Site icon Vistara News

Bengaluru News: ಬೆಂಗಳೂರಿನಲ್ಲಿ ಆ.3ರಂದು ‘ಬೌದ್ಧ ಸಾಹಿತ್ಯ-ಹಲವು ನೆಲೆಗಳು’ ರಾಷ್ಟ್ರೀಯ ವಿಚಾರ ಸಂಕಿರಣ

bouddha sahitya halavu nelegalu rashtriya vichara sankirana in Bengaluru on 3rd August

ಬೆಂಗಳೂರು: ಕಲಬುರಗಿಯ ಪಾಲಿ ಇನ್‌ಸ್ಟಿಟ್ಯೂಟ್ ಮತ್ತು ಜೈನ್ (ಡೀಮ್ಡ್ ಟು ಬಿ ಯೂನಿವರ್ಸಿಟಿ)ಯ ಸ್ಕೂಲ್ ಆಫ್ ಕಾಮರ್ಸ್ ಕನ್ನಡ ಭಾಷಾ ವಿಭಾಗದ ಸಹಯೋಗದಲ್ಲಿ ಆ.3 ರಂದು ಶನಿವಾರ ಬೆಳಗ್ಗೆ 10.30ಕ್ಕೆ ಇಲ್ಲಿನ ಜಯನಗರದ 9ನೇ ಬ್ಲಾಕ್‌ನಲ್ಲಿರುವ ಜೈನ್ ವಿವಿಯ ಜೆಜಿಐ ನಾಲೆಡ್ಜ್ ಕ್ಯಾಂಪಸ್ ಕಾನ್ಫರೆನ್ಸ್ ಸಭಾಂಗಣದಲ್ಲಿ ‘ಬೌದ್ಧ ಸಾಹಿತ್ಯ:ಹಲವು ನೆಲೆಗಳು’ ರಾಷ್ಟ್ರೀಯ ವಿಚಾರ ಸಂಕಿರಣವನ್ನು (Bengaluru News) ಆಯೋಜಿಸಲಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಮುಡ್ನಾಕೂಡು ಚಿನ್ನಸ್ವಾಮಿ, ವಿಚಾರ ಸಂಕಿರಣವನ್ನು ಉದ್ಘಾಟಿಸುವರು. ಜೈನ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ರವೀಂದ್ರ ಭಂಡಾರಿ, ಜೈನ್ (ಡೀಮ್ಡ್ ಟು ಬಿ ಯುನಿವರ್ಸಿಟಿ) ಪ್ರೋ-ವೈಸ್ ಛಾನ್ಸಲರ್ ಡಾ. ದಿನೇಶ್ ನೀಲಕಂಠ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು.

ಇದನ್ನೂ ಓದಿ: Uttara Kannada News: ನಿಯಮ ಪಾಲಿಸದ ಯಲ್ಲಾಪುರದ 3 ಖಾಸಗಿ ಆಸ್ಪತ್ರೆಗಳಿಗೆ ಬೀಗ

ಜೈನ್ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಯ ಭಾಷಾ ವಿಭಾಗದ ಮುಖ್ಯಸ್ಥೆ ಡಾ. ರಜನಿ ಜೈರಾಮ್ ಅಧ್ಯಕ್ಷತೆ ವಹಿಸುವರು. ಸ್ಕೂಲ್ ಆಫ್ ಕಾಮರ್ಸ್ ಕನ್ನಡ ಭಾಷಾ ವಿಭಾಗದ ಸಂಚಾಲಕಿ ರಾಜೇಶ್ವರಿ ವೈ.ಎಂ. ಆಶಯ ನುಡಿಗಳನ್ನಾಡುವರು.

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ಪಾಲಿ ಇನ್‌ಸ್ಟಿಟ್ಯೂಟ್‌ನ ನಿರ್ದೇಶಕ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ, ‘ಬೌದ್ಧ ಸಾಹಿತ್ಯ ಪೂರ್ವಾಪರಗಳು’ ಕುರಿತು ಸಂವಾದ ನಡೆಸುವರು. ಬೆಂಗಳೂರು ಮಹಾಬೋಧಿ ಸೊಸೈಟಿ ತ್ರಿಪಿಟಿಕ ಗ್ರಂಥಮಾಲಾ ಯೋಜನೆಯ ನಿರ್ದೇಶಕ ಡಾ. ಬಿ.ವಿ. ರಾಜಾರಾಮ್ ‘ಬೌದ್ಧ ಸುತ್ತಸಾಹಿತ್ಯʼ ಕುರಿತು ವಿಚಾರ ಮಂಡಿಸುವರು.

ಇದನ್ನೂ ಓದಿ: The RajaSaab Movie: ‘ದಿ ರಾಜಾಸಾಬ್’; ಎಲ್ಲರ ಗಮನ ಸೆಳೆಯುತ್ತಿದೆ ರೆಬೆಲ್‌ ಸ್ಟಾರ್‌ ಪ್ರಭಾಸ್‌ ಡ್ಯಾಶಿಂಗ್‌ ಲುಕ್‌!

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಟಿ.ಎನ್. ವಾಸದೇವಮೂರ್ತಿ ‘ಧಮ್ಮಪದ ಸಾಹಿತ್ಯ’ ಕುರಿತು ವಿಚಾರ ಮಂಡಿಸುವರು. ʼಜಾತಕ ಕಥಾ ಸಾಹಿತ್ಯʼ ದ ಬಗ್ಗೆ ಬೌದ್ಧ ವಿದ್ವಾಂಸ ಮೊಳಕಾಲ್ಮೂರು ಶ್ರೀನಿವಾಸಮೂರ್ತಿ ವಿಚಾರ ಮಂಡಿಸುವರು ಎಂದು ಕಾರ್ಯಕ್ರಮದ ಆಯೋಜಕ ಪಾಲಿ ಇನ್‌ಸ್ಟಿಟ್ಯೂಟ್ ಕಾರ್ಯದರ್ಶಿ ರಾಧಾಕೃಷ್ಣ ಮತ್ತು ಬೌದ್ಧ ಸಾಹಿತ್ಯ ರಾಷ್ಟ್ರೀಯ ವಿಚಾರ ಸಂಕಿರಣದ ಸಂಚಾಲಕ ರಾಜಕುಮಾರ ಬಡಿಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version