Site icon Vistara News

Lok Sabha Election 2024: ಏ.26ರಂದು ರಾಹುಲ್‌ ಗಾಂಧಿ ಬಳ್ಳಾರಿಗೆ; ಕಾಂಗ್ರೆಸ್‌ ಅಭ್ಯರ್ಥಿ ತುಕಾರಾಂ ಪರ ಪ್ರಚಾರ

Congress leader Rahul Gandhi election campaign on April 26 in Ballari

ಬಳ್ಳಾರಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಏ.26ರಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಪರ ಹಮ್ಮಿಕೊಂಡಿರುವ ಚುನಾವಣಾ ಪ್ರಚಾರ ಸಮಾವೇಶದಲ್ಲಿ (Lok Sabha Election 2024) ಭಾಗವಹಿಸಲಿದ್ದಾರೆ.

ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ, ಏ. 26 ರಂದು ಸಂಜೆ 4.30 ಕ್ಕೆ ನಗರದ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ಜರುಗುವ ಚುನಾವಣಾ ಸಮಾವೇಶದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: Yadgiri News: ಸಾಮಾಜಿಕ ಕಾರ್ಯಗಳಿಂದ ಆತ್ಮತೃಪ್ತಿ: ಶಾಂತವೀರ ಸ್ವಾಮೀಜಿ

ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸುರ್ಜೇವಾಲಾ, ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಸಚಿವ ಜಮೀರ್‌ ಅಹಮದ್‌ ಖಾನ್‌, ರಾಜ್ಯಸಭಾ ಸದಸ್ಯ ನಾಸೀರ್‌ ಹುಸೇನ್‌, ಬಳ್ಳಾರಿ ನಗರ ಶಾಸಕ ನಾರಾ ಭರತ್‌ ರೆಡ್ಡಿ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Top 10 Puddings: ಭಾರತದ ಫಿರ್ನಿ, ಖೀರು, ಸಿಹಿ ಪೊಂಗಲ್‌ಗೆ ವಿಶ್ವದ ಟಾಪ್‌ 10 ತಿಂಡಿ ಪಟ್ಟಿಯಲ್ಲಿ ಸ್ಥಾನ!

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Exit mobile version