Ballari News: ಬಳ್ಳಾರಿಯ ಶ್ರೀ ಸಾಯಿ ಸೇವಾ ಟ್ರಸ್ಟ್‌ನಿಂದ ಚೆಕ್‌ಪೋಸ್ಟ್ ಸಿಬ್ಬಂದಿಗೆ ಬಿಸ್ಕೆಟ್‌, ಕುಡಿಯುವ ನೀರು ವಿತರಣೆ - Vistara News

ಬಳ್ಳಾರಿ

Ballari News: ಬಳ್ಳಾರಿಯ ಶ್ರೀ ಸಾಯಿ ಸೇವಾ ಟ್ರಸ್ಟ್‌ನಿಂದ ಚೆಕ್‌ಪೋಸ್ಟ್ ಸಿಬ್ಬಂದಿಗೆ ಬಿಸ್ಕೆಟ್‌, ಕುಡಿಯುವ ನೀರು ವಿತರಣೆ

Ballari News: ಬಳ್ಳಾರಿಯ ಶ್ರೀ ಸಾಯಿ ಸೇವಾ ಟ್ರಸ್ಟ್‌ನ ವತಿಯಿಂದ ಅಧ್ಯಕ್ಷ ನಾರಾಪ್ರತಾಪ್‌ ರೆಡ್ಡಿ ಅವರು ಬಳ್ಳಾರಿಯಿಂದ ಬೀದರ್‌ವರೆಗಿನ ಚೆಕ್‌ಪೋಸ್ಟ್ ಸಿಬ್ಬಂದಿಗಳಿಗೆ ಬಿಸ್ಕೆಟ್ ಮತ್ತು ಚಾಕೊಲೇಟ್ ಹಾಗೂ ಕುಡಿಯುವ ನೀರು ವಿತರಿಸಿದರು.

VISTARANEWS.COM


on

Biscuits, drinking water distributed to Checkpost staff by Ballari Sri Sai Seva Trust
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ಬಿರು ಬಿಸಿಲು ಹೆಚ್ಚಳ ಹಿನ್ನಲೆಯಲ್ಲಿ ಬಳ್ಳಾರಿಯ ಶ್ರೀ ಸಾಯಿ ಸೇವಾ ಟ್ರಸ್ಟ್‌ನ ವತಿಯಿಂದ ಅಧ್ಯಕ್ಷ ನಾರಾಪ್ರತಾಪ್‌ ರೆಡ್ಡಿ ಅವರು ಬಳ್ಳಾರಿಯಿಂದ (Ballari News) ಬೀದರ್‌ವರೆಗಿನ ಚೆಕ್‌ಪೋಸ್ಟ್ ಸಿಬ್ಬಂದಿಗಳಿಗೆ ಬಿಸ್ಕೆಟ್ ಮತ್ತು ಚಾಕೊಲೇಟ್ ಹಾಗೂ ಕುಡಿಯುವ ನೀರನ್ನು ವಿತರಿಸಿದರು.

ಇದನ್ನೂ ಓದಿ: Exams Postponed: ಲೋಕಸಭಾ ಚುನಾವಣೆ ಹಿನ್ನೆಲೆ: ಪ್ರಮುಖ ಪರೀಕ್ಷೆಗಳ ದಿನಾಂಕ ಬದಲು; ಹೊಸ ವೇಳಾಪಟ್ಟಿ ಇಲ್ಲಿದೆ

ಈ ಹಿಂದೆ ನಾರಾಪ್ರತಾಪ್‌ ರೆಡ್ಡಿಯವರು ಕಲ್ಯಾಣ ಕರ್ನಾಟಕದ ಪದವೀಧರ ವಿಧಾನ ಪರಿಷತ್‌ ಕ್ಷೇತ್ರದ ಪರಾಜಿತ ಅಭ್ಯರ್ಥಿಯಾಗಿದ್ದರು. ಕಳೆದ ಹಲವು ವರ್ಷಗಳಿಂದ ಟ್ರಸ್ಟ್‌ ಅನ್ನು ಹುಟ್ಟುಹಾಕಿಕೊಂಡು ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಬಿರು ಬೇಸಿಗೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ಅದರಲ್ಲೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸೂರ್ಯನ ಪ್ರಖರತೆ ಹೆಚ್ಚಾಗಿರುವುದರಿಂದ ಇಂತಹ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: RCB: ಮುಂದಿನ ಪಂದ್ಯದಲ್ಲಿ ಗ್ರೀನ್​ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಆರ್​ಸಿಬಿ; ಗೆಲುವು ಖಚಿತ ಎಂದ ಫ್ಯಾನ್ಸ್​

ಈ ಬಾರಿಯೂ ಕೂಡ ಕಲ್ಯಾಣ ಕರ್ನಾಟಕ ಪದವೀಧರ ವಿಧಾನಪರಿಷತ್‌ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಈಗಾಗಲೇ ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸುತ್ತಾಟವನ್ನು ನಡೆಸಿ, ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇವರಿಗೆ ಆಮ್‌ ಆದ್ಮಿ ಮತ್ತು ಸಿಪಿಐಎಂ ಪಕ್ಷಗಳು ಬೆಂಬಲ ಸೂಚಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬಳ್ಳಾರಿ

Neha Murder Case: ನೇಹಾ ಹತ್ಯೆ ಖಂಡಿಸಿ ಕಂಪ್ಲಿಯಲ್ಲಿ ಮೌನ ಪ್ರತಿಭಟನೆ

Neha Murder Case: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆಯನ್ನು ಖಂಡಿಸಿ, ಕಂಪ್ಲಿ ಪಟ್ಟಣದಲ್ಲಿ ಸೋಮವಾರ ವೀರಶೈವ ಸಮಾಜದ ವತಿಯಿಂದ ಮೌನ ಪ್ರತಿಭಟನೆ ನಡೆಸಲಾಯಿತು.

VISTARANEWS.COM


on

protest against Neha murder case in Kampli
Koo

ಕಂಪ್ಲಿ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆಯನ್ನು (Neha Murder Case) ಖಂಡಿಸಿ, ಪಟ್ಟಣದಲ್ಲಿ ಸೋಮವಾರ ವೀರಶೈವ ಸಮಾಜದ ವತಿಯಿಂದ ಮೌನ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ವೀರಶೈವ ಸಂಘದ ಅಧ್ಯಕ್ಷರಾದ ಪಿ.ಮೂಕಯ್ಯ ಸ್ವಾಮಿ ಮಾತನಾಡಿ, ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಪ್ರಕರಣವು ತೀವ್ರ ಖಂಡನೀಯವಾಗಿದ್ದು, ಹೆಣ್ಣು ಮಕ್ಕಳಿಗೆ ರಾಜ್ಯದಲ್ಲಿ ಅಭದ್ರತೆಯ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಪೋಷಕರಂತು ತಮ್ಮ ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಕಳಿಸಲು ಭಯ ಪಡುವಂತಾಗಿದೆ.

ಇದನ್ನೂ ಓದಿ: Tata Consultancy Services: ಮನೆಯಿಂದಲೇ ಕೆಲಸ ಮಾಡುವವರಿಗೆ ಬೋನಸ್‌, ಟಿವಿಪಿ ಕಟ್‌ ಮಾಡಿದ ಟಿಸಿಎಸ್!

ಇದೇ ರೀತಿ ಮುಂದುವರೆದರೆ ರಾಜ್ಯದಲ್ಲಿ ಮಹಿಳೆಯರು ಸ್ವತಂತ್ರವಾಗಿ ಜೀವಿಸುವುದಾದರು ಹೇಗೆ, ಈ ಕುರಿತು ಸರ್ಕಾರ ಗಮನ ಹರಿಸಿ ಈ ಪ್ರಕರಣವನ್ನು ಕೂಲಂಕುಶವಾಗಿ ತನಿಖೆ ನಡೆಸುವ ಮೂಲಕ ಆರೋಪಿಗೆ ಗಲ್ಲು ಶಿಕ್ಷೆಯನ್ನು ವಿಧಿಸಬೇಕು. ಅಲ್ಲದೆ ಈ ರೀತಿಯ ಕೃತ್ಯಗಳು ಮರುಕಳಿಸದಂತೆ ಕ್ರಮ ವಹಿಸಲು ಮುಂದಾಗಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.

ಇಲ್ಲಿನ ಶ್ರೀ ಉದ್ಭವ ಮಹಾಗಣಪತಿ ದೇವಸ್ಥಾನದಿಂದ ಡಾ. ರಾಜ್‌ಕುಮಾರ್ ರಸ್ತೆ ಮಾರ್ಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೂ ಮೌನ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಳಿಕ ತಹಸೀಲ್ದಾರ್ ಶಿವರಾಜ್ ಶಿವಪುರ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಇದನ್ನೂ ಓದಿ: Tata Motors: ಮ್ಯಾಜಿಕ್ ಬೈ-ಫ್ಯುಯೆಲ್ ವ್ಯಾನ್‌ ಬಿಡುಗಡೆ ಮಾಡಿದ ಟಾಟಾ ಮೋಟರ್ಸ್

ಈ ಸಂದರ್ಭದಲ್ಲಿ ವೀರಶೈವ ಸಮಾಜದ ಮುಖಂಡರಾದ ಕೆ.ಎಂ.ಹೇಮಯ್ಯ ಸ್ವಾಮಿ, ಅರವಿ ಬಸವನಗೌಡ, ಎಸ್.ಎಸ್.ಎಂ. ಚೆನ್ನಯ್ಯಸ್ವಾಮಿ, ಕಲ್ಗುಡಿ ವಿಶ್ವನಾಥ್, ವಾಲಿ ಕೊಟ್ರಪ್ಪ, ಎಸ್.ಎಂ. ನಾಗರಾಜ್, ವಾಗೀಶ್, ಎಚ್.ನಾಗರಾಜ್, ವಿದ್ಯಾಧರ್, ಪತ್ರಯ್ಯಸ್ವಾಮಿ, ಪ್ರಸಾದ್ ಗಡಾದ್, ಟಿ.ಎಚ್.ಎಂ. ರಾಜಕುಮಾರ್, ಎಸ್.ಡಿ. ಬಸವರಾಜ್, ಚಂದ್ರಶೇಖರ ಗೌಡ, ಸಚ್ಚಿದಾನಂದ, ಯರೇಗೌಡ, ಅಮರೇಗೌಡ, ಮುಕ್ಕುಂದಿ ಶಿವಗಂಗಮ್ಮ, ಶಾಂತಲಾ, ಕಲ್ಗುಡಿ ರಾಜೇಶ್ವರಿ, ಮುಕ್ಕುಂದಿ ಮಮತಾ, ಭತ್ತದ ಸಂಧ್ಯಾ, ವಿ. ಶಾಂತ, ಚೈತ್ರ ಗಡಾದ್, ಎ.ಟಿ. ಉಮಾ, ಕೆ.ಎಂ. ಸೌಮ್ಯ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Continue Reading

ಬಳ್ಳಾರಿ

Lok Sabha Election 2024: ಬಳ್ಳಾರಿ ಲೋಕಸಭಾ ಕಣದಲ್ಲಿ 10 ಅಭ್ಯರ್ಥಿಗಳು

Lok Sabha Election 2024: ಬಳ್ಳಾರಿ (ಪ.ಪಂ) ಲೋಕಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ದಿನವಾದ ಸೋಮವಾರ, ಓರ್ವ ಅಭ್ಯರ್ಥಿಯು ತಮ್ಮ ಉಮೇದುವಾರಿಕೆಯನ್ನು ವಾಪಸ್ ತೆಗೆದುಕೊಂಡಿದ್ದು, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು ಇದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.

VISTARANEWS.COM


on

Ballari DC Prashanth Kumar Mishra pressmeet
Koo

ಬಳ್ಳಾರಿ: ಬಳ್ಳಾರಿ (ಪ.ಪಂ) ಲೋಕಸಭಾ ಚುನಾವಣೆಗೆ (Lok Sabha Election 2024) ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂಪಡೆಯುವ ದಿನವಾದ ಸೋಮವಾರ, ಒಬ್ಬ ಅಭ್ಯರ್ಥಿಯು ತಮ್ಮ ಉಮೇದುವಾರಿಕೆಯನ್ನು ವಾಪಸ್ ತೆಗೆದುಕೊಂಡಿದ್ದು, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು ಇದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು.

ಇದನ್ನೂ ಓದಿ: Special Food In Kashi: ನೀವು ಕಾಶಿಗೆ ಹೋದರೆ ಈ ತಿಂಡಿಗಳ ರುಚಿ ನೋಡಲು ಮರೆಯದಿರಿ!

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದ ಕೆಸ್ವಾನ್ ವಿಡಿಯೋ (ವಿಸಿ ಹಾಲ್) ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.12 ರಿಂದ 19 ರವರೆಗೆ ನಾಮಪತ್ರ ಸಲ್ಲಿಕೆಯ ಅವಧಿಯಲ್ಲಿ ಒಟ್ಟು 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಏ.20 ರಂದು ನಡೆದ ನಾಮಪತ್ರಗಳ ಪರಿಶೀಲನೆಯಲ್ಲಿ 11 ಅಭ್ಯರ್ಥಿಗಳ ನಾಮಪತ್ರಗಳು ಕ್ರಮವಾಗಿದ್ದವು. ನಾಮಪತ್ರ ವಾಪಸ್ಸು ಪಡೆಯುವ ದಿನವಾದ ಏ.22 ರಂದು ಸೋಮವಾರ ಪಕ್ಷೇತರ ಅಭ್ಯರ್ಥಿ ಬಿ. ಭಾಗ್ಯಲಕ್ಷ್ಮಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ತಿಳಿಸಿದರು.

ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು

ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳಾದ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತುಕಾರಾಮ್, ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿ ವಾಲ್ಮೀಕಿ ಕೃಷ್ಣಪ್ಪ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಿ.ಶ್ರೀರಾಮುಲು, ಅದೇ ರೀತಿಯಾಗಿ ನೋಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾದ (ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳನ್ನು ಹೊರತುಪಡಿಸಿ) ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಸಿ.ಚನ್ನವೀರ, ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಷ್ಟ್) ಪಕ್ಷದ ಅಭ್ಯರ್ಥಿ ಎ.ದೇವದಾಸ್, ಪ್ರಹರ್ ಜನಶಕ್ತಿ ಪಾರ್ಟಿಯ ಅಭ್ಯರ್ಥಿ ಮಂಜಪ್ಪ, ನವಭಾರತ್ ಸೇನ ಪಕ್ಷದ ಅಭ್ಯರ್ಥಿ ಜಿ.ಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿಗಳಾದ ಅರುಣ್ ಎಸ್. ಹಿರೇಹಾಳ್, ವೈ.ಪಂಪಾಪತಿ, ವೀರೇಶ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳಾಗಿದ್ದಾರೆ ಎಂದು ವಿವರಿಸಿದರು.

ಇದನ್ನೂ ಓದಿ: Tata Motors: ಮ್ಯಾಜಿಕ್ ಬೈ-ಫ್ಯುಯೆಲ್ ವ್ಯಾನ್‌ ಬಿಡುಗಡೆ ಮಾಡಿದ ಟಾಟಾ ಮೋಟರ್ಸ್

ಈಗಾಗಲೇ ಪಕ್ಷೇತರ ಅಭ್ಯರ್ಥಿಗಳಿಗೆ ಚಿಹ್ನೆ ಕೂಡ ಹಂಚಿಕೆ ಮಾಡಲಾಗಿದ್ದು, ಮೇ 07 ರಂದು ಮತದಾನ ನಡೆಯಲಿದೆ ಎಂದರು.

ಮತದಾನ ದಿನದಂದು ಅಗತ್ಯ ವ್ಯವಸ್ಥೆ

ಬೇಸಿಗೆ ಬಿಸಿಲಿರುವುದರಿಂದ ಮತದಾನ ದಿನದಂದು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮತಗಟ್ಟೆಗಳಲ್ಲಿ ಮತದಾರರು ನಿಲ್ಲಲು ನೆರಳು ಇಲ್ಲದಿರುವೆಡೆ ಶ್ಯಾಮಿಯಾನ ವ್ಯವಸ್ಥೆ ಮಾಡಲಾಗುವುದು ಅಲ್ಲದೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಹಾಗೂ ಇತರೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಮತದಾರರನ್ನು ಮತಗಟ್ಟೆಗೆ ಸೆಳೆಯಲು 40 ಸಖಿ ಮಹಿಳಾ ಮತಗಟ್ಟೆಗಳು, 12 ಎಥ್ನಿಕ್, 08 ವಿಶೇಷಚೇತನ ಹಾಗೂ 08 ಯುವ ಮತಗಟ್ಟೆಗಳು, ಥೀಮ್ ಆಧಾರಿತ 8 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದರು.

ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಈಗಾಗಲೇ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ತಿಳಿಸಿದರು.

ಚುನಾವಣಾ ಅಕ್ರಮ ತಡೆಯಲು 1950 ಟೋಲ್ ಫ್ರೀ ಸಂಖ್ಯೆ ಬಳಸಿ

ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ, ಹಣ-ಉಡುಗೊರೆ ಹಂಚುವುದು ಹಾಗೂ ಚುನಾವಣೆ ಸಂಬಂಧಿತ ಇತರೆ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ 1950 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಅಥವಾ ಸಿ-ವಿಜಿಲ್ ಆಪ್ ಮೂಲಕ ದೂರು ಸಲ್ಲಿಸಬಹುದು ಎಂದರು.

ಚುನಾವಣಾ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ

ಚುನಾವಣೆ ಕಾರ್ಯ ಮತ್ತು ಪ್ರಚಾರ ಕಾರ್ಯಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಹಾಗೂ ಚುನಾವಣಾ ಆಯೋಗದ ನಿರ್ದೇಶನವಿದ್ದು, ಯಾವುದೇ ಪಕ್ಷಗಳು ಅಥವಾ ಅಭ್ಯರ್ಥಿಗಳು 18 ವರ್ಷದೊಳಗಿನ ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಡಿಸಿ ಮಿಶ್ರಾ ಖಡಕ್ ಸೂಚನೆ ನೀಡಿದರು.

ಇದನ್ನೂ ಓದಿ: Karnataka Weather : ಸಿಡಿಲಿಗೆ 7 ಕುರಿಗಳು ಸಾವು, ಕೊಡಗಿನಲ್ಲಿ ಭಾರಿ ಮಳೆಗೆ ಮಗುಚಿದ ಲಾರಿ; ನಾಳೆ ಎಲ್ಲೆಲ್ಲಿ ಆರ್ಭಟ

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯ ಸಿಬ್ಬಂದಿ ಇದ್ದರು.

Continue Reading

ಮಳೆ

Karnataka Weather : ಸಿಡಿಲಿಗೆ 7 ಕುರಿಗಳು ಸಾವು, ಕೊಡಗಿನಲ್ಲಿ ಭಾರಿ ಮಳೆಗೆ ಮಗುಚಿದ ಲಾರಿ; ನಾಳೆ ಎಲ್ಲೆಲ್ಲಿ ಆರ್ಭಟ

Rain News : ರಾಜ್ಯದ ಹಲವಡೆ ವ್ಯಾಪಕ ಮಳೆಯಾಗುತ್ತಿದ್ದು, ಏ.24ರ ವರೆಗೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ. ಕೊಡಗಿನಲ್ಲಿ ವರುಣಾರ್ಭಟಕ್ಕೆ ಚಾಲಕನ ನಿಯಂತ್ರಣ ತಪ್ಪಿದ್ದು, ಲಾರಿಯೊಂದು ತಿರುವಿನಲ್ಲಿ ಮಗುಚಿ ಬಿತ್ತು.

VISTARANEWS.COM


on

By

Karnataka Weather Forecast
Koo

ಕೊಡಗು/ಬೆಂಗಳೂರು: ಸೋಮವಾರ (ಏ.22) ಕೊಡಗಿನ ಹಲವೆಡೆ ಗುಡುಗು ಸಹಿತ ಮಳೆಯು (Rain News) ಅಬ್ಬರಿಸುತ್ತಿದೆ. ಮಡಿಕೇರಿ, ನಾಪೋಕ್ಲು, ಮೂರ್ನಾಡು ಭಾಗದಲ್ಲಿ ಭರ್ಜರಿ (Karnataka Weather Forecast) ಮಳೆಯಾಗಿದೆ. ಒಂದು ಕಡೆಗೆ ಮಳೆಯಿಂದ ಕೊಡಗಿನ ಕೃಷಿಕರಲ್ಲಿ ಮಂದಹಾಸ ಮೂಡಿದರೆ ಮತ್ತೊಂದು ಕಡೆ ಮಳೆ ಅನಾಹುತವು ಆತಂಕ ಹೆಚ್ಚಿಸಿದೆ.

ಮಡಿಕೇರಿ‌‌ ಸಮೀಪದ ಜೋಡುಪಾಲ ಬಳಿ ಭಾರಿ ಮಳೆಗೆ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು‌ ಮಗುಚಿ ಬಿತ್ತು. ಬೆಂಗಳೂರಿನಿಂದ‌‌ ಮಂಗಳೂರಿಗೆ ಲಾರಿಯಲ್ಲಿ ಜ್ಯೂಸ್ ಸಾಗಿಸಲಾಗುತ್ತಿತ್ತು. ಮಳೆಯಿಂದ ಜೋಡುಪಾಲದ ತಿರುವಿನಲ್ಲಿ ಲಾರಿಯ ವೀಲ್ ಜಾರಿ, ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಿಡಿಲು ಬಡಿದು 7 ಕುರಿಗಳು ಸಾವು

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹೇಮಗುಡ್ಡ ಬಳಿ ಸಿಡಿಲು ಬಡಿದು 7 ಕುರಿಗಳು ಮೃತಪಟ್ಟಿವೆ. ಹೇಮಗುಡ್ಡ ಗ್ರಾಮದ ರಾಮಣ್ಣ ಬಂಡಿ ಎಂಬುವವರಿಗೆ ಸೇರಿದ 7 ಕುರಿಗಳು ಸಿಡಿಲಿಗೆ ಬಲಿಯಾಗಿವೆ. 8ಕ್ಕೂ ಹೆಚ್ಚು ಕುರಿಗಳು ಗಾಯಗೊಂಡಿವೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡ ನಗರದಲ್ಲಿ ಗುಡುಗು ಸಹಿತ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಹೆಚ್ಚಾಗಿದ್ದ ಬಿಸಿಲಿನ ತಾಪಮಾನವು ಮಳೆಯಿಂದಾಗಿ ತಣ್ಣಗಾಗಿತ್ತು. ಕೊಪ್ಪಳ‌ದಲ್ಲಿ ಗಾಳಿ, ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಿದೆ. ಮುಂಜಾನೆ ಮೋಡ ಕವಿದ ವಾತಾವರಣ ಇತ್ತು, ಮಧ್ಯಾಹ್ನದ ಹೊತ್ತಿಗೆ ಶುರುವಾದ ಸಣ್ಣ ಮಳೆಯು ನಂತರ ರಭಸವಾದ ಗಾಳಿಯೊಂದಿಗೆ ಗುಡುಗು ಸಿಡಿಲಿನ ಶಬ್ಧವು ಜನರನ್ನು ಬೆಚ್ಚಿ ಬೀಳಿಸಿತ್ತು.

ಇದನ್ನೂ ಓದಿ: Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

ಮುಂದಿನ 48 ಗಂಟೆಯಲ್ಲಿ ಗಾಳಿ ಜತೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಏ.23ರಂದು ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಬೆಳಗಾವಿ, ಬಾಗಲಕೋಟೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಕೆಲವೊಮ್ಮೆ 30-40 ಕಿ.ಮೀ ವ್ಯಾಪ್ತಿಯಲ್ಲಿ ರಭಸವಾದ ಗಾಳಿಯು ಬೀಸಲಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ ಸೇರಿ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯದ ಕೆಲವೆಡೆ ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ.

ಏ.24ರಂದು ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯದ ಒಂದೆರಡು ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಬಿಸಿ ಗಾಳಿ ಮುನ್ನೆಚ್ಚರಿಕೆ

ಬೀದರ್‌, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಗದಗ, ಧಾರವಾಡ, ದಾವಣಗೆರೆ, ಕೋಲಾರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಮತ್ತು ಆರ್ದ್ರತೆ

ಮುಂದಿನ 5 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂಜಾನೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನ ಅಥವಾ ಸಂಜೆಗೆ ಆಕಾಶವು ನಿರ್ಮಲವಾಗಿರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಳ್ಳಾರಿ

Lok Sabha Election 2024: ಕಾಂಗ್ರೆಸ್‌ ಜಾರಿ ಮಾಡಿದ ಯೋಜನೆಗಳು ಕೋಟ್ಯಂತರ ಜನರ ಬಾಳಿಗೆ ಬೆಳಕಾಗಿವೆ: ಈ. ತುಕಾರಾಂ

Lok Sabha Election 2024: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಲಬೂರಿನಲ್ಲಿ ಚುನಾವಣಾ ಪ್ರಚಾರ ಕೈಗೊಂಡು, ಮತಯಾಚನೆ ನಡೆಸಿದರು.

VISTARANEWS.COM


on

Ballari Lok Sabha Constituency Congress candidate e Tukaram election campaign
Koo

ಹಗರಿಬೊಮ್ಮನಹಳ್ಳಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಲಬೂರಿನಲ್ಲಿ ಚುನಾವಣಾ ಪ್ರಚಾರ ಕೈಗೊಂಡು, ಮತಯಾಚನೆ (Lok Sabha Election 2024) ನಡೆಸಿದರು.

ಈ ವೇಳೆ ಮಾತನಾಡಿದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ದೇಶಕ್ಕೆ ಕಾಂಗ್ರೆಸ್ ಪಕ್ಷವು ನೀಡಿದ ಕೊಡುಗೆ ಅಪಾರವಾಗಿದೆ. ವಿಧವಾ ವೇತನ, ಅಂಗವಿಕಲರ ಮಸಾಶನ, ಸಂಧ್ಯಾ ಸುರಕ್ಷಾ, ಹಸಿರು ಕ್ರಾಂತಿ, ಬ್ಯಾಂಕುಗಳ ರಾಷ್ಟ್ರೀಕರಣ, ಮೀಸಲಾತಿ, ಪಂಚಾಯತ್ ರಾಜ್ ವ್ಯವಸ್ಥೆ, ಆಹಾರ ಭದ್ರತಾ ಯೋಜನೆ ಸೇರಿದಂತೆ ಇನ್ನೂ ಅನೇಕ ಯೋಜನೆಗಳು ಇಂದಿಗೂ ಕೋಟ್ಯಾಂತರ ಜನರ ಬಾಳಿಗೆ ಬೆಳಕಾಗಿವೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Gold Rate Today: 24 ಕ್ಯಾರಟ್‌ ಚಿನ್ನದ ಬೆಲೆಯಲ್ಲಿ ₹550 ಇಳಿಕೆ; ಇಂದು ಹೀಗಿದೆ ಬೆಲೆ ಗಮನಿಸಿ

ರಾಜ್ಯ ಕಾಂಗ್ರೆಸ್‌ ಸರ್ಕಾರ ಅನುಷ್ಠಾನಗೊಳಿಸಿದ ಗೃಹಲಕ್ಷ್ಮಿ ಯೋಜನೆ, ಅನ್ನ ಭಾಗ್ಯ ಯೋಜನೆ, ಗೃಹಜೋತಿ ಯೋಜನೆ, ಶಕ್ತಿ, ಕ್ಷೀರಭಾಗ್ಯ ಸೇರಿದಂತೆ ಇನ್ನೂ ಅನೇಕ ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಸ್ತದ ಗುರುತಿಗೆ ಮತ ನೀಡಿ ಎಂದು ಮನವಿ ಮಾಡಿದರು.

ದೇಶವನ್ನು ಆಳಲು ಬಿಜೆಪಿಗೆ ಯಾವುದೇ ಅರ್ಹತೆ ಇಲ್ಲ. ಬಿಜೆಪಿ ಬರೀ ಸುಳ್ಳು ಹೇಳುತ್ತಲೇ ಬಂದಿದೆ ಎಂದು ಆರೋಪಿಸಿದ ಅವರು, ಬಡವರ ಪರ ಇರುವ ಪಕ್ಷ ಕಾಂಗ್ರೆಸ್‌ ಅನ್ನು ಬೆಂಬಲಿಸಿ ಎಂದು ಮತದಾರರಲ್ಲಿ ಅವರು ಮನವಿ ಮಾಡಿದರು.

ಇದನ್ನೂ ಓದಿ: Leopard Attack: ನೂರಕ್ಕೂ ಹೆಚ್ಚು ಕುರಿಗಳ ಜತೆಯೇ ಎರಡು ಗಂಟೆ ಇದ್ದ ಚಿರತೆ!

ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಕುರಿ ಶಿವಮೂರ್ತಿ, ಪತ್ರೆಶ್ ಹಿರೇಮಠ್, ದ್ವಾರಕೇಶ್, ಗೂಳಿ ಮಲ್ಲಿಕಾರ್ಜುನ, ಕೊಟ್ರೇಶ್, ದೊಡ್ಡರಾಮಣ್ಣ, ಪರಮೇಶ್ವರಯ್ಯ, ವಸಂತ ಕುಮಾರ್ ಸೇರಿದಂತೆ ಇತರೆ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading
Advertisement
Shakti Scheme
ಕರ್ನಾಟಕ3 hours ago

Shakti Scheme: ಸಿಎಂ ಸಿದ್ದರಾಮಯ್ಯಗೆ ಫ್ರೀ ಟಿಕೆಟ್ ಹಾರ ಅರ್ಪಣೆ; ಕಾನೂನು‌ ವಿದ್ಯಾರ್ಥಿನಿಯಿಂದ ವಿಭಿನ್ನವಾಗಿ ಕೃತಜ್ಞತೆ

IPL 2024
ಕ್ರೀಡೆ3 hours ago

IPL 2024 : ಮುಂಬೈ ವಿರುದ್ಧ ರಾಜಸ್ಥಾನ್​ ತಂಡಕ್ಕೆ 9 ವಿಕೆಟ್​ ಅಮೋಘ​ ಗೆಲುವು

Gurulinga Shivacharya Swamiji
ಕರ್ನಾಟಕ3 hours ago

Gurulinga Shivacharya Swamiji: ಕಾರು ಅಪಘಾತದಲ್ಲಿ ಬಂಗರಗಾ ಹಿರೇಮಠದ ಶ್ರೀ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ

Actor Darshan election campaign for Mandya Lok Sabha constituency Congress candidate star Chandru
ಮಂಡ್ಯ3 hours ago

Lok Sabha Election 2024: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಮತ ನೀಡಿ, ಗೆಲ್ಲಿಸಿ: ನಟ ದರ್ಶನ್ ಮನವಿ

Tulsi Gowda
ಪ್ರಮುಖ ಸುದ್ದಿ4 hours ago

Tulsi Gowda: ಮನೆಯಲ್ಲಿ ಕಾಲು ಜಾರಿ ಬಿದ್ದು ಪದ್ಮಶ್ರೀ ತುಳಸಿ ಗೌಡ ಅಸ್ವಸ್ಥ

IPL 2024
ಪ್ರಮುಖ ಸುದ್ದಿ4 hours ago

ವಿಸ್ತಾರ ಸಂಪಾದಕೀಯ: ತಂತ್ರಜ್ಞಾನ ಕಾಲದಲ್ಲೂ ಐಪಿಎಲ್​ ಅಂಪೈರ್ ಗಳ ಸೋಮಾರಿತನ ಆಕ್ಷೇಪಾರ್ಹ

Terrorist Attack
ದೇಶ4 hours ago

Terrorist Attack: ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು; ಉಗ್ರನ ದಾಳಿಗೆ ಸರ್ಕಾರಿ ನೌಕರ ಬಲಿ

Reliance Industries net profit of Rs 18,951 crore, declares interim dividend of Rs 10 per share
ದೇಶ4 hours ago

Reliance Industries: ರಿಲಯನ್ಸ್ ಇಂಡಸ್ಟ್ರೀಸ್‌ಗೆ 18,951 ಕೋಟಿ ರೂ. ನಿವ್ವಳ ಲಾಭ; ಷೇರಿಗೆ 10 ರೂ. ಮಧ್ಯಂತರ ಲಾಭಾಂಶ

Hardik Pandya
ಪ್ರಮುಖ ಸುದ್ದಿ4 hours ago

Hardik Pandya : ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್​​ನಲ್ಲಿ ಮತ್ತೆ ವಿಫಲ; ಬೆಂಡೆತ್ತಿದ ಅಭಿಮಾನಿಗಳು

Rain News
ಕರ್ನಾಟಕ4 hours ago

Rain News: ಪ್ರತ್ಯೇಕ ಮಳೆ ಅವಘಡ; ಬೀದರ್‌ನಲ್ಲಿ ಸಿಡಿಲು ಬಡಿದು ಇಬ್ಬರು ಯುವಕರ ದುರ್ಮರಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru karaga 2024
ಬೆಂಗಳೂರು10 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ11 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು14 hours ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು15 hours ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ22 hours ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ2 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20242 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ3 days ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

ಟ್ರೆಂಡಿಂಗ್‌