ನವದೆಹಲಿ: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Bengaluru airport) ಟರ್ಮಿನಲ್ ಎರಡರಲ್ಲಿ (terminal 2) ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯು (international flights) ಸೆಪ್ಟೆಂಬರ್ 1ರಿಂದ ಆರಂಭವಾಗಲಿದೆ. ಸದ್ಯ ಈ ಟರ್ಮಿಲ್‌ನಲ್ಲಿ ದೇಶಿ ವಿಮಾನಗಳ ಆಗಮನ ಮತ್ತು ನಿರ್ಗಮನಕ್ಕೆ ಅವಕಾಶವಿದೆ. ಕಳೆದ ನವೆಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಈ ಟರ್ಮಿನಲ್ ಎರಡನ್ನು ಲಾಂಚ್ ಮಾಡಿದ್ದರು.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಎರಡು ಅಂತರಾಷ್ಟ್ರೀಯ ಪ್ರಯಾಣಕ್ಕೆ ಮೀಸಲಾಗಿರುತ್ತದೆ. ಹಾಗಾಗಿ, ಟರ್ಮಿನಲ್ ಒಂದರಲ್ಲಿ ಇನ್ನು ಮುಂದೆ ದೇಶೀಯ ಪ್ರಯಾಣವನ್ನು ಮಾತ್ರ ನಿರ್ವಹಣೆ ಮಾಡಲಾಗುತ್ತದೆ. ಆಗಸ್ಟ್ 31 ರ ಮಧ್ಯರಾತ್ರಿಯಿಂದ, ಸಂಪೂರ್ಣ ಅಂತರರಾಷ್ಟ್ರೀಯ ಸಂಚಾರವನ್ನು ಟರ್ಮಿನಲ್ ಎರಡಕ್ಕೆ ವರ್ಗಾಯಿಸಲಾಗುವುದು. ಈಗಾಗಲೇ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದ್ದು, ಸಿಬ್ಬಂದಿಗೆ ತರಬೇತಿ ನೀಡಲಾಗುತ್ತಿದೆ ಎಂಬ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಏರ್‌ಪೋರ್ಟ್ ಲಿ.(BIAL) ಸಿಇಒ ಹರಿ ಮರಾರ್ ಹೇಳಿಕೆಯನ್ನು ಉಲ್ಲೇಖಿಸಿ ಮನಿ ಕಂಟ್ರೋಲ್ ವರದಿ ಮಾಡಿದೆ.
ಕಳೆದ ನವೆಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ ಎರಡನ್ನು ಲೋಕಾರ್ಪಣೆ ಮಾಡಿದ್ದರು. ಟರ್ಮಿನಲ್ 2 ಮೊದಲನೇ ಹಂತದ ನಿರ್ಮಾಣಕ್ಕೆ 13 ಸಾವಿರ ಕೋಟಿ ರೂ. ವೆಚ್ಚವಾಗಿದೆ. ಸುಮಾರು 2.5 ಲಕ್ಷ ಚದರ ಅಡಿ ಜಾಗದಲ್ಲಿ ನಿರ್ಮಾಣ ಮಾಡಲಾಗಿದೆ. ಎರಡನೇ ಹಂತದಲ್ಲಿ ಇನ್ನೂ 4.41 ಲಕ್ಷ ಚದರ ಅಡಿ ಸೇರ್ಪಡೆಯಾಗಲಿದೆ. ಪ್ರತಿ ವರ್ಷಕ್ಕೆ ಈ ಟರ್ಮಿನಲ್ ಸುಮಾರು 2.5 ಕೋಟಿ ಪ್ರಯಾಣಿಕರನ್ನು ನಿರ್ವಹಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ.
ಈ ಸುದ್ದಿಯನ್ನೂ ಓದಿ: Modi in Bengaluru | ಕೆಂಪೇಗೌಡ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ
ಜನವರಿ 15ರಂದು ಬೆಂಗಳೂರಿನಿಂದ ಕಲಬುರಗಿಗೆ ಸ್ಟಾರ್ ಏರ್‌ವೇಯ್ಸ್‌ನ ವಿಮಾನ ಟೇಕ್ ಆಫ್ ಆಗುವ ಮೂಲಕ ಈ ಟರ್ಮಿನಲ್ ಕಾರ್ಯಾಚರಣೆ ಶುರುವಾಯಿತು. ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಪಿಕ್ ಅಪ್ ಮತ್ತು ಡ್ರಾಪ್ ಮಾಡಲು ಸುಗಮ ವಾಹನ ಆಗಮನ ಮತ್ತು ನಿರ್ಗಮನಕ್ಕಾಗಿ ಐದು ಪಥದ ಮಾರ್ಗವನ್ನು ಸಹ ಸಿದ್ಧಪಡಿಸಲಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜಗತ್ತಿನಲ್ಲಿ ಹೆಚ್ಚು ಪ್ರಯಾಣಿಕರನ್ನು ನಿರ್ವಹಣೆ ಮಾಡುತ್ತಿರವ ವಿಮಾನ ನಿಲ್ದಾಣಗಳ ಸಾಲಿಗೆ ಸೇರ್ಪಡೆಯಾಗಿದೆ.
ದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.