ಬಳ್ಳಾರಿ: ನಗರದ ಹೊಸಪೇಟೆ-ಬೆಂಗಳೂರು ಬೈಪಾಸ್ ರಸ್ತೆಯ ಜ್ಞಾನಸಾಗರ ಬಡಾವಣೆಯಲ್ಲಿರುವ ಜ್ಞಾನಾಮೃತ ಆಂಗ್ಲಮಾಧ್ಯಮ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಜ.7 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ “ಟ್ಯಾಲೆಂಟ್ ಸರ್ಚ್ ಪರೀಕ್ಷೆ – 2024” (Talent Search Test-2024) ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಜಿ. ಗೌಡ ತಿಳಿಸಿದ್ದಾರೆ.
2024- 25ನೇ ಸಾಲಿನ ಪ್ರಥಮ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ವಿದ್ಯಾರ್ಥಿ ವೇತನ ಸಹಿತ ದಾಖಲಾತಿ ಬಯಸುವ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.
ಇದನ್ನೂ ಓದಿ: Raichur News: ಲಿಂಗಸುಗೂರಿನ ಸರ್ಕಾರಿ ಶಾಲೆಯಲ್ಲಿ ಹಳ್ಳಿ ಸೊಗಡು ಅನಾವರಣ
ಸ್ಟೇಟ್ ಬೋರ್ಡ್ (ಕನ್ನಡ ಮತ್ತು ಆಂಗ್ಲ ಮಾಧ್ಯಮ), ಐಸಿಎಸ್ಇ ಮತ್ತು ಸಿಬಿಎಸ್ಇ ಪಠ್ಯ ಕ್ರಮದ 10ನೇ ತರಗತಿಯ ವಿದ್ಯಾರ್ಥಿಗಳ ಶೈಕ್ಷಣಿಕ ಉತ್ಕೃಷ್ಟತೆ ಗುರುತಿಸುವ ಈ ಪರೀಕ್ಷೆಯಿಂದ ಪಿಯುಸಿಗೆ ದಾಖಲಾತಿ ಬಯಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.
ಸತತ ಮೂರು ವರ್ಷ ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಯಲ್ಲಿ 100% ಹಾಗೂ ಪ್ರವೇಶ ಪರೀಕ್ಷೆಗಳಲ್ಲಿ ಗಮನಾರ್ಹ ಸಾಧನೆ ಮಾಡಿ ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಈ ವಿದ್ಯಾಸಂಸ್ಥೆ ಪ್ರಸ್ತುತ ವರ್ಷದಲ್ಲಿ ಆರ್ಥಿಕವಾಗಿ ಹಿಂದುಳಿದ ಹಾಗೂ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿರುವ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಸುಮಾರು 1 ಕೋಟಿಗೂ ಮಿಕ್ಕಿ ವಿದ್ಯಾರ್ಥಿ ವೇತನದ ಮೂಲಕ ಮೌಲ್ಯಾಧಾರಿತ ಪಿಯುಸಿ ವಿದ್ಯಾಭ್ಯಾಸದ ಅವಕಾಶ ನೀಡಲು ಮುಂದಾಗಿದೆ.
ಇದನ್ನೂ ಓದಿ: Coronavirus News: 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ; ರಾಜ್ಯ ಸರ್ಕಾರ ಸಲಹೆ
ಪ್ರವೇಶ ಪರೀಕ್ಷೆಗಳಲ್ಲಿ ಪಾಲ್ಗೊಳ್ಳಲು ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9606542999, 9606842999, 9035409265, 9035409267 ಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.