Site icon Vistara News

Valmiki Corporation Scam: ಬಿ ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ ನೇಮಕ

Valmiki Corporation Scam Zameer Ahmed appointed as Ballari district in-charge minister

ಬಳ್ಳಾರಿ: ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮದ (Valmiki Corporation Scam) ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ನಾಗೇಂದ್ರ (Ex Minister Nagendra) ರಾಜೀನಾಮೆ (Resignation) ನೀಡಿದ್ದರು. ಇದರ ಬೆನ್ನಲ್ಲೇ ಬಳ್ಳಾರಿಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ (Zameer Ahmed Khan) ಅವರನ್ನು ನೇಮಕ ಮಾಡಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ (Valmiki Corporation Scam) ಆರೋಪಗಳು ಕೇಳಿ ಬಂದಿದ್ದರಿಂದ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದರು. ನಾಗೇಂದ್ರ ಸ್ಥಾನಕ್ಕೆ ಈಗ ಜಮೀರ್ ಅಹ್ಮದ್‌ ನೇಮಕಗೊಂಡಿದ್ದಾರೆ. ಕಳೆದ ವಾರ ವಿಜಯನಗರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಮಾಹಿತಿ ಕೊಟ್ಟಿದ್ದರು. ಶುಕ್ರವಾರ ಅಧಿಕೃತವಾಗಿ ಸರ್ಕಾರವು ಜಮೀರ್ ಅಹ್ಮದ್‌ಗೆ ಬಳ್ಳಾರಿ ಉಸ್ತುವಾರಿಯನ್ನು ಕೊಟ್ಟಿದೆ.

Valmiki Corporation Scam Zameer Ahmed appointed as Ballari district in-charge minister

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಸಿಬಿಐನಿಂದ ಬಂಧನ ಆತಂಕದಲ್ಲಿ ಮಾಜಿ ಸಚಿವ ನಾಗೇಂದ್ರ

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಎಂಬಾತ ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ನಿಗಮದ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ನಂತರ ಅಧಿಕಾರಿಗಳ ಬಂಧನವಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆದಿದ್ದರು. ಬಳಿಕ ಹಗರಣದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿ ಬಂದ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version