Site icon Vistara News

Ballari News: ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಪ್ರಗತಿಗೆ ಬಿಐಟಿಎಂ ವಿಶೇಷ ಕೊಡುಗೆ: ಡಾ. ಎಸ್.ಜೆ.ವಿ. ಮಹಿಪಾಲ್

Ballari News BITM s special contribution to the educational progress of Kalyana Karnataka says Dr S J V Mahipal

ಬಳ್ಳಾರಿ: ಕಲ್ಯಾಣ ಕರ್ನಾಟಕ (Kalyana Karnataka) ಭಾಗದ ಶೈಕ್ಷಣಿಕ ಪ್ರಗತಿಗೆ (Educational Progress) ಬಿಐಟಿಎಂ (BITM) ತನ್ನದೆಯಾದ ವಿಶಿಷ್ಟ ಕೊಡುಗೆ ನೀಡುತ್ತಿರುವುದು ಸಂತಸ ತಂದಿದೆ ಎಂದು ಟಿ.ಇ.ಎಚ್.ಆರ್.ಡಿ. ಟ್ರಸ್ಟ್‌ನ ಅಧ್ಯಕ್ಷ ಡಾ. ಎಸ್.ಜೆ.ವಿ. ಮಹಿಪಾಲ್ ತಿಳಿಸಿದರು.

ನಗರದ ಬಳ್ಳಾರಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್‌ ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಿ.ಇ. ಪ್ರಥಮ ವರ್ಷದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಟ್ರಸ್ಟ್ ನಡೆಸುವ ವಿದ್ಯಾ ಸಂಸ್ಥೆಗಳಲ್ಲಿ ಭರವಸೆಯಿಟ್ಟು ಇಂದು ಸಾವಿರಾರು ಮಕ್ಕಳು ಶಿಕ್ಷಣ ಪಡೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಇದನ್ನೂ ಓದಿ: 2nd PUC Supplementary Result: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ; ಶೇ.35.21 ವಿದ್ಯಾರ್ಥಿಗಳು ಪಾಸ್‌

ಕಾಲೇಜಿನ ಅಧ್ಯಕ್ಷ ಡಾ. ಯಶವಂತ್ ಭೂಪಾಲ್ ಮಾತನಾಡಿ, ವಿದ್ಯಾರ್ಥಿಗಳು ಶ್ರದ್ಧೆಯಿಂದ ಕಲಿಕೆಯಲ್ಲಿ ನಾಲ್ಕು ವರ್ಷ ತೊಡಗಿಕೊಂಡರೆ, ಮುಂದಿನ ತಮ್ಮ 40 ವರ್ಷಗಳ ಜೀವನ ಉಜ್ವಲವಾಗಿರುತ್ತದೆ ಎಂದರು.

ಬಿಐಟಿಎಂ ಸಂಸ್ಥೆಯಲ್ಲಿ ಪರಿಣಾಮಕಾರಿ ಕಲಿಕೆಗೆ ಒತ್ತು ಕೊಟ್ಟು, ಹಲವು ಬಗೆಯ ವೃತ್ತಿಪರ ಕೌಶಲ್ಯಗಳನ್ನು ಉತ್ತೇಜಿಸಿ ತರಬೇತಿ ನೀಡಲಾಗುವುದು. ವಿದ್ಯಾರ್ಥಿಗಳು ಶ್ರದ್ಧೆಯಿಂದ ನಿತ್ಯವೂ ಅಭ್ಯಾಸ ಮಾಡಿ ಸಂಸ್ಥೆಯ ವಿವಿಧ ಸೌಲಭ್ಯಗಳನ್ನು ಸುದುಪಯೋಗಮಾಡಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾಲೇಜಿನ ನಿರ್ದೇಶಕ ವೈ.ಜೆ. ಪೃಥ್ವಿರಾಜ್ ಭೂಪಾಲ್ ಮಾತನಾಡಿ, ಪರೀಕ್ಷೆಗಳಲ್ಲಿ ಅತ್ಯುತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ವಿದ್ಯಾರ್ಥಿ ಸ್ಕಾಲರ್‌ಷಿಪ್ ನೀಡಲಾಗುವುದು ಎಂದು ತಿಳಿಸಿದರು.

ಟ್ರಸ್ಟಿಗಳಾದ ಅಶೋಕ್ ಭೂಪಾಲ್, ಅಮರ್‌ರಾಜ್ ಭೂಪಾಲ್, ವಿ.ಜೆ.ಭರತ್, ಉಪಪ್ರಾಚಾರ್ಯ ಡಾ. ಬಿ.ಎಸ್, ಖೇಣೇದ್, ಪರೀಕ್ಷಾ ವಿಭಾಗದ ಮುಖ್ಯಸ್ಥ ಡಾ.ರಾಘವೇಂದ್ರ ಜೋಷಿ, ಡೀನ್ (ಆರ್ ಅಂಡ್‌ ಡಿ) ಡಾ. ವಿ.ಸಿ. ಪಾಟೀಲ್ ಮತ್ತು ಎಲ್ಲಾ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಇದನ್ನೂ ಓದಿ: KSET 2023: ಕೆಸೆಟ್ ಪರೀಕ್ಷೆಗೆ ಅರ್ಜಿ ಆಹ್ವಾನ, ಆನ್‌ಲೈನ್ ಮೂಲಕ ಅಪ್ಲೈ ಮಾಡಲು ಸೆ.30 ಕೊನೆ ದಿನ

ಪ್ರಾಚಾರ್ಯ ಡಾ. ಯಡವಳ್ಳಿ ಬಸವರಾಜ್ ಸ್ವಾಗತಿಸಿದರು. ಭೌತವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಟಿ. ಮಾಚಪ್ಪ, ರಸಾಯನ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಸುರೇಶ್ ಮತ್ತು ಡಾ. ಎಸ್.ಮಂಜುನಾಥ ಕಾರ್ಯಕ್ರಮ ನಿರ್ವಹಿಸಿದರು.

Exit mobile version