) ನಡೆಸಲು ಬಿಜೆಪಿ ಹಾಗೂ ಜೆಡಿಎಸ್‌ ತೀರ್ಮಾನಿಸಿವೆ. ಇದರ ಬೆನ್ನಲ್ಲೇ, ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar) ಅವರು ದಿಢೀರನೆ ಸುದ್ದಿಗೋಷ್ಠಿ ನಡೆಸಿದ್ದು, “ಪಾದಯಾತ್ರೆ ನಡೆಸಲು ಮುಂದಾಗಿರುವ ಬಿಜೆಪಿ ಹಾಗೂ ಜೆಡಿಎಸ್‌ಗೆ ಕಾಂಗ್ರೆಸ್‌ ಸರಣಿ ಪ್ರಶ್ನೆಗಳ ಸವಾಲು ಒಡ್ಡುತ್ತಿದೆ. ಪ್ರತಿ ಹೆಜ್ಜೆಗೂ ಬಿಜೆಪಿ ಹಾಗೂ ಜೆಡಿಎಸ್‌ ಉತ್ತರಿಸಿ ಮುಂದೆ ಹೋಗಬೇಕು” ಎಂದು ಹೇಳಿದ್ದಾರೆ.

“ಬಿಜೆಪಿ ಹಾಗೂ ಜೆಡಿಎಸ್‌ ಒಗ್ಗೂಡಿ ಪಾದಯಾತ್ರೆ ನಡೆಸಲು ತೀರ್ಮಾನಿಸಿವೆ. ಇಷ್ಟು ದಿನ ಪಾದಯಾತ್ರೆಗೆ ಬೆಂಬಲ ನೀಡಲ್ಲ ಎಂದು ಜೆಡಿಎಸ್‌ ಹೇಳುತ್ತಿತ್ತು. ಈಗ ಎರಡೂ ಪಕ್ಷಗಳು ಒಗ್ಗೂಡಿ ಪಾದಯಾತ್ರೆ ಮಾಡುತ್ತಿವೆ. ಅವರ ಪಾದಯಾತ್ರೆಗೆ ನಮ್ಮ ಅಭ್ಯಂತರ ಇಲ್ಲ. ಆದರೆ, ನಗರದಲ್ಲಿ ಟ್ರಾಫಿಕ್‌ ಜಾಮ್‌ ದೃಷ್ಟಿಯಿಂದ ಅವರು ಪಾದಯಾತ್ರೆ ಮಾಡುವಂತಿಲ್ಲ. ಇನ್ನು, ಬಿಜೆಪಿ ಹಾಗೂ ಜೆಡಿಎಸ್‌ ಹಗರಣಗಳ ಕುರಿತು ನಾಳೆಯಿಂದ ನಮ್ಮ ಸಚಿವರು, ಶಾಸಕರು ಪ್ರಶ್ನೆ ಕೇಳುತ್ತಾರೆ. ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಹೆಜ್ಜೆ ಇಟ್ಟಲ್ಲೆಲ್ಲ ಪ್ರಶ್ನೆ ಕೇಳುತ್ತೇವೆ. ಅವುಗಳಿಗೆ ಅವರು ಉತ್ತರಿಸಿಯೇ ಮುಂದೆ ಹೋಗಬೇಕು” ಎಂದು ಡಿಸಿಎಂ ಹೇಳಿದರು.

ಪ್ರತಿ ಊರಿನಲ್ಲೂ ಸಭೆ

“ಬಿಜೆಪಿ ಹಾಗೂ ಜೆಡಿಎಸ್‌ ವಿರುದ್ಧ ಪ್ರಶ್ನೆ ಕೇಳುವ ಅಭಿಯಾನವನ್ನು ಶುಕ್ರವಾರದಿಂದಲೇ (ಆಗಸ್ಟ್‌ 2) ಆರಂಭಿಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ಬಿಡದಿಯಲ್ಲಿ ಸಭೆ ಮಾಡುವ ಮೂಲಕ ಪ್ರಶ್ನೆಗಳನ್ನು ಕೇಳುತ್ತೇವೆ. ಇನ್ನು ಆಗಸ್ಟ್‌ 3ರಂದು ರಾಮನಗರ, 4ರಂದು ಚನ್ನಪಟ್ಟಣ, 5ರಂದು ಮದ್ದೂರು, 6ಕ್ಕೆ ಮಂಡ್ಯ, 7 ಹಾಗೂ 9ರಂದು ಮೈಸೂರಿನಲ್ಲಿ ಸಭೆ ನಡೆಸಿ, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಅವರ ಹಗರಣಗಳ ಕುರಿತು ಪ್ರಶ್ನೆ ಕೇಳುತ್ತೇವೆ. ಅವುಗಳಿಗೆ ಅವರು ಉತ್ತರಿಸಬೇಕು” ಎಂದು ತಿಳಿಸಿದರು.

ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ?

“ಬಿಜೆಪಿ ಅಧಿಕಾರದಲ್ಲಿದ್ದಾಗ ಏನೆಲ್ಲ ಹಗರಣ ಮಾಡಿದರು ಎಂಬುದರ ಕುರಿತು ಪ್ರತಿಯೊಂದು ಸಭೆಯಲ್ಲೂ ಪ್ರಶ್ನೆಗಳನ್ನು ಕೇಳುತ್ತೇವೆ. ಅವರ ಹಗರಣಗಳ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡುತ್ತೇವೆ. ಪ್ರತಿಯೊಂದು ಸಭೆಯಲ್ಲೂ ಕಾಂಗ್ರೆಸ್‌ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ನಮ್ಮ ಪ್ರತಿ ಪ್ರಶ್ನೆಗಳಿಗೆ ಅವರು ಉತ್ತರಿಸಿಯೇ ಮುಂದೆ ಹೆಜ್ಜೆ ಇಡಬೇಕು. ಬಿಜೆಪಿಯವರು ಏನು ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳಾ” ಎಂದು ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದರು.

ಆಗಸ್ಟ್‌ 3ಕ್ಕೆ ಪಾದಯಾತ್ರೆ ಆರಂಭ

ಪಾದಯಾತ್ರೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾಹಿತಿ ನೀಡಿದ್ದಾರೆ. “ಆಗಸ್ಟ್‌ 3ರ ಶನಿವಾರ ಬೆಳಗ್ಗೆ 8.30ಕ್ಕೆ ನೈಸ್ ರೋಡ್ ಜಂಕ್ಷನ್‌ನಿಂದ ಪಾದಯಾತ್ರೆ ಪ್ರಾರಂಭ ಆಗುತ್ತದೆ. ರಾಜ್ಯದ ಎಲ್ಲ ಬಿಜೆಪಿ ಹಾಗೂ ಜೆಡಿಎಸ್ ಸಂಸದರು, ಶಾಸಕರು ಇರುತ್ತಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಕುಮಾರಸ್ವಾಮಿ ಅವರು ಕೂಡ ಬಂದು ಕಾರ್ಯಕ್ರಮ ಉದ್ಘಾಟನೆ ಮಾಡುತ್ತಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಂದೋಲನ ಮಾಡುತ್ತಿದ್ದೇವೆ. ಇದನ್ನು ಯಶಸ್ವಿಗೊಳಿಸುತ್ತೇವೆ” ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದನ್ನೂ ಓದಿ: BJP Padayatra: ಬಿಜೆಪಿ ಪಾದಯಾತ್ರೆಗೆ ಎಚ್‌ಡಿಕೆ ಸಾಥ್;‌ ಪ್ರೀತಂ ಗೌಡ ಭಾಗಿ ಆಗ್ತಾರಾ? ವಿಜಯೇಂದ್ರ ಹೇಳಿದ್ದಿಷ್ಟು

Continue Reading
Advertisement
Paris Olympics 2024
ಪ್ರಮುಖ ಸುದ್ದಿ12 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಇಂದು ಕಣಕ್ಕೆ ಇಳಿಯಲಿರುವ ಭಾರತದ ಸ್ಪರ್ಧಿಗಳು ಯಾರ್ಯಾರು? ಇಲ್ಲಿದೆ ಎಲ್ಲ ವಿವರ

karnataka Rain
ಮಳೆ12 mins ago

Karnataka Weather : 7 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ಕೊಟ್ಟ ಹವಾಮಾನ ತಜ್ಞರು

Dina Bhavishya
ಭವಿಷ್ಯ42 mins ago

Dina Bhavishya : ಈ ರಾಶಿಯವರು ದಿನ ಕೊನೆಯಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವಿರಿ

Rahul Gandhi
ದೇಶ6 hours ago

Rahul Gandhi: ರಾಹುಲ್‌ ಗಾಂಧಿ ಹೊಲಿದ ಚಪ್ಪಲಿಗೆ 10 ಲಕ್ಷ ರೂ. ಆಫರ್;‌ ಆದರೂ ಮಾರದ ಚಮ್ಮಾರ!

Kupwara Encounter
ದೇಶ6 hours ago

ಕಾಶ್ಮೀರದಲ್ಲಿ ಮುಂಬೈ ದಾಳಿ ರೂವಾರಿ ಹಫೀಜ್‌ ಸಯೀದ್‌ ಆಪ್ತನ ಹತ್ಯೆ; ಈತ ಪಾಕ್‌ ಕಮಾಂಡೋ ಕೂಡ ಹೌದು!

PV Sindhu
ಪ್ರಮುಖ ಸುದ್ದಿ6 hours ago

PV Sindhu : ಪಿವಿ ಸಿಂಧು ಹ್ಯಾಟ್ರಿಕ್​ ಒಲಿಂಪಿಕ್ಸ್​ ಪದಕದ ಕನಸು ಭಗ್ನ, 16ನೇ ಸುತ್ತಿನಲ್ಲಿ ಸೋಲು

Prajwal Revanna
ಕರ್ನಾಟಕ6 hours ago

Prajwal Revanna: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಅಸಲಿ; ಎಫ್‌ಎಸ್‌ಎಲ್‌ ವರದಿ ಬಹಿರಂಗ, ಎಸ್‌ಐಟಿ ತನಿಖೆಗೆ ಬಲ!

MS Dhoni
ಪ್ರಮುಖ ಸುದ್ದಿ6 hours ago

MS Dhoni : ಧೋನಿಯನ್ನು ತಂಡದಲ್ಲಿ ಉಳಿಸಿಕೊಳ್ಳಲು ನಿಯಮವನ್ನೇ ಬದಲಾಯಿಸಲು ಕೋರಿದ ಚೆನ್ನೈ ಸೂಪರ್ ಕಿಂಗ್ಸ್​

Kabini dam not cracked no need to worry says DCM DK Shivakumar
ಕರ್ನಾಟಕ7 hours ago

Kabini Dam: ಕಬಿನಿ ಅಣೆಕಟ್ಟು ಬಿರುಕು ಬಿಟ್ಟಿಲ್ಲ, ಆತಂಕ ಬೇಡ; ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Blood Cancer
ಆರೋಗ್ಯ7 hours ago

Blood Cancer: ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್‌ರನ್ನು ಬಲಿ ಪಡೆದ ರಕ್ತದ ಕ್ಯಾನ್ಸರ್‌ಗೆ ಏನು ಕಾರಣ? ಇದರ ಲಕ್ಷಣಗಳೇನು?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ16 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ16 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ17 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌