ಕುಡುತಿನಿ: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ. ತುಕಾರಾಂ, ಜಿಲ್ಲೆಯ ಕುಡುತಿನಿಯಲ್ಲಿ ಭರ್ಜರಿ ರೋಡ್ ಶೋ ನಡೆಸಿ ಮತಯಾಚನೆ (Lok Sabha Election 2024) ನಡೆಸಿದರು. ಮನೆ ಮಗನಾಗಿ, ಸಹೋದರನಾಗಿ ಈವರೆಗೆ ಕೆಲಸ ಮಾಡುತ್ತಾ ಬಂದಿದ್ದೇನೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಮಗೆ ಆಶೀರ್ವದಿಸಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಪಟ್ಟಣದ ವಿವಿಧೆಡೆ ಚುನಾವಣಾ ಪ್ರಚಾರ ಕೈಗೊಂದು ಮತಯಾಚನೆ ನಡೆಸಿ, ಮಾತನಾಡಿದ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಈ. ತುಕಾರಾಂ, ಕುಡುತಿನಿ ಭಾಗದಲ್ಲಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಹಸ್ತದ ಗುರುತಿಗೆ ಮತ ನೀಡಿ, ತಮ್ಮನ್ನು ಗೆಲ್ಲಿಸುವಂತೆ ಮತದಾರರಲ್ಲಿ ಅಭ್ಯರ್ಥಿ ಈ. ತುಕಾರಾಂ ಮನವಿ ಮಾಡಿದರು.
ಇದನ್ನೂ ಓದಿ: T20 World Cup : ವಿಶ್ವ ಕಪ್ ಟೂರ್ನಿಗೆ ಭಾರತದ ಇಬ್ಬರು ಅಂಪೈರ್ಗಳು ಆಯ್ಕೆ; ಯಾರೆಲ್ಲ ಅವರು?
ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಆಂಜನೇಯಲು , ಕುಡುತಿನಿ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಮತ್ತು ಇತರರು ಉಪಸ್ಥಿತರಿದ್ದರು.
ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಪರ ಭರ್ಜರಿ ಪ್ರಚಾರ
ಬಾಗಲಕೋಟೆಯ ನವನಗರದ ಅಂಜುಮಾನ್ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪರ ಭರ್ಜರಿ ಮತಯಾಚನೆ ಮಾಡಲಾಯಿತು.
ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು, ಮುಖಂಡರು ಮಾತನಾಡಿದರು. ಯುವನಾಯಕಿಯನ್ನು ಗೆಲ್ಲಿಸಿ, ಸಂಸತ್ತಿನಲ್ಲಿ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಅವರಿಗೆ ಮತವೆಂಬ ಆಶೀರ್ವಾದ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ಕಾಂಗ್ರೆಸ್ ಮುಖಂಡ ನಿಕೇತ್ ರಾಜ್ ಮೌರ್ಯ ಮಾತನಾಡಿ, ಕರ್ನಾಟಕ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಇಡೀ ದೇಶದ ಜನ ಚರ್ಚೆ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದಿದ್ದು, 5 ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಜನರಿಗೆ ತಲುಪಿಸಿದೆ. ಆದರೆ ಗ್ಯಾರಂಟಿ ನೋಡಿ ಸಹಿಸಲು ಸಾಧ್ಯವಾಗದೇ ಬಿಜೆಪಿ ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಈ ಬಾರಿಯ ಚುನಾವಣೆಯಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಗೆದ್ದೇ ಗೆಲ್ಲುತ್ತಾರೆ. ಸಂಸದರಾಗುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.
ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಮಾತನಾಡಿದರು.
ಸಮಾವೇಶದಲ್ಲಿ ಸಚಿವರಾದ ಕೆ.ಎನ್. ರಾಜಣ್ಣ, ಶಿವಾನಂದ ಪಾಟೀಲ್, ಶಾಸಕರಾದ ವಿಜಯಾನಂದ ಕಾಶಪ್ಪನವರ್, ಭೀಮಸೇನ್ ಚಿಮ್ಮನಕಟ್ಟಿ, ಎಚ್.ವೈ. ಮೇಟಿ, ಪ್ರದೀಪ್ ಈಶ್ವರ್, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಮೊಹಮ್ಮದ್ ನಲಪಾಡ್ ಹ್ಯಾರಿಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ನಂಜಯ್ಯನಮಠ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಕ್ಷಿತಾ ಈಟಿ, ಆನಂದ ನ್ಯಾಮಗೌಡ, ಅಜಯ್ ಕುಮಾರ್ ಸರ್ ನಾಯಕ್, ಪಕ್ಷದ ಮುಖಂಡರಾದ ಬಿ.ಆರ್. ಯಾವಗಲ್, ಎಂ.ಪಿ. ನಾಡಗೌಡ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.