ಬಳ್ಳಾರಿ: ಮಂಗಳವಾರ ನಡೆದ ಕೆಎಎಸ್ ಪೂರ್ವಭಾವಿ ಪರೀಕ್ಷೆಯಲ್ಲಿ (KAS Prelims Exam) ಪೇಪರ್-1ರ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಪರೀಕ್ಷಾರ್ಥಿಗಳಿಂದ ಕೆಪಿಎಸ್‌ಸಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಬಳ್ಳಾರಿಯ ಸೇಂಟ್ ಜಾನ್ಸ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ಓಪನ್ ಆಗಿರುವ ಪ್ರಶ್ನೆ ಪತ್ರಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪರೀಕ್ಷಾ ಕೇಂದ್ರಕ್ಕೆ ಬರುವ ಮುಂಚೆಯೇ ಪ್ರಶ್ನೆ ಪತ್ರಿಕೆ ಸೀಲ್ ಓಪನ್ ಆಗಿತ್ತು ಎನ್ನಲಾಗಿದೆ.
ಇನ್ನೂ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳು ಪ್ರಶ್ನಿಸಿದ್ದರೂ ಆಮೇಲೆ ನೋಡೋಣ ಎಂದು ಕೊಠಡಿ ಮೇಲ್ವಿಚಾರಕರು ಸಮಜಾಯಿಷಿ ನೀಡಿದ್ದರಂತೆ. ಹೀಗಾಗಿ ಪರೀಕ್ಷೆ ಬರೆದು ಹೊರಗೆ ಬಂದ್ಮೇಲೆ ಪರೀಕ್ಷಾರ್ಥಿಗಳು ಕಿಡಿಕಾರಿದ್ದಾರೆ, ಸೇಂಟ್ ಜಾನ್ ಪದವಿ ಪೂರ್ವ ಕಾಲೇಜಿನ ರೂಂ ನಂ 18 ಹಾಗೂ 19 ಓಪನ್ ಆಗಿರೋ ಪ್ರಶ್ನೆ ಪತ್ರಿಕೆ ಬಂದಿರುವುದಾಗಿ ಆರೋಪಿಸಿದ್ದಾರೆ. ಹೀಗಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಅಭ್ಯರ್ಥಿಗಳು ಕಿಡಿಕಾರಿದ್ದು, ಮರು ಪರೀಕ್ಷೆ ಬರೆಸಬೇಕು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Food Poisoning : ದೇವರ ಪ್ರಸಾದ ಸೇವಿಸಿದ ಕೂಡಲೇ ಜೀವ ಬಿಟ್ಟ ಮೂವರು ಮಹಿಳೆಯರು; 6 ಮಂದಿ ತೀವ್ರ ಅಸ್ವಸ್ಥ
ಬೆಳಗಾವಿಯಲ್ಲಿ ಪ್ರಶ್ನೆ ಪತ್ರಿಕೆ ಅದಲು, ಬದಲು
ಕೆಎಎಸ್ ಎ ಮತ್ತು ಬಿ ವೃಂದದ ಪರೀಕ್ಷೆ ವೇಳೆ ಯಡವಟ್ಟಾಗಿದೆ. ಪ್ರಶ್ನೆ ಪತ್ರಿಕೆ ಕೊಡಲು 15 ನಿಮಿಷ ತಡವಾಗಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಪರೀಕ್ಷಾರ್ಥಿಗಳು ಆಕ್ರೋಶ ಹೊರಹಾಕಿದರು. ಬೆಳಗಾವಿ ಅಂಜುಮನ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯಿತು.
ಪ್ರಶ್ನೆ ಪತ್ರಿಕೆ ಅದಲು, ಬದಲು ಆಗಿದೆ ಎಂದು ವಿದ್ಯಾರ್ಥಿಗಳು ಕಿಡಿಕಾರಿದ್ದರು. ಪೊಲೀಸ್ ಅಧಿಕಾರಿಗಳ ಜತೆಗೆ ವಿದ್ಯಾರ್ಥಿಗಳು ವಾಗ್ವಾದ ನಡೆಸಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಒಎಂಆರ್ ಶೀಟ್ ಅದಲು ಬದಲಾಗಿ ಗೊಂದಲ ಸೃಷ್ಟಿಯಾಗಿತ್ತು. ವಿದ್ಯಾರ್ಥಿಗಳಿಗೆ ಹೆಚ್ಚಿನ ಸಮಯ ನೀಡಲು ಕೆಪಿಎಸ್ಸಿಗೆ ಪತ್ರ ಬರೆಯುತ್ತೇವೆ. ಸದ್ಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಆರಂಭ ಮಾಡಿದ್ದಾರೆ. ಒಎಂಆರ್ ಶಿಟ್ ಅದಲು, ಬದಲಾದ ಬಗ್ಗೆ ತನಿಖೆ ಮಾಡುವುದಾಗಿ ಹೇಳಿದರು.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ