ಬಳ್ಳಾರಿ: ಸಂವಿಧಾನದ (Constitution) ಮೌಲ್ಯ, ಆಶಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ (Ballari News) ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ‘ಸಂವಿಧಾನ ಜಾಗೃತಿ ಜಾಥಾ’ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಐತಿಹಾಸಿಕ ಬಳ್ಳಾರಿ ಬೆಟ್ಟ ಹತ್ತುವ ಸಂವಿಧಾನ ನಡಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬಾಬಾ ಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ನಮ್ಮ ಸಂವಿಧಾನ ಇಡೀ ಪ್ರಪಂಚದಲ್ಲಿಯೇ ಅತ್ಯಂತ ಶ್ರೇಷ್ಠ ಸಂವಿಧಾನವಾಗಿದೆ. ಸಂವಿಧಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
ಇದನ್ನೂ ಓದಿ: PV Narasimha Rao: 15 ಭಾಷೆ ಬಲ್ಲ, ಆರ್ಥಿಕತೆ ಮೇಲೆತ್ತಿದ ಛಲದಂಕಮಲ್ಲ ನರಸಿಂಹರಾವ್!
ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಮಾತನಾಡಿ, ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸಂವಿಧಾನ ಮೌಲ್ಯ ಮತ್ತು ಆದರ್ಶಗಳನ್ನು ರಾಜ್ಯ, ರಾಷ್ಟ್ರ ಮಟ್ಟಕ್ಕೆ ಪಸರಿಸುವ ಕಾರ್ಯವಾಗಬೇಕಿದೆ. ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು.
ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳನ್ನೊಳಗೊಂಡ ನಡಿಗೆಯು ಬೆಟ್ಟದ ತುತ್ತ ತುದಿ ತಲುಪಿ, ಬಲೂನ್‍ಗಳನ್ನು ಹಾರಿಸಿ ಸಂಭ್ರಮಿಸುವ ಮೂಲಕ ಸಂವಿಧಾನ ಜಾಗೃತಿ ನಡಿಗೆಗೆ ಮೆರಗು ತಂದರು.
ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಸಂವಿಧಾನ ಪ್ರಸ್ತಾವನೆ ಭೋಧಿಸಿದರು.
ಇದನ್ನೂ ಓದಿ: Bharat Ratna: ದೇಶದ ಹಸಿವು ನೀಗಿಸಿದ `ಹಸಿರು ಕ್ರಾಂತಿ’ಯ ಪಿತಾಮಹನಿಗೆ ಭಾರತ ರತ್ನ ಗೌರವ
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸತೀಶ್.ಕೆ.ಹೆಚ್., ಅಬಕಾರಿ ಉಪ ಆಯುಕ್ತ ಮಂಜುನಾಥ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಮಮತಾ.ಪಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ರೆಡ್‍ಕ್ರಾಸ್ ಸ್ವಯಂ ಸೇವಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.