Site icon Vistara News

Lok Sabha Election 2024: ಬಳ್ಳಾರಿಗೆ ಕೈಗಾರಿಕೆಗಳನ್ನು ತಂದ ಶ್ರೇಯಸ್ಸು ಕಾಂಗ್ರೆಸ್ ಪಕ್ಷದ್ದು: ನಾರಾ ಭರತ್ ರೆಡ್ಡಿ

Ballari City MLA Nara Bharat Reddy Election Campaign for Ballari Lok Sabha Constituency Congress Candidate E Tukaram

ಬಳ್ಳಾರಿ: ಬಳ್ಳಾರಿ ಜಿಲ್ಲೆಗೆ ಜಿಂದಾಲ್ ಸ್ಟೀಲ್ ಫ್ಯಾಕ್ಟರಿ, ಬಿಟಿಪಿಎಸ್ ತಂದ ಶ್ರೇಯಸ್ಸು ಕಾಂಗ್ರೆಸ್ (Congress) ಪಕ್ಷದ್ದು, ಆದರೆ ಬಿಜೆಪಿಯವರ (BJP) ಸಾಧನೆ ಶೂನ್ಯ ಎಂದು ನಗರ ಶಾಸಕ ನಾರಾ ಭರತ್ ರೆಡ್ಡಿ (Lok Sabha Election 2024) ಹೇಳಿದರು.

ನಗರದ 3ನೇ ವಾರ್ಡಿನ ಬಂಡಿಮೋಟ್ ಬಳಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಅವರ ಪರ ಮತಯಾಚಿಸಿ ಅವರು ಮಾತನಾಡಿದರು.

ಬಿಜೆಪಿಯವರು ಬಳ್ಳಾರಿಗೆ ನಾಲ್ಕು ಬಾರಿ ಸಂಸದರಾಗಿದ್ದರು, ನಗರಕ್ಕೆ ಶಾಸಕರಾಗಿದ್ದರು, ಆದರೆ ಅವರು ಏನೂ ಕೆಲಸ ಮಾಡಲಿಲ್ಲ. ಅವರು ಮತ ಕೇಳಲು ಬಂದಾಗ ನೀವು ಅವರನ್ನು ಪ್ರಶ್ನೆ ಮಾಡಬೇಕು ಎಂದು ಹೇಳಿದರು.

ಇದನ್ನೂ ಓದಿ: Gold Rate Today: ಯಥಾಸ್ಥಿತಿ ಕಾಪಾಡಿಕೊಂಡ ಚಿನ್ನ- ಬೆಳ್ಳಿಯ ಬೆಲೆ; 22, 24 ಕ್ಯಾರಟ್‌ ದರಗಳು ಇಲ್ಲಿವೆ

ಜಿಂದಾಲ್ ಸ್ಟೀಲ್ ಫ್ಯಾಕ್ಟರಿ, ಬಿಟಿಪಿಎಸ್‌ನಿಂದ ನಮ್ಮ ಜಿಲ್ಲೆಯ ಸಾವಿರಾರು ಯುವಕರಿಗೆ ಉದ್ಯೋಗ ಸಿಕ್ಕಿದೆ ಎಂದರು.

ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ಕೀಳಾಗಿ ಮಾತನಾಡುತ್ತಾರೆ. ಬಿಟ್ಟಿ ಭಾಗ್ಯ ಎಂದು ಕರೆಯುತ್ತಾರೆ ಎಂದು ಹೇಳಿದ ಅವರು, ಬಡವರನ್ನು ಅವಮಾನಿಸುವ ಈ ಬಿಜೆಪಿಯವರನ್ನು ಮತದಾರರು ಸೋಲಿಸಬೇಕು ಎಂದು ತಿಳಿಸಿದರು.

ಬಳ್ಳಾರಿ ನಗರದ ಗ್ರಾಮದೇವತೆ ಕನಕ ದುರ್ಗಮ್ಮ ದೇವಸ್ಥಾನದ ಅಭಿವೃದ್ಧಿ ಮಾಡಿದ್ದೇವೆ. ಈವರೆಗೆ ಬಳ್ಳಾರಿ ನಗರಕ್ಕೆ 120 ಕೋಟಿ ರೂ. ಅನುದಾನ ತಂದಿರುವೆ ಎಂದು ಹೇಳಿದರು.

ಇದೇ ವೇಳೆ ಪಾಲಿಕೆ ಸದಸ್ಯ ಎಂ.ಪ್ರಭಂಜನಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಈ.ತುಕಾರಾಂ ಅವರಿಗೆ ಮತ ನೀಡಿ, ಗೆಲ್ಲಿಸುವ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಬಲಪಡಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: Paris Olympics: ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಭಾರತದ 7 ಶಟ್ಲರ್​ಗಳು; ಕನ್ನಡತಿ ಅಶ್ವಿನಿ ಪೊನ್ನಪ್ಪಗೂ ಅವಕಾಶ

ಈ ಸಂದರ್ಭದಲ್ಲಿ ಮುಖಂಡರಾದ ವಿವೇಕ್ ಮುಂಡ್ಲೂರು, ವಿಷ್ಣು ಬೋಯಪಾಟಿ, ಪಾಲಿಕೆ ಸದಸ್ಯರಾದ ಮಿಂಚು ಶ್ರೀನಿವಾಸುಲು, ರಾಜೇಶ್ವರಿ ಸುಬ್ಬರಾಯುಡು, ಶೋಭಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹುಸೇನ್ ಪೀರಾಂ, ಮುಖಂಡ ಶ್ರೀನಿವಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version