ನವಶಕ್ತಿ ಸಮಾವೇಶ | ಕಾಂಗ್ರೆಸ್‌ ಅಧಿಕಾರದಲ್ಲಿ ಇದ್ದಾಗೆಲ್ಲ ದೇಶವನ್ನು ಒಡೆದಿದೆ: ಕೇಂದ್ರ ಸಚಿವ ಅರ್ಜುನ್‌ ಮುಂಡಾ - Vistara News

ಕರ್ನಾಟಕ ಎಲೆಕ್ಷನ್

ನವಶಕ್ತಿ ಸಮಾವೇಶ | ಕಾಂಗ್ರೆಸ್‌ ಅಧಿಕಾರದಲ್ಲಿ ಇದ್ದಾಗೆಲ್ಲ ದೇಶವನ್ನು ಒಡೆದಿದೆ: ಕೇಂದ್ರ ಸಚಿವ ಅರ್ಜುನ್‌ ಮುಂಡಾ

ಎಸ್‌ಟಿ ಸಮುದಾಯವನ್ನು ತನ್ನೆಡೆಗೆ ಸೆಳೆಯುವ ತಂತ್ರ ರೂಪಿಸಿರುವ ಬಿಜೆಪಿ, ನವಶಕ್ತಿ ಸಮಾವೇಶ ಕಾರ್ಯಕ್ರಮಕ್ಕೆ ಎಸ್‌ಟಿ ಸಮುದಾಯದ ಮುಖಂಡ ಅರ್ಜುನ್‌ ಮುಂಡಾ ಅವರನ್ನು ಆಹ್ವಾನಿಸಿದೆ.

VISTARANEWS.COM


on

arjun munda navashakti
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬಳ್ಳಾರಿ: ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿ ಇದ್ದಾಗೆಲ್ಲ ದೇಶವನ್ನು ಒಡೆದಿದೆ, ಆದರೆ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ಅಖಂಡವಾಗಿ ಮುನ್ನಡೆಯುತ್ತಿದೆ ಎಂದು ಕೇಂದ್ರ ಸಚಿವ ಅರ್ಜುನ್‌ ಮುಂಡಾ ಹೇಳಿದ್ದಾರೆ.

ನವಶಕ್ತಿ ಸಮಾವೇಶದಲ್ಲಿ ಮಾತನಾಡಿದ ಮುಂಡಾ, ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ರಾಷ್ಟ್ರೀಯ ಗೌರವ ದಿವನ್ನಾಗಿ ಘೋಷಿಸಿದ ನರೇಂದ್ರ ಮೋದಿಯವರಿಗೆ ನಾವೆಲ್ಲರೂ ಅಭಿನಂದನೆ ಸಲ್ಲಿಸಬೇಕಿದೆ.

ಕಾಂಗ್ರೆಸ್‌ ಅಧಿಕಾರ ನಡೆಸಿದಾಗಲೆಲ್ಲ ಭಾರತವನ್ನು ಒಡೆಯುವ ಕೆಲಸ ಮಾಡಿತು. ಆದರೆ ಇಂದು ಮೋದಿಯವರ ಅಧಿಕಾರಾವಧಿಯಲ್ಲಿ ದೇಶ ಒಂದಾಗಿದೆ. ಹೊಸ ಹಾಗೂ ಸಂಘಟಿತ ದೇಶ ರೂಪುಗೊಳ್ಳುತ್ತಿದೆ.

ಆದಿವಾಸಿ ಪರವಾಗಿ ಎಸ್ಸಿ, ಎಸ್ಟಿ ಪರವಾಗಿ ಬಿಜೆಪಿ ಕೆಲಸ ಮಾಡುತ್ತಿದೆ. ಅದಿವಾಸಿಗಳ ಗ್ರಾಮಗಳನ್ನು ಮಾದರಿ ಗ್ರಾಮ ಮಾಡುವುದು ಬಿಜೆಪಿ‌ ಸಂಕಲ್ಪವಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ಈಗಾಗಲೇ ಕೆಲಸ ಆರಂಭಿಸಿದೆ. ಶ್ರೀರಾಮುಲು ಅವರು ಜನರ ಸೇವೆ ಮಾಡುವ ನಾಯಕ. ನೀವೆಲ್ಲರೂ ಕರ್ನಾಟಕ ಸರ್ಕಾರಕ್ಕೆ ಬೆಂಬಲ ನೀಡಿ ಎಂದರು.

ಇದನ್ನೂ ಓದಿ | ನವಶಕ್ತಿ ಸಮಾವೇಶ | ತಡೀರಿ ತಾಕತ್ತಿದ್ರೆ ಎನ್ನುತ್ತ ತಲೆಗೆ ಪೇಟ ಕಟ್ಟಿದ ಶ್ರೀರಾಮುಲು ಸ್ಟೈಲಿಗೆ ಜನರಲ್ಲಿ ಸಂಚಲನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಕರ್ನಾಟಕದ 4 ಸೇರಿ ರಾಜ್ಯಸಭೆಯ 24 ಸ್ಥಾನಗಳಿಗೆ ಜೂನ್‌ 18ಕ್ಕೆ ಚುನಾವಣೆ

VISTARANEWS.COM


on

ಜೂನ್ ತಿಂಗಳಲ್ಲಿ ತೆರವಾಗಲಿರುವ ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿಯಾಗಲಿರುವ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಮತದಾನ ನಡೆಯಲಿದೆ.

ಜೂನ್ ತಿಂಗಳಲ್ಲಿ 26 ರಾಜ್ಯಸಭಾ ಸದಸ್ಯರು ನಿವೃತ್ತಿಯಾಗಲಿದ್ದು, ಅದರ ಪೈಕಿ 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಉಳಿದ ಸ್ಥಾನಗಳಿಗೆ ಪ್ರತ್ಯೇಕ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ.

ಕರ್ನಾಟಕದಲ್ಲೂ ರಾಜ್ಯಸಭೆಯ 4 ಸ್ಥಾನಗಳು ತೆರವಾಗಲಿದ್ದು, ಅವುಗಳಿಗೂ ಜೂನ್ 18ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂನ್‌ 8 ಕೊನೆಯ ದಿನ. ನಾಮಪತ್ರ ವಾಪಸ್‌ಗೆ ಜೂನ್‌ 11 ಕಡೆಯ ದಿನ. ಜೂನ್‌ 18ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟಗೊಳ್ಳಲಿದೆ.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

ಪ್ರಮುಖ ಸುದ್ದಿ

Election Results 2024: ರಾಜ್ಯದ 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರಕ್ಕೆ ಕೌಂಡ್ ಡೌನ್

Election Results 2024: ರಾಜ್ಯದ 28 ಕ್ಷೇತ್ರಗಳ ಮತ ಎಣಿಕಾ ಕೇಂದ್ರಗಳಲ್ಲಿ ಮೂರು ಹಂತದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಆರಂಭವಾಗಿದೆ.

VISTARANEWS.COM


on

Lok Sabha Election Results 2024

ಬೆಂಗಳೂರು: ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ (Election Results 2024) ಸ್ಪರ್ಧಿಸಿದ್ದ ಒಟ್ಟು 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರಕ್ಕೆ ಕೌಂಡ್ ಡೌನ್ ಶುರುವಾಗಿದೆ. ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಮತ ಎಣಿಕಾ ಕೇಂದ್ರಗಳಲ್ಲಿ ಮೂರು ಹಂತದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಮಧ್ಯಾಹ್ನ 12 ರೊಳಗೆ ಬಹುತೇಕ ಯಾರು ಗೆಲ್ಲಲಿದ್ದಾರೆ ಎಂಬ ಚಿತ್ರಣ ಸಿಗಲಿದ್ದು, ಸಂಜೆ ಅಂತಿಮ ಫಲಿತಾಂಶ ಹೊರಬೀಳಲಿದೆ.

ಬೆಳಗ್ಗೆ 7:45 ರ ಸುಮಾರಿಗೆ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಲಾಗಿದ್ದು, ನಂತರ ಮತ ಎಣಿಕೆ ಕೊಠಡಿಗೆ ಇವಿಎಂಗಳನ್ನು ಅಧಿಕಾರಿಗಳು ಕೊಂಡೊಯ್ದರು. ಒಂದು ಕೊಠಡಿಯಲ್ಲಿ 14 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಕೊಠಡಿ ದೊಡ್ಡದಿದ್ದರೆ ಹೆಚ್ಚುವರಿ ಟೇಬಲ್ ಹಾಕಲು ಅವಕಾಶ ಮಾಡಿಕೊಡಲಾಗಿದೆ. 20-25 ಸುತ್ತಿನವರೆಗೆ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ | Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ರಾಜ್ಯದಲ್ಲಿ ಏಪ್ರಿಲ್ 26 ರಂದು ನಡೆದ ಮೊದಲ ಹಂತದಲ್ಲಿ 247 ಅಭ್ಯರ್ಥಿಗಳು ಹಾಗೂ ಮೇ 7 ರಂದು ನಡೆದ ಎರಡನೇ ಹಂತದಲ್ಲಿ 227 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಒಟ್ಟು 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ಬಹಿರಂಗವಾಗಲಿದೆ.

Continue Reading

ರಾಜಕೀಯ

Surapura Assembly constituency: ಸುರಪುರ ಉಪ ಚುನಾವಣೆಗೆ ರಾಜುಗೌಡ ಬಿಜೆಪಿ ಅಭ್ಯರ್ಥಿ; ಹೇಗಿದೆ ಕ್ಷೇತ್ರ ಚಿತ್ರಣ?

Surapura Assembly constituency: ಬಿ.ಎಸ್.‌ ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ರಾಜುಗೌಡ ಕ್ಷೇತ್ರದಲ್ಲಿ ಜನರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಆದರೆ, ಕಾಂಗ್ರೆಸ್‌ ಅಭ್ಯರ್ಥಿಗೆ ಇರುವ ಅನುಕಂಪದ ಅಲೆಯನ್ನು ದಾಟಿ ಇವರು ಜಯಗಳಿಸಬೇಕೆಂದರೆ ಹೆಚ್ಚಿನ ಶ್ರಮವನ್ನು ಹಾಕಲೇಬೇಕಿದೆ.

VISTARANEWS.COM


on

Raju Gowda Shorapur or Surapura Assembly constituency BJP Candidate

ಬೆಂಗಳೂರು: ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ (Lok Sabha Election 2024) ಫೀವರ್‌ ಹೆಚ್ಚಾಗಿದೆ. ಈ ನಡುವೆ ಮುಖ್ಯ ಚುನಾವಣಾ ಆಯೋಗವು ಹಲವು ರಾಜ್ಯಗಳ ಉಪ ಚುನಾವಣೆಯನ್ನೂ ಸಹ ಘೋಷಣೆ ಮಾಡಿದೆ. ಇದಕ್ಕೆ ಈಗ ರಾಜ್ಯದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (Raja Venkatappa Nayaka) ಅವರ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ (Surapura Assembly constituency) ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಸಿಂಹ ನಾಯಕ (ರಾಜೂಗೌಡ) (Raju Gowda) ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ.

ರಾಜುಗೌಡ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ರಾಜಾ ವೆಂಕಟಪ್ಪ ನಾಯಕ ವಿರುದ್ಧ ಸೋಲು ಕಂಡಿದ್ದರು. ಆದರೆ, ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿದೆ. 2023ರಲ್ಲಿ ನಡೆದ ಚುನಾವಣೆಯಲ್ಲಿ ರಾಜೂಗೌಡ ಅವರು 25223 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಆದರೆ, ಕಳೆದ 2018ರ ಚುನಾವಣೆಯಲ್ಲಿ ರಾಜುಗೌಡ ಅವರು ಗೆದ್ದಿದ್ದರು. ಅಲ್ಲದೆ, ಬಿ.ಎಸ್.‌ ಯಡಿಯೂರಪ್ಪ (BS Yediyurappa) ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಇವರು ಕ್ಷೇತ್ರದಲ್ಲಿ ಜನರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಆದರೆ, ಕಾಂಗ್ರೆಸ್‌ ಅಭ್ಯರ್ಥಿಗೆ ಇರುವ ಅನುಕಂಪದ ಅಲೆಯನ್ನು ದಾಟಿ ಇವರು ಜಯಗಳಿಸಬೇಕೆಂದರೆ ಹೆಚ್ಚಿನ ಶ್ರಮವನ್ನು ಹಾಕಲೇಬೇಕಿದೆ.

ಕಾಂಗ್ರೆಸ್‌ನಿಂದ ರಾಜಾ ವೇಣುಗೋಪಾಲ ನಾಯಕ ಸ್ಪರ್ಧೆ

ಕಾಂಗ್ರೆಸ್‌ನಿಂದ ಈಗಾಗಲೇ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ. ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ (Raja Venugopala Nayaka) ಸ್ಪರ್ಧೆ ಮಾಡುತ್ತಿದ್ದಾರೆ. ತಂದೆ ನಿಧನವಾಗಿದ್ದರಿಂದ ಅನುಕಂಪದ ಅಲೆ ಹಾಗೂ ಕಾಂಗ್ರೆಸ್‌ ಆಡಳಿತದಲ್ಲಿರುವುದು ಅವರಿಗೆ ಪ್ಲಸ್‌ ಆಗಲಿದೆ. ಜತೆಗೆ ವೇಣುಗೋಪಾಲ ನಾಯಕ್‌ಗೆ ಚುನಾವಣೆ ಹೊಸದೇನಲ್ಲ. ಅವರದ್ದು ರಾಜಕೀಯ ಹಿನ್ನೆಲೆಯ ಕುಟುಂಬವಾಗಿದೆ. ಇವರ ಅಜ್ಜ ರಾಜಾ ಕುಮಾರ ನಾಯಕ ಅವರು ಎರಡು ಬಾರಿ, ತಂದೆ ರಾಜಾ ವೆಂಕಟಪ್ಪ ನಾಯಕ 4 ಬಾರಿ, ಚಿಕ್ಕಪ್ಪ ಒಂದು ಬಾರಿ ಸುರಪುರ ಕ್ಷೇತ್ರದಿಂದ ಶಾಸಕರಾಗಿದ್ದರು. ಅಲ್ಲದೆ, ತಂದೆಯ ಜತೆಗೆ ಚುನಾವಣೆ ಸಂದರ್ಭದಲ್ಲಿ ಕ್ಯಾಂಪೇನ್‌ ಮಾಡುವುದು, ತಂತ್ರಗಾರಿಕೆಯನ್ನು ರೂಪಿಸುವ ಕೆಲಸವನ್ನು ವೇಣುಗೋಪಾಲ ನಾಯಕ ಮಾಡುತ್ತಿದ್ದರು. ಹೀಗಾಗಿ ಅವರಿಗೆ ಈ ಚುನಾವಣೆ ಹೊಸದಲ್ಲ.

ಎಲ್ಲ ಪಕ್ಷದವರೂ ಇಲ್ಲಿ ಗೆದ್ದಿದ್ದಾರೆ

2008ರ ಕ್ಷೇತ್ರ ಮರು ವಿಂಗಡಣೆವರೆಗೂ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾನ್ಯ ವರ್ಗದವರು ಸ್ಪರ್ಧೆ ಮಾಡಬಹುದಾಗಿತ್ತು. ಇದರ ಬಳಿಕ ಎಸ್‌ಟಿ ಮೀಸಲು ಕ್ಷೇತ್ರವಾಯಿತು. 1957ರಿಂದ ಇಲ್ಲಿಯವರೆಗೆ ಒಟ್ಟು 16 ಬಾರಿ ಚುನಾವಣೆಗಳು ನಡೆದಿವೆ. ಇದರಲ್ಲಿ ಕಾಂಗ್ರೆಸ್‌ 8, ಬಿಜೆಪಿ 2 ಹಾಗೂ ಸ್ವತಂತ್ರ ಪಕ್ಷ, ಕರ್ನಾಟಕ ಕಾಂಗ್ರೆಸ್‌ ಪಕ್ಷ (ಕೆಸಿಪಿ), ಕನ್ನಡ ನಾಡು ಪಕ್ಷ (ಕೆಎನ್‌ಡಿಪಿ) ಮತ್ತು ಸ್ವತಂತ್ರ್ಯ ಅಭ್ಯರ್ಥಿಗಳು ತಲಾ ಒಮ್ಮೆ ವಿಜಯ ಸಾಧಿಸಿದ್ದಾರೆ.

ಪಕ್ಷಾಂತರ ಮಾಡಿದ್ದ ರಾಜುಗೌಡ

2013ರ ಚುನಾವಣೆಯಲ್ಲಿ ಬಿಜೆಪಿ ತೊರೆದು ಜೆಡಿಎಸ್‌ ಸೇರಿದ್ದ ರಾಜು ಗೌಡ ಸೋಲು ಕಂಡಿದ್ದರು. ಆಗ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ರಾಜಾ ವೆಂಕಟಪ್ಪ ನಾಯಕ 65,033 ಮತಗಳನ್ನು ಪಡೆದು ಗೆದ್ದಿದ್ದರು. ರಾಜುಗೌಡ 60,958 ಮತಗಳನ್ನು ಪಡೆದಿದ್ದರು. ಕೇವಲ 4,075 ಮತಗಳ ಅಂತರದಿಂದ ಸೋಲು ಕಂಡಿದ್ದರು.

2018ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಸೇರಿದ ರಾಜು ಗೌಡ 1,04,426 ಮತಗಳನ್ನು ಪಡೆದು ಮೂರನೇ ಬಾರಿಗೆ ಜಯ ಸಾಧಿಸಿದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ರಾಜಾ ವೆಂಕಟಪ್ಪ ನಾಯಕ 81,851 ಮತಗಳನ್ನು ಪಡೆದುಕೊಂಡಿದ್ದರು. ಹೀಗಾಗಿ 22,568 ಮತಗಳ ಅಂತರದಲ್ಲಿ ರಾಜುಗೌಡ ಗೆದ್ದಿದ್ದರು.

ಸಮುದಾಯವಾರು ಮತಗಳು ಎಷ್ಟಿವೆ?

ಸದ್ಯದ ಮಾಹಿತಿ ಪ್ರಕಾರ ಸುರಪುರ ಕ್ಷೇತ್ರದಲ್ಲಿ 1,41, 618 ಪುರುಷರು, 1,39,729 ಮಹಿಳಾ, 28 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಸೇರಿ ಒಟ್ಟು 2,81,375 ಮತದಾರರಿದ್ದಾರೆ. ಎಸ್‌ಟಿ ಮೀಸಲು ಕ್ಷೇತ್ರವಾಗಿರುವ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡದ ಜನರೇ ನಿರ್ಣಾಯಕರು.

  • ಪರಿಶಿಷ್ಟ ಪಂಗಡ: 1 ಲಕ್ಷಕ್ಕೂ ಅಧಿಕ ಮತದಾರರು
  • ದಲಿತ: 80 ಸಾವಿರಕ್ಕೂ ಅಧಿಕ ಮತದಾರರು
  • ಮುಸ್ಲಿಂ: 45 ಸಾವಿರಕ್ಕೂ ಅಧಿಕ ಮತದಾರರಿದ್ದಾರೆ.

ಇದನ್ನೂ ಓದಿ: Lok Sabha Election 2024: ಮಂಡ್ಯನಾ? ರಾಮನಗರವಾ? ಧರ್ಮ ಸಂಕಟದಲ್ಲಿ ಮಾಜಿ ಸಿಎಂ ಎಚ್‌ಡಿಕೆ!

ಉಪ ಚುನಾವಣೆಯ ಫಲಿತಾಂಶ ಜೂ. 4ಕ್ಕೆ ಇದ್ದು, ಯಾರು ವಿಜಯಶಾಲಿಯಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಆದರೆ, ಸುರಪುರ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್‌ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ.

Continue Reading
Advertisement
Latest16 hours ago

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

Latest18 hours ago

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

Latest18 hours ago

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

Latest20 hours ago

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

Latest22 hours ago

ರಾಮಲಿಂಗಾ ರೆಡ್ಡಿ ರಾಜೀನಾಮೆ ಕಾಂಗ್ರೆಸ್ ಒಳಜಗಳದ ಪರಿಣಾಮ: ವಿಜಯೇಂದ್ರ ವಾಗ್ದಾಳಿ

Latest22 hours ago

ಅಣ್ಣಾಮಲೈ ರಾಜೀನಾಮೆ ಸ್ವೀಕಾರ : ಹೊಸ ಪಕ್ಷ ಘೋಷಣೆ ಕುರಿತು ಇಂದು ಮಹತ್ವದ ಸುದ್ದಿಗೋಷ್ಠಿ

Latest23 hours ago

ರಾಜ್ಯಸಭಾ ಚುನಾವಣೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿರುವ ಮಲ್ಲಿಕಾರ್ಜುನ ಖರ್ಗೆ

Latest23 hours ago

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

Latest2 days ago

ಇಂದು ಸಂಜೆ ಒಳಗೆ ಖಾತೆ ಹಂಚಿಕೆ : ಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ

Latest2 days ago

ರಾಜ್ಯ ವಿಧಾನಸಭೆ ಸ್ಪೀಕರ್ ಆಯ್ಕೆ ಕಸರತ್ತು: ಹೆಚ್.ಕೆ. ಪಾಟೀಲ್, ದಿನೇಶ್ ಗುಂಡೂರಾವ್ ಹೆಸರುಗಳು ಮುಂಚೂಣಿಯಲ್ಲಿ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌