ಬಳ್ಳಾರಿ: ಅಂತರಾಷ್ಟ್ರೀಯ ಮಟ್ಟದ ಸಿರಿಧಾನ್ಯ (Millets) ಮತ್ತು ಸಾವಯವ ಮೇಳ-2024ರ ಅಂಗವಾಗಿ ಸಿರಿಧಾನ್ಯ ಬಳಕೆ ಹಾಗೂ ಆರೋಗ್ಯ ದೃಷ್ಟಿಯಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಗುರುವಾರ ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ ನಡೆಯಿತು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ಇದನ್ನೂ ಓದಿ: Folk Museum: ಮೈಸೂರಿನ ಜಯಲಕ್ಷ್ಮಿ ವಿಲಾಸ ಮ್ಯಾನ್ಷನ್‌ನ ಜಾನಪದ ವಸ್ತುಸಂಗ್ರಹಾಲಯ ಸಂರಕ್ಷಣೆ; ಯು.ಎಸ್. ಮಿಷನ್ ಬೆಂಬಲ
ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆಯು ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆರಂಭವಾಗಿ ಎಚ್.ಆರ್.ಗವಿಯಪ್ಪ ವೃತ್ತದಿಂದ ಎಸ್.ಪಿ.ವೃತ್ತ ಮೂಲಕ ಶ್ರೀ ಕನಕದುರ್ಗಮ್ಮ ದೇವಸ್ಥಾನ ಮಾರ್ಗವಾಗಿ ಗಡಿಗಿ ಚನ್ನಪ್ಪ ವೃತ್ತದ ಮೂಲಕ ಮರಳಿ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಮರಳಿತು. ಡೊಳ್ಳು ಕುಣಿತ ಮೆರವಣಿಗೆಯಲ್ಲಿ ವಿಶೇಷ ಆಕರ್ಷಣೆಯಾಗಿತ್ತು. ನಡಿಗೆಯಲ್ಲಿ ಸುಮಾರು 300 ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು.
ಇದನ್ನೂ ಓದಿ: Vijayanagara News: ಪ್ರವಾಸಿ ಮಹಿಳೆಯ ಬ್ಯಾಗ್ ಮರಳಿಸಿ ಮಾನವೀಯತೆ ಮೆರೆದ ಹಂಪಿ ಗೈಡ್
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಕೃಷಿ ಜಂಟಿ ನಿರ್ದೇಶಕ ಕೆ.ಮಲ್ಲಿಕಾರ್ಜುನ, ಭಾರತೀಯ ವೈದ್ಯಕೀಯ ಸಂಘದ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಶ್ರೀನಿವಾಸುಲು ಡಿ., ಕಾರ್ಯದರ್ಶಿ ಡಾ.ರಾಘವೇಂದ್ರ ಸೇರಿದಂತೆ ಕೃಷಿ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.