ಬೆಳಗಾವಿ: ಬೆಳಗಾವಿಯಲ್ಲಿ ಕೆಎಲ್ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ ಅಮೃತ ಮಹೋತ್ಸವ ಇಂದು ನೆರವೇರಲಿದೆ. ಬಿಜೆಪಿಯ ರಾಜ್ಯ, ನೆರೆ ರಾಜ್ಯ, ಕೇಂದ್ರ ನಾಯಕರ ದಂಡು ಕಾರ್ಯಕ್ರಮಕ್ಕೆ ಹರಿದು ಬರಲಿದೆ.
ಡಾ. ಪ್ರಭಾಕರ ಕೋರೆ ಅವರ ಅಭಿಮಾನಿಗಳಿಂದ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳಾಗಿದ್ದು, ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್, ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ, ಕೇಂದ್ರ ಕಂದಾಯ ಸಚಿವ ರಾಧಾಕೃಷ್ಣ ಪಾಟೀಲ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಗೋವಾ ಸಿಎಂ ಪ್ರಮೋದ್ ಸಾವಂತ್, ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್, ಮಾಜಿ ಸಿಎಂಗಳಾಸ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಮಾಜಿ ಸಚಿವ ಆರ್.ವಿ ದೇಶಪಾಂಡೆ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಭಾಗಿಯಾಗಲಿದ್ದಾರೆ.
ಉತ್ತರ ಕರ್ನಾಟಕ, ಮಹಾರಾಷ್ಟ್ರ, ಗೋವಾದಿಂದ ಆಗಮಿಸುವವರು ಸೇರಿ ಒಂದು ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಕಾರ್ಯಕ್ರಮದಲ್ಲಿ ಡಾ. ಪ್ರಭಾಕರ ಕೋರೆ ಸಾಧನೆಗಳ ಕುರಿತಾದ ಪುಸ್ತಕ ಬಿಡುಗಡೆಯಾಗಲಿದೆ.
ಇದನ್ನೂ ಓದಿ | ಪ್ರಭಾಕರ್ ಕೋರೆ ಮನೆಗೆ ಪ್ರಕಾಶ್ ಹುಕ್ಕೇರಿ ಭೇಟಿ: ಬೆಳಗಾವಿ ರಾಜಕೀಯದಲ್ಲಿ ಗೊಂದಲ