ನವಶಕ್ತಿ ಸಮಾವೇಶ | ವಾಲ್ಮೀಕಿ ಮಹರ್ಷಿಯನ್ನು ಅವಮಾನಿಸಿದ ಕಾಂಗ್ರೆಸ್‌ ನಿರ್ಮೂಲನೆಯಾಗಲಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ - Vistara News

ಕರ್ನಾಟಕ ಎಲೆಕ್ಷನ್

ನವಶಕ್ತಿ ಸಮಾವೇಶ | ವಾಲ್ಮೀಕಿ ಮಹರ್ಷಿಯನ್ನು ಅವಮಾನಿಸಿದ ಕಾಂಗ್ರೆಸ್‌ ನಿರ್ಮೂಲನೆಯಾಗಲಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಬಳ್ಳಾರಿಯಲ್ಲಿ ಆಯೋಜನೆ ಆಗಿರುವ ನವಶಕ್ತಿ ಸಮಾವೇಶ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸುರಪುರ ಶಾಸಕ ರಾಜುಗೌಡ, ಸಚಿವ ಗೋವಿಂದ ಕಾರಜೋಳ ಮಾತನಾಡಿದ್ದಾರೆ.

VISTARANEWS.COM


on

navashakti pralhad joshi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬಳ್ಳಾರಿ: ನಾವೆಲ್ಲರೂ ಋಷಿ ಎಂದು ಪೂಜಿಸುವ ವಾಲ್ಮೀಕಿಯವರು ಬರೆದ ರಾಮಾಯಣವನ್ನು ನಿರಾಕರಿಸುವ ಮೂಲಕ ಕಾಂಗ್ರೆಸ್‌ ಅವಮಾನಿಸಿದ್ದು, ಅಕ್ಷರಶಃ ಕಾಂಗ್ರೆಸ್‌ ಮುಕ್ತ ಭಾರತ ನಿರ್ಮಾಣ ಮಾಡಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು, ನವಶಕ್ತಿ ಸಮಾವೇಶ ಕಾರ್ಯಕ್ರಮದಲ್ಲಿ ಕರೆ ನೀಡಿದರು.

ಬಹಳಷ್ಟು ದೇಶದಲ್ಲಿ ಕರೊನಾ ಕುರಿತು ಇನ್ನೂ ಕಷ್ಟದ ಪರಿಸ್ಥಿತಿ ಇದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರು ಕೈಗೊಂಡ ಕ್ರಮಗಳಿಂದಾಗಿ ಭಾರತದಲ್ಲಿ ಸಾಕಷ್ಟು ನಿಯಂತ್ರಣದಲ್ಲಿದೆ. ಇದಕ್ಕಾಗಿ ನಾವೆಲ್ಲರೂ ಮೋದಿಯವರಿಗೆ ಅಭಿನಂದನೆ ಸಲ್ಲಿಸಬೇಕು ಎಂದರು.

ಬಿಜೆಪಿ ಬಂದರೆ ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂದು ಆರೋಪಿಸಲಾಗಿತ್ತು. ಆದರೆ ಇಂದು ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮೀಸಲಾತಿಯನ್ನು ಹೆಚ್ಚಳ ಮಾಡುವ ಮೂಲಕ ಬದ್ಧತೆಯನ್ನು ತೋರಿಸಿದೆ. ಈ ವಿಚಾರವನ್ನು ನಾವು ಮರೆಯಬಾರದು.

ಮೀಸಲಾತಿ ಹೆಚ್ಚಳ ಮಾಡಿ ಬಿಜೆಪಿ ವಿಶ್ವಾಸಾರ್ಹತೆ ತೋರಿಸಿದೆ, ಕಾಂಗ್ರೆಸ್ ಪಕ್ಷಕ್ಕೆ ಎಸ್‌ಸಿ ಮತ್ತು ಎಸ್‌ಟಿ ಅಂದರೆ ಆಗುವುದಿಲ್ಲ. ಅಂಬೇಡ್ಕರ್‌ಗೆ ಅನ್ಯಾಯ ಮಾಡಿದ ಪಕ್ಷ ಕಾಂಗ್ರೆಸ್‌. ಎಸ್‌ಸಿ ಮತ್ತು‌ ಎಸ್‌ಟಿಗೆ ಅನ್ಯಾಯ ಮಾಡಿದೆ. ಕಾಂಗ್ರೆಸ್ ಮುಳುಗುವ ಹಡಗು, ಅದಕ್ಕೆ ಖರ್ಗೆಗೆ ನೇತೃತ್ವ ಕೊಟ್ಟರು. ಖರ್ಗೆ, ಪರಮೇಶ್ವರ್‌ಗೆ, ಮುನಿಯಪ್ಪಗೆ ಕಾಂಗ್ರೆಸ್ ಅನ್ಯಾಯ ಮಾಡಿದೆ ಎಂದರು.

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಪ್ರಲ್ಹಾದ ಜೋಶಿ, ಬಾದಾಮಿಯಲ್ಲಿ ಕೆಲಸ ಮಾಡದ ಭಯದಿಂದ ಸಿದ್ದು ಈ ಬಾರಿ ಕ್ಷೇತ್ರಕ್ಕೆ ಅಲೆದಾಡುತ್ತಿದ್ದಾರೆ. ರಾಹುಲ್ ಗಾಂಧಿ ದಿಕ್ಕೆಟ್ಟು ಅಲೆದಾಡುತ್ತಿದ್ದಾರೆ. ಕಾಂಗ್ರೆಸ್ ವೋಟ್‌ ಬ್ಯಾಂಕ್, ಕ್ಷುಲಕ ರಾಜನೀತಿಗೆ ಜನರನ್ನು ಬಳಸಿಕೊಂಡಿದ್ದಾರೆ. ವಾಲ್ಮೀಕಿ ರಾಮಯಣದ ಗ್ರಂಥವನ್ನು ಕಾಂಗ್ರೆಸ್ ಅಪಮಾನ ಮಾಡಿದೆ. ನಾವು ಋಷಿ ಎಂದು ಪೂಜಿಸುವ ವಾಲ್ಮೀಕಿಯವರನ್ನು ಅವಮಾನಿಸಿದೆ. ಕಾಂಗ್ರೆಸ್‌ ಪಕ್ಷವನ್ನು ಸಂಪೂರ್ಣ ನಿರ್ಮೂಲನೆ ಮಾಡಬೇಕು ಎಂದು ಮನವಿ ಮಾಡಿದರು.

ಸುರಪುರ ಶಾಸಕ ರಾಜುಗೌಡ ಮಾತನಾಡಿ, ಕಸಿದ ಮೀಸಲಾತಿಯನ್ನು ಬಿಜೆಪಿ ನಮಗೆ ಕೊಟ್ಟಿದೆ. ದಲಿತರ ಪಕ್ಷ ಎಂದುಕೊಂಡ ಕಾಂಗ್ರೆಸ್ ಮೀಸಲಾತಿ‌ ಕೊಡಲಿಲ್ಲ, ಆದರೆ ಬಿಜೆಪಿ ಸರ್ಕಾರ ಕೊಟ್ಟಿದೆ. ಎಲ್ಲ ಜಾತಿ ಜನಾಂಗವನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಪಕ್ಷ ಬಿಜೆಪಿ. ಬಿಜೆಪಿ ಪಕ್ಷ ಮೇಲ್ವರ್ಗದ ಪಕ್ಷ ಎನ್ನುತ್ತಾರೆ, ಆದರೆ‌ ದಲಿತರ ಮೀಸಲಾತಿ ಹೆಚ್ಚಿಸಿ, ಭಾವನೆಗೆ ಬೆಲೆ ಕೊಟ್ಟ ಪಕ್ಷ ಬಿಜೆಪಿ ಎಂದರು.

ಸಚಿವ ಗೋವಿಂದ ಕಾರಜೋಳ ಮಾತನಾಡಿ, ಕಾಂಗ್ರೆಸ್ ದೀನದಲಿತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಅಂಬೇಡ್ಕರ್‌ಗೆ ಕಾಂಗ್ರೆಸ್ ಅನ್ಯಾಯ ಮಾಡಿದೆ. ಆಂಬೇಡ್ಕರ್ ನಿಧನರಾದಾಗ ದೆಹಲಿಯಲ್ಲಿ ಶವ ಸಂಸ್ಕರಾಕ್ಕೆ ಜಾಗ ಕೊಡದ ಕಾಂಗ್ರೆಸ್‌, ಅವಮಾನ ಮಾಡಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಡ್ರೆಸ್ ಇಲ್ಲದಂತೆ ಹೋಗುತ್ತದೆ ಎಂದರು.

ಇದನ್ನೂ ಓದಿ | ನವಶಕ್ತಿ ಸಮಾವೇಶ | ಕೇಸರಿ, ಕುಂಕುಮದ ಅಲೆಯಲ್ಲಿ ಕೊಚ್ಚಿ ಹೋಗಲಿದೆ ಕಾಂಗ್ರೆಸ್‌: ಸಿ.ಟಿ. ರವಿ ಭಾಷಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
1 Comment

1 Comment

  1. Nagaraja.r

    20 November 2022, 2:24 PM at 2:24 pm

    Namaste.s.t.navashakthi.samavesha.ballri..bjp4.govt.karnataka.s.c.st.reservations.&.

Leave a Reply

Your email address will not be published. Required fields are marked *

Latest

ಕರ್ನಾಟಕದ 4 ಸೇರಿ ರಾಜ್ಯಸಭೆಯ 24 ಸ್ಥಾನಗಳಿಗೆ ಜೂನ್‌ 18ಕ್ಕೆ ಚುನಾವಣೆ

VISTARANEWS.COM


on

ಜೂನ್ ತಿಂಗಳಲ್ಲಿ ತೆರವಾಗಲಿರುವ ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಖಾಲಿಯಾಗಲಿರುವ 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಮತದಾನ ನಡೆಯಲಿದೆ.

ಜೂನ್ ತಿಂಗಳಲ್ಲಿ 26 ರಾಜ್ಯಸಭಾ ಸದಸ್ಯರು ನಿವೃತ್ತಿಯಾಗಲಿದ್ದು, ಅದರ ಪೈಕಿ 24 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಉಳಿದ ಸ್ಥಾನಗಳಿಗೆ ಪ್ರತ್ಯೇಕ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ.

ಕರ್ನಾಟಕದಲ್ಲೂ ರಾಜ್ಯಸಭೆಯ 4 ಸ್ಥಾನಗಳು ತೆರವಾಗಲಿದ್ದು, ಅವುಗಳಿಗೂ ಜೂನ್ 18ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂನ್‌ 8 ಕೊನೆಯ ದಿನ. ನಾಮಪತ್ರ ವಾಪಸ್‌ಗೆ ಜೂನ್‌ 11 ಕಡೆಯ ದಿನ. ಜೂನ್‌ 18ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟಗೊಳ್ಳಲಿದೆ.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

ಪ್ರಮುಖ ಸುದ್ದಿ

Election Results 2024: ರಾಜ್ಯದ 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರಕ್ಕೆ ಕೌಂಡ್ ಡೌನ್

Election Results 2024: ರಾಜ್ಯದ 28 ಕ್ಷೇತ್ರಗಳ ಮತ ಎಣಿಕಾ ಕೇಂದ್ರಗಳಲ್ಲಿ ಮೂರು ಹಂತದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಆರಂಭವಾಗಿದೆ.

VISTARANEWS.COM


on

Lok Sabha Election Results 2024

ಬೆಂಗಳೂರು: ರಾಜ್ಯದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ (Election Results 2024) ಸ್ಪರ್ಧಿಸಿದ್ದ ಒಟ್ಟು 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರಕ್ಕೆ ಕೌಂಡ್ ಡೌನ್ ಶುರುವಾಗಿದೆ. ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಮತ ಎಣಿಕಾ ಕೇಂದ್ರಗಳಲ್ಲಿ ಮೂರು ಹಂತದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಬೆಳಗ್ಗೆ 8ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಮಧ್ಯಾಹ್ನ 12 ರೊಳಗೆ ಬಹುತೇಕ ಯಾರು ಗೆಲ್ಲಲಿದ್ದಾರೆ ಎಂಬ ಚಿತ್ರಣ ಸಿಗಲಿದ್ದು, ಸಂಜೆ ಅಂತಿಮ ಫಲಿತಾಂಶ ಹೊರಬೀಳಲಿದೆ.

ಬೆಳಗ್ಗೆ 7:45 ರ ಸುಮಾರಿಗೆ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ಓಪನ್ ಮಾಡಲಾಗಿದ್ದು, ನಂತರ ಮತ ಎಣಿಕೆ ಕೊಠಡಿಗೆ ಇವಿಎಂಗಳನ್ನು ಅಧಿಕಾರಿಗಳು ಕೊಂಡೊಯ್ದರು. ಒಂದು ಕೊಠಡಿಯಲ್ಲಿ 14 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಕೊಠಡಿ ದೊಡ್ಡದಿದ್ದರೆ ಹೆಚ್ಚುವರಿ ಟೇಬಲ್ ಹಾಕಲು ಅವಕಾಶ ಮಾಡಿಕೊಡಲಾಗಿದೆ. 20-25 ಸುತ್ತಿನವರೆಗೆ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ | Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ರಾಜ್ಯದಲ್ಲಿ ಏಪ್ರಿಲ್ 26 ರಂದು ನಡೆದ ಮೊದಲ ಹಂತದಲ್ಲಿ 247 ಅಭ್ಯರ್ಥಿಗಳು ಹಾಗೂ ಮೇ 7 ರಂದು ನಡೆದ ಎರಡನೇ ಹಂತದಲ್ಲಿ 227 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ಒಟ್ಟು 474 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಇಂದು ಬಹಿರಂಗವಾಗಲಿದೆ.

Continue Reading

ರಾಜಕೀಯ

Surapura Assembly constituency: ಸುರಪುರ ಉಪ ಚುನಾವಣೆಗೆ ರಾಜುಗೌಡ ಬಿಜೆಪಿ ಅಭ್ಯರ್ಥಿ; ಹೇಗಿದೆ ಕ್ಷೇತ್ರ ಚಿತ್ರಣ?

Surapura Assembly constituency: ಬಿ.ಎಸ್.‌ ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ರಾಜುಗೌಡ ಕ್ಷೇತ್ರದಲ್ಲಿ ಜನರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಆದರೆ, ಕಾಂಗ್ರೆಸ್‌ ಅಭ್ಯರ್ಥಿಗೆ ಇರುವ ಅನುಕಂಪದ ಅಲೆಯನ್ನು ದಾಟಿ ಇವರು ಜಯಗಳಿಸಬೇಕೆಂದರೆ ಹೆಚ್ಚಿನ ಶ್ರಮವನ್ನು ಹಾಕಲೇಬೇಕಿದೆ.

VISTARANEWS.COM


on

Raju Gowda Shorapur or Surapura Assembly constituency BJP Candidate

ಬೆಂಗಳೂರು: ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ (Lok Sabha Election 2024) ಫೀವರ್‌ ಹೆಚ್ಚಾಗಿದೆ. ಈ ನಡುವೆ ಮುಖ್ಯ ಚುನಾವಣಾ ಆಯೋಗವು ಹಲವು ರಾಜ್ಯಗಳ ಉಪ ಚುನಾವಣೆಯನ್ನೂ ಸಹ ಘೋಷಣೆ ಮಾಡಿದೆ. ಇದಕ್ಕೆ ಈಗ ರಾಜ್ಯದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (Raja Venkatappa Nayaka) ಅವರ ನಿಧನದಿಂದ ತೆರವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ (Surapura Assembly constituency) ಬಿಜೆಪಿ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಸಿಂಹ ನಾಯಕ (ರಾಜೂಗೌಡ) (Raju Gowda) ಅವರಿಗೆ ಮತ್ತೆ ಟಿಕೆಟ್ ನೀಡಲಾಗಿದೆ.

ರಾಜುಗೌಡ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ರಾಜಾ ವೆಂಕಟಪ್ಪ ನಾಯಕ ವಿರುದ್ಧ ಸೋಲು ಕಂಡಿದ್ದರು. ಆದರೆ, ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿದೆ. 2023ರಲ್ಲಿ ನಡೆದ ಚುನಾವಣೆಯಲ್ಲಿ ರಾಜೂಗೌಡ ಅವರು 25223 ಮತಗಳ ಅಂತರದಿಂದ ಸೋಲನ್ನು ಅನುಭವಿಸಿದ್ದರು. ಆದರೆ, ಕಳೆದ 2018ರ ಚುನಾವಣೆಯಲ್ಲಿ ರಾಜುಗೌಡ ಅವರು ಗೆದ್ದಿದ್ದರು. ಅಲ್ಲದೆ, ಬಿ.ಎಸ್.‌ ಯಡಿಯೂರಪ್ಪ (BS Yediyurappa) ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಇವರು ಕ್ಷೇತ್ರದಲ್ಲಿ ಜನರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರು. ಆದರೆ, ಕಾಂಗ್ರೆಸ್‌ ಅಭ್ಯರ್ಥಿಗೆ ಇರುವ ಅನುಕಂಪದ ಅಲೆಯನ್ನು ದಾಟಿ ಇವರು ಜಯಗಳಿಸಬೇಕೆಂದರೆ ಹೆಚ್ಚಿನ ಶ್ರಮವನ್ನು ಹಾಕಲೇಬೇಕಿದೆ.

ಕಾಂಗ್ರೆಸ್‌ನಿಂದ ರಾಜಾ ವೇಣುಗೋಪಾಲ ನಾಯಕ ಸ್ಪರ್ಧೆ

ಕಾಂಗ್ರೆಸ್‌ನಿಂದ ಈಗಾಗಲೇ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ. ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ (Raja Venugopala Nayaka) ಸ್ಪರ್ಧೆ ಮಾಡುತ್ತಿದ್ದಾರೆ. ತಂದೆ ನಿಧನವಾಗಿದ್ದರಿಂದ ಅನುಕಂಪದ ಅಲೆ ಹಾಗೂ ಕಾಂಗ್ರೆಸ್‌ ಆಡಳಿತದಲ್ಲಿರುವುದು ಅವರಿಗೆ ಪ್ಲಸ್‌ ಆಗಲಿದೆ. ಜತೆಗೆ ವೇಣುಗೋಪಾಲ ನಾಯಕ್‌ಗೆ ಚುನಾವಣೆ ಹೊಸದೇನಲ್ಲ. ಅವರದ್ದು ರಾಜಕೀಯ ಹಿನ್ನೆಲೆಯ ಕುಟುಂಬವಾಗಿದೆ. ಇವರ ಅಜ್ಜ ರಾಜಾ ಕುಮಾರ ನಾಯಕ ಅವರು ಎರಡು ಬಾರಿ, ತಂದೆ ರಾಜಾ ವೆಂಕಟಪ್ಪ ನಾಯಕ 4 ಬಾರಿ, ಚಿಕ್ಕಪ್ಪ ಒಂದು ಬಾರಿ ಸುರಪುರ ಕ್ಷೇತ್ರದಿಂದ ಶಾಸಕರಾಗಿದ್ದರು. ಅಲ್ಲದೆ, ತಂದೆಯ ಜತೆಗೆ ಚುನಾವಣೆ ಸಂದರ್ಭದಲ್ಲಿ ಕ್ಯಾಂಪೇನ್‌ ಮಾಡುವುದು, ತಂತ್ರಗಾರಿಕೆಯನ್ನು ರೂಪಿಸುವ ಕೆಲಸವನ್ನು ವೇಣುಗೋಪಾಲ ನಾಯಕ ಮಾಡುತ್ತಿದ್ದರು. ಹೀಗಾಗಿ ಅವರಿಗೆ ಈ ಚುನಾವಣೆ ಹೊಸದಲ್ಲ.

ಎಲ್ಲ ಪಕ್ಷದವರೂ ಇಲ್ಲಿ ಗೆದ್ದಿದ್ದಾರೆ

2008ರ ಕ್ಷೇತ್ರ ಮರು ವಿಂಗಡಣೆವರೆಗೂ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾನ್ಯ ವರ್ಗದವರು ಸ್ಪರ್ಧೆ ಮಾಡಬಹುದಾಗಿತ್ತು. ಇದರ ಬಳಿಕ ಎಸ್‌ಟಿ ಮೀಸಲು ಕ್ಷೇತ್ರವಾಯಿತು. 1957ರಿಂದ ಇಲ್ಲಿಯವರೆಗೆ ಒಟ್ಟು 16 ಬಾರಿ ಚುನಾವಣೆಗಳು ನಡೆದಿವೆ. ಇದರಲ್ಲಿ ಕಾಂಗ್ರೆಸ್‌ 8, ಬಿಜೆಪಿ 2 ಹಾಗೂ ಸ್ವತಂತ್ರ ಪಕ್ಷ, ಕರ್ನಾಟಕ ಕಾಂಗ್ರೆಸ್‌ ಪಕ್ಷ (ಕೆಸಿಪಿ), ಕನ್ನಡ ನಾಡು ಪಕ್ಷ (ಕೆಎನ್‌ಡಿಪಿ) ಮತ್ತು ಸ್ವತಂತ್ರ್ಯ ಅಭ್ಯರ್ಥಿಗಳು ತಲಾ ಒಮ್ಮೆ ವಿಜಯ ಸಾಧಿಸಿದ್ದಾರೆ.

ಪಕ್ಷಾಂತರ ಮಾಡಿದ್ದ ರಾಜುಗೌಡ

2013ರ ಚುನಾವಣೆಯಲ್ಲಿ ಬಿಜೆಪಿ ತೊರೆದು ಜೆಡಿಎಸ್‌ ಸೇರಿದ್ದ ರಾಜು ಗೌಡ ಸೋಲು ಕಂಡಿದ್ದರು. ಆಗ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ರಾಜಾ ವೆಂಕಟಪ್ಪ ನಾಯಕ 65,033 ಮತಗಳನ್ನು ಪಡೆದು ಗೆದ್ದಿದ್ದರು. ರಾಜುಗೌಡ 60,958 ಮತಗಳನ್ನು ಪಡೆದಿದ್ದರು. ಕೇವಲ 4,075 ಮತಗಳ ಅಂತರದಿಂದ ಸೋಲು ಕಂಡಿದ್ದರು.

2018ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಸೇರಿದ ರಾಜು ಗೌಡ 1,04,426 ಮತಗಳನ್ನು ಪಡೆದು ಮೂರನೇ ಬಾರಿಗೆ ಜಯ ಸಾಧಿಸಿದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ರಾಜಾ ವೆಂಕಟಪ್ಪ ನಾಯಕ 81,851 ಮತಗಳನ್ನು ಪಡೆದುಕೊಂಡಿದ್ದರು. ಹೀಗಾಗಿ 22,568 ಮತಗಳ ಅಂತರದಲ್ಲಿ ರಾಜುಗೌಡ ಗೆದ್ದಿದ್ದರು.

ಸಮುದಾಯವಾರು ಮತಗಳು ಎಷ್ಟಿವೆ?

ಸದ್ಯದ ಮಾಹಿತಿ ಪ್ರಕಾರ ಸುರಪುರ ಕ್ಷೇತ್ರದಲ್ಲಿ 1,41, 618 ಪುರುಷರು, 1,39,729 ಮಹಿಳಾ, 28 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಸೇರಿ ಒಟ್ಟು 2,81,375 ಮತದಾರರಿದ್ದಾರೆ. ಎಸ್‌ಟಿ ಮೀಸಲು ಕ್ಷೇತ್ರವಾಗಿರುವ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಪಂಗಡದ ಜನರೇ ನಿರ್ಣಾಯಕರು.

  • ಪರಿಶಿಷ್ಟ ಪಂಗಡ: 1 ಲಕ್ಷಕ್ಕೂ ಅಧಿಕ ಮತದಾರರು
  • ದಲಿತ: 80 ಸಾವಿರಕ್ಕೂ ಅಧಿಕ ಮತದಾರರು
  • ಮುಸ್ಲಿಂ: 45 ಸಾವಿರಕ್ಕೂ ಅಧಿಕ ಮತದಾರರಿದ್ದಾರೆ.

ಇದನ್ನೂ ಓದಿ: Lok Sabha Election 2024: ಮಂಡ್ಯನಾ? ರಾಮನಗರವಾ? ಧರ್ಮ ಸಂಕಟದಲ್ಲಿ ಮಾಜಿ ಸಿಎಂ ಎಚ್‌ಡಿಕೆ!

ಉಪ ಚುನಾವಣೆಯ ಫಲಿತಾಂಶ ಜೂ. 4ಕ್ಕೆ ಇದ್ದು, ಯಾರು ವಿಜಯಶಾಲಿಯಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಆದರೆ, ಸುರಪುರ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್‌ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ.

Continue Reading
Advertisement
ನೀಟ್ 2026 ಪರೀಕ್ಷೆ
Latest10 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest12 hours ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

Latest1 day ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest1 day ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ2 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest2 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest2 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest3 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

Latest3 days ago

‘ದೇವೇಗೌಡರ ಮೇಲಿನ ಕಾಂಗ್ರೆಸ್ ಅನುಕಂಪ ಕೇವಲ ನಾಟಕ!’: ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

Latest3 days ago

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌