Ballari News: ಬಳ್ಳಾರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿ ಉದ್ಘಾಟನೆ - Vistara News

ಬಳ್ಳಾರಿ

Ballari News: ಬಳ್ಳಾರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿ ಉದ್ಘಾಟನೆ

Ballari News: ಬಳ್ಳಾರಿ ನಗರದ ಗಾಂಧಿನಗರ ಮಾರುಕಟ್ಟೆ ಸಮೀಪ ಗುರುವಾರ ನೂತನ ಜಿಲ್ಲಾ ಕಾಂಗ್ರೆಸ್ ಕಚೇರಿಯನ್ನು ಉದ್ಘಾಟಿಸಲಾಯಿತು.

VISTARANEWS.COM


on

New district congress office inaugurated in Ballari
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ನಗರದ ಗಾಂಧಿನಗರ ಮಾರುಕಟ್ಟೆ ಸಮೀಪ ಗುರುವಾರ ನೂತನ ಜಿಲ್ಲಾ ಕಾಂಗ್ರೆಸ್ ಕಚೇರಿಯನ್ನು (Ballari News) ಉದ್ಘಾಟಿಸಲಾಯಿತು.

ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ, ನಗರ ಶಾಸಕ ನಾರಾ ಭರತ್ ರೆಡ್ಡಿ ಸೇರಿ ಪಕ್ಷದ ಹಿರಿಯ ಮುಖಂಡರು ಪೂಜೆ ಸಲ್ಲಿಸುವ ಮೂಲಕ ಗುರುವಾರ ಉದ್ಘಾಟಿಸಿದರು.

ಇದನ್ನೂ ಓದಿ: Money Guide: ತುರ್ತು ಚಿಕಿತ್ಸೆಗ ಪಿಎಫ್​ನಿಂದ 1 ಲಕ್ಷ ರೂ. ಪಡೆಯಬಹುದು; ಹೇಗೆ ಗೊತ್ತಾ?

ಈ ವೇಳೆ ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ಲಂ ಪ್ರಶಾಂತ್ ಮಾತನಾಡಿ, ಈ ನೂತನ ಕಚೇರಿಯ ಸ್ಥಾಪನೆಯು ನಮ್ಮ ಕಾರ್ಯಕರ್ತರಲ್ಲಿ ಹೊಸ ಚೈತನ್ಯವನ್ನು ತಂದಿದೆ. ಈ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯ ಪರ ಎಲ್ಲಾ ಕಾರ್ಯಕರ್ತರು ಸಂಘಟಕರಾಗಿ ಕೆಲಸ ಮಾಡಲು ಅನುಕೂಲವಾಗುವಂತೆ ನಗರದ ಹೃದಯ ಭಾಗದಲ್ಲಿ ಕಚೇರಿಯನ್ನು ಸ್ಥಾಪಿಸಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಏ. 24ರಂದು ಭಾಷಾ ಉತ್ಸವ

ಈ ಸಂದರ್ಭದಲ್ಲಿ ಲಿಡ್ಕರ್ ಮಂಡಳಿ ಅಧ್ಯಕ್ಷ ಮುಂಡ್ರಿಗಿ ನಾಗರಾಜ್, ಬುಡಾ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಪಾಲಿಕೆಯ ಮೇಯರ್ ಬಿ. ಶ್ವೇತಾ ಸೋಮು, ಉಪಮೇಯರ್‌ ಬಿ.ಜಾನಕಮ್ಮ, ಪಾಲಿಕೆ ಸದಸ್ಯರಾದ ಎಂ. ಪ್ರಭಂಜನಕುಮಾರ್, ಪಿ. ಗಾದೆಪ್ಪ, ನಂದೀಶ್, ಮುಖಂಡರಾದ ಮುರಳಿ ಕೃಷ್ಣ, ವೆಂಕಟೇಶ್ ಹೆಗಡೆ, ಕಮಲಾ ಮರಿಸ್ವಾಮಿ, ಎಂ.ಎಸ್. ಮಂಜುಳಾ, ಬಿ. ರಾಮ್ ಪ್ರಸಾದ್, ವಿವೇಕ್, ಬೆಣಕಲ್ ಬಸವರಾಜ್ ಗೌಡ, ಮಿಂಚು ಶ್ರೀನಿವಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮಳೆಗಾಗಿ ಕಪ್ಪೆಗಳಿಗೆ ಮದುವೆ; ಶಾಖದ ಹೊಡೆತಕ್ಕೆ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka weather Forecast : ಮಳೆಗಾಗಿ (Rain News) ಕಸರತ್ತು ಶುರುವಾಗಿದ್ದು ಮೈಸೂರಲ್ಲಿ ಕಪ್ಪೆಗಳಿಗೆ ಮದುವೆ ಮಾಡಲಾಗಿದೆ. ತೊಪ್ಪೆಯಾಗುವಂತೆ ಮಳೆ ಹೊಯ್ಯಲೆಂದು ಕಪ್ಪೆಗಳ ಕಟ್ಟಿಕೊಂಡು ಬಂದು ಗ್ರಾಮಸ್ಥರು ತಾಳಿ ಕಟ್ಟಿಸಿದ್ದಾರೆ. ಇತ್ತ 6 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಪ್ಪಳಿಸಲಿದ್ದು, ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಿಸಿದೆ.

VISTARANEWS.COM


on

By

karnataka weather Forecast
Koo

ಮೈಸೂರು/ಬೆಂಗಳೂರು: ಮಳೆ ಆಗದೆ ನೀರಿಗಾಗಿ ಎಲ್ಲಿಲ್ಲದ ಸಂಕಷ್ಟ ಎದುರಾಗುತ್ತಿದ್ದು, ಜನರು ಮಳೆಗಾಗಿ ದೇವರಲ್ಲಿ ಮೊರೆ ಹೋಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಒಂದೊಂದು ಕಡೆ ಒಂದೊಂದು ಸಂಪ್ರದಾಯಗಳೂ ಚಾಲ್ತಿಯಲ್ಲಿವೆ. ಈಗ ಮೈಸೂರಿನ ನಂಜನಗೂಡು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದುವೆ ಮಾಡಿದ್ದಾರೆ. ಮಳೆ ಬಾರದಿರುವ ಸಂಕಟದ (Karnataka Weather Forecast) ಮಧ್ಯೆ ಮಳೆ ಬರಲಿ (Rain News), ವರುಣ ದೇವ ಸಂತುಷ್ಟಗೊಳ್ಳಲಿ, ದಿನವೂ ಮೈ ತೊಪ್ಪೆಯಾಗುವಷ್ಟು ಮಳೆ ಸುರಿಯಲಿ, ಕೃಷಿ ಚಟುವಟಿಕೆಗೆ ತೊಂದರೆಯಾಗದಿರಲಿ, ಭೂತಾಯಿಗೆ ಬೇಕಾಗುವಷ್ಟು ಮಳೆ ಸುರಿಯಲಿ, ಅಂತರ್ಜಲ ಪೂರ್ಣಗೊಳ್ಳಲಿ, ನದಿ, ಹಳ್ಳಕೊಳ್ಳಗಳು ತುಂಬಿಕೊಳ್ಳಲಿ ಎಂದು ಪ್ರಾರ್ಥನೆ ಮಾಡಿದ್ದಾರೆ. ಬಿಸಿಲಿನ ಬೇಗೆಗೆ ತತ್ತರಿಸಿದ ಜನರು ಮಳೆ ಸುರಿಯುವಂತೆ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದರು. ಗ್ರಾಮದ ಬೀದಿ ಬೀದಿಗಳಲ್ಲಿ ಕಪ್ಪೆಗಳ ಮೆರವಣಿಗೆ ಮಾಡಿ ತಮಟೆ ಬಾರಿಸಿದ್ದಾರೆ. ಹುಯ್ಯೋ ಹುಯ್ಯೋ ಮಳೆರಾಯ ಬಾಳೆ ತೋಟಕ್ಕೆ ನೀರಿಲ್ಲ ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಮುಂದುವರಿಯಲಿದೆ ಒಣಹವೆ

ರಾಜ್ಯಾದ್ಯಂತ ಇನ್ನೆರಡು ದಿನಗಳು ಒಣಹವೆ ಇರುವ ಸಾಧ್ಯತೆ ಇದೆ. ಏ.2-3ರಂದು ಶುಷ್ಕ ವಾತಾವರಣ ಇದ್ದರೆ, ಏಪ್ರಿಲ್‌ 4ರಂದು ಚಾಮರಾಜನಗರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಶಾಖದ ಅಲೆಯ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ.

ರಾತ್ರಿ ಬೆಚ್ಚನೆಯ ವಾತಾವರಣ

ಮುಂದಿನ 5 ದಿನಗಳವರೆಗೆ ಕರ್ನಾಟಕದ ಉತ್ತರ ಒಳಭಾಗದಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮೇ 5ರಂದು ಉತ್ತರ ಕನ್ನಡ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

6 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಧಾರ್ಮಿಕ

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Ballari News: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ ಜರುಗಿತು. ಹರಕೆ ತೀರಿಸುವ ಭಕ್ತರ ಆಚರಣೆಗಳು ಗಮನ ಸೆಳೆದವು.

VISTARANEWS.COM


on

Kalamma Devi Pooja Mahotsava in Kampli
Koo

ಕಂಪ್ಲಿ: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ (Ballari News) ಜರುಗಿತು.

ಸೋಮವಾರ ಸಂಜೆ ಗಂಗೆಸ್ಥಳ ಮತ್ತು ಅಗ್ನಿ ಕುಂಭೋತ್ಸವ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಮೆರವಣಿಗೆಯಲ್ಲಿ ಮೂವರು ಭಕ್ತಾದಿಗಳು ಬಾಯಿಗೆ 12 ಅಡಿ ಉದ್ದದ ತ್ರಿಶೂಲ ಅಸ್ತ್ರವನ್ನು ಹಾಕಿಸಿಕೊಂಡು ಕಲ್ಲುಗುಂಡು, ಇಬ್ಬರು ಭಕ್ತಾದಿಗಳು ಆಟೋರಿಕ್ಷಾ, ಇಬ್ಬರು ಭಕ್ತರು ಕಾರುಗಳನ್ನು ತಮ್ಮ ಬೆನ್ನುಗಳಿಗೆ ಹಾಕಿದ್ದ ಕಬ್ಬಿಣದ ಕೊಕ್ಕೆಗಳಿಂದ ಎಳೆದು ತಮ್ಮ ಹರಕೆ ತೀರಿಸಿದರು. ಟ್ರ್ಯಾಕ್ಟರ್‌ಗೆ ಹಾಕಲಾಗಿದ್ದ ಬೊಂಬುಗಳಿಗೆ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ಜೋತು ಬೀಳುವ ಮೂಲಕ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಮೆರವಣಿಗೆಯು ಶ್ರೀ ಕಾಳಮ್ಮ ದೇವಸ್ಥಾನದಿಂದ ಶ್ರೀ ಸುಂಕಲಮ್ಮ ದೇವಸ್ಥಾನದ ವರೆಗೂ ಜರುಗಿತು. ಭಕ್ತಾದಿಗಳು ರಸ್ತೆಯುದ್ದಕ್ಕೂ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ತಮ್ಮ ಹರಕೆಯಂತೆ ಸುಡು ಬಿಸಿಲ ಮಧ್ಯೆಯು ಗುಂಡು, ಆಟೋ, ಕಾರುಗಳನ್ನು ಎಳೆದೊಯ್ದು ಭಕ್ತಿ ಸಮರ್ಪಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದಂತಹ ಭಕ್ತರು ವಿಶೇಷ ಆಚರಣೆಯನ್ನು ನೋಡಿ ಕಣ್ ತುಂಬಿಕೊಳ್ಳುವ ಮೂಲಕ ಆಶ್ಚರ್ಯ ಚಕಿತರಾದರು. ಕಾರ್ಯಕ್ರಮದ ಪೌರೋಹಿತ್ಯವನ್ನು ಮಾರೆಪ್ಪ ಪೂಜಾರಿ ವಹಿಸಿದ್ದರು.

ಇದನ್ನೂ ಓದಿ: Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

ಈ ಸಂದರ್ಭದಲ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಚೆನ್ನರಾಜು, ಉಪಾಧ್ಯಕ್ಷ ಷಣ್ಮುಖಪ್ಪ, ಮುಖಂಡರಾದ ಮಾರೆಪ್ಪ ಪೂಜಾರಿ, ಸ್ವಾಮಿ ದೊರೆ, ಎ. ಗಣೇಶ್, ಎಸ್.ಜಿ.ಪೂಜಾರಿ, ಗುರುಮೂರ್ತಿ, ಪಣಿಯಪ್ಪ, ಆರ್. ಕೃಷ್ಣ ಪೂಜಾರಿ, ಎಸ್.ಆರ್. ಸುರೇಶ್ ಸೇರಿದಂತೆ ಸರ್ವ ಸಮುದಾಯಗಳ ಸದ್ಭಕ್ತರು ಪಾಲ್ಗೊಂಡಿದ್ದರು.

Continue Reading

ವಿಜಯನಗರ

Lok Sabha Election 2024: ಜನರ ಬದುಕಿನ ಭಾರ ಕಡಿಮೆ ಮಾಡಿದ್ದು ಕಾಂಗ್ರೆಸ್‌ ಎಂದ ಈ. ತುಕಾರಾಂ

Lok Sabha Election 2024: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಹೊಸಪೇಟೆ ಪಟ್ಟಣದಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

VISTARANEWS.COM


on

Ballari Lok Sabha constituency Congress candidate eTukaram election campaign in Hosapete
Koo

ಹೊಸಪೇಟೆ: ರೈತರ ಸಾಲ ಮನ್ನಾದಿಂದ ಹಿಡಿದು ಜನ ಸಾಮಾನ್ಯರ ಬದುಕಿನ ಭಾರವನ್ನು ಕಡಿಮೆ ಮಾಡಿದ್ದು ಕಾಂಗ್ರೆಸ್‌. ರಾಜ್ಯದ ಕಾಂಗ್ರೆಸ್‌ ಸರ್ಕಾರ (State Congress Government) ನೀಡಿದ ಪಂಚ ಗ್ಯಾರಂಟಿಗಳಿಂದ ಕೋಟ್ಯಾಂತರ ಜನರಿಗೆ ಅನುಕೂಲವಾಗಿದೆ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ (Lok Sabha Election 2024) ತಿಳಿಸಿದರು.

ಹೊಸಪೇಟೆ ಪಟ್ಟಣದಲ್ಲಿ ಬಹಿರಂಗ ಪ್ರಚಾರ ಸಭೆ ಹಾಗೂ ರೋಡ್ ಶೋ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Toyota Kirloskar Motor: ಟೊಯೊಟಾ ರುಮಿಯಾನ್‌ G-AT ಬುಕ್ಕಿಂಗ್‌ ಶುರು! ಏನಿದರ ವಿಶೇಷ?

ದೇಶದ ಭವಿಷ್ಯ ನಮ್ಮೆಲ್ಲರ ಭವಿಷ್ಯ. ಆದ್ದರಿಂದ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ ನೀಡಬೇಕಿದೆ. ಇಲ್ಲಿನ ತುಂಗಾಭದ್ರಾ ಜಲಾಶಯದಿಂದ ಕೋಟ್ಯಂತರ ರೈತರು ಮತ್ತು ಅವರ ಅವಲಂಬಿತರಿಗೆ ಅನುಕೂಲವಾಗಿದೆ. ವಿಜಯನಗರ ಉಕ್ಕು ಕಾರ್ಖಾನೆಯಿಂದ ಅಸಂಖ್ಯಾತ ಉದ್ಯೋಗ ಸಿಕ್ಕಿದೆ. ದೊಡ್ಡ ದೊಡ್ಡ ಉದ್ಯಮಗಳು, ವಿದ್ಯುತ್‌ ಉತ್ಪಾದನಾ ಕೇಂದ್ರಗಳನ್ನು ನೀಡಿದ್ದು ಕಾಂಗ್ರೆಸ್‌. ಆದ್ದರಿಂದ ಕಾಂಗ್ರೆಸ್‌ ಬೆಂಬಲಿಸಿ ಎಂದು ಮನವಿ ಮಾಡಿದರು.

ಇದನ್ನೂ ಓದಿ: Multivitamin Pill: ಮಲ್ಟಿವಿಟಮಿನ್‌ ಮಾತ್ರೆಗಳ ಮೊರೆ ಹೋಗದೆ, ನೈಸರ್ಗಿಕವಾಗಿ ಪೋಷಣೆ ಪಡೆಯುವುದು ಹೇಗೆ?

ಈ ಸಂದರ್ಭದಲ್ಲಿ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್, ವೆಂಕಟೇಶ್ ಗೌಡ, ಶಾಸಕ ಗವಿಯಪ್ಪ, ವಿಜಯನಗರ ಜಿಲ್ಲಾ ಕಾಂಗ್ರೆಸ್ ಪಕ್ಷದ ಸಮಿತಿ ಅಧ್ಯಕ್ಷ ಸಿರಾಜ್ ಶೇಖ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಬಳ್ಳಾರಿ

Lok Sabha Election 2024: ಬಳ್ಳಾರಿಗೆ ಕೈಗಾರಿಕೆಗಳನ್ನು ತಂದ ಶ್ರೇಯಸ್ಸು ಕಾಂಗ್ರೆಸ್ ಪಕ್ಷದ್ದು: ನಾರಾ ಭರತ್ ರೆಡ್ಡಿ

Lok Sabha Election 2024: ಬಳ್ಳಾರಿ ನಗರದ 3ನೇ ವಾರ್ಡಿನ ಬಂಡಿಮೋಟ್ ಬಳಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಪರ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಚುನಾವಣಾ ಪ್ರಚಾರ ಕೈಗೊಂಡು ಮತ ಯಾಚನೆ ನಡೆಸಿದರು.

VISTARANEWS.COM


on

Ballari City MLA Nara Bharat Reddy Election Campaign for Ballari Lok Sabha Constituency Congress Candidate E Tukaram
Koo

ಬಳ್ಳಾರಿ: ಬಳ್ಳಾರಿ ಜಿಲ್ಲೆಗೆ ಜಿಂದಾಲ್ ಸ್ಟೀಲ್ ಫ್ಯಾಕ್ಟರಿ, ಬಿಟಿಪಿಎಸ್ ತಂದ ಶ್ರೇಯಸ್ಸು ಕಾಂಗ್ರೆಸ್ (Congress) ಪಕ್ಷದ್ದು, ಆದರೆ ಬಿಜೆಪಿಯವರ (BJP) ಸಾಧನೆ ಶೂನ್ಯ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ (Lok Sabha Election 2024) ಹೇಳಿದರು.

ನಗರದ 3ನೇ ವಾರ್ಡಿನ ಬಂಡಿಮೋಟ್ ಬಳಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಅವರ ಪರ ಮತಯಾಚಿಸಿ ಅವರು ಮಾತನಾಡಿದರು.

ಬಿಜೆಪಿಯವರು ಬಳ್ಳಾರಿಗೆ ನಾಲ್ಕು ಬಾರಿ ಸಂಸದರಾಗಿದ್ದರು, ನಗರಕ್ಕೆ ಶಾಸಕರಾಗಿದ್ದರು, ಆದರೆ ಅವರು ಏನೂ ಕೆಲಸ ಮಾಡಲಿಲ್ಲ. ಅವರು ಮತ ಕೇಳಲು ಬಂದಾಗ ನೀವು ಅವರನ್ನು ಪ್ರಶ್ನೆ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ: Gold Rate Today: ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನ- ಬೆಳ್ಳಿಯ ಬೆಲೆ; 22, 24 ಕ್ಯಾರಟ್‌ ದರಗಳು ಇಲ್ಲಿವೆ

ಜಿಂದಾಲ್ ಸ್ಟೀಲ್ ಫ್ಯಾಕ್ಟರಿ, ಬಿಟಿಪಿಎಸ್‌ನಿಂದ ನಮ್ಮ ಜಿಲ್ಲೆಯ ಸಾವಿರಾರು ಯುವಕರಿಗೆ ಉದ್ಯೋಗ ಸಿಕ್ಕಿದೆ ಎಂದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ಕೀಳಾಗಿ ಮಾತನಾಡುತ್ತಾರೆ. ಬಿಟ್ಟಿ ಭಾಗ್ಯ ಎಂದು ಕರೆಯುತ್ತಾರೆ ಎಂದು ಹೇಳಿದ ಅವರು, ಬಡವರನ್ನು ಅವಮಾನಿಸುವ ಈ ಬಿಜೆಪಿಯವರನ್ನು ಮತದಾರರು ಸೋಲಿಸಬೇಕು ಎಂದು ತಿಳಿಸಿದರು.

ಬಳ್ಳಾರಿ ನಗರದ ಗ್ರಾಮದೇವತೆ ಕನಕ ದುರ್ಗಮ್ಮ ದೇವಸ್ಥಾನದ ಅಭಿವೃದ್ಧಿ ಮಾಡಿದ್ದೇವೆ. ಈವರೆಗೆ ಬಳ್ಳಾರಿ ನಗರಕ್ಕೆ 120 ಕೋಟಿ ರೂ. ಅನುದಾನ ತಂದಿರುವೆ ಎಂದು ಹೇಳಿದರು.

ಇದೇ ವೇಳೆ ಪಾಲಿಕೆ ಸದಸ್ಯ ಎಂ.ಪ್ರಭಂಜನಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಈ.ತುಕಾರಾಂ ಅವರಿಗೆ ಮತ ನೀಡಿ, ಗೆಲ್ಲಿಸುವ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಬಲಪಡಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಭಾರತದ 7 ಶಟ್ಲರ್​ಗಳು; ಕನ್ನಡತಿ ಅಶ್ವಿನಿ ಪೊನ್ನಪ್ಪಗೂ ಅವಕಾಶ

ಈ ಸಂದರ್ಭದಲ್ಲಿ ಮುಖಂಡರಾದ ವಿವೇಕ್ ಮುಂಡ್ಲೂರು, ವಿಷ್ಣು ಬೋಯಪಾಟಿ, ಪಾಲಿಕೆ ಸದಸ್ಯರಾದ ಮಿಂಚು ಶ್ರೀನಿವಾಸುಲು, ರಾಜೇಶ್ವರಿ ಸುಬ್ಬರಾಯುಡು, ಶೋಭಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುಸೇನ್ ಪೀರಾಂ, ಮುಖಂಡ ಶ್ರೀನಿವಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Advertisement
Ikbal hussain
ಕರ್ನಾಟಕ8 mins ago

Iqbal Hussain: ಯುವತಿ ಜತೆ ಶಾಸಕ ಇಕ್ಬಾಲ್ ಹುಸೇನ್ ವಿಡಿಯೊ ಕಾಲ್ ವೈರಲ್; ಎಫ್‌ಐಆರ್‌ ದಾಖಲು

T20 Rankings
ಕ್ರೀಡೆ14 mins ago

T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಸೂರ್ಯ; ಒಂದು ಸ್ಥಾನ ಏರಿಕೆ ಕಂಡ ಬಾಬರ್​

Pakistan Teen
ದೇಶ33 mins ago

ಪಾಕ್‌ ಯುವತಿಗೆ ಭಾರತದ ಹಿಂದು ವ್ಯಕ್ತಿ ಹೃದಯದ ಕಸಿ; ತಕರಾರು ತೆಗೆದ ನೆರೆ ರಾಷ್ಟ್ರದ ಇಸ್ಲಾಂ ಧರ್ಮಗುರು!

Prajwal Revanna Case
ಕರ್ನಾಟಕ46 mins ago

Prajwal Revanna Case: ವಿಡಿಯೊ ಬಿಟ್ಟ ಕಾರ್ತಿಕ್‌ ಎಲ್ಲಿ? ಆತನನ್ನು ಮಲೇಷ್ಯಾಗೆ ಕಳುಹಿಸಿದ್ದು ಯಾರು?: ಎಚ್‌ಡಿಕೆ ಕಿಡಿ

KL Rahul
ಕ್ರಿಕೆಟ್1 hour ago

KL Rahul: ಟಿ20 ವಿಶ್ವಕಪ್​ನಲ್ಲಿ ರಾಹುಲ್​ಗೆ ಅವಕಾಶ ಸಿಗದಿರಲು ಕಾರಣ ತಿಳಿಸಿದ ಮಾಜಿ ಆಟಗಾರ

Rahul Gandhi
ದೇಶ1 hour ago

Rahul Gandhi: ರಾಹುಲ್‌ ಗಾಂಧಿಯನ್ನು ಹೊಗಳಿದ ಪಾಕ್‌ ಮಾಜಿ ಸಚಿವ; ತಿರುಗೇಟು ಕೊಟ್ಟ ಬಿಜೆಪಿ

BJP State Spokesperson Hariprakash konemane and leaders Election Campaign for BJP Candidate Vishweshwar Hegde Kageri in Yallapura
ಉತ್ತರ ಕನ್ನಡ2 hours ago

Lok Sabha Election 2024: ಹಿಂದಿನ ಚುನಾವಣೆಗಳಿಗಿಂತ ಈ ಬಾರಿ ಬಿಜೆಪಿಗೆ ಅಧಿಕ ಬಹುಮತ ನಿಶ್ಚಿತ: ಹರಿಪ್ರಕಾಶ್‌ ಕೋಣೆಮನೆ

MLA G Janardan Reddy latest statement in Gangavathi
ಕರ್ನಾಟಕ2 hours ago

Lok Sabha Election 2024: ಕಳೆದ ಚುನಾವಣೆಯಲ್ಲಿ ನನ್ನ ಜತೆ ಸ್ವತಃ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದರು: ರೆಡ್ಡಿ ಸ್ಫೋಟಕ ಹೇಳಿಕೆ

Prajwal Revanna Case
ಕರ್ನಾಟಕ2 hours ago

Prajwal Revanna Case: ಸಿಂಗಾಪುರ ಮಾಧ್ಯಮಗಳಲ್ಲೂ ಪ್ರಜ್ವಲ್‌ ರೇವಣ್ಣ ಕೇಸ್‌ ಸದ್ದು!

Prajwal Revanna Case BJP will not be with those who do injustice to women says Amit Shah
ರಾಜಕೀಯ2 hours ago

Prajwal Revanna Case: ಮಹಿಳೆಗೆ ಅನ್ಯಾಯ ಮಾಡಿದ್ರೆ ಅಂಥವರ ಜತೆ ಬಿಜೆಪಿ ಇರಲ್ಲ; ಪ್ರಜ್ವಲ್‌ನನ್ನು ಬಿಟ್ಟಿದ್ದು ಕಾಂಗ್ರೆಸ್‌ ತಪ್ಪು ಎಂದ ಶಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌