ಬಳ್ಳಾರಿ: ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ (Bellary News) ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಪೊಲೀಸ್ ಪೇದೆ ಜಾಫರ್ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು, ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಜಾಫರ್ ಮೃತ ಪೇದೆಯಾಗಿದ್ದಾರೆ. ಪೊಲೀಸ್ ವಸತಿ ಗೃಹದಲ್ಲಿ ಬುಧವಾರ ರಾತ್ರಿ ಪೇದೆ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕಿವಿಯಲ್ಲಿ ರಕ್ತಸ್ರಾವವಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಅನುಮಾನಗಳು ವ್ಯಕ್ತವಾಗಿದೆ. ಸ್ಥಳಕ್ಕೆ ಗಾಂಧಿನಗರ ಪೊಲೀಸರು ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | Murder Case: ಸಾಮಾಜಿಕ ಕಾರ್ಯಕರ್ತೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ
2009ರಲ್ಲಿ ಡಿಎಆರ್ ಪೊಲೀಸ್ ಪೇದೆಯಾಗಿ ಜಾಫರ್ ನೇಮಕವಾಗಿದ್ದರು. ಜಾಫರ್ 2ನೇ ಮದುವೆಯಾಗಿದ್ದು, 2ನೇ ಪತ್ನಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಮೊದಲ ಹೆಂಡತಿ ಮುಸ್ಲಿಂ, ಎರಡನೇ ಹೆಂಡತಿ ಹಿಂದು ಎಂಬ ಮಾಹಿತಿ ಲಭ್ಯವಾಗಿದೆ. ಮೊದಲ ಹೆಂಡತಿಯನ್ನು ತವರು ಮನೆಯಲ್ಲಿ ಬಿಟ್ಟಿದ್ದು, ಕಳೆದ ಕೆಲ ದಿನಗಳಿಂದ 2ನೇ ಪತ್ನಿ ಜತೆಗೆ ಜಗಳ ನಡೆದಿತ್ತು ಎನ್ನಲಾಗಿದೆ. ಪ್ರಕರಣವನ್ನು ಕೊಲೆಯ ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.