Site icon Vistara News

Ballari News: ರೆಡ್ಡಿ ಸಮುದಾಯ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸಿಎಂ, ಡಿಸಿಎಂ ಜತೆ ಚರ್ಚೆ: ಸಚಿವ ಬಿ. ನಾಗೇಂದ್ರ

Ballari News Mahayogi Vemana Jayanti celebration programme inauguration by Minister B.Nagendra in Ballari

ಬಳ್ಳಾರಿ: ರೆಡ್ಡಿ ಸಮುದಾಯ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಜತೆ ಚರ್ಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆಯ ಸಹಯೋಗದಲ್ಲಿ ನಗರದ ಡಾ. ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಗರದಲ್ಲಿ ನಿರ್ಮಿಸುತ್ತಿರುವ ರೆಡ್ಡಿ ಸಮುದಾಯ ಭವನಕ್ಕೆ ನನ್ನ ವೈಯಕ್ತಿಕವಾಗಿ ರೂ. 15 ಲಕ್ಷ ನೀಡುತ್ತೇನೆ. ನನ್ನ ರಾಜಕೀಯ ಬೆಳವಣಿಗೆಗೆ ಇತರೆ ಸಮಾಜಗಳಂತೆ ರೆಡ್ಡಿ ಸಮುದಾಯದವರ ಸಹಕಾರ ಇದೆ ಎಂದು ತಿಳಿಸಿದರು.

ಇದನ್ನೂ ಓದಿ: Book Release : ಲೇಖಕಿ ಮಾಯಾ ಬಿ. ನಾಯರ್‌ರವರ ಮೂರು ಪುಸ್ತಕಗಳು ಇಂದು ಲೋಕಾರ್ಪಣೆ

ಇದೇ ಸಂದರ್ಭದಲ್ಲಿ ನಗರದ ತಾಳೂರು ರಸ್ತೆಗೆ ಮಹಾಯೋಗಿ ವೇಮನರ ಹೆಸರು ಇಡುವ ಕುರಿತು ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಗುವುದು ಮತ್ತು ಬಳ್ಳಾರಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮೆಣಸಿನಕಾಯಿ ಮಾರುಕಟ್ಟೆಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಹೆಸರು ಇಡಲು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಮಾತನಾಡಿ, ರೆಡ್ಡಿ ಜನಾಂಗದವರ ಕುಲಕಸುಬು ಕೃಷಿ ಆಗಿದ್ದು, ಕಷ್ಟದಲ್ಲಿ ಸಹಾಯ ಮಾಡುವ ಗುಣವುಳ್ಳವರು. ಪ್ರಸ್ತುತ ದಿನಗಳಲ್ಲಿ ನಮ್ಮ ಸಮುದಾಯದವರು ಹಳ್ಳಿ ತ್ಯಜಿಸಿ ಪಟ್ಟಣಕ್ಕೆ ಬಂದು ಜೀವನ ಮಾಡುತ್ತಿದ್ದಾರೆ. ರೆಡ್ಡಿ ಸಮುದಾಯದ ಯುವಕರು ಹಳ್ಳಿಗಳಲ್ಲಿ ಜಮೀನು ಖರೀದಿಸಿ, ಕೃಷಿ ಚಟುವಟಿಕೆ ಕೈಗೊಂಡು ನಮ್ಮ ಕುಲಕಸುಬನ್ನು ಮುಂದುವರಿಸಬೇಕು ಎಂದು ಸಮುದಾಯದ ಯುವಕರಿಗೆ ಕಿವಿಮಾತು ಹೇಳಿದರು.

ಬಳ್ಳಾರಿಯ ಫುಟ್‍ಬಾಲ್ ಮೈದಾನದ ಸಭಾಂಗಣದಲ್ಲಿ ನಡೆದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಸರ್ಕಾರವು ರೆಡ್ಡಿ ಸಮುದಾಯ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆಯಲ್ಲಿ ಹೆಚ್ಚಿನ ಏರಿಕೆ ಇಲ್ಲ, 22 & 24 ಕ್ಯಾರಟ್‌ಗೆ ಇಷ್ಟಿದೆ

ನಗರದಲ್ಲಿ ರೆಡ್ಡಿ ಜನ ಸಂಘ ಆವರಣದಲ್ಲಿ ನಿರ್ಮಿಸುವ ಕಲ್ಯಾಣ ಮಂಟಪ ನಿರ್ಮಾಣಕ್ಕೆ ವೈಯಕ್ತಿಕವಾಗಿ ರೂ. 50 ಲಕ್ಷ ನೀಡಲಾಗುವುದು ಎಂದು ಶಾಸಕ ನಾರಾ ಭರತ್ ರೆಡ್ಡಿ ಘೋಷಣೆ ಮಾಡಿದರು.

ರೆಡ್ಡಿ ಜನಸಂಘದ ಅಧ್ಯಕ್ಷ ನಾರಾ ಪ್ರತಾಪ ರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಬಿ. ಶ್ವೇತ, ಉಪ ಮೇಯರ್ ಬಿ. ಜಾನಕಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ಸಮಾಜದ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಇದನ್ನೂ ಓದಿ:Business Guide : ಸೇಲ್ಸ್‌ ಎಂದರೆ ಗ್ರಾಹಕರ ಜತೆ ಅತ್ಯುತ್ತಮ ಸಂಬಂಧದ ನಿರ್ಮಾಣ

ಸಂಭ್ರಮದ ಮೆರವಣಿಗೆ

ಮಹಾಯೋಗಿ ವೇಮನ ಜಯಂತಿಯ ಅಂಗವಾಗಿ ನಗರದ ಡಾ.ರಾಜ್‍ಕುಮಾರ್ ರಸ್ತೆಯ ರೆಡ್ಡಿ ಜನ ಸಂಘ ಭವನದ ಆವರಣದಿಂದ ಮಹಾಯೋಗಿ ವೇಮನರ ಮೆರವಣಿಗೆ ಜರುಗಿತು.

ಮೆರವಣಿಗೆಯು ರೆಡ್ಡಿ ಜನ ಸಂಘ ಭವನದ ಆವರಣದಿಂದ ಆರಂಭವಾಗಿ ಇಂದಿರಾ ವೃತ್ತದ ಮೂಲಕ ಬಿಡಿಎಎ ಫುಟ್‍ಬಾಲ್ ಮೈದಾನದ ವೇದಿಕೆ ಸಭಾಂಗಣಕ್ಕೆ ತಲುಪಿತು.

Exit mobile version