ಬಳ್ಳಾರಿ: ಅಡುಗೆ ಸರಿಯಾಗಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಹಾಸ್ಟೆಲ್ ಸಿಬ್ಬಂದಿ ವಿದ್ಯಾರ್ಥಿಯನ್ನು ಎಳೆದಾಡಿ, ಶರ್ಟ್ ಹರಿದು, ಹಲ್ಲೆ ಮಾಡಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ನಗರದ ನಂ.2 ಎಸ್‌ಸಿ ಹಾಸ್ಟೆಲ್‌ನಲ್ಲಿ (Assault Case) ಘಟನೆ ನಡೆದಿದೆ.
ಹಾಸ್ಟೆಲ್ ಮ್ಯಾನೇಜ್ಮೆಂಟ್ ಸಿಬ್ಬಂದಿ ಬಾಲರಾಮ್ ಮತ್ತು ವಾಡ್೯ನ್ ದಾವುದ್ ಎಂಬುವವರು ಹಲ್ಲೆ ಮಾಡಿದವರು. ಬಿಎ ಪದವಿ ಓದುತ್ತಿರುವ ವಿದ್ಯಾರ್ಥಿ ರವಿಗೆ ಮನಬಂದಂತೆ ಥಳಿಸಿದ್ದಾರೆ. ಮಾತ್ರವಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸಿ ದಬ್ಬಾಳಿಕೆ ನಡೆಸಿದ್ದಾರೆ.
ಹಲ್ಲೆ ಮಾಡಿದ್ದ ವಿಚಾರವನ್ನು ಹೊರಗೆ ಹೇಳಿದ್ದಕ್ಕೆ ಮತ್ತೆ ವಿದ್ಯಾರ್ಥಿ ಮೇಲೆ ದೌರ್ಜನ್ಯ ನಡೆಸಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಹಾಸ್ಟೆಲ್ ಸಿಬ್ಬಂದಿ ರೌಡಿಗಳ ಹಾಗೆ ವರ್ತನೆ ಮಾಡುತ್ತಿರುವುದಕ್ಕೆ ಆಕ್ರೋಶಗಳು ಕೇಳಿ ಬಂದಿದೆ. ರೌಡಿ ಪ್ರವೃತ್ತಿ ಹೊಂದಿರುವ ಸಿಬ್ಬಂದಿಯನ್ನು ವಜಾಗೊಳಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗಿದ್ದು, ಸಿರುಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Karnataka Budget 2024: ಸಿದ್ದರಾಮಯ್ಯ ಬಜೆಟ್‌ನ ಮುಖ್ಯಾಂಶಗಳ ಫೋಟೊ ಗ್ಯಾಲರಿ
ದಾವಣಗೆರೆಯಲ್ಲಿ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ
ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಅಣಬೂರು ಗ್ರಾಮದಲ್ಲಿ ಹತ್ತು ದಿನಗಳ ಹಿಂದೆ ವ್ಯಕ್ತಿಯೊಬ್ಬ ಕಾಣೆಯಾಗಿದ್ದ. ಆದರೆ ಇದೀಗ ಅಣಬೂರು ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾಗಿದ್ದಾರೆ. ಜಗಳೂರು ಗಾಂಧಿನಗರದ ನಿವಾಸಿ ಡಾಕ್ಯಾನಾಯ್ಕ್ ಎಂಬಾತ ಶವವಾಗಿ ಪತ್ತೆಯಾಗಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿ ಸಾಂತಕುಮಾರ್ ನೀಡಿದ ದೂರಿನ ಮೇರೆಗೆ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಹೂತಿಟ್ಟ ಶವವನ್ನು ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಜಗಳೂರು ಠಾಣೆಯ ಪಿಎಸ್‌ಐ ಸಾಗರ್, ತಾಲೂಕು ದಂಡಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ತಂಡದ ಸಿಬ್ಬಂದಿ, ಬೆರಳಚ್ಚು ಸಿಬ್ಬಂದಿ ಹಾಗೂ ಶ್ವಾನದಳ ಆಗಮಿಸುತ್ತಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ