Site icon Vistara News

Ballari News: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಲೋಕಾರ್ಪಣೆ; ಬಳ್ಳಾರಿಯಲ್ಲಿ ದೀಪೋತ್ಸವ

Ayodhya Ram mandir inauguration; special pooja Deepotsava programme in Ballari

ಬಳ್ಳಾರಿ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ (Ayodhya Ram Mandir) ಲೋಕಾರ್ಪಣೆಗೊಂಡ ಹಿನ್ನೆಲೆಯಲ್ಲಿ ನಗರದ ನೆಹರು ಕಾಲೊನಿಯ ಕೂಲಿ ಕಾರ್ಮಿಕರ ಬಡಾವಣೆಯಲ್ಲಿ ಶ್ರೀರಾಮ ದೇವರಿಗೆ ವಿಶೇಷ ಪೂಜೆ ಹಾಗೂ ದೀಪೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: Australian Open 2024: ಇತಿಹಾಸ ಸೃಷ್ಟಿಸಿದ ರೋಹನ್‌ ಬೋಪಣ್ಣ; ನಂ.1 ಹಿರಿಯ ಟೆನಿಸ್‌ ಆಟಗಾರ

ಬಳ್ಳಾರಿಯ ಸಾಧನ ಯೋಗ ಕೇಂದ್ರ, ರಾಷ್ಟ್ರೀಯ ಸ್ವಯಂ ಸೇವಕ ಸಂಘ, ರಾಷ್ಟ್ರೀಯ ಸೇವಿಕಾ ಸಮಿತಿ ಮತ್ತು ಆರೋಗ್ಯ ಭಾರತಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀರಾಮ ದೇವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ದೀಪಗಳನ್ನು ಬೆಳಗಿಸಲಾಯಿತು. ಬಳಿಕ ರಾಷ್ಟ್ರೀಯ ಸೇವಿಕಾ ಸಮಿತಿಯ ವತಿಯಿಂದ ಭಜನೆ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ನಿವೃತ್ತ ಬ್ಯಾಂಕ್‌ ಅಧಿಕಾರಿ ಗುರುರಾಜ ಮಾತನಾಡಿದರು.

ಇದನ್ನೂ ಓದಿ: Republic Day : ಗಣರಾಜ್ಯೋತ್ಸವದ ದಿನ ಬೆಂಗಳೂರಲ್ಲಿ ವಾಹನ ಸಂಚಾರ ಬದಲು; ಈ ಭಾಗದಲ್ಲಿ ಹೋಗಬೇಡಿ

ಈ ಸಂದರ್ಭದಲ್ಲಿ ಬಳ್ಳಾರಿಯ ಸಾಧನ ಯೋಗ ಕೇಂದ್ರದ ಮುಖ್ಯಸ್ಥೆ ರೂಪ ಮುರಳಿಧರ, ಮುಖಂಡರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರು ಹಾಗೂ ಸ್ಥಳೀಯ ನಿವಾಸಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ನಾಗಮಣಿ ಸಂಗನಕಲ್ಲು ಅವರಿಂದ ಪ್ರಸಾದ ವಿನಿಯೋಗ ನಡೆಯಿತು.

Exit mobile version