ಬಳ್ಳಾರಿ: ವಿಷಕಾರಿ ಬೀಜ ತಿಂದು (Poison Food) ಎಂಟು ಮಕ್ಕಳು (Children sick) ಅಸ್ವಸ್ಥರಾಗಿದ್ದಾರೆ. ಬಳ್ಳಾರಿ (Bellary news) ಜಿಲ್ಲೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ಶಾಲಾ ವಿರಾಮದ ಸಮಯದಲ್ಲಿ ಮಕ್ಕಳು ವಿಷಕಾರಿ ಬೀಜವಿರುವ (poisonous seeds) ಕಾಡುಹಣ್ಣು ಸೇವಿಸಿದ್ದಾರೆ.
ತೆಕ್ಕಲಕೋಟೆಯ ವಾಲ್ಮೀಕಿ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಬೀಜ ಸೇವನೆ ಬಳಿಕ ಅಸ್ವಸ್ಥಗೊಂಡಿದ್ದಾರೆ. ಎಂಟು ಮಕ್ಕಳಲ್ಲಿ ವಿಷಕಾರಿ ಬೀಜ ಸೇವನೆ ಬಳಿಕ ವಾಂತಿ ಭೇದಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ವಿಮ್ಸ್‌ನಲ್ಲಿ ಎಲ್ಲ ಮಕ್ಕಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗಿದೆ.
ಒಂದು ಮಗುವಿನ ಪರಿಸ್ಥಿತಿ ಗಂಭೀರವಾಗಿದ್ದು, ಇನ್ನುಳಿದ ಮಕ್ಕಳು ಚಿಕಿತ್ಸೆ ಬಳಿಕ ಅಪಾಯದಿಂದ ಪಾರಾಗಿದ್ದಾರೆ. ಇಂದು ಪೂರ್ಣ ಚಿಕಿತ್ಸೆ ಹಾಗೂ ಅಬ್ಸರ್ವೇಷನ್ ಮಾಡಿ ಡಿಸ್ಚಾರ್ಜ್ ಮಾಡಲಾಗುವುದು ಎಂದು ವಿಮ್ಸ್ ನಿರ್ದೇಶಕ ಡಾ. ಗಂಗಾಧರ ಗೌಡ ಅವರು ಮಾಹಿತಿ ನೀಡಿದ್ದಾರೆ.
ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಚಿಕ್ಕೋಡಿ: ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಅಂಕಲಿ – ನಸಲಾಪೂರ ಗ್ರಾಮದ ಮಧ್ಯದ ಸೇತುವೆ ಬಳಿ ಆತ್ಮಹತ್ಯೆ (Krishna River) ಮಾಡಿಕೊಂಡಿದ್ದಾರೆ. ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದ ಬಾಬುರಾವ ಸಂಭಾಜಿ ಭಾಸ್ಕರ (40) ಆತ್ಮಹತ್ಯೆಗೆ ಶರಣಾದವರು.
ಅಂಕಲಿ ಹಾಗೂ ನಸಲಾಪೂರ ಗ್ರಾಮಗಳ ಮಧ್ಯೆ ನಿರ್ಮಿಸಲಾಗಿರುವಂತಹ ಸೇತುವೆ ಮೇಲೆ ನಿಂತು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗಾಗಲೇ ಅಂಕಲಿ ಪೋಲಿಸರು ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪೆನ್ನು ಕದ್ದ ಬಾಲಕನನ್ನು ಕತ್ತಲೆ ಕೋಣೆಯಲ್ಲಿ ಕೂಡಿಟ್ಟ; ಮನಸೋ ಇಚ್ಛೆ ಥಳಿಸಿದ ರಾಮಕೃಷ್ಣ ಆಶ್ರಮದ ಗುರೂಜಿ!
ರಾಯಚೂರು: ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ (Ramakrishna Ashram) ಅಮಾನವೀಯ ಘಟನೆಯೊಂದು ನಡೆದಿದೆ. ಬಾಲಕನೊಬ್ಬ ಪೆನ್ನು ಕದ್ದಿದ್ದಕ್ಕೆ ಆಶ್ರಮದ ಗುರೂಜಿ ಮನಬಂದಂತೆ ಹಲ್ಲೆ (Assault Case) ನಡೆಸಿದ್ದಾರೆ. ಮೂರು ದಿನಗಳ ಕಾಲ ಕತ್ತಲೆ ಕೋಣೆಯಲ್ಲಿ ಕೂಡಿಟ್ಟು ವಿದ್ಯಾರ್ಥಿಯ ಕಣ್ಣುಗಳು ಬಾವು ಬರುವಂತೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.
ವಿದ್ಯಾರ್ಥಿ ಶ್ರವಣ್ ಕುಮಾರ್ ಹಲ್ಲೆಗೊಳಗಾದ ಬಾಲಕನಾಗಿದ್ದಾನೆ. ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಶ್ರವಣ ಬಡತನದ ಕಾರಣ ಆಶ್ರಮದಲ್ಲಿದ್ದ. ಸಹಪಾಠಿಗಳ ಜತೆ ಆಟವಾಡುತ್ತಾ ಪೆನ್ನು ಕದ್ದಿದ್ದ. ಶ್ರವಣಕುಮಾರ್ ವಿರುದ್ಧ ಸಹಪಾಠಿಗಳು ದೂರೂ ನೀಡಿದ್ದರು. ದೂರಿನ್ವಯ ರಾಮಕೃಷ್ಣ ಮಠದ ಗುರೂಜಿ ವೇಣುಗೋಪಾಲ ಎಂಬಾತ ಶ್ರವಣಗೆ ಮನಬಂದಂತೆ ಥಳಿಸಿದ್ದಾರೆ. ಚಿಕ್ಕ ಹುಡುಗ ಎಂಬುದನ್ನು ಪರಿಗಣಿಸಿದೇ ಮೂರು ದಿನಗಳು ಕತ್ತಲೇ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ.
ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿರು ರಾಮಕೃಷ್ಣ ಆಶ್ರಮಕ್ಕೆ ಆಕಸ್ಮಿಕವಾಗಿ ಶ್ರವಣ ತಾಯಿ ಭೇಟಿ ನೀಡಿದಾಗ ವಿಷಯ ಬಹಿರಂಗವಾಗಿದೆ. ಸದ್ಯ ಶ್ರವಣಕುಮಾರ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮೈಕೈ ತುಂಬಾ ಗಾಯಗಳಾಗಿದ್ದು, ಕಣ್ಣು ಪೂರ್ತಿ ಬಾವು ಬಂದಿದೆ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪುಟ್ಟ ಬಾಲಕನ ಸ್ಥಿತಿಗೆ ಪೋಷಕರು ಕಣ್ಣೀರು ಹಾಕಿದ್ದಾರೆ.
ಇದನ್ನೂ ಓದಿ: Wayanad Landslide: ವಯನಾಡು ದುರಂತದಲ್ಲಿ ಮೃತರ ಸಂಖ್ಯೆ 344ಕ್ಕೆ ಏರಿಕೆ; ರಾಡಾರ್‌ಗೆ ಸಿಕ್ಕ ನಿಗೂಢ ಉಸಿರಾಟ ಯಾರದ್ದು?