ನವಶಕ್ತಿ ಸಮಾವೇಶ | ದಲಿತರನ್ನು ಮತ್ತಷ್ಟು ಸೆಳೆದು ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಬಲ ಪ್ರದರ್ಶನ - Vistara News

ಕರ್ನಾಟಕ ಎಲೆಕ್ಷನ್

ನವಶಕ್ತಿ ಸಮಾವೇಶ | ದಲಿತರನ್ನು ಮತ್ತಷ್ಟು ಸೆಳೆದು ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಬಲ ಪ್ರದರ್ಶನ

ಚುನಾವಣೆಯತ್ತ ಸಾಗುತ್ತಿರುವಾಗಲೇ ಪಕ್ಷದತ್ತ ವಿವಿಧ ಸಮುದಾಯಗಳನ್ನು ಸೆಳೆಯುವ ಪ್ರಯತ್ನಗಳನ್ನು ಬಿಜೆಪಿ ಬಲವಾಗಿ ಕೈಗೊಳ್ಳುತ್ತಿದೆ.

VISTARANEWS.COM


on

navashakti sriramulu 3
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Bharatiya janata party looking for new energy from st convention

ಶಶಿಧರ ಮೇಟಿ, ಬಳ್ಳಾರಿ
ದಲಿತ ಸಮುದಾಯದ ಮತ ಬ್ಯಾಂಕ್‌ ಸೆಳೆಯುವ ಪ್ರಯತ್ನ, ಮುಂದಿನ ಚುನಾವಣೆಗೆ ಕಾಂಗ್ರೆಸ್‌ಗೆ ಪಂಥಾಹ್ವಾನ, ಎಸ್‌ಟಿ ಮೀಸಲಾತಿ ಹೆಚ್ಚಿಸುವ ಬಿಜೆಪಿ ನಿರ್ಧಾರದ ಬಗ್ಗೆ ಕಾಂಗ್ರೆಸ್‌ ಮತ್ತು ಪ್ರತಿಪಕ್ಷಗಳ ಟೀಕೆಗೆ ಪತ್ಯುತ್ತರ, ದಲಿತರ ಪರವಾಗಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರ ತೆಗೆದು ಕೊಂಡಿರುವ ನಿರ್ಧಾರಗಳು, ಮೀಸಲಾತಿ ಹೆಚ್ಚಳದ ವಿಚಾರದಲ್ಲಿ ಶ್ರೀರಾಮುಲು ಬಗೆಗಿನ ಟೀಕೆಗೆ ಭಾವೋದ್ವೇಗದ ಪ್ರತ್ಯುತ್ತರದ ಮಾತುಗಳಿಗೆ ಪರಿಶಿಷ್ಟ ಪಂಗಡದ ನವಶಕ್ತಿ ಸಮಾವೇಶ ಆಕ್ಷರಶಃ ವೇದಿಕೆಯಾಗಿತ್ತು. ಜೆ.ಪಿ. ನಡ್ಡಾದಿಂದ ಆದಿಯಾಗಿ ವೇದಿಕೆಯ ಪ್ರತಿಯೊಬ್ಬರು ಮಾತುಗಳಲ್ಲಿ ಈ ವಿಚಾರಗಳು ಎದ್ದು ಕಾಣುತ್ತಿತ್ತು.

ಗಣಿನಾಡು ಬಳ್ಳಾರಿಯಲ್ಲಿ ಭಾನುವಾರ ನಡೆದ ಪರಿಶಿಷ್ಟ ಪಂಗಡದ ನವಶಕ್ತಿ ಸಮಾವೇಶ ಕೇವಲ ಒಂದು ಸಮುದಾಯದ ಸಮಾವೇಶವಾಗಿ ಉಳಿಯದೆ, ಇದೊಂದು ದಲಿತ ಸಮುದಾಯದ ಮತಗಳನ್ನು ಸೆಳೆಯಲು ಕಾಂಗ್ರೆಸ್‌ ದಲಿತರ ಪಕ್ಷ, ಬಿಜೆಪಿ ಮೇಲ್ವರ್ಗ ಪಕ್ಷ ಎನ್ನುವ ಹಣೆಪಟ್ಟಿ ಕಳಚಿಹಾಕುವ ಪ್ರಯತ್ನ ನಡೆಯಿತು. ಇದಕ್ಕೆ ಉದಾಹರಣೆ ಸಹಿತವಾಗಿ ಪ್ರಮುಖ ಮುಖಂಡರು ಕೆಲವೊಂದು ಉದಾಹರಣೆಗಳನ್ನು ಲಕ್ಷಾಂತರ ಜನರ ಮಧ್ಯೆ ತೆರೆ ದಿಡುವ ಪ್ರಯತ್ನ ಮಾಡಿದರು. ಅಂಬೇಡ್ಕರ್‌ ಅವರ ಸಮಾಧಿಯ ಸ್ಥಳದ ವಿಚಾರವನ್ನು ಎಳೆದುತಂದು ಕಾಂಗ್ರೆಸ್‌ ಪಕ್ಷವನ್ನು ಕಾಲೆಳೆಯುವ ಕೆಲಸ ಮಾಡಿದರು.

ಮತ ಬ್ಯಾಂಕಿಗೆ ದಲಿತರ ಬಳಕೆ ಮಾಡಿದ ಕಾಂಗ್ರೆಸ್‌!
ಕಾಂಗ್ರೆಸ್‌ ದಲಿತರ ಪಕ್ಷವೆಂದು ಹೇಳಿಕೊಂಡು ದಲಿತ ಮತಗಳನ್ನು ಸೆಳೆಯುವ ಕೆಲಸ ಮಾಡಿತೆ ಹೊರತು ದಲಿತರಿಗೆ ಕಾಂಗ್ರೆಸ್‌ನಿಂದ ಆಗಿರುವ ಲಾಭವೇನೆಂದು ಪ್ರಶ್ನಿಸುವ ಜೊತೆಗೆ ಬಿಜೆಪಿಯಿಂದ ದಲಿತರಿಗೆ ಆಗಿರುವ ಲಾಭವನ್ನು ತೆರೆದಿಟ್ಟರು. ತಮ್ಮ ಭಾಷಣದಲ್ಲಿ ಬುಡಕಟ್ಟು ವರ್ಗಕ್ಕೆ ಸೇರಿದ ದ್ರೌಪತಿ ಮುರ್ಮು ಅವರಿಗೆ ರಾಷ್ಟ್ರಪತಿ ಮಾಡಿದ್ದು, ಜಾರ್ಖಂಡ್‌ ಸಿಎಂ ಮತ್ತು ಛತ್ತಿಸ್‌ಘಡ ರಾಜ್ಯಪಾಲರ ನೇಮಕ, ರಾಜ್ಯದಲ್ಲಿ ಎಸ್‌ಸಿ ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಮೂಲಕ ದಲಿತರ ಪರವಾದ ನಿಲುವನ್ನು ಬಿಜೆಪಿ ತೆಗೆದುಕೊಂಡಿದೆ. ಸ್ವತಂತ್ರ ಬಂದು ೭೫ ವರ್ಷಗಳ ಆಡಳಿತ ಅವಧಿಯಲ್ಲಿ ಕಾಂಗ್ರೆಸ್‌ ಮಾಡಿದ್ದೇನು ಎಂಬ ಪ್ರಶ್ನೆಯನ್ನು ನೆರೆದ ಜನರ ಮುಂದೆ ಇಟ್ಟರು.

ಸಿದ್ದು ಟಾರ್ಗೆಟ್‌, ಡಿಕೆಶಿಯ ಮಾತಿಲ್ಲ
ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿತವಾಗಿರುವ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಬಹುತೇಕರ ಭಾಷಣದಲ್ಲಿ ಟಾರ್ಗೆಟ್‌ ಮಾಡಿದರು, ಎಲ್ಲಿಯೂ ಡಿ.ಕೆ. ಶಿವಕುಮಾರ್‌ ಅವರ ಹೆಸರು ಪ್ರಸ್ತಾಪ ಮಾಡಲಿಲ್ಲ. ಆದರೆ ಯಡಿಯೂರಪ್ಪ ಮಾತ್ರ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಅವರ ಮೂರು ತಲೆಮಾರಿಗೆ ಸಾಕಾಗುವಷ್ಟು ಆಸ್ತಿ ಕಾಂಗ್ರೆಸ್‌ನವರು ಮಾಡಿದ್ದಾರೆ ಎಂಬ ವಿಷಯ ಪ್ರಸ್ತಾಪಿಸಿ, ಈ ಮಾತನ್ನು ನೀವೆಲ್ಲಾ ನೆನಪಿನಲ್ಲಿಟ್ಟುಕೊಳ್ಳಲು ಹೇಳಿದರು.

ಬಿಜೆಪಿ ಪರವಾಗಿ ಅಹಿಂದಾ, ಇಲ್ಲಿ ಬಂದು ನೋಡಪ್ಪ!
ಸಿಎಂ ಬಸವರಾಜ್‌ ಬೊಮ್ಮಾಯಿ ಒಂದು ಹಜ್ಜೆ ಮುಂದೆ ಹೋಗಿ ಸಿದ್ರಾಮಣ್ಣ ಇಲ್ಲಿ ಬಂದು ನೋಡಪ್ಪ, ಎಸ್‌ಟಿ ಎಸ್‌ಸಿ ಸಮಾಜ ನಮ್ಮ ಜೊತೆ ಇದೆ, ಇಲ್ಲಿರುವುದು ಅಹಿಂದಾ ಸಮಾಜ, ಭಾರತ ಜೋಡೋದಲ್ಲಿ ಒಂದು ಸಣ್ಣ ಮೈದಾನದಲ್ಲಿ ಕಾರ್ಯಕ್ರಮ ಮಾಡಿ, ಸುನಾಮಿ ಎಂದ ರೂ, ಅದಲ್ಲ ಸುನಾಮಿ, ಇಲ್ಲಿರುವುದು ಸುನಾಮಿ ಎಂದು ಕಾಂಗ್ರೆಸ್‌ ಪಕ್ಷವನ್ನು ಸ್ವತಃ ಸಿಎಂ ಕಾಲೆಳೆದರು. ಮುಂದೆ ಶ್ರೀರಾಮುಲು ಸಿಎಂ ಆಗುವ ಅವಕಾಶ ಬರಬಹುದೆಂದು ಹೇಳಿದಾಗ, ಜನರು ಶಿಳ್ಳೆ ಹೊಡೆದರು.

ರೆಡ್ಡಿ ಹೆಸರು ಪ್ರಸ್ತಾಪಿಸಿದ ಯಡ್ಡಿ
ನಾನು ಸಿಎಂ ಆದಾಗ ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ಕೇಳಿದ್ದೆಲ್ಲಾ ಬಳ್ಳಾರಿಗೆ ಕೊಟ್ಟಿದ್ದೇವೆ, ಅಭಿವೃದ್ಧಿ ಕೆಲಸ ಮಾಡಿದ್ದೇವೆ ಎಂದು ಜನಾರ್ದನ ರೆಡ್ಡಿ ಅವರ ಹೆಸರನ್ನು ಮಾಜಿ ಸಿಎಂ ಯಡಿಯೂರಪ್ಪ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದರು. ಜಾತಿ ಮತ್ತು ಧರ್ಮದ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರ ಅದರಲ್ಲೂ ಸಿದ್ದರಾಮಯ್ಯ ಅವರ ಮಾತನ್ನು ಪ್ರಸ್ತಾಪಿಸಿ, ಕಾಂಗ್ರೆಸ್‌ ಹಿಂದು ವಿರೋಧಿ ಎನ್ನುವುದನ್ನು ಬಿಂಬಿಸುವ ಪ್ರಯತ್ನ ಸಿ.ಟಿ.ರವಿಯವರು ಮಾಡಿದರು. ಸಿದ್ದರಾಮಯ್ಯ ಅವರಿಗೆ ಕುಂಕುಮ, ಕೇಸರಿ ಕಂಡರೆ ಆಗಲ್ಲ, ಇಂತಹವರಿಗೆ ನಿಮ್ಮ ಮತ ಕೊಡಬೇಕಾ? ಕಾಂಗ್ರೆಸ್‌ನಲ್ಲಿ ಪೊಮೋಷನ್‌ ಸಿಗಬೇಕಾದರೆ ಮತಾಂತರ ಆಗಬೇಕು, ಇಲ್ಲವೇ ಮತಾಂತರವನ್ನು ಪ್ರೋತ್ಸಾಹಿಸಬೇಕು, ರಾಮ ಇಲ್ಲ, ಆಂಜಿನೇಯ ಇಲ್ಲ ಎಂದಾದರೆ ವಾಲ್ಮೀಕಿಯವರ ರಾಮಾಯಣ ಇಲ್ಲ ಎಂದರ್ಥ ಎಂದು ವಾಲ್ಮೀಕಿ ಸಮುದಾಯಕ್ಕೆ ಕಾಂಗ್ರೆಸ್‌ನ ನಿಲುವು ತಿಳಿಸುವ ಕೆಲಸ ಸಿಟಿ ರವಿ ಮಾಡಿದರು. ಮದಕರಿ ನಾಯಕನನ್ನು ಮೋಸದಿಂದ ಕೊಂದ ಟಿಪ್ಪುನನ್ನು ಬೆಂಬಲಿಸುವ ಕಾಂಗ್ರೆಸ್‌ಗೆ ಓಟು ಹಾಕುತ್ತೀರಾ ಎಂಬ ಪ್ರಶ್ನೆಯನ್ನು ಜನರ ಮುಂದಿಟ್ಟರು.

ಅಂಬೇಡ್ಕರ್‌ ಅವರನ್ನು ಸಮಾವೇಶಕ್ಕೆ ಕರೆತಂದ ನಾಯಕರು!
ಕಾಂಗ್ರೆಸ್‌ ಅಂಬೇಡ್ಕರ್‌ ಅವರನ್ನು ಅವಮಾನ ಮಾಡಿದ ಪಕ್ಷವೆಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರೆ, ಇನ್ನೊಬ್ಬ ಮುಖಂಡ ಅಂಬೇಡ್ಕರ್‌ ಅವರ ಸಮಾಧಿಗೆ ದೆಹಲಿಯಲ್ಲಿ ಕಾಂಗ್ರೆಸ್‌ ಪಕ್ಷ ಸ್ಥಳ ನೀಡಲಿಲ್ಲ ಎನ್ನುವ ವಿಷಯ ಪ್ರಸ್ತಾಪಿಸಿ, ದಲಿತ ವಿಚಾರದಲ್ಲಿ ಕಾಂಗ್ರೆಸ್‌ ನಿಲುವ ನೆರೆದ ಜನರಿಗೆ ತಿಳಿಸುವ ಪ್ರಯತ್ನ ಮಾಡಿದರು. ಇನ್ನು ಕಾಂಗ್ರೆಸ್‌ನಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್‌, ಮುನಿಯಪ್ಪನಿಗೂ ಕಾಂಗ್ರೆಸ್‌ ಅನ್ಯಾಯ ಮಾಡಿದೆ, ಎಸ್‌ಸಿ ಮತ್ತು ಎಸ್‌ಟಿಗೂ ಅನ್ಯಾಯ ಮಾಡಿದೆ, ಕಾಂಗ್ರೆಸ್‌ ಮುಳುಗುವ ಹಡಗು ಅದಕ್ಕೆ ಖರ್ಗೆ ಅವರಿಗೆ ನೇತೃತ್ವ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವರು ವಾಗ್ದಾಳಿ ಮಾಡಿದರು.

ಜನರ ಮುಂದೆ ಭಾವನೆ ತೆರೆದಿಟ್ಟ ರಾಮುಲು
ಶ್ರೀರಾಮುಲು ಅವರಿಗೆ ಈ ಸಮಾವೇಶವು ಪ್ರತಿಷ್ಟೆಯ ಪ್ರಶ್ನೆಯಾಗಿತ್ತು, ತಮ್ಮ ಭಾಷಣ ಆರಂಭದಿಂದಲೂ ಭಾವೋದ್ವದ ಮಾತುಗಳನ್ನು ಆಡಿದರು. ಮುಂದೆ ಲಂಕ ದಹನ ಇದೆ ಎಂದು ಚುನಾವಣೆಯ ದೃಷ್ಟಿಕೋನದಲ್ಲಿ ಮಾತನಾಡಿದ ರಾಮುಲು, ಕಾಂಗ್ರೆಸ್‌ ಪತನ ಈ ಸಮಾವೇಶದಿಂದಲೇ ಆರಂಭವಾಗಲಿದೆ, ೨೦೨೩ರಲ್ಲಿ ವಾಲ್ಮೀಕಿ ಸಮುದಾಯವು ಬಿಜೆಪಿ ಪರವಾಗಿ ನಿಲ್ಲುತ್ತದೆ, ನಮ್ಮ ಸಿಎಂ ಸುದರ್ಶನ ಚಕ್ರ ಬಿಟ್ಟಿದ್ದಾರೆ, ಇದರಿಂದಾಗಿ ಕಾಂಗ್ರೆಸ್‌ ಶಿರಚ್ಛೇದನವಾಗಲಿದೆ, ತಾಕತ್ತಿದ್ದರೆ ತಡೆಯಲಿ, ಇಲ್ಲಿಗೆ ಬರಲಿ, ನಾವೇನು ಬಳೆ ತೊಟ್ಟುಕೊಂಡಿಲ್ಲ. ಈಗ ಬನ್ನಿಯಪ್ಪ ನೋಡೋಣ ಎಂದು ಸಿದ್ದರಾಮಯ್ಯನವರಿಗೆ ಪಂಥಾಹ್ವಾನ ಮಾಡಿದರು.

ಮೀಸಲಾತಿ ಹೆಚ್ಚಳ ಮಾಡುವ ಮೂಲಕ ಸಮಾಜದ ಅನ್ನ ಋಣ ತೀರಿಸುವ ಕೆಲಸ ಮಾಡಿದ್ದೇನೆ ಎಂದು ತಮ್ಮ ಸಮಾಜದ ಮಹತ್ವವನ್ನು ಎತ್ತಿ ಹಿಡಿದರು. ತಮ್ಮ ಪರವಾಗಿ ದಲಿತ ಸಮುದಾಯವನ್ನು ಸೆಳೆಯುವ ಕೆಲಸವನ್ನು ವೇದಿಕೆಯ ಪ್ರತಿಯೊಬ್ಬರು ಭಾಷಣದಲ್ಲಿ ಎದ್ದು ಕಾಣುತ್ತಿತ್ತು. ಇದು ಪರಿಶಿಷ್ಟ ಪಂಗಡದ ನವಶಕ್ತಿ ಬೃಹತ್‌ ಸಮಾವೇಶ ಎಂದಾದರೂ, ಇದನ್ನು ಪರಿವರ್ತನಾ ಸಮಾವೇಶ, ಸಾಧನಾ ಸಮಾವೇಶ, ಸಂಕಲ್ಪ ಸಮಾವೇಶ ಸೇರಿದಂತೆ ಇತರ ಹೆಸರಿನಿಂದ ನಾಯಕರು ಹೆಸರಿಸಿದರು.

ಸಮಾವೇಶದಲ್ಲಿ ತಲೆಗಳ ಲೆಕ್ಕಾಚಾರ!
ಸಮಾವೇಶ ನಡೆದ ನಂತರದಲ್ಲಿ ಸೇರಿರುವ ಜನಸ್ತೋಮದ ಲೆಕ್ಕಾಚಾರಕ್ಕೆ ರಾಜಕೀಯ ಪಕ್ಷಗಳು ಮುಂದಾಗಿವೆ. ಈ ಸಮಾವೇಶದೊಂದಿಗೆ ಬಳ್ಳಾರಿ ಭಾರತ ಜೋಡೋ ಸಮಾವೇಶ ಮತ್ತು ದಾವಣಗೆರೆಯ ಸಿದ್ದರಾಮೋತ್ಸವಕ್ಕೆ ಸೇರಿರುವ ಜನಸ್ತೋಮದ ಹೋಲಿಕೆಗೆ ರಾಜ ಕೀಯ ಪಕ್ಷಗಳು ಲೆಕ್ಕಾಚಾರ ಶುರು ಹಂಚಿಕೊಂಡಿವೆ. ಬಳ್ಳಾರಿ ಜೋಡೋ ಯಾತ್ರೆಯ ಸಮಾವೇಶವು ರಾಹುಲ್‌ ಗಾಂಧಿ ರಾಷ್ಟ್ರೀಯ ಪ್ರಮುಖ ಮುಖಂಡರ ಕಾರ್ಯಕ್ರಮವಾದರೆ, ಎಸ್‌ಟಿ ಸಮಾವೇಶ ಒಂದು ಸಮುದಾಯಕ್ಕೆ ಸೀಮಿತವಾದ ಕಾರ್ಯಕ್ರಮ ಸೇರಿದಂತೆ ಇತರ ಚರ್ಚೆಗಳು ಈ ಸಮಾವೇಶದ ಕುರಿತಾಗಿ ನಡೆಯುತ್ತಿವೆ. ಈ ಸಮಾವೇಶಕ್ಕೆ ಎಷ್ಟು ಜನರ ಸೇರಿದ್ದರೂ ಎಂದು ತಲೆಗಳನ್ನು ಎಣಿಸುವ ಕೆಲಸವನ್ನು ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷ ಮಾಡುತ್ತಿದೆ. ಒಟ್ಟಾರೆ ಸಮಾವೇಶವು ಹಲವು ಸಂದೇಶಗಳನ್ನು ರವಾನೆ ಮಾಡಿದೆ.

ಇದನ್ನೂ ಓದಿ | ನವಶಕ್ತಿ ಸಮಾವೇಶ | ಶ್ರೀರಾಮುಲು ಮುಖ್ಯಮಂತ್ರಿ ಆಗುವ ಕಾಲ ಬರುತ್ತದೆ ಎಂದ ಸಿಎಂ ಬೊಮ್ಮಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

ಪ್ರಮುಖ ಸುದ್ದಿ

Election Results 2024: ರಾಜ್ಯದ 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರಕ್ಕೆ ಕೌಂಡ್ ಡೌನ್

Election Results 2024: ರಾಜ್ಯದ 28 ಕ್ಷೇತ್ರಗಳ ಮತ ಎಣಿಕಾ ಕೇಂದ್ರಗಳಲ್ಲಿ ಮೂರು ಹಂತದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಆರಂಭವಾಗಿದೆ.

VISTARANEWS.COM


on

Lok Sabha Election Results 2024

ಬೆಂಗಳೂರು: ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ (Election Results 2024) ಸ್ಪರ್ಧಿಸಿದ್ದ ಒಟ್ಟು 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರಕ್ಕೆ ಕೌಂಡ್ ಡೌನ್ ಶುರುವಾಗಿದೆ. ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಮತ ಎಣಿಕಾ ಕೇಂದ್ರಗಳಲ್ಲಿ ಮೂರು ಹಂತದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಮಧ್ಯಾಹ್ನ 12 ರೊಳಗೆ ಬಹುತೇಕ ಯಾರು ಗೆಲ್ಲಲಿದ್ದಾರೆ ಎಂಬ ಚಿತ್ರಣ ಸಿಗಲಿದ್ದು, ಸಂಜೆ ಅಂತಿಮ ಫಲಿತಾಂಶ ಹೊರಬೀಳಲಿದೆ.

ಬೆಳಗ್ಗೆ 7:45 ರ ಸುಮಾರಿಗೆ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಲಾಗಿದ್ದು, ನಂತರ ಮತ ಎಣಿಕೆ ಕೊಠಡಿಗೆ ಇವಿಎಂಗಳನ್ನು ಅಧಿಕಾರಿಗಳು ಕೊಂಡೊಯ್ದರು. ಒಂದು ಕೊಠಡಿಯಲ್ಲಿ 14 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಕೊಠಡಿ ದೊಡ್ಡದಿದ್ದರೆ ಹೆಚ್ಚುವರಿ ಟೇಬಲ್ ಹಾಕಲು ಅವಕಾಶ ಮಾಡಿಕೊಡಲಾಗಿದೆ. 20-25 ಸುತ್ತಿನವರೆಗೆ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ | Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ರಾಜ್ಯದಲ್ಲಿ ಏಪ್ರಿಲ್ 26 ರಂದು ನಡೆದ ಮೊದಲ ಹಂತದಲ್ಲಿ 247 ಅಭ್ಯರ್ಥಿಗಳು ಹಾಗೂ ಮೇ 7 ರಂದು ನಡೆದ ಎರಡನೇ ಹಂತದಲ್ಲಿ 227 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಒಟ್ಟು 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ಬಹಿರಂಗವಾಗಲಿದೆ.

Continue Reading

ರಾಜಕೀಯ

Surapura Assembly constituency: ಸುರಪುರ ಉಪ ಚುನಾವಣೆಗೆ ರಾಜುಗೌಡ ಬಿಜೆಪಿ ಅಭ್ಯರ್ಥಿ; ಹೇಗಿದೆ ಕ್ಷೇತ್ರ ಚಿತ್ರಣ?

Surapura Assembly constituency: ಬಿ.ಎಸ್.‌ ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ರಾಜುಗೌಡ ಕ್ಷೇತ್ರದಲ್ಲಿ ಜನರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಆದರೆ, ಕಾಂಗ್ರೆಸ್‌ ಅಭ್ಯರ್ಥಿಗೆ ಇರುವ ಅನುಕಂಪದ ಅಲೆಯನ್ನು ದಾಟಿ ಇವರು ಜಯಗಳಿಸಬೇಕೆಂದರೆ ಹೆಚ್ಚಿನ ಶ್ರಮವನ್ನು ಹಾಕಲೇಬೇಕಿದೆ.

VISTARANEWS.COM


on

Raju Gowda Shorapur or Surapura Assembly constituency BJP Candidate

ಬೆಂಗಳೂರು: ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ (Lok Sabha Election 2024) ಫೀವರ್‌ ಹೆಚ್ಚಾಗಿದೆ. ಈ ನಡುವೆ ಮುಖ್ಯ ಚುನಾವಣಾ ಆಯೋಗವು ಹಲವು ರಾಜ್ಯಗಳ ಉಪ ಚುನಾವಣೆಯನ್ನೂ ಸಹ ಘೋಷಣೆ ಮಾಡಿದೆ. ಇದಕ್ಕೆ ಈಗ ರಾಜ್ಯದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (Raja Venkatappa Nayaka) ಅವರ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ (Surapura Assembly constituency) ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಸಿಂಹ ನಾಯಕ (ರಾಜೂಗೌಡ) (Raju Gowda) ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ.

ರಾಜುಗೌಡ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ರಾಜಾ ವೆಂಕಟಪ್ಪ ನಾಯಕ ವಿರುದ್ಧ ಸೋಲು ಕಂಡಿದ್ದರು. ಆದರೆ, ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿದೆ. 2023ರಲ್ಲಿ ನಡೆದ ಚುನಾವಣೆಯಲ್ಲಿ ರಾಜೂಗೌಡ ಅವರು 25223 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಆದರೆ, ಕಳೆದ 2018ರ ಚುನಾವಣೆಯಲ್ಲಿ ರಾಜುಗೌಡ ಅವರು ಗೆದ್ದಿದ್ದರು. ಅಲ್ಲದೆ, ಬಿ.ಎಸ್.‌ ಯಡಿಯೂರಪ್ಪ (BS Yediyurappa) ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಇವರು ಕ್ಷೇತ್ರದಲ್ಲಿ ಜನರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಆದರೆ, ಕಾಂಗ್ರೆಸ್‌ ಅಭ್ಯರ್ಥಿಗೆ ಇರುವ ಅನುಕಂಪದ ಅಲೆಯನ್ನು ದಾಟಿ ಇವರು ಜಯಗಳಿಸಬೇಕೆಂದರೆ ಹೆಚ್ಚಿನ ಶ್ರಮವನ್ನು ಹಾಕಲೇಬೇಕಿದೆ.

ಕಾಂಗ್ರೆಸ್‌ನಿಂದ ರಾಜಾ ವೇಣುಗೋಪಾಲ ನಾಯಕ ಸ್ಪರ್ಧೆ

ಕಾಂಗ್ರೆಸ್‌ನಿಂದ ಈಗಾಗಲೇ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ. ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ (Raja Venugopala Nayaka) ಸ್ಪರ್ಧೆ ಮಾಡುತ್ತಿದ್ದಾರೆ. ತಂದೆ ನಿಧನವಾಗಿದ್ದರಿಂದ ಅನುಕಂಪದ ಅಲೆ ಹಾಗೂ ಕಾಂಗ್ರೆಸ್‌ ಆಡಳಿತದಲ್ಲಿರುವುದು ಅವರಿಗೆ ಪ್ಲಸ್‌ ಆಗಲಿದೆ. ಜತೆಗೆ ವೇಣುಗೋಪಾಲ ನಾಯಕ್‌ಗೆ ಚುನಾವಣೆ ಹೊಸದೇನಲ್ಲ. ಅವರದ್ದು ರಾಜಕೀಯ ಹಿನ್ನೆಲೆಯ ಕುಟುಂಬವಾಗಿದೆ. ಇವರ ಅಜ್ಜ ರಾಜಾ ಕುಮಾರ ನಾಯಕ ಅವರು ಎರಡು ಬಾರಿ, ತಂದೆ ರಾಜಾ ವೆಂಕಟಪ್ಪ ನಾಯಕ 4 ಬಾರಿ, ಚಿಕ್ಕಪ್ಪ ಒಂದು ಬಾರಿ ಸುರಪುರ ಕ್ಷೇತ್ರದಿಂದ ಶಾಸಕರಾಗಿದ್ದರು. ಅಲ್ಲದೆ, ತಂದೆಯ ಜತೆಗೆ ಚುನಾವಣೆ ಸಂದರ್ಭದಲ್ಲಿ ಕ್ಯಾಂಪೇನ್‌ ಮಾಡುವುದು, ತಂತ್ರಗಾರಿಕೆಯನ್ನು ರೂಪಿಸುವ ಕೆಲಸವನ್ನು ವೇಣುಗೋಪಾಲ ನಾಯಕ ಮಾಡುತ್ತಿದ್ದರು. ಹೀಗಾಗಿ ಅವರಿಗೆ ಈ ಚುನಾವಣೆ ಹೊಸದಲ್ಲ.

ಎಲ್ಲ ಪಕ್ಷದವರೂ ಇಲ್ಲಿ ಗೆದ್ದಿದ್ದಾರೆ

2008ರ ಕ್ಷೇತ್ರ ಮರು ವಿಂಗಡಣೆವರೆಗೂ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾನ್ಯ ವರ್ಗದವರು ಸ್ಪರ್ಧೆ ಮಾಡಬಹುದಾಗಿತ್ತು. ಇದರ ಬಳಿಕ ಎಸ್‌ಟಿ ಮೀಸಲು ಕ್ಷೇತ್ರವಾಯಿತು. 1957ರಿಂದ ಇಲ್ಲಿಯವರೆಗೆ ಒಟ್ಟು 16 ಬಾರಿ ಚುನಾವಣೆಗಳು ನಡೆದಿವೆ. ಇದರಲ್ಲಿ ಕಾಂಗ್ರೆಸ್‌ 8, ಬಿಜೆಪಿ 2 ಹಾಗೂ ಸ್ವತಂತ್ರ ಪಕ್ಷ, ಕರ್ನಾಟಕ ಕಾಂಗ್ರೆಸ್‌ ಪಕ್ಷ (ಕೆಸಿಪಿ), ಕನ್ನಡ ನಾಡು ಪಕ್ಷ (ಕೆಎನ್‌ಡಿಪಿ) ಮತ್ತು ಸ್ವತಂತ್ರ್ಯ ಅಭ್ಯರ್ಥಿಗಳು ತಲಾ ಒಮ್ಮೆ ವಿಜಯ ಸಾಧಿಸಿದ್ದಾರೆ.

ಪಕ್ಷಾಂತರ ಮಾಡಿದ್ದ ರಾಜುಗೌಡ

2013ರ ಚುನಾವಣೆಯಲ್ಲಿ ಬಿಜೆಪಿ ತೊರೆದು ಜೆಡಿಎಸ್‌ ಸೇರಿದ್ದ ರಾಜು ಗೌಡ ಸೋಲು ಕಂಡಿದ್ದರು. ಆಗ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ರಾಜಾ ವೆಂಕಟಪ್ಪ ನಾಯಕ 65,033 ಮತಗಳನ್ನು ಪಡೆದು ಗೆದ್ದಿದ್ದರು. ರಾಜುಗೌಡ 60,958 ಮತಗಳನ್ನು ಪಡೆದಿದ್ದರು. ಕೇವಲ 4,075 ಮತಗಳ ಅಂತರದಿಂದ ಸೋಲು ಕಂಡಿದ್ದರು.

2018ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಸೇರಿದ ರಾಜು ಗೌಡ 1,04,426 ಮತಗಳನ್ನು ಪಡೆದು ಮೂರನೇ ಬಾರಿಗೆ ಜಯ ಸಾಧಿಸಿದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ರಾಜಾ ವೆಂಕಟಪ್ಪ ನಾಯಕ 81,851 ಮತಗಳನ್ನು ಪಡೆದುಕೊಂಡಿದ್ದರು. ಹೀಗಾಗಿ 22,568 ಮತಗಳ ಅಂತರದಲ್ಲಿ ರಾಜುಗೌಡ ಗೆದ್ದಿದ್ದರು.

ಸಮುದಾಯವಾರು ಮತಗಳು ಎಷ್ಟಿವೆ?

ಸದ್ಯದ ಮಾಹಿತಿ ಪ್ರಕಾರ ಸುರಪುರ ಕ್ಷೇತ್ರದಲ್ಲಿ 1,41, 618 ಪುರುಷರು, 1,39,729 ಮಹಿಳಾ, 28 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಸೇರಿ ಒಟ್ಟು 2,81,375 ಮತದಾರರಿದ್ದಾರೆ. ಎಸ್‌ಟಿ ಮೀಸಲು ಕ್ಷೇತ್ರವಾಗಿರುವ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡದ ಜನರೇ ನಿರ್ಣಾಯಕರು.

  • ಪರಿಶಿಷ್ಟ ಪಂಗಡ: 1 ಲಕ್ಷಕ್ಕೂ ಅಧಿಕ ಮತದಾರರು
  • ದಲಿತ: 80 ಸಾವಿರಕ್ಕೂ ಅಧಿಕ ಮತದಾರರು
  • ಮುಸ್ಲಿಂ: 45 ಸಾವಿರಕ್ಕೂ ಅಧಿಕ ಮತದಾರರಿದ್ದಾರೆ.

ಇದನ್ನೂ ಓದಿ: Lok Sabha Election 2024: ಮಂಡ್ಯನಾ? ರಾಮನಗರವಾ? ಧರ್ಮ ಸಂಕಟದಲ್ಲಿ ಮಾಜಿ ಸಿಎಂ ಎಚ್‌ಡಿಕೆ!

ಉಪ ಚುನಾವಣೆಯ ಫಲಿತಾಂಶ ಜೂ. 4ಕ್ಕೆ ಇದ್ದು, ಯಾರು ವಿಜಯಶಾಲಿಯಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಆದರೆ, ಸುರಪುರ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್‌ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ.

Continue Reading

ದೇಶ

Kota Srinivas Poojary : ಫೋಟೊಗ್ರಾಫರ್‌ನಿಂದ ಸಂಸತ್‌ ಟಿಕೆಟ್‌ವರೆಗೆ; ಸಿಂಪಲ್​ ಮ್ಯಾನ್​ ಕೋಟ ಶ್ರೀನಿವಾಸ ಪೂಜಾರಿ ಜರ್ನಿ

kota srinivas poojary : ಗ್ರಾಮ ಪಂಚಾಯಿತಿ ಚುನಾವಣೆ ಮೂಲಕ ರಾಜಕೀಯ ಆರಂಭಿಸಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು ಇದೀಗ ಪಾರ್ಲಿಮೆಂಟ್​ ಮೆಟ್ಟಿಲೇರಲು ಸಜ್ಜಾಗಿದ್ದಾರೆ.

VISTARANEWS.COM


on

Lok sabha Election 2024 Kota Srinivas Poojary12

ಬೆಂಗಳೂರು: ಮುಂಬರುವ ಲೋಕಸಭಾ ಕ್ಷೇತ್ರ ಚುನಾವಣೆಗೆ (Lok Sabha Election) ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬುಧವಾರ (ಮಾರ್ಚ್​ 13ರಂದು) ಬಿಡುಗಡೆ ಮಾಡಿದೆ. ಒಟ್ಟು 72 ಅಭ್ಯರ್ಥಿಗಳಲ್ಲಿ ಕರ್ನಾಟಕದ 20 ಅಭ್ಯರ್ಥಿಗಳಿದ್ದಾರೆ. ಈ ಪಟ್ಟಿಯಲ್ಲಿ ವಿಶೇಷವಾಗಿ ಗಮನ ಸೆಳೆದಿರುವುದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ (Kota srinivas poojary). ಜನರ ನಡುವಿನ ನಾಯಕ ಹಾಗೂ ಅತ್ಯಂತ ಸರಳ ವ್ಯಕ್ತಿತ್ವದ ಶ್ರೀನಿವಾಸ ಪೂಜಾರಿ ಚುನಾವಣೆಯಲ್ಲಿ ಗೆದ್ದರೆ ಪಾರ್ಲಿಮೆಂಟ್ ಮೆಟ್ಟಿಲೇರುವುದು ನಿಶ್ಚಿತ. ಸಜ್ಜನ ಜನಪ್ರತಿನಿಧಿ ಎನಿಸಿಕೊಂಡಿರುವ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್​ ನೀಡಿರುವುದು ಅವರ ಕ್ಷೇತ್ರದ ಬಿಜೆಪಿ ಅಭಿಮಾನಿಗಳ ಪಾಲಿಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.

Lok-sabha-Election-2024-Kota-Srinivas-Poojary1

ಕರ್ನಾಟಕ ಸರ್ಕಾರದಲ್ಲಿ ಮೂರು ಬಾರಿ ಸಚಿವರಾಗಿದ್ದ ಅವರೀಗ ವಿಧಾನ ಪರಿಷತ್​ನಲ್ಲಿ ವಿರೋಧ ಪಕ್ಷದ ನಾಯಕ. ಅವರನ್ನು ಮುಂದಿನ ಲೋಕಸಭಾ ಚುನಾವಣೆಗೆ ಬಿಜೆಪಿ ಕಣಕ್ಕೆ ಇಳಿಸಿದೆ. ಕೋಟಾ ಶ್ರೀನಿವಾಸ ಪೂಜಾರಿ ಅವರು ಅತ್ಯಂತ ಸರಳ ವ್ಯಕ್ತಿತ್ವದವರು ಎಂಬುದು ಅವರನ್ನು ಬಲ್ಲವರು ಹೇಳುವ ಮೊದಲ ಮಾತು. ಅವರನ್ನು ಜನರು ಪಕ್ಷವನ್ನು ನೋಡದೇ ಪ್ರೀತಿಸುತ್ತಾರೆ ಎಂಬುದು ಕೂಡ ವಿಶೇಷ. ಅಭಿಮಾನಿಗಳ ದಂಡನ್ನು ಬಿಟ್ಟು ಸಾಮಾನ್ಯ ಜನರಂತೆ ಸುತ್ತಾಡುವ ಅವರು ಊಟ, ತಿಂಡಿಗೂ ಸಣ್ಣ ಪುಟ್ಟ ಹೋಟೆಲ್​ಗೆ ಹೋಗುತ್ತಾರೆ ಎಂಬುದು ವಿಶೇಷ.

ಸರಳ ರಾಜಕಾರಣಿ

ಸಾಮಾನ್ಯ ಛಾಯಾಗ್ರಾಹಕನಾಗಿ ವೃತ್ತಿ ಆರಂಭಿಸಿದ್ದ ಶ್ರೀನಿವಾಸ ಪೂಜಾರಿ ಅವರು ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೂ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ಹಲವು ಇಲಾಖೆಗಳಲ್ಲಿ ಸಚಿವರಾಗಿದ್ದಾರೆ . ಅವರೀಗ ಲೋಕ ಸಭಾ ಟಿಕೆಟ್​ ಪಡೆದು ತಮ್ಮ ವ್ಯಾಪ್ತಿಯನ್ನು ರಾಷ್ಟ್ರೀಯ ರಾಜಕಾರಣದ ಮಟ್ಟಿಗೆ ವಿಸ್ತರಿಸಿಕೊಂಡಿದ್ದಾರೆ. ನೇರ ಮಾತು, ಒಲವು ನಿಲುವುಗಳಿಂದಲೇ ಸಾಧನೆಯ ಉತ್ತುಂಗಕ್ಕೇರಿ, ಬಿಜೆಪಿ ಪಕ್ಷದಲ್ಲಿಯೂ ಪ್ರಭಾವಿ ನಾಯಕನಾಗಿ ಬೆಳೆದಿದ್ದಾರೆ ಅವರು. ಆದರೆ, ಅವರ ಸರಳ ವ್ಯಕ್ತಿತ್ವ ಇಂದಿಗೂ ಬದಲಾಗಿಲ್ಲ.

Kota Srinivas Poojary

ಕೋಟ ಶ್ರೀನಿವಾಸ ಪೂಜಾರಿ, 1993ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗುವುದರೊಂದಿಗೆ ರಾಜಕೀಯ ಜೀವನ ಆರಂಭಿಸಿದ್ದರು. 1996ರಲ್ಲಿ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಗೊಂಡಿದ್ದರು. 2006ರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆರಿಸಿ ಬಂದರು. ಅವರು ಕರ್ನಾಟಕ ರಾಜಕೀಯದಲ್ಲಿ ಹಲವಾರು ನಿರ್ಣಾಯಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಅವರು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರವನ್ನು ಪ್ರತಿನಿಧಿಸಿ 6 ಜನವರಿ 2010 ರಿಂದ 4 ಜನವರಿ 2016 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿಗೆ ಮೊದಲ ಬಾರಿಗೆ ಆಯ್ಕೆಯಾದರು ಮತ್ತು 6 ಜನವರಿ 2016 ರಿಂದ 5 ಜನವರಿ 2022 ರವರೆಗೆ ಅವಧಿಗೆ ಮರು ಆಯ್ಕೆಯಾದರು. 2022ರಲ್ಲಿ ಮತ್ತೆ ಆಯ್ಕೆಯಾಗಿದ್ದಾರೆ. ಫೆಬ್ರವರಿ 7, 2018 ರಿಂದ ಜುಲೈ 26, 2019 ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದು, ಮತ್ತದೇ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಅಕ್ಟೋಬರ್ 7, 2021ರಂದು ಅವರನ್ನು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿತ್ತು.

ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ ಹುದ್ದೆಗಳನ್ನಲಂಕರಿಸಿ ಅವುಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಬಳಿಕ ಸದ್ಯ ಹಿಂದುಳಿದ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಪಂಚಾಯತ್ ರಾಜ್ ವ್ಯವಸ್ಥೆಯ ಕುರಿತು ಆಳವಾದ ಅರಿವು, ಅಧ್ಯಯನಗಳಿವೆ.

ಫೋಟೋಗ್ರಫಿಯಿಂದ ಲೋಕಸಭಾ ಟಿಕೆಟ್​ ವರೆಗೆ

ಶ್ರೀನಿವಾಸ ಪೂಜಾರರು ಒಬ್ಬ ಸೃಜನಶೀಲ ರಾಜಕಾರಣಿ . ಆರಂಭದಲ್ಲಿ ಫೋಟೋಗ್ರಫಿಯನ್ನು ವೃತ್ತಿಯನ್ನಾಗಿಸಿಕೊಂಡ ಅವರು ಬರವಣಿಗೆಯಲ್ಲಿಯೂ ಸಿದ್ಧಹಸ್ತರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಕಾರರಾಗಿದ್ದರು. ನಮ್ಮ ಕಮಲ ಎಂಬ ಪಂಚಾಯತ್ ರಾಜ್ ವ್ಯವಸ್ಥೆಯ ಬಗೆಗೆ ಮಾಸ ಪತ್ರಿಕೆಯೊಂದನ್ನು ಆರಂಭಿಸಿ ಅದರ ಸಂಪಾದಕರಾಗಿದ್ದರು. ಆಕರ್ಷಕ ಮಾತಿನ ವರಸೆ ಪೂಜಾರಿಯವರಿಗೆ ಸಲೀಸು. ಡಾ. ಶಿವರಾಮ ಕಾರಂತರ ಅಭಿಮಾನಿಯಾಗಿ ತನ್ನ ಹುಟ್ಟೂರಿನಲ್ಲಿ ಕಾರಂತ ಭವನ ನಿರ್ಮಾಣ, ಕಾರಂತ ಹುಟ್ಟೂರ ಪ್ರಶಸ್ತಿ ಸೇರಿದಂತೆ ಅವರ ನೆನಪನ್ನು ಕೋಟದಲ್ಲಿ ಚಿರಸ್ಥಾಯಿಯಾಗಿಸಿದ ಕೀರ್ತಿಯಲ್ಲಿ ಇವರದ್ದು ದೊಡ್ಡ ಪಾಲಿದೆ.

Continue Reading
Advertisement
Rakshit Shetty Richard Anthony Produce By Hombale
ದೇಶ14 hours ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ14 hours ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ14 hours ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ2 days ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ2 days ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ2 days ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ2 days ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ2 days ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest3 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest3 days ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌