Site icon Vistara News

Ballari News: ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶ; ಜ.16ರಂದು ಜಿಲ್ಲಾ ಸಂಘಟನಾ ಸಭೆ

Exploited Communities Awareness Conference Preliminary meeting in Ballari

ಬಳ್ಳಾರಿ: ಇದೇ ಜ.28ರಂದು ಚಿತ್ರದುರ್ಗದಲ್ಲಿ (Chitradurga) ನಡೆಯಲಿರುವ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದ ಹಿನ್ನಲೆಯಲ್ಲಿ ಶೋಷಿತ ಸಮುದಾಯಗಳಾದ ಅಲ್ಪಸಂಖ್ಯಾತ, ಹಿಂದುಳಿದ ಮತ್ತು ದಲಿತ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶ ಯಶಸ್ವಿಗೊಳಿಸುವ ಸಲುವಾಗಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಬಳ್ಳಾರಿ ಜಿಲ್ಲಾ ಘಟಕದಿಂದ ನಗರದಲ್ಲಿ ಭಾನುವಾರ ಪೂರ್ವಭಾವಿ ಸಭೆ ನಡೆಯಿತು.

ಈ ಕುರಿತು ಪ್ರಕಟಣೆ ನೀಡಿರುವ ಮುಖಂಡ ಕೆ.ಇ. ಚಿದಾನಂದಪ್ಪ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷರು ಮತ್ತು ಶೋಷಿತ ಸಮುದಾಯಗಳ ಪ್ರಧಾನ ಸಂಚಾಲಕ ಕೆ.ಎಂ.ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ರಾಜ್ಯ ಶೋಷಿತ ಸಮುದಾಯಗಳ ಪದಾಧಿಕಾರಿಗಳಾದ ಮಾವಳ್ಳಿ ಶಂಕರ್, ಎಣ್ಣೆಗೆರೆ ವೆಂಕಟರಾಮಯ್ಯ, ಅನಂತ ನಾಯ್ಕ ಮತ್ತು ಇನ್ನಿತರೆ ಮುಖಂಡರು ಜ.16 ರಂದು ಬಳ್ಳಾರಿ ನಗರಕ್ಕೆ ಆಗಮಿಸುತ್ತಿದ್ದು, ಅಂದು ಜಿಲ್ಲೆಯ ಹಿಂದುಳಿದ, ದಲಿತ, ಅಲ್ಪಸಂಖ್ಯಾತರ ಸಮುದಾಯಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪೂರ್ವಭಾವಿ ಸಭೆ ಯಶಸ್ವಿಗೊಳಿಸಲು ಮುಖಂಡರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Karnataka Reservoirs: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತ; ಶೇ. 40ಕ್ಕಿಂತ ಕಡಿಮೆ ನೀರು!

ಜ.16 ರಂದು ನಡೆಯುವ ಸಭೆಯಲ್ಲಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಜಿಲ್ಲಾ ಘಟಕ ಮತ್ತು ತಾಲೂಕು ಘಟಕದ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ನಗರ ಮತ್ತು ತಾಲೂಕು ಘಟಕಗಳ ರಚನೆ ಬಗ್ಗೆ ಚರ್ಚೆ ಮಾಡಲಾಗುವುದು. ಪ್ರತಿಯೊಬ್ಬ ಹಿಂದುಳಿದ, ದಲಿತ ಮತ್ತು ಅಲ್ಪಸಂಖ್ಯಾತರ ಸಮುದಾಯಗಳ ವ್ಯಕ್ತಿಗಳು ಕೂಡಾ ಈ ಸಂದೇಶವನ್ನು ತಮ್ಮ ಸಮುದಾಯಗಳಿಗೆ ಸೇರಿದ ಜಾಲತಾಣಗಳ ಮೂಲಕ ಪ್ರಸಾರ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸಭೆಗೆ ಹಾಜರಾಗುವಂತೆ ಕ್ರಮ ವಹಿಸಬೇಕು ಎಂದು ಸಭೆಯಲ್ಲಿ ಹಾಜರಿದ್ದ ಮುಖಂಡರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Stock Market: 73 ಸಾವಿರ ಅಂಕ ದಾಟಿದ ಸೆನ್ಸೆಕ್ಸ್; ವಿಪ್ರೋ, ಟಿಸಿಎಸ್‌ ಷೇರು ಏರಿಕೆ

ಸಭೆಯಲ್ಲಿ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ್ ಬಣ) ಯ ರಾಜ್ಯ ಸಂಘಟನಾ ಸಂಚಾಲಕ ಎ.ಮಾನಯ್ಯ, ಕೆಪಿಆರ್‌ಎಸ್ ಜಿಲ್ಲಾಧ್ಯಕ್ಷ ವಿ.ಎಸ್.ಶಿವಶಂಕರ್, ಜಿಲ್ಲಾ ಕುರುಬರ ಸಂಘದ ಜಿಲ್ಲಾಧ್ಯಕ್ಷ ಡಾ.ಗಾದಿಲಿಂಗನಗೌಡ, ಮಾನವ ಬಂಧುತ್ವ ವೇದಿಕೆ ಮುಖಂಡ ಸಂಗನಕಲ್ಲು ವಿಜಯಕುಮಾರ್, ಕಾಂಗ್ರೆಸ್ ಮುಖಂಡ ಕೆರಕೋಡಪ್ಪ, ರಾಮಕೃಷ್ಣ, ಯುವ ಮುಖಂಡ ಬಿ.ಎಂ.ಪಾಟೀಲ್ ಸೇರಿದಂತೆ ಹಲವರು ಇದ್ದರು.

Exit mobile version